AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maruti Suzuki: 30,000 ರೂವರೆಗೂ ಏರಿಕೆಯಾಗಲಿದೆ ಮಾರುತಿ ಸುಜುಕಿಯ ವಿವಿಧ ಕಾರುಗಳ ಬೆಲೆ

Maruti Suzuki to hike prices of its various model cars: ಮಾರುತಿ ಸುಜುಕಿಯ ಎಸ್ ಪ್ರೆಸ್ಸೋದಿಂದ ಹಿಡಿದು ಇನ್ವಿಕ್ಟೋವರೆಗೆ ವಿವಿಧ ಕಾರುಗಳ ಬೆಲೆ ಏರಿಕೆಯಾಗಲಿದೆ. ಕಂಪನಿ ಪ್ರಕಟಣೆ ಪ್ರಕಾರ ಆಗಸ್ಟ್ ತಿಂಗಳಿಂದಲೇ ಬೆಲೆ ಏರಿಕೆ ಜಾರಿಗೆ ಬರಬಹುದು. ಕಾರು ತಯಾರಿಕೆಗೆ ಆಗುತ್ತಿರುವ ವೆಚ್ಚದಲ್ಲಿ ಹೆಚ್ಚಳ ಆಗಿರುವುದು ಕಾರುಗಳ ಬೆಲೆ ಏರಿಕೆಗೆ ಕಾರಣ ಎನ್ನಲಾಗಿದೆ.

Maruti Suzuki: 30,000 ರೂವರೆಗೂ ಏರಿಕೆಯಾಗಲಿದೆ ಮಾರುತಿ ಸುಜುಕಿಯ ವಿವಿಧ ಕಾರುಗಳ ಬೆಲೆ
ಮಾರುತಿ ಸುಜುಕಿ ಸ್ವಿಫ್ಟ್ ಕಾರುImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 21, 2026 | 7:58 PM

Share

ನವದೆಹಲಿ, ಜುಲೈ 21: ಭಾರತದ ನಂಬರ್ ಒನ್ ಕಾರು ತಯಾರಕ ಸಂಸ್ಥೆಯಾದ ಮಾರುತಿ ಸುಜುಕಿ ತನ್ನ ವಿವಿಧ ಕಾರುಗಳ ಬೆಲೆಯನ್ನು ಏರಿಸಲಿದೆ. ಮುಂದಿನ ತಿಂಗಳಿಂದ (ಆಗಸ್ಟ್ 2026) ಜಾರಿಗೆ ಬರುವಂತೆ ಮಾರುತಿ ಸುಜುಕಿ (Maruti Suzuki) ತನ್ನ ವಿವಿಧ ಮಾಡಲ್​ಗಳ ಕಾರುಗಳ ಬೆಲೆಯನ್ನು ₹30,000 ವರೆಗೆ ಏರಿಕೆ ಮಾಡುವುದಾಗಿ ಘೋಷಿಸಿದೆ.

ಕಾರು ಉತ್ಪಾದನಾ ವೆಚ್ಚಗಳು (Input costs) ಮತ್ತು ಹಣದುಬ್ಬರದ ಒತ್ತಡ ನಿರಂತರವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕಂಪನಿ ಷೇರು ಮಾರುಕಟ್ಟೆಗೆ ನೀಡಿದ ಮಾಹಿತಿಯಲ್ಲಿ ತಿಳಿಸಿದೆ. ಹೊಸ ಬೆಲೆ ಏರಿಕೆಯು ಆಗಸ್ಟ್ 2026 ರಿಂದ ಜಾರಿಗೆ ಬರಲಿದ್ದು, ಕಾರಿನ ಮಾಡಲ್ ಹಾಗೂ ವೇರಿಯೆಂಟ್‌ಗಳಿಗೆ ಅನುಗುಣವಾಗಿ ದರ ಹೆಚ್ಚಳದ ಪ್ರಮಾಣ ಬದಲಾಗಲಿದೆ.

ಇದನ್ನೂ ಓದಿ: ಅದೃಷ್ಟ ಮತ್ತು ಅಂಡಾಶಯದ ಲಾಟರಿ; ತಮ್ಮ ಯಶಸ್ಸಿನ ಸೀಕ್ರೆಟ್ ಬಿಚ್ಚಿಟ್ಟ ವಾರನ್ ಬಫೆಟ್

ಎಂಟ್ರಿ ಲೆವೆಲ್ S-Presso ನಿಂದ ಹಿಡಿದು ಪ್ರೀಮಿಯಂ MPV Invicto ವರೆಗಿನ ಮಾಡೆಲ್‌ಗಳ ಮೇಲೆ ಈ ದರ ಏರಿಕೆ ಪರಿಣಾಮ ಬೀರಲಿದೆ. ಪ್ರಸ್ತುತ ಮಾರುತಿ ಕಾರುಗಳ ದರ ₹3.5 ಲಕ್ಷದಿಂದ ₹28.70 ಲಕ್ಷದ ವ್ಯಾಪ್ತಿಯಲ್ಲಿದೆ.

ಜೂನ್ ತಿಂಗಳಲ್ಲಿ ಪ್ರೈಸ್ ಪ್ರೊಟೆಕ್ಷನ್ ಆಫರ್ ಕೊಟ್ಟಿದ್ದ ಮಾರುತಿ

ಮಾರುತಿ ಸುಜುಕಿ ಜೂನ್ ತಿಂಗಳಿನಲ್ಲೂ ಕಾರುಗಳ ದರವನ್ನು ಹೆಚ್ಚಿಸಿತ್ತು. ಆಗ ಸಣ್ಣ ಕಾರು ಖರೀದಿದಾರರಿಗೆ (Alto K10, S-Presso, Celerio, WagonR) ‘ಬೆಲೆ ರಕ್ಷಣೆ’ (Price Protection) ಸೌಲಭ್ಯವನ್ನು ನೀಡಿತ್ತು. ಆದರೆ ಆಗಸ್ಟ್ ತಿಂಗಳ ಏರಿಕೆಗೆ ಇಂತಹ ಸೌಲಭ್ಯ ನೀಡಲಾಗುವುದೇ ಎಂಬುದನ್ನು ಕಂಪನಿ ಇನ್ನೂ ಸ್ಪಷ್ಟಪಡಿಸಿಲ್ಲ.

ಇದನ್ನೂ ಓದಿ: ಹೆಲ್ತ್ ಇನ್ಷೂರೆನ್ಸ್ ಖರೀದಿಸುವ ಮುನ್ನ, ಈ 5 ಅಂಶಗಳು ಗಮನದಲ್ಲಿರಲಿ…

ಜಾಗತಿಕ ವ್ಯಾಪಾರ ಅಡಚಣೆಗಳು ಹಾಗೂ ಕಚ್ಚಾವಸ್ತುಗಳ ವೆಚ್ಚ ಹೆಚ್ಚಾದ ಕಾರಣ ಟಾಟಾ ಮೋಟಾರ್ಸ್, ಮಹೀಂದ್ರಾ ಮತ್ತು ಹ್ಯುಂಡೈ ಸಂಸ್ಥೆಗಳು ಸಹ ಇತ್ತೀಚೆಗೆ ತಮ್ಮ ವಾಹನಗಳ ಬೆಲೆಯನ್ನು ಏರಿಸಿವೆ. ನೀವು ಹೊಸ ಮಾರುತಿ ಕಾರು ಖರೀದಿಸುವ ಯೋಜನೆಯಲ್ಲಿದ್ದರೆ, ಆಗಸ್ಟ್ ತಿಂಗಳು ಆರಂಭವಾಗುವ ಮುನ್ನವೇ ಬುಕ್ ಮಾಡುವುದರಿಂದ ದರ ಏರಿಕೆಯಿಂದ ಬಚಾವಾದರೂ ಆಗಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ