AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಬಂಡವಾಳ ಹೂಡಲು ಫಿನ್ ಟೆಕ್‌ ಕಂಪನಿಗಳಿಗೆ ಆಹ್ವಾನ ನೀಡಿದ ಸಚಿವ ಮುರುಗೇಶ್ ನಿರಾಣಿ

Fintech: ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್.ನಿರಾಣಿ ಫಿನ್​ಟೆಕ್ ಕಂಪನಿಗಳಿಗೆ ರಾಜ್ಯದಲ್ಲಿ ಬಂಡವಾಳ ಹೂಡಲು ಆಹ್ವಾನ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಫಿನ್​ಟೆಕ್ ಕ್ರಾಂತಿಯಾಗಬೇಕು ಎಂದು ಸಲಹೆ ನೀಡಿರುವ ಬೆನ್ನಲ್ಲೇ ಸಚಿವರ ಆಹ್ವಾನ ಮಹತ್ವ ಪಡೆದಿದೆ.

ರಾಜ್ಯದಲ್ಲಿ ಬಂಡವಾಳ ಹೂಡಲು ಫಿನ್ ಟೆಕ್‌ ಕಂಪನಿಗಳಿಗೆ ಆಹ್ವಾನ ನೀಡಿದ ಸಚಿವ ಮುರುಗೇಶ್ ನಿರಾಣಿ
ವಿಚಾರ ಸಂಕಿರಣ ಉದ್ಘಾಟಿಸಿದ ಸಚಿವ ಮುರುಗೇಶ್ ನಿರಾಣಿ
TV9 Web
| Edited By: |

Updated on:Dec 03, 2021 | 7:06 PM

Share

ಬೆಂಗಳೂರು: ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಲು ಫಿನ್ ಟೆಕ್ (ಹಣಕಾಸಿನ ಸಂಸ್ಥೆಗಳ ಪೂರಕ ತಾಂತ್ರಿಕ ಸೇವೆಗಳು) ಕಂಪನಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್.ನಿರಾಣಿ ಆಹ್ವಾನ ನೀಡಿದ್ದಾರೆ. ಶುಕ್ರವಾರ 52 ನೇ ಇಂಡಿಯನ್ ವ್ಯಾಲ್ಯುವರ್ಸ್ ಕಾಂಗ್ರೆಸ್‌ ಹಮ್ಮಿಕೊಂಡಿದ್ದ ‘ಮೌಲ್ಯಮಾಪನ ಪರಿಸರ ವ್ಯವಸ್ಥೆಯನ್ನು ಪರಿವರ್ತಿಸುವುದು’ ಎಂಬ ವಿಚಾರಣ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯಾದ್ಯಂತ ‌ಅತ್ಯುತ್ತಮವಾದ ಆರ್ಥಿಕ ಕೈಗಾರಿಕಾ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ. ಕರ್ನಾಟಕವು ದೇಶದಲ್ಲೇ ‌ಅತ್ಯಂತ ಜನಪ್ರಿಯ ಹಣಕಾಸು ತಂತ್ರಜ್ಞಾನ ಕಂಪನಿಗಳಿಗೆ ನೆಲೆಯಾಗಿದೆ ಎಂದು ಸಚಿವರು ನುಡಿದಿದ್ದಾರೆ. ಫಿನ್‌ಟೆಕ್ ಹೂಡಿಕೆ ಮಾಡಲು ಮುಂದೆ ಬಂದರೆ, ಸಾಧ್ಯವಿರುವ ಎಲ್ಲ ನೆರವು ನೀಡಲಾಗುವುದು. ಇದೊಂದು ‌ದೊಡ್ಡ ಉದಯೋನ್ಮುಖ ಉದ್ಯಮವಾಗಿದೆ ಎಂದು ‌ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರಧಾನಿ ನರೇಂದ್ರ ಮೋದಿ ಫಿನ್​ಟೆಕ್ ಉಪಕ್ರಮಗಳಲ್ಲಿ ಕ್ರಾಂತಿಯಾಗಬೇಕು ಎಂದು ಸಲಹೆ ನೀಡಿದ ಬೆನ್ನಲ್ಲೇ ಸಚಿವ ನಿರಾಣಿ ಆಹ್ವಾನ ನೀಡಿರುವುದು ಮಹತ್ವ ಪಡೆದಿದೆ.

ನಮ್ಮ ಬಲವಾದ ಉದ್ಯಮಶೀಲ ಪರಿಸರ ವ್ಯವಸ್ಥೆಯು ಯುವ ವೃತ್ತಿಪರರಿಗೆ ಉದ್ಯೋಗದಾತರಾಗಲು ಮತ್ತು ವಿವಿಧ ಕ್ಷೇತ್ರಗಳನ್ನು ಅನ್ವೇಷಿಸಲು ಅನುವು ಮಾಡಿಕೊಟ್ಟಿದೆ ಎಂದು ಕೈಗಾರಿಕಾ ವಲಯದಲ್ಲಿ ಸಾಧಿಸಿರುವ ಪ್ರಗತಿಯನ್ನು ಸಚಿವ ನಿರಾಣಿ ತೆರೆದಿಟ್ಟರು. ರಾಜ್ಯವು ನೀಡುವ ಉದ್ಯಮಶೀಲತೆಯ ಅವಕಾಶಗಳನ್ನು ಜನರು ಅನ್ವೇಷಿಸಲು ಹಾಗೂ ಉದ್ಯೋಗದಾತರಾಗಿ ರಾಜ್ಯದಲ್ಲಿ ಉದ್ಯೋಗವನ್ನು ಸೃಷ್ಟಿಸಬೇಕೆಂದು ಸರ್ಕಾರ ಬಯಸುತ್ತದೆ. ಇದನ್ನು ‌ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಆರ್ಥಿಕ ಅಭಿವೃದ್ಧಿಯಲ್ಲಿ ಇನ್‌ಸ್ಟಿಟ್ಯೂಟ್ ಆಫ್ ವ್ಯಾಲ್ಯೂರ್ಸ್ (ಐಒವಿ) ಯಂತಹ ಮೌಲ್ಯಮಾಪಕರ ಪ್ರಯತ್ನಗಳನ್ನು ಶ್ಲಾಘಿಸಿದ ಸಚಿವರು, ರಾಜ್ಯದ ಆರ್ಥಿಕ ಬೆಳವಣಿಗೆಯ ಭವಿಷ್ಯದಲ್ಲಿ ಮೌಲ್ಯಮಾಪಕರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದು ಪ್ರಶಂಸಿಸಿದರು. ಕರ್ನಾಟಕದ ಕೈಗಾರಿಕಾ ನೀತಿ 2020-2025 ಹಣಕಾಸು ಕ್ಷೇತ್ರವನ್ನು ಕೇಂದ್ರೀಕೃತ ವಲಯಗಳಲ್ಲಿ ಒಂದಾಗಿದೆ ಎಂದು ಗುರುತಿಸಿದೆ. ನಮ್ಮ ಸುಧಾರಣೆಗಳು ಮತ್ತು ಉಪಕ್ರಮಗಳು ಕರ್ನಾಟಕವನ್ನು 21 ನೇ ಶತಮಾನಕ್ಕೆ ಸಿದ್ಧಪಡಿಸುವ ಗುರಿಯನ್ನು ಹೊಂದಿವೆ. ಮೂಲಸೌಕರ್ಯ ಮತ್ತು ಉದಯೋನ್ಮುಖ ಕೈಗಾರಿಕೆಗಳಲ್ಲಿ ಕರ್ನಾಟಕವನ್ನು ಅಗ್ರಸ್ಥಾನದಲ್ಲಿ ಸ್ಥಾಪಿಸುವುದು ನಮ್ಮ ಮಹತ್ವಾಕಾಂಕ್ಷೆಯಾಗಿದೆ ಎಂದು ನಿರಾಣಿ ಹೇಳಿದರು.

ಫಿನ್‌ಟೆಕ್ ಉದ್ಯಮದ ಮಹತ್ವದ ಬಗ್ಗೆ ‌ ಪ್ರಧಾನಿ ನರೇಂದ್ರ ಮೋದಿ, ದೇಶದ ಪ್ರತಿಯೊಬ್ಬ ನಾಗರಿಕನ ಆರ್ಥಿಕ ಸಬಲೀಕರಣವನ್ನು ಸಾಧಿಸಲು ಸಹಾಯ ಮಾಡುವ ಫಿನ್‌ಟೆಕ್ ಉಪಕ್ರಮಗಳನ್ನು ಫಿನ್‌ಟೆಕ್ ಕ್ರಾಂತಿಯಾಗಿ ಪರಿವರ್ತಿಸುವ ಸಮಯ ಬಂದಿದೆ ಎಂದು ಹೇಳಿದ್ದಾರೆ. ಡಿಜಿಟಲ್ ಇಂಡಿಯಾದ ಅಡಿಯಲ್ಲಿ ಪರಿವರ್ತನಾ ಉಪಕ್ರಮಗಳು ಆಡಳಿತದಲ್ಲಿ ನವೀನ ಫಿನ್‌ಟೆಕ್ ಪರಿಹಾರಗಳಿಗೆ ದಾರಿ ಮಾಡಿಕೊಟ್ಟಿವೆ ಎಂದು ಪ್ರಧಾನಮಂತ್ರಿ ಹೇಳಿರುವುದನ್ನು ಸಚಿವ ನಿರಾಣಿ ಉಲ್ಲೇಖ ಮಾಡಿದರು.

ಇದನ್ನೂ ಓದಿ:

Closing Bell: 58 ಸಾವಿರ ಪಾಯಿಂಟ್ಸ್​ಗಿಂತ ಕೆಳಗಿಳಿದ ಸೆನ್ಸೆಕ್ಸ್; ಪವರ್​ಗ್ರಿಡ್ ಕಾರ್ಪೊರೇಷನ್ ಶೇ 4ರಷ್ಟು ಇಳಿಕೆ

ಚಿಕ್ಕಮಗಳೂರು: ಸಿದ್ದರಾಮಯ್ಯ ಬೆಂಗಾವಾಲು ವಾಹನ ಅಪಘಾತ

Published On - 6:27 pm, Fri, 3 December 21

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ