AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Income Tax Rules: ಗಮನಿಸಿ, ಇಂದಿನಿಂದ ಬದಲಾಗಿವೆ ಆದಾಯ ತೆರಿಗೆಗೆ ಸಂಬಂಧಿಸಿದ ಈ ಹತ್ತು ನಿಯಮಗಳು

ಹೊಸ ಹಣಕಾಸು ವರ್ಷ (Financial Year) ಇಂದಿನಿಂದ (2023 ಏಪ್ರಿಲ್ 1) ಅಸ್ತಿತ್ವಕ್ಕೆ ಬಂದಿದ್ದು ಆದಾಯ ತೆರಿಗೆಗೆ (Income Tax) ಸಂಬಂಧಿಸಿ ಹೊಸ ನಿಯಮಗಳೂ ಅಸ್ತಿತ್ವಕ್ಕೆ ಬಂದಿವೆ. ಅವುಗಳ ವಿವರ ಇಲ್ಲಿದೆ.

Income Tax Rules: ಗಮನಿಸಿ, ಇಂದಿನಿಂದ ಬದಲಾಗಿವೆ ಆದಾಯ ತೆರಿಗೆಗೆ ಸಂಬಂಧಿಸಿದ ಈ ಹತ್ತು ನಿಯಮಗಳು
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Apr 01, 2023 | 4:54 PM

Share

ಮುಖ್ಯಾಂಶಗಳು

  • ಹೊಸ ಹಣಕಾಸು ವರ್ಷ (Financial Year) ಇಂದಿನಿಂದ (2023 ಏಪ್ರಿಲ್ 1) ಅಸ್ತಿತ್ವಕ್ಕೆ.
  • ಆದಾಯ ತೆರಿಗೆಗೆ (Income Tax) ಸಂಬಂಧಿಸಿ ಹೊಸ ನಿಯಮಗಳೂ ಅಸ್ತಿತ್ವಕ್ಕೆ.
  • ಹೊಸ ತೆರಿಗೆ ವ್ಯವಸ್ಥೆಯೂ ಇಂದಿನಿಂದ ಅನ್ವಯ.

ಹೊಸ ಹಣಕಾಸು ವರ್ಷ (Financial Year) ಇಂದಿನಿಂದ (2023 ಏಪ್ರಿಲ್ 1) ಅಸ್ತಿತ್ವಕ್ಕೆ ಬಂದಿದ್ದು ಆದಾಯ ತೆರಿಗೆಗೆ (Income Tax) ಸಂಬಂಧಿಸಿ ಹೊಸ ನಿಯಮಗಳೂ ಅಸ್ತಿತ್ವಕ್ಕೆ ಬಂದಿವೆ. ಫೆಬ್ರುವರಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದ ಬಜೆಟ್​ನಲ್ಲಿ ಉಲ್ಲೇಖಿಸಿದ್ದ ಆದಾಯ ತೆರಿಗೆ ಸಂಬಂಧಿತ ನೂತನ ನಿಯಮಗಳು ಇಂದಿನಿಂದ ಅನ್ವಯವಾಗಲಿದೆ. ಆದಾಯ ತೆರಿಗೆ ನಿಯಮಗಳಲ್ಲಿ ಹಲವು ಬದಲಾವಣೆಗಳನ್ನು ಕೇಂದ್ರ ಸರ್ಕಾರ ಮಾಡಿದ್ದು, ಅದನ್ನು ಬಜೆಟ್​ನಲ್ಲಿ ಘೋಷಣೆ ಮಾಡಲಾಗಿತ್ತು. ಅದರಂತೆ, ಹಳೆಯ ತೆರಿಗೆ ವ್ಯವಸ್ಥೆಯಲ್ಲಿನ ಸ್ಲ್ಯಾಬ್​ಗಳಲ್ಲಿ ಪರಿಷ್ಕರಣೆ ಮಾಡಲಾಗಿದ್ದು, ಹೊಸ ತೆರಿಗೆ ವ್ಯವಸ್ಥೆಯಡಿ ವಾರ್ಷಿಕ 7 ಲಕ್ಷ ರೂ.ವರೆಗಿನ ಆದಾಯಕ್ಕೆ ತೆರಿಗೆ ವಿನಾಯಿತಿ ಘೋಷಿಸಲಾಗಿದೆ. ಆದಾಯ ತೆರಿಗೆಯ ಇಂದಿನಿಂದ ಅಸ್ತಿತ್ವಕ್ಕೆ ಬಂದ ಪರಿಷ್ಕೃತ ನಿಯಮಗಳು ಯಾವುವೆಲ್ಲ ಎಂಬ ವಿವರ ಇಲ್ಲಿದೆ.

ಹೊಸ ಆದಾಯ ತೆರಿಗೆ ವ್ಯವಸ್ಥೆ

ಹೊಸ ಆದಾಯ ತೆರಿಗೆ ವ್ಯವಸ್ಥೆಯೇ ಡಿಫಾಲ್ಟ್ ಆದಾಯ ತೆರಿಗೆ ಪದ್ಧತಿಯಾಗಿ ಆಯ್ಕೆಯಾಗಲಿದೆ. ಹಿಂದಿನ ಆದಾಯ ತೆರಿಗೆ ವ್ಯವಸ್ಥೆಯನ್ನು ಆಯ್ದುಕೊಳ್ಳುವ ಅವಕಾಶವೂ ತೆರಿಗೆದಾರರಿಗೆ ಇದೆ. ಹೊಸ ವ್ಯವಸ್ಥೆಯಡಿ ಸುಮಾರು 15.5 ಲಕ್ಷ ರೂ. ವಾರ್ಷಿಕ ಆದಾಯಕ್ಕೆ ಸ್ಟಾಂಡರ್ಡ್ ಡಿಡಕ್ಷನ್ 52,500 ಆಗಿರಲಿದೆ.

ಸ್ಟಾಂಡರ್ಡ್ ಡಿಡಕ್ಷನ್

ಹಿಂದಿನ ತೆರಿಗೆ ಪದ್ಧತಿಯಲ್ಲಿ ನೀಡಲಾಗುತ್ತಿದ್ದ 50,000 ರೂ.ಗಳ ಸ್ಟಾಂಡರ್ಡ್ ಡಿಡಕ್ಷನ್​ನಲ್ಲಿ ಬದಲಾವಣೆ ಮಾಡಲಾಗಿಲ್ಲ. ಪಿಂಚಣಿದಾರರಿಗೆ ಹೊಸ ತೆರಿಗೆ ಪದ್ಧತಿಗೆ ಸ್ಟಾಂಡರ್ಡ್ ಡಿಡಕ್ಷನ್ ಅನ್ನು ವಿಸ್ತರಿಸಲಾಗುವುದು ಎಂದು ಹಣಕಾಸು ಸಚಿವರು ಹೇಳಿದ್ದಾರೆ.

ತೆರಿಗೆ ವಿನಾಯಿತಿ ಮಿತಿ 7 ಲಕ್ಷ ರೂ.ಗೆ ವಿಸ್ತರಣೆ

ತೆರಿಗೆ ವಿನಾಯಿತಿ ಮಿತಿ 5 ಲಕ್ಷ ರೂ.ಗೆ ಬದಲಾಗಿ ಇಂದಿನಿಂದ 7 ಲಕ್ಷ ರೂ. ಆಗಿರಲಿದೆ. 7 ಲಕ್ಷ ರೂ.ಗಿಂತ ಕಡಿಮೆ ವಾರ್ಷಿಕ ಆದಾಯ ಹೊಂದಿರುವವರು ತೆರಿಗೆ ಉಳಿತಾಯಕ್ಕಾಗಿ ಯಾವುದೇ ಹೂಡಿಕೆ ಮಾಡುವ ಅಗತ್ಯ ಇರುವುದಿಲ್ಲ. 7 ಲಕ್ಷ ರೂ.ಗಿಂತ ಕಡಿಮೆ ವಾರ್ಷಿಕ ಆದಾಯಕ್ಕೆ ತೆರಿಗೆಯಿಂದ ಸಂಪೂರ್ಣ ವಿನಾಯಿತಿ ದೊರೆಯಲಿದೆ.

ಎಲ್​ಟಿಎ

ಸರ್ಕಾರೇತರ ಉದ್ಯೋಗಿಗಳಿಗೆ ನಿರ್ದಿಷ್ಟ ಮೊತ್ತದವರೆಗೆ ಲೀವ್ ಎನ್‌ಕ್ಯಾಶ್‌ಮೆಂಟ್ ವಿನಾಯಿತಿ ನೀಡಲಾಗುತ್ತದೆ. ಈ ಮಿತಿಯನ್ನು 25 ಲಕ್ಷ ರೂ.ಗೆ ನಿಗದಿಪಡಿಸಲಾಗಿದೆ.

ಅಲ್ಪಾವಧಿ ಬಂಡವಾಳಕ್ಕೆ ತೆರಿಗೆ ವಿನಾಯಿತಿ ಇಲ್ಲ

ಡೆಬ್ಟ್ ಮ್ಯೂಚುವಲ್ ಫಂಡ್​ಗಳಲ್ಲಿ ಮಾಡುವ ಹೂಡಿಕೆಗಳ ಮೂಲಕ ಗಳಿಸುವ ಅಲ್ಪಾವಧಿ ಬಂಡವಾಳಕ್ಕೆ ಸಿಗುತ್ತಿದ್ದ ತೆರಿಗೆ ವಿನಾಯಿತಿ (LTCG Tax Benefit) ಇನ್ನು ಸಿಗಲಾರದು.

ಮಾರುಕಟ್ಟೆ ಸಂಬಂಧಿತ ಡಿಬೆಂಚರ್​ಗಳು

ಇಂದಿನಿಂದ ಮಾರುಕಟ್ಟೆ ಸಂಬಂಧಿತ ಡಿಬೆಂಚರ್​ಗಳನ್ನು (Market Linked Debentures) ಅಲ್ಪಾವಧಿ ಹಣಕಾಸು ಸ್ವತ್ತು ಎಂದು ಪರಿಗಣಿಸಲಾಗುತ್ತದೆ. ಇದು, ಮ್ಯೂಚುವಲ್ ಫಂಡ್ ಕ್ಷೇತ್ರದ ಮೇಲೆ ಸ್ವಲ್ಪ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇದೆ.

ಜೀವ ವಿಮೆ ಪಾಲಿಸಿಗಳು

ವಾರ್ಷಿಕ 5 ಲಕ್ಷ ರೂ.ಗಿಂತ ಹೆಚ್ಚಿನ ಪ್ರೀಮಿಯಂ ಹೊಂದಿರುವ ಜೀವ ವಿಮಾ ಕಂತುಗಳಿಂದ ಬರುವ ಆದಾಯವು ತೆರಿಗೆ ವ್ಯಾಪ್ತಿಗೆ ಒಳಪಡುತ್ತದೆ.

ಹಿರಿಯ ನಾಗರಿಕರಿಗೆ ಪ್ರಯೋಜನಗಳು

ಹಿರಿಯ ನಾಗರಿಕರ ಉಳಿತಾಯ ಯೋಜನೆಯ ಗರಿಷ್ಠ ಠೇವಣಿ ಮಿತಿಯು 15 ಲಕ್ಷ ರೂ.ಗಳಿಂದ 30 ಲಕ್ಷ ರೂ.ಗೆ ವಿಸ್ತರಣೆಯಾಗಿದೆ. ಮಾಸಿಕ ಆದಾಯ ಯೋಜನೆಯ ಅತ್ಯಧಿಕ ಠೇವಣಿ ಮಿತಿ ಏಕ ಖಾತೆಗಳಿಗೆ 4.5 ಲಕ್ಷ ರೂ.ಗಳಿಂದ 9 ಲಕ್ಷ ರೂ.ಗೆ ಮತ್ತು ಜಂಟಿ ಖಾತೆಗಳಿಗೆ 7.5 ಲಕ್ಷ ರೂ.ಗಳಿಂದ 15 ಲಕ್ಷ ರೂ.ಗೆ ವಿಸ್ತರಣೆಯಾಗಿದೆ.

ಭೌತಿಕ ಚಿನ್ನವನ್ನು ಇ-ಚಿನ್ನವಾಗಿ ಪರಿವರ್ತಿಸಿದರೆ ತೆರಿಗೆ ಇಲ್ಲ

ಭೌತಿಕ ಚಿನ್ನವನ್ನು ಇ-ಚಿನ್ನವನ್ನಾಗಿ ಪರಿವರ್ತಿಸಿಕೊಂಡರೆ ಅದಕ್ಕೆ ಬಂಡವಾಳ ಗಳಿಕೆ ತೆರಿಗೆ ವಿಧಿಸಲಾಗುವುದಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್​​ನಲ್ಲಿ ಘೊಷಿಸಿದ್ದರು. ಅದು ಇಂದಿನಿಂದ ಜಾರಿಗೆ ಬಂದಿದೆ.

ಆದಾಯ ತೆರಿಗೆ ಸ್ಲ್ಯಾಬ್​ಗಳ ಬದಲಾವಣೆ ವಿವರ

  • 0-3 ಲಕ್ಷ ರೂ – ತೆರಿಗೆ ಇಲ್ಲ
  • 3-6 ಲಕ್ಷ ರೂ – ಶೇ 5ರ ತೆರಿಗೆ
  • 6-9 ಲಕ್ಷ ರೂ – ಶೇ 10ರ ತೆರಿಗೆ
  • 9-12 ಲಕ್ಷ ರೂ – ಶೇ 15ರ ತೆರಿಗೆ
  • 12-15 ಲಕ್ಷ ರೂ – ಶೇ 20ರ ತೆರಿಗೆ
  • 15 ಲಕ್ಷ ರೂ. ಮೇಲ್ಪಟ್ಟ ಆದಾಯಕ್ಕೆ – ಶೇ 30ರ ತೆರಿಗೆ

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?