AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aadhaar Card: ಆಧಾರ್ ಇಲ್ಲದಿದ್ದರೆ ಸಬ್ಸಿಡಿ ಇಲ್ಲ! ರಾಜ್ಯಗಳಿಗೆ ಕೇಂದ್ರದಿಂದ ಮಹತ್ವದ ಸುತ್ತೋಲೆ

ಆಧಾರ್ ಹೊಂದಿರುವ ನಾಗರಿಕರು ಮಾತ್ರ ಯೋಜನೆಗಳು ಮತ್ತು ಸಬ್ಸಿಡಿಗಳ ಪ್ರಯೋಜನ ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರಗಳು ಮತ್ತು ಸಚಿವಾಲಯಗಳಿಗೆ ಸುತ್ತೋಲೆ ಕಳುಹಿಸಿದೆ. ಆಧಾರ್ ಇಲ್ಲದವರಿಗೆ ಯಾವುದೇ ಪ್ರಯೋಜನಗಳನ್ನು ನೀಡುವುದಿಲ್ಲ ಎಂದೂ ಸ್ಪಷ್ಟಪಡಿಸಿದೆ.

Aadhaar Card: ಆಧಾರ್ ಇಲ್ಲದಿದ್ದರೆ ಸಬ್ಸಿಡಿ ಇಲ್ಲ! ರಾಜ್ಯಗಳಿಗೆ ಕೇಂದ್ರದಿಂದ ಮಹತ್ವದ ಸುತ್ತೋಲೆ
ಆಧಾರ್ ಇಲ್ಲದಿದ್ದರೆ ಸಬ್ಸಿಡಿ ಇಲ್ಲ! ರಾಜ್ಯಗಳಿಗೆ ಕೇಂದ್ರದಿಂದ ಮಹತ್ವದ ಸುತ್ತೋಲೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Aug 16, 2022 | 7:36 PM

Aadhaar Card: ಇತ್ತೀಚಿನ ದಿನಗಳಲ್ಲಿ ಆಧಾರ್ ಕಾರ್ಡ್ ಪ್ರಮುಖ ವೈಯಕ್ತಿಕ ದಾಖಲೆಗಳಲ್ಲಿ ಒಂದಾಗಿದೆ. ಅದು ಇಲ್ಲದೆ ಏನೂ ಆಗುವುದಿಲ್ಲ. ಸರ್ಕಾರಿ, ಖಾಸಗಿ ಹಾಗೂ ಇತರೆ ಸಣ್ಣಪುಟ್ಟ ಕೆಲಸಗಳಿಗೂ ಆಧಾರ್ ಅತ್ಯಗತ್ಯವಾಗಿದೆ. ಆಧಾರ್ ಕಾರ್ಡ್ ಇಲ್ಲದೆ ಅನೇಕ ಸರ್ಕಾರಿ ಯೋಜನೆಗಳು ಲಭ್ಯವಿಲ್ಲ. ಮೇಲಾಗಿ ಸರ್ಕಾರದ ಇತರೆ ಸವಲತ್ತುಗಳು ಸಿಗುತ್ತಿಲ್ಲ ಎಂಬುದನ್ನು ಗಮನಿಸಬೇಕು. ಸರ್ಕಾರದ ಯೋಜನೆಗಳು ಮತ್ತು ಸಬ್ಸಿಡಿಗಳ ಪ್ರಯೋಜನಗಳನ್ನು ಪಡೆಯಲು ಆಧಾರ್ ಕಡ್ಡಾಯವಾಗಿದೆ ಎಂದು UIDAI ಸ್ಪಷ್ಟಪಡಿಸಿದೆ.

ಇದಕ್ಕಾಗಿ ಪ್ರಾಧಿಕಾರವು ಎಲ್ಲಾ ಕೇಂದ್ರ ಸಚಿವಾಲಯಗಳು ಮತ್ತು ರಾಜ್ಯ ಸರ್ಕಾರಗಳಿಗೆ ಸುತ್ತೋಲೆಯನ್ನು ಸಹ ಹೊರಡಿಸಿದೆ. ಆಧಾರ್ ಹೊಂದಿರುವ ನಾಗರಿಕರು ಮಾತ್ರ ಯೋಜನೆಗಳು ಮತ್ತು ಸಬ್ಸಿಡಿಗಳ ಪ್ರಯೋಜನ ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರಗಳು ಮತ್ತು ಸಚಿವಾಲಯಗಳಿಗೆ ಸುತ್ತೋಲೆ ಕಳುಹಿಸಿದೆ. ಆಧಾರ್ ಇಲ್ಲದವರಿಗೆ ಯಾವುದೇ ಪ್ರಯೋಜನಗಳನ್ನು ನೀಡುವುದಿಲ್ಲ ಎಂದೂ ಸ್ಪಷ್ಟಪಡಿಸಿದೆ.

ವರದಿಗಳ ಪ್ರಕಾರ.. ಇನ್ನು ಆಧಾರ್ ನಿಯಮಗಳನ್ನು ಬಿಗಿಗೊಳಿಸಲಾಗುವುದು. ಆಧಾರ್‌ಗಾಗಿ ಈಗಿರುವ ಸೂಚನೆಗಳ ಪ್ರಕಾರ.. ಒಬ್ಬ ವ್ಯಕ್ತಿಯು ಆಧಾರ್ ಸಂಖ್ಯೆಯನ್ನು ಹೊಂದಿಲ್ಲದಿದ್ದರೆ ಅವರು ಇತರ ದಾಖಲೆಗಳನ್ನು ತೋರಿಸುವ ಮೂಲಕ ಸಬ್ಸಿಡಿಯನ್ನು ಪಡೆಯಬಹುದು. ಆದರೆ ಇನ್ನು ಮುಂದೆ… ಯಾರೇ ಆಗಲಿ ಆಧಾರ್ ಸಂಖ್ಯೆ ಹೊಂದಿಲ್ಲದಿದ್ದರೆ, ಅವರು ಅದಕ್ಕೆ ಅರ್ಜಿ ಸಲ್ಲಿಸಬೇಕು, ಅರ್ಜಿ ಸಲ್ಲಿಸುವ ಸಮಯದಲ್ಲಿ ರಸೀದಿ ಅಥವಾ ದಾಖಲಾತಿ ಚೀಟಿಯನ್ನು ತೋರಿಸಬೇಕು ಮತ್ತು ಸಹಾಯಧನ ಅಥವಾ ಸರ್ಕಾರದ ಯೋಜನೆಯ ಲಾಭವನ್ನು ಮಾತ್ರ ಪಡೆಯಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಯಾರಾದರೂ ಆಧಾರ್ ಹೊಂದಿಲ್ಲದಿದ್ದರೆ ಅಥವಾ ಅವರು ಆಧಾರ್‌ಗೆ ಅರ್ಜಿ ಸಲ್ಲಿಸದಿದ್ದರೆ ಅವರು ಇತರ ದಾಖಲೆಗಳನ್ನು ತೋರಿಸಿ ಸರ್ಕಾರದ ವಿನಾಯಿತಿ ಪಡೆಯಲು ಸಾಧ್ಯವಿಲ್ಲ.

ಕಠಿಣವಾಗುತ್ತಿವೆ ಆಧಾರ್ ಮಾನದಂಡಗಳು: ಸಬ್ಸಿಡಿಗಳು ಮತ್ತು ವಿನಾಯಿತಿಗಳಿಗೆ ಕಡಿವಾಣ ಹಾಕಲು ಸರ್ಕಾರವು ಪ್ರಯತ್ನಗಳನ್ನು ಮುಂದುವರೆಸಿದೆ. ಈ ಮಧ್ಯೆ, ಅಕ್ರಮಗಳನ್ನು ತಡೆಯಲು ಆಧಾರ್ ಕಾರ್ಡ್ ನೆರವಾಗಿದೆ. ಜನರು ಇದರ ಸದುಪಯೋಗ ಪಡೆಯಬೇಕು. ಪ್ರಸ್ತುತ ಸರ್ಕಾರವು ಅಗ್ಗದ ದರದಲ್ಲಿ ಪಡಿತರ, ಅಡುಗೆ ಅನಿಲ, ಮತ್ತು ಕಡಿಮೆ ದರದಲ್ಲಿ ಸಾಲದಂತಹ ಅನೇಕ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇವುಗಳನ್ನು ಆಧಾರ್ ಸಹಾಯದಿಂದ ವಿತರಿಸಲಾಗುತ್ತಿದೆ. ಜೊತೆಗೆ ಪಿಎಂ ಕಿಸಾನ್ ಯೋಜನೆ ನೆರವು ದೊರಕುತ್ತಿದೆ.

To read more in Telugu click here

ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
ಮೋದಿ ನೇತೃತ್ವದ ಭಾರತದಲ್ಲಿ ಎಲ್ಲರೂ ಸಮಾನರು, ಸುರಕ್ಷಿತರು: ಕೇಂದ್ರ ಸಚಿವೆ
ಮೋದಿ ನೇತೃತ್ವದ ಭಾರತದಲ್ಲಿ ಎಲ್ಲರೂ ಸಮಾನರು, ಸುರಕ್ಷಿತರು: ಕೇಂದ್ರ ಸಚಿವೆ
VIDEO: 5 ವರ್ಷದ ಪೋರನ ಸ್ಫೋಟಕ ಬ್ಯಾಟಿಂಗ್ ನೀವು ನೋಡಲೇಬೇಕು
VIDEO: 5 ವರ್ಷದ ಪೋರನ ಸ್ಫೋಟಕ ಬ್ಯಾಟಿಂಗ್ ನೀವು ನೋಡಲೇಬೇಕು
ನಟಿ ಪ್ರೇಮಾ ಈಗಲೂ ಹೇಗೆ ಡ್ಯಾನ್ಸ್ ಮಾಡ್ತಾರೆ ನೋಡಿ; ಇಲ್ಲಿದೆ ವಿಡಿಯೋ
ನಟಿ ಪ್ರೇಮಾ ಈಗಲೂ ಹೇಗೆ ಡ್ಯಾನ್ಸ್ ಮಾಡ್ತಾರೆ ನೋಡಿ; ಇಲ್ಲಿದೆ ವಿಡಿಯೋ
ಹುಲಿಗಳನ್ನು ಕೊಂದ ಅಪರಾಧಿಗಳಿಗೆ ಡಬಲ್ ಶಿಕ್ಷೆಯಾಗಲಿದೆ: ಅರಣ್ಯಾಧಿಕಾರಿ
ಹುಲಿಗಳನ್ನು ಕೊಂದ ಅಪರಾಧಿಗಳಿಗೆ ಡಬಲ್ ಶಿಕ್ಷೆಯಾಗಲಿದೆ: ಅರಣ್ಯಾಧಿಕಾರಿ
VIDEO: ಕೊನೆಯ ಎಸೆತದಲ್ಲಿ ಸಿಕ್ಸ್​... ದಾಖಲೆಯ ರನ್ ಚೇಸ್​..!
VIDEO: ಕೊನೆಯ ಎಸೆತದಲ್ಲಿ ಸಿಕ್ಸ್​... ದಾಖಲೆಯ ರನ್ ಚೇಸ್​..!
ಗರ್ಭವತಿಯಾದ ಹೆಣ್ಣಿನ ಸಂತೋಷ ಕುಟುಂಬಕ್ಕೆ ಸರ್ವಶುಭಮಂಗಳ ಹೇಗೆ?
ಗರ್ಭವತಿಯಾದ ಹೆಣ್ಣಿನ ಸಂತೋಷ ಕುಟುಂಬಕ್ಕೆ ಸರ್ವಶುಭಮಂಗಳ ಹೇಗೆ?
Daily Horoscope: ಈ ರಾಶಿಯವರು ಆತುರದಲ್ಲಿ ಏನನ್ನಾದರೂ ಮಾಡಲು ಹೋಗದಿರಿ
Daily Horoscope: ಈ ರಾಶಿಯವರು ಆತುರದಲ್ಲಿ ಏನನ್ನಾದರೂ ಮಾಡಲು ಹೋಗದಿರಿ