AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Green Hydrogen Mission: 19,744 ಕೋಟಿ ವೆಚ್ಚದಲ್ಲಿ ನ್ಯಾಷನಲ್ ಗ್ರೀನ್ ಹೈಡ್ರೋಜನ್ ಮಿಷನ್​; ಕೇಂದ್ರ ಸಂಪುಟ ಅನುಮೋದನೆ

ಯೋಜನೆಗೆ ಸಂಬಂಧಿಸಿದ ಮಾರ್ಗಸೂಚಿ ಸಿದ್ಧಪಡಿಸುವುದು ಮತ್ತು ಯೋಜನಾನುಷ್ಠಾನವನ್ನು ನವೀಕರಿಸಬಹುದಾದ ಇಂಧನಗಳ ಸಚಿವಾಲಯ ಮಾಡಲಿದೆ.

National Green Hydrogen Mission: 19,744 ಕೋಟಿ ವೆಚ್ಚದಲ್ಲಿ ನ್ಯಾಷನಲ್ ಗ್ರೀನ್ ಹೈಡ್ರೋಜನ್ ಮಿಷನ್​; ಕೇಂದ್ರ ಸಂಪುಟ ಅನುಮೋದನೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jan 04, 2023 | 5:15 PM

Share

ನವದೆಹಲಿ: ಶುದ್ಧ ಇಂಧನ ಉತ್ಪಾದನೆಯಲ್ಲಿ ಭಾರತವನ್ನು ಜಾಗತಿಕ ಹಬ್ ಆಗಿ ಮಾಡುವ ಗುರಿಯೊಂದಿಗೆ ‘ನ್ಯಾಷನಲ್ ಗ್ರೀನ್ ಹೈಡ್ರೋಜನ್ ಮಿಷನ್ (National Green Hydrogen Mission)’ ಸ್ಥಾಪನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ‘ನ್ಯಾಷನಲ್ ಗ್ರೀನ್ ಹೈಡ್ರೋಜನ್ ಮಿಷನ್’ಗೆ ಅನುಮೋದನೆ ನೀಡಲಾಗಿದೆ ಎಂದು ಸಚಿವ ಅನುರಾಗ್ ಠಾಕೂರ್ ಮಾಹಿತಿ ನೀಡಿದ್ದಾರೆ. 19,744 ಕೋಟಿ ರೂ. ಆರಂಭಿಕ ವೆಚ್ಚದಲ್ಲಿ ಯೋಜನೆ ಆರಂಭಿಸಲು ಉದ್ದೇಶಿಸಲಾಗಿದೆ. ಎಸ್​​ಐಜಿಎಚ್​ಟಿ ಯೋಜನೆಗೆ 17,490 ಕೋಟಿ ರೂ, ಪ್ರಾಯೋಗಿಕ ಯೋಜನೆಗೆ 1,466 ಕೋಟಿ ರೂ, ಆರ್​&ಡಿಗೆ 400 ಕೋಟಿ ರೂ, ಹಾಗೂ ಮಿಷನ್ ಕಾಂಪೊನೆಂಟ್ಸ್​​​ಗೆ 388 ಕೋಟಿ ರೂ. ವೆಚ್ಚ ಅಂದಾಜಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಯೋಜನೆಗೆ ಸಂಬಂಧಿಸಿದ ಮಾರ್ಗಸೂಚಿ ಸಿದ್ಧಪಡಿಸುವುದು ಮತ್ತು ಯೋಜನಾನುಷ್ಠಾನವನ್ನು ನವೀಕರಿಸಬಹುದಾದ ಇಂಧನಗಳ ಸಚಿವಾಲಯ ಮಾಡಲಿದೆ.

ಇದನ್ನೂ ಓದಿ: Aadhaar Update: ಹೊಸ ವಿಳಾಸದ ದಾಖಲೆ ಇಲ್ಲದೆಯೇ ಆಧಾರ್​​ನಲ್ಲಿ ವಿಳಾಸ ಅಪ್​ಡೇಟ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ವಾರ್ಷಿಕವಾಗಿ ಕನಿಷ್ಠ 50 ಲಕ್ಷ ಮೆಟ್ರಿಕ್ ಟನ್ ಗ್ರೀನ್​ ಹೈಡ್ರೋಜನ್ ಉತ್ಪಾದನಾ ಸಾಮರ್ಥ್ಯ ವೃದ್ಧಿಸುವುದು ಯೋಜನೆಯ ಪ್ರಮುಖ ಗುರಿಯಾಗಿದೆ. 2030ರ ವೇಳೆಗೆ ದೇಶದಲ್ಲಿ ಹೆಚ್ಚುವರಿಯಾಗಿ 125 GW ನವೀಕರಿಸಬಹುದಾದ ಇಂಧನ ಉತ್ಪಾದನೆಯ ಗುರಿ ಹಾಕಿಕೊಳ್ಳಲಾಗಿದೆ. 2030ರ ವೇಳೆಗೆ 8 ಲಕ್ಷ ಕೋಟಿ ರೂ. ಹೂಡಿಕೆಯೊಂದಿಗೆ 6 ಲಕ್ಷ ಉದ್ಯೋಗ ಸೃಷ್ಟಿಯ ಗುರಿಯನ್ನೂ ಹೊಂದಲಾಗಿದೆ.

ಕಡಿಮೆಯಾಗಲಿದೆ ಇಂಧನ ಆಮದು

ಗ್ರೀನ್ ಹೈಡ್ರೋಜನ್ ಉತ್ಪಾದನೆ ಹೆಚ್ಚಿಸುವ ಮೂಲಕ 1 ಲಕ್ಷ ಕೋಟಿ ರೂ. ಮೊತ್ತದ ಪಳೆಯುಳಿಕೆ ಇಂಧನ ಆಮದು ಕಡಿಮೆಯಾಗಲಿದೆ. 2030ರ ವೇಳೆಗೆ ಹಸಿರು ಮನೆ ಅನಿಲ ಸೂಸುವಿಕೆ ವಾರ್ಷಿಕ 50 ಎಂಎಂಟಿಗೆ ಕಡಿಮೆಯಾಗಲಿದೆ ಎನ್ನಲಾಗಿದೆ. ‘ನ್ಯಾಷನಲ್ ಗ್ರೀನ್ ಹೈಡ್ರೋಜನ್ ಮಿಷನ್’ನಿಂದ ಗ್ರೀನ್ ಹೈಡ್ರೋಜನ್ ಮತ್ತು ಅದರ ಉತ್ಪನ್ನಗಳ ರಫ್ತು ಅವಕಾಶಗಳು, ಕೈಗಾರಿಕಾ ಚಲನಶೀಲತೆ ಸೇರಿದಂತೆ ಅನೇಕ ಪ್ರಯೋಜನಗಳಿವೆ. ಪಳೆಯುಳಿಕೆ ಇಂಧನದ ಆಮದಿನ ಅವಲಂಬನೆ ಕಡಿಮೆಯಾಗಲಿದೆ. ದೇಶೀಯ ಉತ್ಪಾದನಾ ಸಾಮರ್ಥ್ಯ ವೃದ್ಧಿಯಾಗಲಿದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:13 pm, Wed, 4 January 23

ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು