AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮೀಣ ಭಾಗದಲ್ಲಿ ಎಲ್​ಪಿಜಿ ರೀಫಿಲ್ ಬುಕಿಂಗ್​ಗಳ ನಡುವಿನ ಅಂತರ 45 ರಿಂದ 25 ದಿನಗಳಿಗೆ ಇಳಿಕೆ; ದೇಶದೆಲ್ಲೆಡೆ ಏಕರೀತಿಯ ಬುಕಿಂಗ್ ನಿಯಮ

ಎಲ್​ಪಿಜಿ ಸಿಲಿಂಡರ್ ರೀಫಿಲ್ ಬುಕಿಂಗ್​ನಲ್ಲಿ ಸರ್ಕಾರ ಗ್ರಾಮೀಣ ಹಾಗು ನಗರ ಭಾಗಗಳಲ್ಲಿ ಒಂದೇ ರೀತಿಯ ನಿಯಮ ಮಾಡಿದೆ. ಗ್ಯಾಸ್ ರೀಫಿಲ್ ಬುಕಿಂಗ್​ಗಳ ನಡುವಿನ ಕನಿಷ್ಠ ಅಂತರ 25 ದಿನಗಳೆಂದು ನಿಗದಿ ಮಾಡಲಾಗಿದೆ. ಕೆಲ ತಿಂಗಳ ಹಿಂದೆ ಗ್ರಾಮೀಣ ಭಾಗದಲ್ಲಿ 45 ದಿನಗಳ ಅಂತರ ಇತ್ತು. ಈಗ ಅದನ್ನು 25 ದಿನಕ್ಕೆ ಇಳಿಸಲಾಗಿದೆ.

ಗ್ರಾಮೀಣ ಭಾಗದಲ್ಲಿ ಎಲ್​ಪಿಜಿ ರೀಫಿಲ್ ಬುಕಿಂಗ್​ಗಳ ನಡುವಿನ ಅಂತರ 45 ರಿಂದ 25 ದಿನಗಳಿಗೆ ಇಳಿಕೆ; ದೇಶದೆಲ್ಲೆಡೆ ಏಕರೀತಿಯ ಬುಕಿಂಗ್ ನಿಯಮ
ಎಲ್‌ಪಿಜಿImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 07, 2026 | 6:20 PM

Share

ನವದೆಹಲಿ, ಸೆಪ್ಟೆಂಬರ್ 7: ಗ್ರಾಮೀಣ ಭಾಗದ ಗೃಹಬಳಕೆಯ ಎಲ್‌ಪಿಜಿ (LPG) ಸಿಲಿಂಡರ್ ಗ್ರಾಹಕರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ಎಲ್‌ಪಿಜಿ ಸಿಲಿಂಡರ್ ಮರುಪೂರಣ (Refill) ಕಾಯ್ದಿರಿಸುವಿಕೆಯ ಕನಿಷ್ಠ ಅವಧಿಯನ್ನು 45 ದಿನಗಳಿಂದ 25 ದಿನಗಳಿಗೆ ತಗ್ಗಿಸಲಾಗಿದೆ. ನಗರ ಪ್ರದೇಶದಲ್ಲಿದ್ದ ನಿಯಮವನ್ನೇ ದೇಶಾದ್ಯಂತ ಏಕರೂಪವಾಗಿ ಜಾರಿಗೊಳಿಸಲಾಗಿದೆ. ಅಂದರೆ, ಈಗ ಗ್ಯಾಸ್ ಬುಕ್ ಮಾಡಿದ ದಿನದಿಂದ 25 ದಿನಗಳಾದ ಬಳಿಕ ಮತ್ತೆ ರೀಫಿಕ್ ಮಾಡಲು ಅವಕಾಶ ಸಿಗುತ್ತದೆ. ಗ್ರಾಮೀಣ ಭಾಗದಲ್ಲಿ ಈ ಅವಧಿ 45 ದಿನ ಇತ್ತು.

ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಇಂಡಿಯನ್ ಆಯಿಲ್, ಬಿಪಿಸಿಎಲ್ ಮತ್ತು ಹೆಚ್‌ಪಿಸಿಎಲ್ ತೈಲ ಕಂಪನಿಗಳಿಗೆ (OMCs) ಈ ನೂತನ ನಿಯಮವನ್ನು ತಕ್ಷಣದಿಂದಲೇ ಜಾರಿಗೆ ತರಲು ಆದೇಶಿಸಿದೆ.

ಇದನ್ನೂ ಓದಿ: ಕ್ವಿಕ್ ಕಾಮರ್ಸ್​ನಲ್ಲಿ ಅಮೇಜಾನ್ ಹಿಂದಿಕ್ಕಿದ ಫ್ಲಿಪ್​ಕಾರ್ಟ್; ಬ್ಲಿಂಕಿಟ್, ಝೆಪ್ಟೋಗಳೊಂದಿಗೆ ಈಗ ರೇಸ್

ಇನ್ಮುಂದೆ ದೇಶದ ಯಾವುದೇ ಭಾಗದ (ನಗರ ಹಾಗೂ ಗ್ರಾಮೀಣ) ಗೃಹ ಎಲ್​ಪಿಜಿ ಬಳಕೆದಾರರು ಒಂದು ಸಿಲಿಂಡರ್ ಕಾಯ್ದಿರಿಸಿದ 25 ದಿನಗಳ ನಂತರ ಮುಂದಿನ ಸಿಲಿಂಡರ್ ರೀಫಿಲ್ ಬುಕ್ ಮಾಡಬಹುದು.

ನಿಯಮ ಸಡಿಲಿಕೆಗೆ ಕಾರಣ: ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಸಂಘರ್ಷದ ಹಿನ್ನೆಲೆಯಲ್ಲಿ ಉಂಟಾಗಿದ್ದ ಪೂರೈಕೆ ಕೊರತೆಯನ್ನು ನಿಭಾಯಿಸಲು ಸರ್ಕಾರ ಮಾರ್ಚ್ ತಿಂಗಳಲ್ಲಿ ತಾತ್ಕಾಲಿಕವಾಗಿ ನಗರ ಪ್ರದೇಶಗಳಿಗೆ 25 ದಿನ ಹಾಗೂ ಗ್ರಾಮೀಣ ಪ್ರದೇಶಗಳಿಗೆ 45 ದಿನಗಳ ಕಾಯುವಿಕೆ ಅವಧಿಯನ್ನು ನಿಗದಿಪಡಿಸಿತ್ತು.

ಪ್ರಸ್ತುತ ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆ ಸ್ಥಿತಿ ಸುಧಾರಿಸಿದ್ದು, ಕಾಯುವಿಕೆ ಪಟ್ಟಿ (Backlog) ಗಮನಾರ್ಹವಾಗಿ ಕಡಿಮೆಯಾಗಿರುವುದರಿಂದ ಈ ಕಟ್ಟುನಿಟ್ಟಿನ ನಿಬಂಧನೆಯನ್ನು ಹಿಂಪಡೆಯಲಾಗಿದೆ ಎಂದು ಪೆಟ್ರೋಲಿಯಂ ಸಚಿವ ಸುರೇಶ್ ಗೋಪಿ ತಿಳಿಸಿದ್ದಾರೆ.

ಇದನ್ನೂ ಓದಿ: ಚಿಪ್ ಡಿಸೈನ್​ನಲ್ಲಿ ಕರ್ನಾಟಕ ಹಾಗೂ ದಕ್ಷಿಣ ರಾಜ್ಯಗಳೇ ಮುಂದು; ಸಿಲಿಕಾನ್ ಸಿಟಿ ಮಾತ್ರವಲ್ಲ, ಸೆಮಿಕಂಡಕ್ಟರ್ ಹಬ್ ಕೂಡ ಆದ ಬೆಂಗಳೂರು

ಈ ನಿರ್ಧಾರದಿಂದಾಗಿ ಗ್ರಾಮೀಣ ಭಾಗದ ಲಕ್ಷಾಂತರ ಗೃಹಿಣಿಯರು ಹಾಗೂ ಕುಟುಂಬಗಳಿಗೆ ಸಿಲಿಂಡರ್ ಕೊರತೆ ಎದುರಾಗುವ ಭೀತಿ ತಪ್ಪಲಿದ್ದು, ಹೆಚ್ಚಿನ ಅನುಕೂಲವಾಗಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಆನ್​​ಲೈನ್ ಔಷಧ ಮಾರಾಟದ ಅಕ್ರಮಕ್ಕೆ ತಡೆ, ಹೊಸ ನಿಯಮ ಜಾರಿಗೆ ಚಿಂತನೆ
ಆನ್​​ಲೈನ್ ಔಷಧ ಮಾರಾಟದ ಅಕ್ರಮಕ್ಕೆ ತಡೆ, ಹೊಸ ನಿಯಮ ಜಾರಿಗೆ ಚಿಂತನೆ
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ನೈಸ್ ಟೋಲ್ ಸಿಬ್ಬಂದಿಗೆ ಕ್ಲಾಸ್ ತಗೊಂಡ ಯುವತಿ
ನೈಸ್ ಟೋಲ್ ಸಿಬ್ಬಂದಿಗೆ ಕ್ಲಾಸ್ ತಗೊಂಡ ಯುವತಿ