Mukesh Ambani: ಭಾವಿ ಸೊಸೆ ಜೊತೆಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಮುಖೇಶ್ ಅಂಬಾನಿ

ಮುಖೇಶ್ ಅಂಬಾನಿ ಶುಕ್ರವಾರ ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ, ವೆಂಕಟೇಶ್ವರನಿಗೆ ಪೂಜೆ ಸಲ್ಲಿಸಿದರು . ಅವರು ತಮ್ಮ ಕಿರಿಯ ಪುತ್ರ ಅನಂತ್ ಅಂಬಾನಿ ಅವರ ಭಾವಿ ಪತ್ನಿ ರಾಧಿಕಾ ಮರ್ಚೆಂಟ್ ಅವರೊಂದಿಗೆ ಭೇಟಿ ನೀಡಿದ್ದಾರೆ.

Mukesh Ambani: ಭಾವಿ ಸೊಸೆ ಜೊತೆಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಮುಖೇಶ್ ಅಂಬಾನಿ
Mukesh Ambani visited Tirupati Thimmappa
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on:Sep 16, 2022 | 1:21 PM

ಆಂಧ್ರಪ್ರದೇಶ: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಶುಕ್ರವಾರ ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ, ವೆಂಕಟೇಶ್ವರನಿಗೆ ಪೂಜೆ ಸಲ್ಲಿಸಿದರು . ಅವರು ತಮ್ಮ ಕಿರಿಯ ಪುತ್ರ ಅನಂತ್ ಅಂಬಾನಿ ಅವರ ಭಾವಿ ಪತ್ನಿ ರಾಧಿಕಾ ಮರ್ಚೆಂಟ್ ಅವರೊಂದಿಗೆ ಭೇಟಿ ನೀಡಿದ್ದಾರೆ. ಶುಕ್ರವಾರ ಬೆಳಗ್ಗೆ ಕುಟುಂಬ ಸಮೇತ ಅಂಬಾನಿ ನಿಜಪಾದ ದರ್ಶನ ಸೇವೆಯಲ್ಲಿ ಪಾಲ್ಗೊಂಡಿದ್ದರು. ರಿಲಯನ್ಸ್ ಮುಖ್ಯಸ್ಥರು ತಿರುಮಲ ತಿರುಪತಿ ದೇವಸ್ಥಾನಕ್ಕೆ 1.50 ಕೋಟಿ ದೇಣಿಗೆ ನೀಡಿದ್ದಾರೆ ಮತ್ತು ಡಿಮ್ಯಾಂಡ್ ಡ್ರಾಫ್ಟ್ (ಡಿಡಿ) ಅನ್ನು ದೇವಸ್ಥಾನದ ಕಾರ್ಯನಿರ್ವಾಹಕ ನಿರ್ದೇಶಕ ಧರ್ಮಾ ರೆಡ್ಡಿ ಅವರಿಗೆ ನೀಡಲಾಯಿತು ಎಂದು ಟಿವಿ9 ತೆಲುಗು ವರದಿ ಮಾಡಿದೆ.

ದರ್ಶನದ ನಂತರ ರಂಗನಾಯಕ ಮಂಟಪದಲ್ಲಿ ವಿದ್ವಾಂಸರಿಂದ ವೇದಾಶೀರ್ವಾದ ನಡೆಯಿತು. ಈ ಸಂದರ್ಭದಲ್ಲಿ ಮುಕೇಶ್ ಅಂಬಾನಿ ತಿರುಮಲಕ್ಕೆ ಭೇಟಿ ನೀಡುತ್ತಿರುವುದು ಸಂತಸ ತಂದಿದೆ ಎಂದರು. ತಿರುಮಲದಲ್ಲಿರುವ ದೇವಾಲಯವು ಪ್ರತಿವರ್ಷ ಅಭಿವೃದ್ಧಿ ಹೊಂದುತ್ತಿದೆ ಮತ್ತು ಸುಧಾರಿಸುತ್ತಿದೆ ಎಂದು ಅವರು ಹೇಳಿದರು. ಎಲ್ಲರಿಗೂ ಅನುಗ್ರಹಿಸಲಿ ಎಂದು ವೆಂಕಟೇಶ್ವರ ಸ್ವಾಮಿಯಲ್ಲಿ ಪ್ರಾರ್ಥಿಸುತ್ತೇನೆ ಎಂದರು. ಈ ಹಿಂದೆ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್ ದೇವಸ್ಥಾನಕ್ಕೆ 1.11 ಕೋಟಿ ದೇಣಿಗೆ ನೀಡಿದ್ದು, ಈ ಮೊತ್ತವನ್ನು ಉಚಿತ ಅನ್ನಸಂತರ್ಪಣೆ ಕಾರ್ಯಕ್ರಮಕ್ಕೆ ಬಳಸಲಾಗಿತ್ತು.

ವಾರ್ಷಿಕ ಶ್ರೀವಾರಿ ಬ್ರಹ್ಮೋತ್ಸವಗಳು ಸೆಪ್ಟೆಂಬರ್ 27 ರಿಂದ ಪ್ರಾರಂಭವಾಗಿದ್ದು, ಅಕ್ಟೋಬರ್ 5 ರವರೆಗೆ ನಡೆಯಲಿದ್ದು, ಅದ್ಧೂರಿಯಾಗಿ ನಡೆಸಲು ದೇವಸ್ಥಾನವು ಎಲ್ಲಾ ವ್ಯವಸ್ಥೆಗಳನ್ನು ಮಾಡುತ್ತಿದೆ. ಕೊರನಾದಿಂದ 2 ವರ್ಷಗಳ ನಂತರ ಬ್ರಹ್ಮೋತ್ಸವಗಳನ್ನು ನಡೆಸಲಾಗುತ್ತಿದೆ. ವರದಿಗಳ ಪ್ರಕಾರ, ದೇವಾಲಯದ ಆಡಳಿತವು ಒಂಬತ್ತು ದಿನಗಳ ಉತ್ಸವಗಳಿಗೆ ಭಕ್ತರನ್ನು ಆಕರ್ಷಿಸಲು ಎಂಟು ರಾಜ್ಯಗಳ ವಾಹನ ಸೇವೆಗಳು ಮತ್ತು 88 ಇತರ ಸಾಂಸ್ಕೃತಿಕ ತಂಡಗಳ ಕಾರ್ಯಕ್ರಮ ನೀಡಲು ಆಹ್ವಾನಿಸಲಾಗಿದೆ ಎಂದು.

Published On - 1:21 pm, Fri, 16 September 22

ತಾಜಾ ಸುದ್ದಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ