Meta Layoff: ಮೆಟಾದಿಂದ ಎರಡನೇ ಸುತ್ತಿನ ಉದ್ಯೋಗ ಕಡಿತ ಘೋಷಣೆ; ಕೆಲಸ ಕಳೆದುಕೊಳ್ಳಲಿದ್ದಾರೆ 10 ಸಾವಿರ ಮಂದಿ

ಫೇಸ್​​​ಬುಕ್ ಒಡೆತನ ಹೊಂದಿರುವ ಮೆಟಾ ಪ್ಲಾಟ್​ಫಾರ್ಮ್ ಎರಡನೇ ಸುತ್ತಿನ ಉದ್ಯೋಗ ಕಡಿತ ಘೋಷಿಸಿದ್ದು, 10,000 ಮಂದಿ ಉದ್ಯೋಗಿಗಳನ್ನು ಮನೆಗೆ ಕಳುಹಿಸುವುದಾಗಿ ತಿಳಿಸಿದೆ.

Meta Layoff: ಮೆಟಾದಿಂದ ಎರಡನೇ ಸುತ್ತಿನ ಉದ್ಯೋಗ ಕಡಿತ ಘೋಷಣೆ; ಕೆಲಸ ಕಳೆದುಕೊಳ್ಳಲಿದ್ದಾರೆ 10 ಸಾವಿರ ಮಂದಿ
ಸಾಂದರ್ಭಿಕ ಚಿತ್ರ
Follow us
Ganapathi Sharma
| Updated By: ರಮೇಶ್ ಬಿ. ಜವಳಗೇರಾ

Updated on:Mar 15, 2023 | 9:24 AM

ನವದೆಹಲಿ: ಫೇಸ್​​​ಬುಕ್ (Facebook) ಒಡೆತನ ಹೊಂದಿರುವ ಮೆಟಾ ಪ್ಲಾಟ್​ಫಾರ್ಮ್ (Meta Platform) ಎರಡನೇ ಸುತ್ತಿನ ಉದ್ಯೋಗ ಕಡಿತ (Layoff) ಘೋಷಿಸಿದ್ದು, 10,000 ಮಂದಿ ಉದ್ಯೋಗಿಗಳನ್ನು ಮನೆಗೆ ಕಳುಹಿಸುವುದಾಗಿ ಮಂಗಳವಾರ ತಿಳಿಸಿದೆ. ಉದ್ಯಮವು ತೀವ್ರವಾದ ಆರ್ಥಿಕ ಕುಸಿತ ಎದುರಿಸುತ್ತಿರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕಂಪನಿ ಹೇಳಿದೆ. ಇದರೊಂದಿಗೆ, ಎರಡನೇ ಸುತ್ತಿನ ಸಾಮೂಹಿಕ ವಜಾ ಘೋಷಿಸಿದ ಮೊದಲ ದೊಡ್ಡ ತಂತ್ರಜ್ಞಾನ ಕಂಪನಿಯಾಗಿ ಮೆಟಾ ಗುರುತಿಸಲ್ಪಟ್ಟಿದೆ. ಉದ್ಯೋಗ ಕಡಿತಕ್ಕೆ ಸಂಬಂಧಿಸಿದ ಸುದ್ದಿ ಪ್ರಕಟವಾಗುತ್ತಿದ್ದಂತೆಯೇ ಕಂಪನಿಯ ಷೇರು ಮೌಲ್ಯದಲ್ಲಿ ಶೇ 6ರ ವೃದ್ಧಿ ದಾಖಲಾಯಿತು. 5,000 ಹುದ್ದೆಗಳಿಗೆ ನೇಮಕ ಮಾಡುವ ಉದ್ದೇಶವನ್ನು ಹೊಂದಿಲ್ಲ ಎಂದು ಕಂಪನಿ ಘೋಷಿಸಿದೆ.

ಪ್ರಸಕ್ತ ಆರ್ಥಿಕ ಪರಿಸ್ಥಿತಿಯು ಹಲವು ವರ್ಷಗಳವರೆಗೆ ಮುಂದುವರಿಯುವ ಸಾಧ್ಯತೆ ಇದ್ದು, ಅದಕ್ಕೆ ನಮ್ಮನ್ನು ನಾವು ಸಿದ್ಧಪಡಿಸಿಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಕಂಪನಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮಾರ್ಕ್ ಜುಕರ್‌ಬರ್ಗ್ ಸಿಬ್ಬಂದಿಗೆ ಸಂದೇಶದಲ್ಲಿ ತಿಳಿಸಿದ್ದಾರೆ.

ಹೆಚ್ಚುತ್ತಿರುವ ಬಡ್ಡಿದರ, ಆರ್ಥಿಕ ಕುಸಿತಗಳಿಂದಾಗಿ ಅಮೆರಿಕದಾದ್ಯಂತ ದೊಡ್ಡ ದೊಡ್ಡ ಟೆಕ್ ಕಂಪನಿಗಳು ಸಾಮೂಹಿಕ ಉದ್ಯೋಗ ಕಡಿತದ ಮೊರೆ ಹೋಗಿವೆ. ವಾಲ್​ಸ್ಟ್ರೀಟ್, ಅಮೆಜಾನ್​ ಸೇರಿದಂತೆ ಅನೇಕ ಕಂಪನಿಗಳು ಸಾವಿರಾರು ಸಂಖ್ಯೆಯಲ್ಲಿ ಉದ್ಯೋಗಿಗಳನ್ನು ವಜಾಗೊಳಿಸಿವೆ.

ಇದನ್ನೂ ಓದಿ: Meta Layoffs- ಫೇಸ್​ಬುಕ್​ಗೆ ಶೇ.13ರಷ್ಟು ಲೇ ಆಫ್ ಸಾಕಾಗಿಲ್ಲ, ಮತ್ತೊಂದು ಸುತ್ತಿನ ಫೈರಿಂಗ್​ಗೆ ಮೆಟಾ ಅಣಿ

ಮೆಟಾವರ್ಸ್​​​ಗಾಗಿ ಭಾರೀ ಹೂಡಿಕೆ ಮಾಡಿದ್ದ ಮೆಟಾ ಕೈಸುಟ್ಟುಕೊಂಡಿತ್ತು. ಈ ಬಗ್ಗೆ ಹೂಡಿಕೆದಾರರಲ್ಲಿ ವಿಶ್ವಾಸ ವೃದ್ಧಿಸಲು ಕ್ರಮ ಕೈಗೊಂಡಿದ್ದ ಜುಕರ್​ಬರ್ಗ್, 2023 ಅನ್ನು ದಕ್ಷತೆಯ ವರ್ಷವನ್ನಾಗಿ ಮಾರ್ಪಡಿಸುವುದಾಗಿ ಭರವಸೆ ನೀಡಿದ್ದರು.

2022ರ ನವೆಂಬರ್​ನಲ್ಲಿ ಮೆಟಾ ಸುಮಾರು 11,000 ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿತ್ತು. ಮೆಟಾದ 18 ವರ್ಷಗಳ ಇತಿಹಾಸದಲ್ಲೇ ಅದು ಮೊದಲ ಉದ್ಯೋಗ ಕಡಿತವಾಗಿತ್ತು. 2022ರ ಅಂತ್ಯದ ವೇಳೆಗೆ ಮೆಟಾ 86,482 ಉದ್ಯೋಗಿಗಳನ್ನು ಹೊಂದಿತ್ತು.

ಒಟ್ಟಾರೆಯಾಗಿ ಜಾಗತಿಕವಾಗಿ ತಂತ್ರಜ್ಞಾನ ಕ್ಷೇತ್ರದ ಉದ್ದಿಮೆಗಳು 2022ರಲ್ಲಿ 2,90,000 ಉದ್ಯೋಗ ಕಡಿತಗೊಳಿಸಿದ್ದವು ಎಂಬುದು layoffs.fyi. ತಾಣದ ಅಂಕಿಅಂಶಗಳಿಂದ ತಿಳಿದುಬಂದಿದೆ.

ಭಾರತದಲ್ಲಿಯೂ ವಿಪ್ರೋ, ಇನ್ಫೋಸಿಸ್, ಓಲಾ ಎಲೆಕ್ಟ್ರಿಕ್, ಜೊಮೆಟೋ ಸೇರಿದಂತೆ ಅನೇಕ ಕಂಪನಿಗಳು ಉದ್ಯೋಗ ಕಡಿತ ಮಾಡಿವೆ. 2023ರ ಜನವರಿಯಲ್ಲಿಯೂ ಜಾಗತಿಕವಾಗಿ ಸಾವಿರಾರು ಸಂಖ್ಯೆಯ ಉದ್ಯೋಗಿಗಳು ಕೆಲಸದಿಂದ ವಜಾಗೊಂಡಿದ್ದರು. ಈ ಪೈಕಿ ಸಿಂಹಪಾಲು ಐಟಿ ಉದ್ಯೋಗಿಗಳೇ ಇದ್ದರು.

Published On - 10:10 pm, Tue, 14 March 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ