AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PF Withdrawal: ಗಮನಿಸಿ; ಪಿಎಫ್​​ ವಿತ್​​ಡ್ರಾ ನಿಯಮದಲ್ಲಿ ಆಗಿದೆ ಬದಲಾವಣೆ

New PF withdrawal rule; ಪಿಎಫ್​​ ವಿತ್​​ಡ್ರಾ ನಿಯಮದಲ್ಲಿ ತುಸು ಬದಲಾವಣೆ ಮಾಡಲಾಗಿದ್ದು, ಆ ಕುರಿತ ವಿವರ ಇಲ್ಲಿದೆ.

PF Withdrawal: ಗಮನಿಸಿ; ಪಿಎಫ್​​ ವಿತ್​​ಡ್ರಾ ನಿಯಮದಲ್ಲಿ ಆಗಿದೆ ಬದಲಾವಣೆ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Feb 04, 2023 | 4:04 PM

Share

ನವದೆಹಲಿ: ಪ್ಯಾನ್ ಕಾರ್ಡ್ (PAN Card) ಹೊಂದಿಲ್ಲದವರ ಇಪಿಎಪ್​ಗೆ ಟಿಡಿಎಸ್​​ (TDS) ಕಡಿತ ಮಾಡುವ ಪ್ರಮಾಣವನ್ನು ಶೇ 30ರಿಂದ 20ಕ್ಕೆ ಇಳಿಕೆ ಮಾಡಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಬಜೆಟ್​ನಲ್ಲಿ ಪ್ರಸ್ತಾಪಿಸಿದ್ದಾರೆ. ಆದಾಗ್ಯೂ, ಈ ವಿಚಾರಕ್ಕೆ ಸಂಬಂಧಿಸಿ ಇತರ ಆದಾಯ ತೆರಿಗೆ ನಿಯಮಗಳು ಈಗಿರುವ ಹಾಗೆಯೇ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ. ಆದಾಯ ತೆರಿಗೆ ನಿಯಮದ ಪ್ರಕಾರ, 5 ವರ್ಷಗಳ ಅವಧಿಗೆ ಮುನ್ನ ಇಪಿಎಫ್​ ವಿತ್​ಡ್ರಾ ಮಾಡುವುದಾದರೆ ಒಟ್ಟು ಮೊತ್ತಕ್ಕೆ ತೆರಿಗೆ ಪಾವತಿಸಬೇಕಾಗುತ್ತದೆ. ವರ್ಷಕ್ಕೆ 2.5 ಲಕ್ಷ ರೂ.ಗಿಂತ ಹೆಚ್ಚು ಪಿಎಫ್​​ಗೆ ಜಮೆ ಮಾಡುವುದೂ ತೆರಿಗೆ ವ್ಯಾಪ್ತಿಗೆ ಬರುತ್ತದೆ.

ಪಿಎಫ್ ಅಥವಾ ಇಪಿಎಫ್​ ಖಾತೆಯಿಂದ ಐದು ವರ್ಷ ಅವಧಿಗೂ ಮುನ್ನ ವಿತ್​ಡ್ರಾ ಮಾಡುವುದು ತೆರಿಗೆ ವ್ಯಾಪ್ತಿಗೆ ಬರುತ್ತದೆ. ಪಿಎಫ್​ ಖಾತೆದಾರ ಪ್ಯಾನ್ ಕಾರ್ಡ್ ಹೊಂದಿದ್ದಲ್ಲಿ ಟಿಡಿಎಸ್ ಕಡಿತವಾಗುವುದಿಲ್ಲ. ಇಲ್ಲದಿದ್ದರೆ ಪಿಎಫ್​ ವಿತ್​ಡ್ರಾವಲ್ ಮೊತ್ತವು ಪಿಎಫ್​ ಚಂದಾದಾರನ ಆ ವರ್ಷದ ತೆರಿಗೆ ವ್ಯಾಪ್ತಿಯ ಆದಾಯಕ್ಕೆ ಸೇರುತ್ತದೆ ಎಂದು ಮುಂಬೈ ಮೂಲದ ತೆರಿಗೆ ತಜ್ಞ ಬಲ್ವಂತ್ ಜೈನ್ ಹೇಳಿರುವುದಾಗಿ ‘ಲೈವ್ ಮಿಂಟ್​​ ಡಾಟ್​​ಕಾಂ’ ವರದಿ ಮಾಡಿದೆ.

ಇದನ್ನೂ ಓದಿ: Income Tax Slabs: ಆದಾಯ ತೆರಿಗೆ ಸ್ಲ್ಯಾಬ್​ ಬದಲಾವಣೆ; ಗೊಂದಲವಿದೆಯಾ? ಇಲ್ಲಿದೆ ಹಳೆದು, ಹೊಸದರ ನಡುವಣ ಪೂರ್ಣ ವ್ಯತ್ಯಾಸ

‘ಪಿಎಫ್​ ಖಾತೆ ಜತೆ ಪ್ಯಾನ್ ಅನ್ನು ಸಂಯೋಜಿಸಿರದಿದ್ದರೆ ಪಿಎಫ್​ ಖಾತೆಯ ನಿವ್ವಳ ಮೊತ್ತದಿಂದ ಪಿಎಫ್​ ಕಡಿತವಾಗಬಹುದು. ಸದ್ಯ ಟಿಡಿಎಸ್​ ಪ್ರಮಾಣ ಶೇ 30ರಷ್ಟಿದ್ದು, 2023ರ ಏಪ್ರಿಲ್ 1ರಿಂದ ಶೇ 20ಕ್ಕೆ ಇಳಿಕೆಯಾಗಲಿದೆ’ ಎಂದು ಬಲ್ವಂತ್ ಜೈನ್ ತಿಳಿಸಿದ್ದಾರೆ.

ಆದಾಯ ತೆರಿಗೆ ನಿಯಮಕ್ಕೆ ಬಜೆಟ್​ನಲ್ಲಿ ಮಹತ್ವದ ಪರಿಷ್ಕರಣೆ ಮಾಡಲಾಗಿದ್ದು, ವೈಯಕ್ತಿಕ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 7 ಲಕ್ಷ ರೂ.ಗೆ ವಿಸ್ತರಣೆ ಮಾಡಲಾಗಿದೆ. ಹೊಸ ತೆರಿಗೆ ಪದ್ಧತಿಯಡಿ ಈ ಘೋಷಣೆ ಮಾಡಲಾಗಿದ್ದು, ಇದುವೇ ಡಿಫಾಲ್ಟ್ ತೆರಿಗೆ ಪದ್ಧತಿಯಾಗಿರಲಿದೆ ಎಂದೂ ಹಣಕಾಸು ಸಚಿವರು ತಿಳಿಸಿದ್ದಾರೆ. ಹಳೆಯ ತೆರಿಗೆ ಪದ್ಧತಿಯೂ ಅಸ್ತಿತ್ವದಲ್ಲಿರಲಿದ್ದು, 3 ಲಕ್ಷ ರೂ. ಮೇಲ್ಪಟ್ಟ ಆದಾಯಕ್ಕೆ ತೆರಿಗೆ ಪಾವತಿಸಬೇಕಾಗುತ್ತದೆ. ಆದರೆ, ಈ ತೆರಿಗೆ ವಿಧಾನದಲ್ಲಿ ಆದಾಯ ತೆರಿಗೆಯ ವಿವಿಧ ಸೆಕ್ಷನ್​​ಗಳ ಅಡಿಯಲ್ಲಿ ತೆರಿಗೆ ವಿನಾಯಿತಿ ಪಡೆಯಲು ಅವಕಾಶವಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ