Sign In

By signing in or creating an account, you agree with Associated Broadcasting Company's Terms & Conditions and Privacy Policy.

Moonlighting: 300 ಉದ್ಯೋಗಿಗಳನ್ನು ವಜಾಗೊಳಿಸಿದ ವಿಪ್ರೋ

ಮೂನ್​ಲೈಟಿಂಗ್​ ಹಿನ್ನೆಲೆಯಲ್ಲಿ ವಿಪ್ರೋ ತನ್ನ 300 ಉದ್ಯೋಗಿಗಳನ್ನು ವಜಾಗೊಳಿಸಿದೆ.

Moonlighting: 300 ಉದ್ಯೋಗಿಗಳನ್ನು ವಜಾಗೊಳಿಸಿದ ವಿಪ್ರೋ
Rishad PremjiImage Credit source: Business Today
Follow us
TV9 Web
| Updated By: ನಯನಾ ರಾಜೀವ್

Updated on:Sep 21, 2022 | 6:35 PM

ಮೂನ್​ಲೈಟಿಂಗ್​ ಹಿನ್ನೆಲೆಯಲ್ಲಿ ವಿಪ್ರೋ ತನ್ನ 300 ಉದ್ಯೋಗಿಗಳನ್ನು ವಜಾಗೊಳಿಸಿದೆ. ಕಳೆದ ಕೆಲವು ತಿಂಗಳುಗಳಿಂದ ವಿಪ್ರೋದ 300 ಉದ್ಯೋಗಿಗಳು ತಮ್ಮ ಕಂಪನಿ ಜತೆಗೆ ಇತರೆ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ ವಿಷಯ ಬೆಳಕಿಗೆ ಬಂದಿದೆ.

ವಿಪ್ರೋದಲ್ಲಿ ಅಂತಹವರಿಗೆ ಜಾಗವಿಲ್ಲ, ನಂತರ ಆ ಉದ್ಯೋಗಿಗಳನ್ನು ಕಂಪನಿಯಿಂದ ವಜಾಗೊಳಿಸಲಾಗಿದೆ ಎಂದು ರಿಷದ್ ಪ್ರೇಮ್​ಜಿ ಹೇಳಿದ್ದಾರೆ. ಮೂನ್‌ಲೈಟ್ ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ ಮತ್ತು ಸಮಗ್ರತೆಯ ಉಲ್ಲಂಘನೆಯ ಕೃತ್ಯಕ್ಕಾಗಿ ಉದ್ಯೋಗಿಗಳನ್ನು ವಜಾಗೊಳಿಸಲಾಗಿದೆ ಎಂದು ಪ್ರೇಮ್‌ಜಿ ಹೇಳಿದರುವಾಸ್ತವವೆಂದರೆ ಇಂದು ವಿಪ್ರೋದಲ್ಲಿ ಕೆಲಸ ಮಾಡುವವರು ಮತ್ತು ನಮ್ಮ ಪ್ರತಿಸ್ಪರ್ಧಿಯೊಬ್ಬರಿಗೆ ನೇರವಾಗಿ ಕೆಲಸ ಮಾಡುತ್ತಿದ್ದಾರೆ . ಕಳೆದ ಕೆಲವು ತಿಂಗಳುಗಳಲ್ಲಿ ನಿಖರವಾಗಿ ಅದನ್ನು ಮಾಡುತ್ತಿರುವ 300 ಜನರನ್ನು ಕಂಡುಹಿಡಿದಿದೆ.

ಕೊರೊನಾ ಸಂದರ್ಭದಲ್ಲಿ ಸಾಕಷ್ಟು ಮಂದಿ ತಮ್ಮ ಕೆಲಸ ಕಳೆದುಕೊಂಡು ವರ್ಷಗಟ್ಟಲೆ ನಿರುದ್ಯೋಗದ ಸಮಸ್ಯೆ ಎದುರಿಸಿದ್ದರು. ಇನ್ನೂ ಕೆಲವು ಕಂಪನಿಗಳಲ್ಲಿ ಸಂಬಳದ ಕಡಿತ ಮಾಡಲಾಗಿತ್ತು. ಆಗ ಕೆಲವು ಉದ್ಯೋಗಿಗಳು ಪಾರ್ಟ್​ ಟೈಂ ಉದ್ಯೋಗಕ್ಕಿಳಿದಿದ್ದರು.

ಇತ್ತೀಚೆಗಷ್ಟೇ ಜಾಗತಿಕ ಮುಂಚೂಣಿಯಲ್ಲಿರುವ ಐಟಿ ಕಂಪನಿಗಳಲ್ಲಿ ಒಂದಾದ ಐಬಿಎಂ ಕೂಡ ಮೂನ್ ಲೈಟಿಂಗ್ ಸಮಸ್ಯೆಗೆ ಸ್ಪಂದಿಸಿದೆ. ಉಭಯ ಉದ್ಯೋಗವನ್ನು ನೈತಿಕವಾಗಿ ಸರಿ ಎಂದು ಪರಿಗಣಿಸಲಾಗುವುದಿಲ್ಲ. ಅಂತಹ ವಿಷಯಗಳನ್ನು ನಿರ್ಲಕ್ಷಿಸುವುದಿಲ್ಲ ಮತ್ತು ಯಾವುದೇ ಸಂದರ್ಭದಲ್ಲೂ ಪ್ರೋತ್ಸಾಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಒಂದು ಕಂಪನಿಯಲ್ಲಿ ಕೆಲಸ ಮಾಡುವ ಉದ್ಯೋಗಿಗಳು ತಮ್ಮ ಕೆಲಸದ ಅವಧಿ ಮುಗಿದ ನಂತರ ಮತ್ತೊಂದು ಕಂಪನಿಯಲ್ಲಿ ಕೆಲಸ ಮಾಡುವುದನ್ನು ಮೂನ್ ಲೈಟಿಂಗ್ ಎಂದು ಹೇಳಿಕೊಳ್ಳುತ್ತಾರೆ. ಕೆಲ ನೌಕರರು ಇದನ್ನು ಮಾಡುತ್ತಿದ್ದಾರೆ. ಕುಟುಂಬ ಬೆಂಬಲ ಮತ್ತು ಹೆಚ್ಚುವರಿ ಆದಾಯಕ್ಕಾಗಿ ನೌಕರರು ಇದನ್ನು ಮಾಡುತ್ತಿರಬಹುದು.

Published On - 6:27 pm, Wed, 21 September 22

ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಏರ್ ಕಂಪ್ರೆಸರ್ ಬ್ರೇಕ್​ಗಳು ಏರ್ ಲೀಕಾಗುತ್ತಿದ್ದರೆ ಬ್ರೇಕ್ ಹತ್ತಲ್ಲ?
ಏರ್ ಕಂಪ್ರೆಸರ್ ಬ್ರೇಕ್​ಗಳು ಏರ್ ಲೀಕಾಗುತ್ತಿದ್ದರೆ ಬ್ರೇಕ್ ಹತ್ತಲ್ಲ?
ಕೊಲೆ ಆರೋಪಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಾತಿಥ್ಯ
ಕೊಲೆ ಆರೋಪಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಾತಿಥ್ಯ