ಗತಿಶಕ್ತಿ ಕಾರ್ಯಕ್ರಮದ ಮೂಲಕ ದೇಶದ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಹೊಸ ಶಕೆ

ಗತಿಶಕ್ತಿ ಕಾರ್ಯಕ್ರಮದ ಮೂಲಕ ದೇಶದ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಹೊಸ ಶಕೆ
ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)

ಗತಿಶಕ್ತಿ ಯೋಜನೆ ಮೂಲಕ ದೇಶದ ಮೂಲಸೌಕರ್ಯದಲ್ಲಿ ಹೊಸ ಶಕೆ ಶುರುವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

TV9kannada Web Team

| Edited By: Srinivas Mata

Jan 17, 2022 | 8:55 PM

ಬೆಂಗಳೂರು: ಗತಿಶಕ್ತಿ ಕಾರ್ಯಕ್ರಮದ (gati shakti programme) ಮೂಲಕ ದೇಶದ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಹೊಸ ಶಕೆಯ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ಅವರು ಸೋಮವಾರ ಪಿಎಂ ಗತಿ ಶಕ್ತಿ ಯೋಜನೆಯ ದಕ್ಷಿಣ ವಲಯ ಸಮ್ಮೇಳನದಲ್ಲಿ ಪಾಲ್ಗೊಂಡು, ಮಾತನಾಡಿದರು. ಗತಿ ಶಕ್ತಿ ಯೋಜನೆ ರಾಷ್ಟ್ರ ನಿರ್ಮಾಣದ ದೂರದೃಷ್ಟಿಯಿಂದ ರೂಪಿತವಾದ ಕಾರ್ಯಕ್ರಮ. ಸಮಸ್ಯೆಗಳನ್ನು ಬಗೆಹರಿಸಲು ಒಟ್ಟಾಗಿ ಕೆಲಸ ಮಾಡುವ, ಒಂದೇ ಗುರಿಯತ್ತ ಸಾಗಲು, ದೇಶ ಕಟ್ಟುವ ಕಾಯಕಕ್ಕೆ ಅನುಕೂಲವಾಗುವ ಸಂಪನ್ಮೂಲಗಳನ್ನು ಕ್ರೋಡೀಕರಿಸುವ ಹಾಗೂ ಬಳಸುವುದಕ್ಕೆ ಇರುವ ಸಾಧನ. ಈ ಬಹುಉದ್ದೇಶಗಳನ್ನು ಹೊಂದಿರುವ ಗತಿ ಶಕ್ತಿ ಯೋಜನೆ ನಮ್ಮ ಪ್ರಧಾನ ಮಂತ್ರಿಗಳ ಕನಸಿನ ಕೂಸು. ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಯಾಗಿ ಕೆಲಸ ಮಾಡಿರುವ ಅವರ ಅನುಭವವು ಭಾರತ ಸರ್ಕಾರ ಹಾಗೂ ರಾಜ್ಯಗಳ ಕನಸಿನ ಯೋಜನೆಗಳನ್ನು ಸಾಧಿಸಲು ಸಮನ್ವಯ ಹಾಗೂ ಸಹಕಾರ ನೀಡಲು ಸೂಕ್ತ ಸಮಯ ಇದಾಗಿದೆ ಎನ್ನುವುದನ್ನು ನಿರೂಪಿಸಿದೆ ಎಂದರು. 

ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಒಕ್ಕೂಟದ ಸಹಕಾರವನ್ನು ಉದಾಹರಣೆಯಾಗಿ ತೋರಬಹುದಾಗಿದೆ. ಏಕೆಂದರೆ ಬಹುತೇಕ ಮೂಲಸೌಕರ್ಯ ರಾಜ್ಯಗಳ ಮೂಲಕವೇ ಹಾದುಹೋಗುತ್ತದೆ ಹಾಗೂ ಅವರ ಸಹಕಾರದಿಂದಲೇ ಅನುಷ್ಠಾನಕ್ಕೆ ತರಬೇಕಿದೆ. ಭಾರತ ಸರ್ಕಾರದ ದೂರದೃಷ್ಟಿ ಮತ್ತು ಸಹಕಾರದಿಂದ ಎನ್.ಎಂ.ಪಿ ಮತ್ತು ಡಿಜಿಟಲ್ ಶಿಷ್ಟಾಚಾರದ ವ್ಯಾಪ್ತಿಯೊಳಗೆ ತರುವ ಯೋಜನೆಗಳು ರಾಷ್ಟ್ರಕ್ಕೆ ದಶಕಗಳಿಂದ ಬೇಡಿಕೆಯಲ್ಲಿದ್ದ ಕಾರ್ಯಕ್ರಮಗಳಾಗಿವೆ ಎಂದರು.

ರಸ್ತೆ ಸಾರಿಗೆಯಲ್ಲಿ ಗತಿ ಮತ್ತು ಶಕ್ತಿ ಎರಡನ್ನೂ ಸಾಧಿಸಿರುವ ಕೇಂದ್ರ ರಸ್ತೆ ಸಾರಿಗೆ ಸಚಿವರು, ರಾಷ್ಟ್ರೀಯ ಹೆದ್ದಾರಿಗಳನ್ನು ಕಳೆದ 7 ವರ್ಷಗಳಲ್ಲಿ ಹತ್ತು ಪಟ್ಟು ಹೆಚ್ಚಿಸಿದ್ದಾರೆ. ಅವರು ರಾಷ್ಟ್ರೀಯ ಹೆದ್ದಾರಿ ಕೇವಲ ರಸ್ತೆ ಸಾರಿಗೆ ಮತ್ತು ಲಾಜಿಸ್ಟಿಕ್​ಗಳಿಗೆ ಮಾತ್ರ ಸೀಮಿತವಾಗಿರದೆ, ರಾಷ್ಟ್ರೀಯ ಅಭಿವೃದ್ಧಿಯನ್ನು ಸಾಧ್ಯವಾಗಿಸಬಲ್ಲದು ಎಂದು ತೋರಿಸಿದ್ದಾರೆ ಎಂದು ಮುಖ್ಯಮಂತ್ರಿಗಳು ಹೇಳಿದರು.

ಇದನ್ನೂ ಓದಿ: PM Gatishakti ಗತಿಶಕ್ತಿ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

Follow us on

Related Stories

Most Read Stories

Click on your DTH Provider to Add TV9 Kannada