AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕಸಿತ ಭಾರತದ ಗುರಿಗೆ ದೈವ ಪ್ರೇರಣೆ; ಆ ದೈವವೇ ನನಗೆ ಶಕ್ತಿ ತುಂಬುತ್ತಿದೆ: ಪ್ರಧಾನಿ ಮೋದಿ

Narendra Modi reiterates commitment for 2047 vikasit Bharat: ಪ್ರಧಾನಿ ನರೇಂದ್ರ ಮೋದಿ ಅವರು ತಾನು 2047ರೊಳಗೆ ಮುಂದುವರಿದ ದೇಶವನ್ನಾಗಿ ಮಾಡುವ ಸಂಕಲ್ಪದಲ್ಲಿದ್ದೇನೆ. ಆ ದೇವರೇ ಪ್ರೇರೇಪಣೆ ನೀಡಿದ್ದಾನೆ. ನನಗೆ ಶಕ್ತಿ ನೀಡುತ್ತಿದ್ದಾನೆ. ಗುರಿ ಸಾಧಿಸುವವರೆಗೂ ತನ್ನನ್ನು ವಾಪಸ್ ಕರೆಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಇಂಡಿಯಾ ಟಿವಿ ವಾಹಿನಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು, ತಾನು ಲಾಹೋರ್​ಗೆ ಖುದ್ದಾಗಿ ಹೋಗಿ ಅದರ ತಾಕತ್ತು ಏನೆಂದು ತಿಳಿದುಬಂದಿರುವುದಾಗಿ ವ್ಯಂಗ್ಯ ಮಾಡಿದ್ದಾರೆ.

ವಿಕಸಿತ ಭಾರತದ ಗುರಿಗೆ ದೈವ ಪ್ರೇರಣೆ; ಆ ದೈವವೇ ನನಗೆ ಶಕ್ತಿ ತುಂಬುತ್ತಿದೆ: ಪ್ರಧಾನಿ ಮೋದಿ
ನರೇಂದ್ರ ಮೋದಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 24, 2024 | 11:09 AM

Share

ನವದೆಹಲಿ, ಮೇ 24: ಯಾವುದೋ ಮಹತ್ತರ ಕಾರ್ಯಕ್ಕಾಗಿ ಆ ದೇವರೇ ನನ್ನನ್ನು ಕಳುಹಿಸಿದ್ದಾನೆ. ದೇವರು ನನ್ನ ಕೈಹಿಡಿದು ನಡೆಸುತ್ತಿದ್ದಾನೆ ಎನಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಾರತವು ಮುಂದುವರಿದ ದೇಶವನ್ನಾಗಿ (Vikasit Bharat- Developed country) ಮಾಡಲು 2047ರವರೆಗೂ ತಾನು 24 ಗಂಟೆ ಕೆಲಸ ಮಾಡಬೇಕು. ಅದಕ್ಕಾಗಿ ಆ ದೇವರೇ ತನಗೆ ಚೈತನ್ಯ ನೀಡುತ್ತಿದ್ದಾನೆ. 2047ರೊಳಗೆ ವಿಕಸಿತ ದೇಶವನ್ನಾಗಿಸುವ ಗುರಿ ಈಡೇರುತ್ತದೆ ಎನ್ನುವ ವಿಶ್ವಾಸ ತನಗಿದೆ. ಈ ಗುರಿ ಸಾಧನೆಯಾಗುವವರೆಗೂ ಆ ದೇವರು ವಾಪಸ್ ಕರೆಸಿಕೊಳ್ಳುವುದಿಲ್ಲ ಎಂದು ಅವರು ಹೇಳಿದ್ದಾರೆ. ಇಂಡಿಯಾ ಟಿವಿ ವಾಹಿನಿ ಆಯೋಜಿಸಿದ ಕಾರ್ಯಕ್ರಮವೊಂದರಲ್ಲಿ ಅವರು ಮಾತನಾಡುತ್ತಿದ್ದರು.

ಭಾರತದ ಜಿಡಿಪಿ 2047ರೊಳಗೆ 35 ಟ್ರಿಲಿಯನ್ ಡಾಲರ್ ಮಟ್ಟ ಮುಟ್ಟಬೇಕೆಂದೂ ಗುರಿ ಇಟ್ಟಿದೆ. ಭಾರತ ವಿಕಸಿತ ಅಥವಾ ಮುಂದುವರಿದ ದೇಶವಾಗಬೇಕಾದರೆ ಅಷ್ಟು ಜಿಡಿಪಿ ಸಾಧನೆ ಅವಶ್ಯ. ಹಾಗೂ ತಲಾದಾಯ ಹೆಚ್ಚಳವೂ ಬಹಳ ಮುಖ್ಯ. ಭಾರತ ಈ ಗುರಿ ಸಾಧಿಸಬೇಕಾದರೆ ವರ್ಷಕ್ಕೆ ಶೇ. 9ರ ದರದಲ್ಲಿ ಬೆಳವಣಿಗೆ ಹೊಂದಬೇಕೆಂದು ಹಲವು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಪಾಕಿಸ್ತಾನದ ತಾಕತ್ತು ಏನೆಂದು ಲಾಹೋರ್​ಗೆ ಹೋಗಿ ತಿಳಿದುಕೊಂಡೆ: ಮೋದಿ

ಪಾಕಿಸ್ತಾನದ ಬಳಿ ಅಣು ಬಾಂಬ್ ಇರುವುದರಿಂದ ಅದಕ್ಕೆ ಗೌರವ ಕೊಡಬೇಕು ಎಂದು ಕಾಂಗ್ರೆಸ್​ನ ಹಿರಿಯ ಮುಖಂಡ ಮಣಿಶಂಕರ್ ಅಯ್ಯರ್ ನೀಡಿದ ಹೇಳಿಕೆಗೆ ಪ್ರಧಾನಿಗಳು ವ್ಯಂಗ್ಯವಾಗಿ ತಿರುಗೇಟು ಕೊಟ್ಟಿದ್ದಾರೆ. ತಾನು ಖುದ್ದಾಗಿ ಲಾಹೋರ್​ಗೆ ಹೋಗಿ ಅದರ ತಾಕತ್ತು ಏನೆಂದು ತಿಳಿದುಕೊಂಡು ಬಂದಿದ್ದೇನೆ ಎಂದು ನರೇಂದ್ರ ಮೋದಿ ಲೇವಡಿ ಮಾಡಿದ್ದಾರೆ. ನರೇಂದ್ರ ಮೋದಿ ಪ್ರಧಾನಿಯಾಗಿ ಒಂದು ವರ್ಷದಲ್ಲಿ, ಅಂದರೆ 2015ರಲ್ಲಿ ದಿಢೀರನೇ ಲಾಹೋರ್​ಗೆ ಹೋಗಿ ಅಂದಿನ ಪಾಕ್ ಪ್ರಧಾನಿ ನವಾಜ್ ಷರೀಫ್ ಅವರನ್ನು ಭೇಟಿ ಮಾಡಿ ಬಂದಿದ್ದರು.

ಇದನ್ನೂ ಓದಿ: ನಾನು ಬದುಕಿರುವವರೆಗೂ ದಲಿತರು, ಆದಿವಾಸಿಗಳ ಮೀಸಲಾತಿಯನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

ಪಾಕಿಸ್ತಾನದಲ್ಲಿ ಅಜ್ಞಾತ ವ್ಯಕ್ತಿಗಳು ಹತ್ಯೆಗಳನ್ನು ಮಾಡುತ್ತಿರುವುದರ ಹಿಂದೆ ಭಾರತದ ಕೈವಾಡ ಇದೆ ಎನ್ನುವ ಆರೋಪದ ಬಗ್ಗೆ ಮಾತನಾಡಿದ ಮೋದಿ, ಪಾಕಿಸ್ತಾನದಲ್ಲಿ ಯಾರಾದರು ಸತ್ತರೆ ಭಾರತದಲ್ಲಿ ಕೆಲವರು ಯಾಕೆ ಕಣ್ಣೀರು ಸುರಿಸಬೇಕು ಎಂದು ಕೇಳಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​