ಅಯೋಧ್ಯೆ ರಾಮಮಂದಿರ ಉದ್ಘಾಟನೆಯಂದು ರಿಲಯನ್ಸ್ ಇಂಡಸ್ಟ್ರೀಸ್​​ಗೆ ರಜೆ ಘೋಷಿಸಿದ ಮುಖೇಶ್ ಅಂಬಾನಿ

Ram Temple Inauguration: ಅಯೋಧ್ಯೆ ರಾಮಮಂದಿರ ಜನವರಿ 22ಕ್ಕೆ ಉದ್ಘಾಟನೆ, ಈ ಸಮಯದಲ್ಲಿ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್ ದೇಶಾದ್ಯಂತ ತಮ್ಮ ಎಲ್ಲಾ ಕಚೇರಿಗಳಿಗೆ ರಜೆ ಘೋಷಿಸಿದೆ. ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮ್ ಲಲ್ಲಾ 'ಪ್ರಾಣ ಪ್ರತಿಷ್ಠಾ' ಪ್ರಯುಕ್ತ ಈ ರಜೆಯನ್ನು ಘೋಷಣೆ ಮಾಡಲಾಗಿದೆ

ಅಯೋಧ್ಯೆ ರಾಮಮಂದಿರ ಉದ್ಘಾಟನೆಯಂದು ರಿಲಯನ್ಸ್ ಇಂಡಸ್ಟ್ರೀಸ್​​ಗೆ ರಜೆ ಘೋಷಿಸಿದ ಮುಖೇಶ್ ಅಂಬಾನಿ
Follow us
ಅಕ್ಷಯ್​ ಪಲ್ಲಮಜಲು​​
|

Updated on:Jan 20, 2024 | 2:17 PM

ದೆಹಲಿ, ಜ.20: ಅಯೋಧ್ಯೆ ರಾಮಮಂದಿರ ( ram mandir ) ಜನವರಿ 22ಕ್ಕೆ ಉದ್ಘಾಟನೆ, ಈ ಸಮಯದಲ್ಲಿ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್ (Reliance Industries) ದೇಶಾದ್ಯಂತ ತಮ್ಮ ಎಲ್ಲಾ ಕಚೇರಿಗಳಿಗೆ ರಜೆ ಘೋಷಿಸಿದೆ. ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮ್ ಲಲ್ಲಾ ‘ಪ್ರಾಣ ಪ್ರತಿಷ್ಠಾ’ ಪ್ರಯುಕ್ತ ಈ ರಜೆಯನ್ನು ಘೋಷಣೆ ಮಾಡಲಾಗಿದೆ ಎಂದು ಕಂಪನಿಯ ಮೂಲಗಳು ತಿಳಿಸಿದೆ. ದೇಶವೇ ಈ ಪುಣ್ಯ ಕಾರ್ಯದಲ್ಲಿ ಮುಳುಗಿರುತ್ತದೆ. ಅಂದು ನಮ್ಮ ಕಂಪನಿಯ ಉದ್ಯೋಗಿಗಳು ಈ ದಿನವನ್ನು ಸಂಭ್ರಮಿಸಬೇಕು ಎಂದು ಹೇಳಿದ್ದಾರೆ.

ರಾಮ ಲಲ್ಲಾ ಪ್ರತಿಷ್ಠೆಯ ಸಂದರ್ಭದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಕಾರ್ಮಿಕರು ಭಾಗವಹಿಸುವ ಅವಕಾಶ ನೀಡಬೇಕು ಎಂಬ ಉದ್ದೇಶದಿಂದ ಈ ರಜೆ ನೀಡಲಾಗಿದೆ. ಇನ್ನು ಕೇಂದ್ರ ಸರ್ಕಾರವು ಕೂಡ ತನ್ನ ಎಲ್ಲಾ ಕಚೇರಿಗಳು, ಸಂಸ್ಥೆಗಳು ಮತ್ತು ಕೈಗಾರಿಕಾ ಸಂಸ್ಥೆಗಳಿಗೆ ಅರ್ಧ ದಿನದ ರಜೆಯನ್ನು ಘೋಷಣೆ ಮಾಡಿದೆ. ಅನೇಕ ರಾಜ್ಯಗಳು ಕೂಡ ರಜೆಯನ್ನು ಘೋಷಣೆ ಮಾಡಿದೆ.

ಕೇಂದ್ರ ಸರ್ಕಾರ ಅರ್ಧ ದಿನ ರಜೆ ಘೋಷಣೆ ಮಾಡಿದ ನಂತರ, “ದೇಶಾದ್ಯಂತ ಎಲ್ಲಾ ಸಾರ್ವಜನಿಕ ವಲಯದ ಬ್ಯಾಂಕುಗಳು (PSBs), ವಿಮಾ ಕಂಪನಿಗಳು, ಹಣಕಾಸು ಸಂಸ್ಥೆಗಳು ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು ಕೂಡ ರಜೆಯನ್ನು ನೀಡಿದೆ. ಮಹಾರಾಷ್ಟ್ರದ ಸೇರಿದಂತೆ ಅನೇಕ ರಾಜ್ಯ ಸರ್ಕಾರಗಳು ರಜೆ ಘೋಷಣೆ ಮಾಡಿದೆ.

ಇದನ್ನೂ ಓದಿ: ರಾಮಲಲ್ಲಾ ಪ್ರಾಣ ಪ್ರತಿಷ್ಠಾ ದಿನವಾದ ಜ. 22ರಂದು ಷೇರು ಮಾರುಕಟ್ಟೆಗೆ ಇದೆಯಾ ರಜೆ?

ಜನವರಿ 22 ರಂದು ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್ (ಎನ್‌ಎಸ್‌ಇ) ವಹಿವಾಟು ಸಹ ಮುಚ್ಚಲಾಗುತ್ತದೆ ಎಂದು ಹೇಳಲಾಗಿದೆ. ಇನ್ನು ರಾಮಮಂದಿರದ ಕಾರ್ಯಕ್ರಮಕ್ಕೆ ಅಯೋಧ್ಯೆ ಸಿದ್ಧಗೊಂಡಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಪ್ರಸಿದ್ಧ ವ್ಯಕ್ತಿಗಳು, ಕ್ರೀಡಾಪಟುಗಳು, ಕೈಗಾರಿಕೋದ್ಯಮಿಗಳು ಮತ್ತು ಇತರ ರಾಷ್ಟ್ರಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ವ್ಯಾಪಾರದ ಸಮಯ ಪರಿಷ್ಕರಣೆ

ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದ ಹಿನ್ನೆಲೆಯಲ್ಲಿ ಜನವರಿ 22 ರಂದು ವ್ಯಾಪಾರದ ಸಮಯವನ್ನು ಪರಿಷ್ಕರಿಸಲಾಗಿದೆ. ವಿಶ್ವದ ಅತಿದೊಡ್ಡ ಕಾರ್ಯಕ್ರಮವಾದ ಪ್ರಾಣ ಪ್ರತಿಷ್ಠಾ ನಂತರವೇ ಸೋಮವಾರ ಮಧ್ಯಾಹ್ನ 2.30 ರಿಂದ ಸಂಜೆ 5 ರವರೆಗೆ ವ್ಯಾಪಾರದ ಸಮಯ ಆಗಿರುತ್ತದೆ ಎಂದು ಆರ್‌ಬಿಐ ಘೋಷಿಸಿದೆ .ದೇಶದಾದ್ಯಂತ ಎಲ್ಲಾ ಸಾರ್ವಜನಿಕ ವಲಯದ ಬ್ಯಾಂಕ್‌ಗಳು, ವಿಮಾ ಕಂಪನಿಗಳು, ಹಣಕಾಸು ಸಂಸ್ಥೆಗಳು ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು (RRBs) ಜನವರಿ 22 ರಂದು ಅರ್ಧ ದಿನ ಮುಚ್ಚಲ್ಪಡುತ್ತವೆ.

Published On - 12:28 pm, Sat, 20 January 24

ಮೋಕ್ಷಿತಾ ಈಗ ಯುವರಾಣಿ; ಇಬ್ಭಾಗವಾದ ಬಿಗ್ ಬಾಸ್ ಮನೆ
ಮೋಕ್ಷಿತಾ ಈಗ ಯುವರಾಣಿ; ಇಬ್ಭಾಗವಾದ ಬಿಗ್ ಬಾಸ್ ಮನೆ
6,6,6,6,6: RCB ಆಟಗಾರ ಲಿಯಾಮ್ ಲಿವಿಂಗ್​ಸ್ಟೋನ್ ಸಿಡಿಲಬ್ಬರ ಶುರು
6,6,6,6,6: RCB ಆಟಗಾರ ಲಿಯಾಮ್ ಲಿವಿಂಗ್​ಸ್ಟೋನ್ ಸಿಡಿಲಬ್ಬರ ಶುರು
Daily Devotional: ಪುಣ್ಯಕ್ಷೇತ್ರಗಳಿಗೆ ತೆರಳುವಾಗ ಅಪಘಾತವಾದರೆ ಏನರ್ಥ
Daily Devotional: ಪುಣ್ಯಕ್ಷೇತ್ರಗಳಿಗೆ ತೆರಳುವಾಗ ಅಪಘಾತವಾದರೆ ಏನರ್ಥ
Daily Horoscope: ಈ ರಾಶಿಯವರ ವ್ಯಾಪಾರದ ತೊಂದರೆಗಳು ನಿವಾರಣೆಯಾಗುತ್ತದೆ
Daily Horoscope: ಈ ರಾಶಿಯವರ ವ್ಯಾಪಾರದ ತೊಂದರೆಗಳು ನಿವಾರಣೆಯಾಗುತ್ತದೆ
ಹನುಮಂತನೊಟ್ಟಿಗೆ ಜಗಳ, ಮಹಾಪ್ರಭುಗಳ ಆಜ್ಞೆಯನ್ನೂ ಧಿಕ್ಕರಿಸಿದ ಶೋಭಾ ಶೆಟ್ಟಿ
ಹನುಮಂತನೊಟ್ಟಿಗೆ ಜಗಳ, ಮಹಾಪ್ರಭುಗಳ ಆಜ್ಞೆಯನ್ನೂ ಧಿಕ್ಕರಿಸಿದ ಶೋಭಾ ಶೆಟ್ಟಿ
ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಸಹೋದರನ ಮದುವೆಗೆ 35 ಅಡಿ ಉದ್ದದ ನೋಟಿನ ಮಾಲೆ ಉಡುಗೊರೆಯಾಗಿ ನೀಡಿದ ಅಣ್ಣ
ಸಹೋದರನ ಮದುವೆಗೆ 35 ಅಡಿ ಉದ್ದದ ನೋಟಿನ ಮಾಲೆ ಉಡುಗೊರೆಯಾಗಿ ನೀಡಿದ ಅಣ್ಣ