Moto G73 5G: ಭಾರತೀಯ ಮಾರುಕಟ್ಟೆಗೆ ಅಪ್ಪಳಿಸುತ್ತಿದೆ ಮೋಟೋ ಕಂಪನಿಯ ಹೊಸ ಸ್ಮಾರ್ಟ್​ಫೋನ್: ಇದರ ಫೀಚರ್ಸ್ ನೋಡಿ

ಲೀಕ್ ಆಗಿರುವ ಮಾಹಿತಿಯ ಪ್ರಕಾರ, ಮೋಟೋ G73 5G ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ IPS LCD ಡಿಸ್‌ಪ್ಲೇಯನ್ನು ಹೊಂದಿರಲಿದೆ ಎನ್ನಲಾಗಿದೆ. ಬಲಿಷ್ಠವಾದ ಮೀಡಿಯಾ ಟೆಕ್ ಡೈಮೆನ್ಸಿಟಿ 930 SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿರುವ ಸಾಧ್ಯತೆ ಇದ್ದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸುವುದು ಖಚಿತವಾಗಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿರಲಿದೆ.

Moto G73 5G: ಭಾರತೀಯ ಮಾರುಕಟ್ಟೆಗೆ ಅಪ್ಪಳಿಸುತ್ತಿದೆ ಮೋಟೋ ಕಂಪನಿಯ ಹೊಸ ಸ್ಮಾರ್ಟ್​ಫೋನ್: ಇದರ ಫೀಚರ್ಸ್ ನೋಡಿ
Moto G73 5G
Edited By:

Updated on: Oct 08, 2026 | 12:44 PM

ಟೆಕ್ ಮಾರುಕಟ್ಟೆಯಲ್ಲಿ ವಿಶಿಷ್ಟ ಸ್ಮಾರ್ಟ್​ಫೋನ್​ಗಳನ್ನು ಪರಿಚಯಿಸುವುದರಲ್ಲಿ ಮೋಟೋರೊಲಾ (Motorola) ಸಂಸ್ಥೆ ಎತ್ತಿದ ಕೈ. ಇಂದು ಮಾರುಕಟ್ಟೆಯಲ್ಲಿ ಅತಿ ಕಡಿಮೆ ಬೆಲೆಯಿಂದ ಹಿಡಿದು ಅತ್ಯಂತ ದುಬಾರಿ ಬೆಲೆಯ ವರೆಗೆ ಮೊಬೈಲ್​ಗಳನ್ನು ಬಿಡುಗಡೆ ಮಾಡುವ ಮೋಟೋ ಇದೀಗ ಹೊಸ ಸ್ಮಾರ್ಟ್​ಫೋನ್​ವೊಂದನ್ನು (Smartphone) ರಿಲೀಸ್ ಮಾಡಲು ಸಜ್ಜಾಗಿ ನಿಂತಿದೆ. ಅದುವೇ ಮೋಟೋ ಜಿ73 5ಜಿ (Moto G73 5G). ಇದೇ ಮಾರ್ಚ್‌ 10 ರಂದು ಈ ಫೋನ್ ಭಾರತಕ್ಕೆ ಅಪ್ಪಳಿಸಲಿದೆ. ಇದೊಂದು ಮಧ್ಯಮ ಬೆಲೆಗೆ ಫೋನಾಗಿದ್ದರೂ ಬಲಿಷ್ಠ ಪ್ರೊಸೆಸರ್, ಆಕರ್ಷಕ ಕ್ಯಾಮೆರಾ, ಬ್ಯಾಟರಿಯಿಂದ ಆವೃತ್ತವಾಗಿದೆ. ಈ ಫೋನಿನ ಫೀಚರ್ಸ್ ಬಗ್ಗೆ ಕಂಪನಿ ಅಧಿಕೃತ ಮಾಹಿತಿ ತಿಳಿಸಿಲ್ಲ. ಆದರೆ, ಕೆಲ ವಿಶೇಷತೆ ಸೋರಿಕೆ ಆಗಿದೆ.

ಲೀಕ್ ಆಗಿರುವ ಮಾಹಿತಿಯ ಪ್ರಕಾರ, ಮೋಟೋ G73 5G ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ IPS LCD ಡಿಸ್‌ಪ್ಲೇಯನ್ನು ಹೊಂದಿರಲಿದೆ ಎನ್ನಲಾಗಿದೆ. ಬಲಿಷ್ಠವಾದ ಮೀಡಿಯಾ ಟೆಕ್ ಡೈಮೆನ್ಸಿಟಿ 930 SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿರುವ ಸಾಧ್ಯತೆ ಇದ್ದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸುವುದು ಖಚಿತವಾಗಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿರಲಿದೆ.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಈ ಫೋನ್​ನಲ್ಲಿ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅಳವಡಿಸಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್ ಲೆನ್ಸ್‌ ಅನ್ನು ಪಡೆದಿರಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ ಎಂದು ಹೇಳಲಾಗಿದೆ. ಕ್ಯಾಮೆರಾ ಪ್ರಿಯರಿಗೆ ಈ ಫೋನ್ ಇಷ್ಟವಾಗಲಿದೆ.

ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದಕ್ಕೆ ತಕ್ಕಂತೆ 30W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ ಸಪೋರ್ಟ್ ಮಾಡುತ್ತದೆ. ಇದರೊಂದಿಗೆ 3.5mm ಹೆಡ್‌ಫೋನ್ ಜ್ಯಾಕ್ ಮತ್ತು ಸ್ಟಿರಿಯೊ ಸ್ಪೀಕರ್ ಸೆಟಪ್ ಅನ್ನು ಹೊಂದಿರಲಿದೆ. ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಸೇರಿದಂತೆ ಇತ್ತೀಚಿನ ಎಲ್ಲ ಆಯ್ಕೆ ಅಳವಡಿಸಲಾಗಿದೆಯಂತೆ. ಮೋಟೋ G73 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ ಇದೇ ಮಾರ್ಚ್ 10 ರಂದು ಫ್ಲಿಪ್​ಕಾರ್ಟ್​ನಲ್ಲಿ ಬಿಡುಗಡೆಯಾಗಲಿದೆ. ಇದರ ನಿಖರ ಬೆಲೆ ಬಹಿರಂಗಗೊಂಡಿಲ್ಲ. ಆದರೆ, ಮೂಲಗಳ ಪ್ರಕಾರ 20,000ರೂ. ಆಸುಪಾಸಿನಲ್ಲಿ ಇರಬಹುದು ಎಂಬ ಮಾತಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:36 am, Fri, 3 March 23

Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Loading...
Unable to load recommendations.
Follow Us