ರೈತರಿಗೆ ಗುಡ್ ನ್ಯೂಸ್: ನಾಳೆ ಕಿಸಾನ್ ಸಮ್ಮಾನ್​ 12ನೇ ಕಂತಿನ ಹಣ ಬಿಡುಗಡೆ ಮಾಡಲಿರುವ ಮೋದಿ

ನಾಳೆ ವಿವಿಧ ಯೋಜನೆಗಳಿಗೆ ಚಾಲನೆ ನೀಡುವ ಪ್ರಧಾನಿ ನರೇಂದ್ರ ಮೋದಿ ಅವರು ಕಿಸಾನ್​​​ ಸಮ್ಮಾನ್​ ಯೋಜನೆಯ ಹಣವನ್ನೂ ಸಹ ಬಿಡುಗಡೆ ಮಾಡಲಿದ್ದಾರೆ. 12 ನೇ ಕಂತಿನ ಸ್ಟೇಟಸ್ ತಿಳಿದುಕೊಳ್ಳುವುದು ಹೇಗೆ?

ರೈತರಿಗೆ ಗುಡ್ ನ್ಯೂಸ್: ನಾಳೆ ಕಿಸಾನ್ ಸಮ್ಮಾನ್​ 12ನೇ ಕಂತಿನ ಹಣ ಬಿಡುಗಡೆ ಮಾಡಲಿರುವ ಮೋದಿ
ಪಿಎಮ್ ಕಿಸಾನ್ ಯೋಜನೆ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Oct 16, 2022 | 10:15 PM

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಅಂದ್ರೆ ಅ.17ರಂದು ಕಿಸಾನ್ ಸಮ್ಮಾನ್ ಯೋಜನೆಯಡಿ (PM Kisan Samman)12ನೇ ಕಂತಿನ ಹಣವನ್ನು ರೈತರಿಗೆ ಬಿಡುಗಡೆ ಮಾಡಲಿದ್ದಾರೆ.

16 ಸಾವಿರ ಕೋಟಿ ರೂ. ಹಣ 8 ಲಕ್ಷ ರೈತರ ಖಾತೆಗಳಿಗೆ ಜಮವಾಗಲಿದೆ. ಕಿಸಾನ್ ಸಮ್ಮಾನ್​ ಹಣ ಬಿಡುಗಡೆ ಮಾಡುವುದರ ಜೊತೆ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ಒಂದು ದೇಶ ಒಂದು ಗೊಬ್ಬರ ಹೆಸರಿನಲ್ಲಿ ಭಾರತ್ ಯೂರಿಯಾ, ಭಾರತ್ ಡಿಎಪಿ, ಭಾರತ್ ಎಂಓಪಿ, ಭಾರತ್ ಎನ್‍ಪಿಕೆ ರಸಗೊಬ್ಬರವನ್ನು ಲೋಕಾರ್ಪಣೆ ಮಾಡಲಿದ್ದಾರೆ.

PM Kisan Samman Nidhi: ಒಂದು ಕುಟುಂಬದಲ್ಲಿ ಎಷ್ಟು ಮಂದಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಪ್ರಯೋಜನ ಪಡೆಯಬಹುದು?

ಅಲ್ಲದೇ, 600 ಪಿಎಂ ಕಿಸಾನ್ ಸಮೃದ್ಧಿ ಕೇಂದ್ರಗಳನ್ನು ಮೋದಿ ಆರಂಭಿಸಲಿದ್ದಾರೆ. ದೇಶದಲ್ಲಿರುವ 2.7 ಲಕ್ಷ ಗೊಬ್ಬರದ ಅಂಗಡಿಗಳನ್ನು ಹಂತ ಹಂತವಾಗಿ ವನ್ ಸ್ಟಾಪ್ ಸೆಂಟರ್‌ಗಳಾಗಿ ಬದಲಿಸಿ ಪಿಎಂ ಸಮೃದ್ಧಿ ಕೇಂದ್ರಗಳೆಂದು ಮರುನಾಮಕರಣ ಮಾಡಲಾಗುತ್ತದೆ.

ವಿವಿಧ ಸಂಘ-ಸಂಸ್ಥೆಗಳಿಂದ ಒಂದು ಕೋಟಿಗೂ ಹೆಚ್ಚು ರೈತರು ಈ ಕಾರ್ಯಕ್ರಮದಲ್ಲಿ ವರ್ಚುವಲ್ ಮೂಲಕ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಇದೀಗ ದೇಶದಲ್ಲಿರುವ ರಸಗೊಬ್ಬರ ಚಿಲ್ಲರೆ ಅಂಗಡಿಗಳನ್ನು ಹಂತ ಹಂತವಾಗಿ ಪ್ರದಾನ ಮಂತ್ರಿ ಕಿಸಾನ್ ಸಮೃದ್ಧಿ ಕೇಂದ್ರಗಳಾಗಿ ಪರಿವರ್ತಿಸುವ ಕಾರ್ಯ ಮುಂದಿನ ದಿನಗಳಲ್ಲಿ ನಡೆಯಲಿದೆ.

ಕೃಷಿ ಸ್ಟಾರ್ಟ್ಅಪ್ ಕಾನ್​ಕ್ಲೇವ್​ & ಪ್ರದರ್ಶನ ಆರಂಭಿಸಲಿದ್ದು, 1,500 ಅಗ್ರಿ ಸ್ಟಾರ್ಟ್​ಅಪ್​​, 13,500 ರೈತರು ಭಾಗಿಯಾಗಲಿದ್ದಾರೆ.

12 ನೇ ಕಂತಿನ ಸ್ಟೇಟಸ್ ತಿಳಿದುಕೊಳ್ಳುವುದು ಹೇಗೆ?

-ಅಧಿಕೃತ ವೆಬ್ ಸೈಟ್ pmkisan.gov.in ಲಾಗಿನ್ ಆಗಿ

-‘ಫಾರ್ಮರ್ಸ್ ಕಾರ್ನರ್’ ಎಂದ ಆಪ್ಶನ್ ಮೇಲೆ ಕ್ಲಿಕ್ ಮಾಡಿ

-ನಂತರ ‘ಬೆನೆಫಿಸಿಯರಿ ಸ್ಟೇಟಸ್’ ಮೇಲೆ ಕ್ಲಿಕ್ ಮಾಡಿ

-ನಿಮ್ಮ ಬ್ಯಾಂಕ್ ಅಕೌಂಟ್ ಇಲ್ಲವೇ ಆಧಾರ್ ನಂಬರ್ ಆಪ್ಶನ್​ಗಳಲ್ಲಿ ಯಾವುದಾದರೂ ಒಂದನ್ನು ಆಯ್ಕೆ ಮಾಡಿಕೊಳ್ಳಿ.

-ಸೂಕ್ತವಾದ ನಂಬರನ್ನು ತಪ್ಪಿಲ್ಲದಂತೆ ಭರ್ತಿ ಮಾಡಿ

-‘ಗೆಟ್ ಡಾಟಾ’ ಎಂಬ ಆಪ್ಶನ್ ಮೇಲೆ ಕ್ಲಿಕ್ ಮಾಡಿ 

ಇದನ್ನೆಲ್ಲ ಮಾಡಿದ ಮೇಲೆ ವಹಿವಾಟಿನ ಎಲ್ಲ ವಿವರಗಳು ನಿಮಗೆ ಲಭ್ಯವಾಗುತ್ತವೆ.

Published On - 10:15 pm, Sun, 16 October 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ