AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಾಕ್ಸ್​ಕಾನ್ ಛೇರ್ಮನ್ ಯಂಗ್ ಲಿಯುರನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ; ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ತೈವಾನೀ ಕಂಪನಿಯ ಹೂಡಿಕೆ ಪ್ಲಾನ್​ಗಳ ಚರ್ಚೆ

Narendra Modi meets Foxconn chairman Young Liu: ತೈವಾನ್ ಮೂಲದ ಫಾಕ್ಸ್​ಕಾನ್ ಸಂಸ್ಥೆಯ ಮುಖ್ಯಸ್ಥ ಯಂಗ್ ಲಿಯು ಅವರನ್ನು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 14ರಂದು ಭೇಟಿ ಮಾಡಿದ್ದಾರೆ. ಕರ್ನಾಟಕ, ಆಂಧ್ರ, ತಮಿಳುನಾಡಿನಲ್ಲಿ ಫಾಕ್ಸ್​ಕಾನ್​ನ ಹೂಡಿಕೆ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದ್ದಾಗಿ ಮೋದಿ ಹೇಳಿದ್ದಾರೆ. ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ತಯಾರಿಕೆಯನ್ನು ಹೆಚ್ಚಿಸಲು ಫಾಕ್ಸ್​ಕಾನ್ ಯೋಜಿಸುತ್ತಿರುವ ಹೊತ್ತಲ್ಲೇ ಈ ಭೇಟಿ ನಡೆದಿದೆ.

ಫಾಕ್ಸ್​ಕಾನ್ ಛೇರ್ಮನ್ ಯಂಗ್ ಲಿಯುರನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ; ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ತೈವಾನೀ ಕಂಪನಿಯ ಹೂಡಿಕೆ ಪ್ಲಾನ್​ಗಳ ಚರ್ಚೆ
ಯಂಗ್ ಲಿಯು, ನರೇಂದ್ರ ಮೋದಿ,
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 14, 2024 | 7:04 PM

Share

ನವದೆಹಲಿ, ಆಗಸ್ಟ್ 14: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬುಧವಾರ ತೈವಾನ್ ಮೂಲದ ಹೋನ್ ಹಾಯ್ ಟೆಕ್ನಾಲಜಿ ಗ್ರೂಪ್ ಸಂಸ್ಥೆಯ ಛೇರ್ಮನ್ ಯಂಗ್ ಲಿಯು ಅವರನ್ನು ಭೇಟಿ ಮಾಡಿದರು. ಫಾಕ್ಸ್​ಕಾನ್ ಎಂದೇ ಖ್ಯಾತವಾಗಿರುವ ವಿಶ್ವದ ಅತಿದೊಡ್ಡ ಗುತ್ತಿಗೆ ಆಧಾರಿತ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ತಯಾರಕ ಸಂಸ್ಥೆಯ ಮುಖ್ಯಸ್ಥರ ಜೊತೆ ಪ್ರಧಾನಿ ಮೋದಿ ಹೂಡಿಕೆ ವಿಚಾರಗಳ ಬಗ್ಗೆ ಚರ್ಚೆ ನಡೆಸಿರುವುದು ತಿಳಿದುಬಂದಿದೆ. ಪ್ರಧಾನಿಗಳು ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಒಂದು ಪೋಸ್ಟ್ ಹಾಕಿ ವಿವರಿಸಿದ್ದಾರೆ.

ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಫಾಕ್ಸ್​ಕಾನ್ ಮಾಡಬೇಕೆಂದಿರುವ ಹೂಡಿಕೆ ಯೋಜನೆಗಳ ಬಗ್ಗೆ ತಾನು ಚರ್ಚೆ ನಡೆಸಿದ್ದಾಗಿ ನರೇಂದ್ರ ಮೋದಿ ಹೇಳಿದ್ದಾರೆ.

‘ಹೋನ್ ಹಾಯ್ ಟೆಕ್ನಾಲಜಿ ಗ್ರೂಪ್​ನ (ಫಾಕ್ಸ್​ಕಾನ್) ಛೇರ್ಮನ್ ಯಂಗ್ ಲಿಯು ಅವರನ್ನು ಭೇಟಿ ಮಾಡಿದ್ದು ಖುಷಿಯಾಯಿತು. ಭವಿಷ್ಯಾತ್ಮಕ ವಲಯಗಳಲ್ಲಿ ಇರುವ ಅವಕಾಶಗಳನ್ನು ಎತ್ತಿತೋರಿಸಿರುವೆ. ಕರ್ನಾಟಕ, ತಮಿಳುನಾಡು ಮತ್ತು ಆಂಧ್ರಪ್ರದೇಶದಂತಹ ರಾಜ್ಯಗಳಲ್ಲಿ ಅವರ ಹೂಡಿಕೆ ಯೋಜನೆಗಳ ಬಗ್ಗೆ ನಾವು ಚರ್ಚೆ ನಡೆಸಿದೆವು’ ಎಂದು ನರೇಂದ್ರ ಮೋದಿ ತಮ್ಮ ಎಕ್ಸ್ ಪೋಸ್ಟ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಫಾಕ್ಸ್​ಕಾನ್ ಚೆನ್ನೈನ ಶ್ರೀ ಪೆರಂಬುದೂರಿನಲ್ಲಿ ಐಫೋನ್ ಅಸೆಂಬ್ಲಿಂಗ್ ಘಟಕ ಹೊಂದಿದೆ. ಕರ್ನಾಟಕ, ಆಂಧ್ರದಲ್ಲೂ ತನ್ನ ಎಲೆಕ್ಟ್ರಾನಿಕ್ಸ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸುತ್ತಿದೆ. ಚೆನ್ನೈನಲ್ಲಿ ಅದು ಐಫೋನ್​ಗಳ ಅಸೆಂಬ್ಲಿಂಗ್ ಮಾಡುತ್ತದೆ. ಗೂಗಲ್​ನ ಪಿಕ್ಸೆಲ್ ಫೋನ್​ಗಳನ್ನು ತಯಾರಿಸಲೂ ಫಾಕ್ಸ್​ಕಾನ್ ಗುತ್ತಿಗೆ ಪಡೆಯುವ ಸಾಧ್ಯತೆ ಇದೆ.

ಇದನ್ನೂ ಓದಿ: ತೆರಿಗೆ ಹೇರುವ ಆಸೆ ನಂಗೂ ಇಲ್ಲ, ಆದರೆ ಸರ್ಕಾರ ನಡೆಸಲು ಹಣ ಬೇಕಲ್ಲ: ನಿರ್ಮಲಾ ಸೀತಾರಾಮನ್

ತೈವಾನ್ ಮೂಲದ ಫಾಕ್ಸ್​ಕಾನ್ ಸಂಸ್ಥೆ ತನ್ನದೇ ಬ್ರ್ಯಾಂಡ್ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳನ್ನು ಹೊಂದಿಲ್ಲ. ಆ್ಯಪಲ್ ಇತ್ಯಾದಿ ಎಲೆಕ್ಟ್ರಾನಿಕ್ಸ್ ಕಂಪನಿಗಳ ಉತ್ಪನ್ನಗಳನ್ನು ಗುತ್ತಿಗೆ ಆಧಾರದಲ್ಲಿ ತಯಾರಿಸಿಕೊಡುತ್ತದೆ. ಈ ರೀತಿಯಲ್ಲಿ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ತಯಾರಿಕೆಯಲ್ಲಿ ವಿಶ್ವದ ಅತಿದೊಡ್ಡ ಕಂಪನಿ ಎನಿಸಿದೆ ಫಾಕ್ಸ್​ಕಾನ್.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ