ಬೆಂಗಳೂರು-ನೆಲಮಂಗಲ ಹೆದ್ದಾರಿಯಲ್ಲಿ ಭಾರಿ ವಾಹನ ದಟ್ಟಣೆ: ರಜೆ ಹಿನ್ನೆಲೆ 4 ಕಿಮೀಗೂ ಹೆಚ್ಚು ಟ್ರಾಫಿಕ್ ಜಾಮ್, ಆಂಬುಲೆನ್ಸ್ ಸಿಲುಕಿ ಪರದಾಟ

Edited By:

Updated on: Sep 12, 2026 | 2:26 PM

ಗಣೇಶ ಚತುರ್ಥಿ ಹಾಗೂ ವೀಕೆಂಡ್ ರಜೆಗಳ ಹಿನ್ನೆಲೆಯಲ್ಲಿ ಬೆಂಗಳೂರು-ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ವಾಹನ ದಟ್ಟಣೆ ಉಂಟಾಗಿದೆ. ನೆಲಮಂಗಲದ ಕುಣಿಗಲ್ ಸರ್ಕಲ್ ಬಳಿ ಸುಮಾರು ನಾಲ್ಕೈದು ಕಿಲೋಮೀಟರ್‌ಗಳಷ್ಟು ಉದ್ದಕ್ಕೆ ವಾಹನಗಳು ನಿಧಾನವಾಗಿ ಚಲಿಸುತ್ತಿವೆ. ಈ ಟ್ರಾಫಿಕ್ ಜಾಮ್‌ನಲ್ಲಿ ಆಂಬ್ಯುಲೆನ್ಸ್ ವಾಹನಗಳು ಸಿಲುಕಿ ಪರದಾಡುತ್ತಿರುವುದು ಕಂಡುಬಂದಿದೆ.

ನೆಲಮಂಗಲ, ಸೆಪ್ಟೆಂಬರ್ 12: ಸೋಮವಾರ ಗಣೇಶ ಚತುರ್ಥಿ ರಜೆ ಹಾಗೂ ವಾರಾಂತ್ಯದ ಸಾಲು ಸಾಲು ರಜೆಗಳ ಹಿನ್ನೆಲೆಯಲ್ಲಿ ಬೆಂಗಳೂರು-ನೆಲಮಂಗಲ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭಾರಿ ವಾಹನ ದಟ್ಟಣೆ ಉಂಟಾಗಿದೆ. ಊರಿಗೆ ಹೊರಟ ಜನರಿಂದಾಗಿ ಬೆಂಗಳೂರು-ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯು ಸಂಪೂರ್ಣವಾಗಿ ದಟ್ಟಣೆಯಿಂದ ಕೂಡಿದ್ದು, ಪ್ರಯಾಣಿಕರು ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ಮುಖ್ಯವಾಗಿ, ನೆಲಮಂಗಲದ ಕುಣಿಗಲ್ ಸರ್ಕಲ್ ಬಳಿ ಪರಿಸ್ಥಿತಿ ಗಂಭೀರವಾಗಿದೆ. ಇಲ್ಲಿ ವಾಹನಗಳು ನಾಲ್ಕೈದು ಕಿಲೋಮೀಟರ್‌ಗಳಷ್ಟು ದೂರ ನಿಧಾನವಾಗಿ ಚಲಿಸುತ್ತಿದ್ದು, ಕೆಲವೆಡೆ ಸಂಪೂರ್ಣವಾಗಿ ನಿಂತಿವೆ. ಈ ಟ್ರಾಫಿಕ್ ಜಾಮ್‌ನಲ್ಲಿ ಸಾಮಾನ್ಯ ವಾಹನಗಳಷ್ಟೇ ಅಲ್ಲದೆ, ರೋಗಿಗಳನ್ನು ಸಾಗಿಸುತ್ತಿದ್ದ ಆಂಬುಲೆನ್ಸ್ ವಾಹನಗಳು ಸಹ ಸಿಲುಕಿಕೊಂಡಿದ್ದು, ತುರ್ತು ಸೇವೆಗಳಿಗೂ ಅಡ್ಡಿಯಾಗಿದೆ.

ಈ ವಾಹನ ದಟ್ಟಣೆಯು ರಜಾದಿನಗಳಲ್ಲಿ ಪ್ರವಾಸಕ್ಕೆ ಹೊರಟವರು, ಹಬ್ಬಕ್ಕೆ ಊರಿಗೆ ತೆರಳುವವರು ಹಾಗೂ ವಾರಾಂತ್ಯದ ಪ್ರಯಾಣಿಕರಿಗೆ ತಲೆನೋವಾಗಿ ಪರಿಣಮಿಸಿದೆ. ರಾಷ್ಟ್ರೀಯ ಹೆದ್ದಾರಿ 48ರಲ್ಲಿ ವಾಹನಗಳ ಸಾಲುಗಟ್ಟಿದ ದೃಶ್ಯಗಳು ಸಾಮಾನ್ಯವಾಗಿದ್ದು, ಟ್ರಾಫಿಕ್ ಪೊಲೀಸರು ಪರಿಸ್ಥಿತಿ ನಿಭಾಯಿಸಲು ಹರಸಾಹಸ ಪಡುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಎಚ್​. ವಿ.

ಮಂಜುನಾಥ ಹೆಚ್ ವಿ. ಇವರು ಹುಟ್ಟಿದ್ದು ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟದಲ್ಲಿ. ಬೆಂಗಳೂರು ಸೆಂಟ್ರಲ್ ಕಾಲೇಜಿನಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ. ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದರು. 8 ವರ್ಷಗಳ ಕಾಲ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿದ್ದಾರೆ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಆಗಿ ವೃತ್ತಿ ನಿರ್ವಹಿಸಿದ್ದು ಸಾಮಾಜಿಕವಾಗಿ ನ್ಯಾಯ ಒದಗಿಸುವ ಕೆಲಸವನ್ನ ಮಾಡಿದ್ದಾರೆ. ಕಳೆದ 9 ವರ್ಷಗಳಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಬೆಂಗಳೂರು ಹಾಗೂ ನೆಲಮಂಗಲ ಭಾಗದ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕ್ರಿಕೆಟ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್, ಬುಕ್ ಹಾಗೂ ಪೇಪರ್ ಓದುವ ಹವ್ಯಾಸವಿದೆ.

Read More