Narendra Modi: ಸ್ವಾತಂತ್ರ್ಯ ಶತಮಾನೋತ್ಸವದ ವೇಳೆ ಮುಂದುವರಿದ ದೇಶವನ್ನಾಗಿಸುವ ಗುರಿ: ನರೇಂದ್ರ ಮೋದಿ

Vibrant Gujarat global summit 2024: ಭಾರತದ 100ನೇ ಸ್ವಾತಂತ್ರ್ಯ ದಿನಾಚರಣೆ ವೇಳೆಗೆ ಮುಂದುವರಿದ ದೇಶವನ್ನಾಗಿಸುವ ಗುರಿ ಇಟ್ಟಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮುಂದಿನ 25 ವರ್ಷ ಭಾರತಕ್ಕೆ ಅಮೃತ ಕಾಲವಾಗಿದೆ. ಕೆಲವೇ ವರ್ಷಗಳಲ್ಲಿ ಟಾಪ್ 3 ದೇಶವಾಗಿರುತ್ತದೆ ಎಂದು ಮೋದಿ ತಿಳಿಸಿದ್ದಾರೆ. ಗುಜರಾತ್​ನ ಗಾಂಧಿನಗರ್​ನಲ್ಲಿ 10ನೇ ಆವೃತ್ತಿಯ ವೈಬ್ರೆಂಟ್ ಗುಜರಾತ್ ಗ್ಲೋಬಲ್ ಸಮಿಟ್ ಅನ್ನು ಮೋದಿ ಉದ್ಘಾಟನೆ ಮಾಡಿದ್ದಾರೆ.

Narendra Modi: ಸ್ವಾತಂತ್ರ್ಯ ಶತಮಾನೋತ್ಸವದ ವೇಳೆ ಮುಂದುವರಿದ ದೇಶವನ್ನಾಗಿಸುವ ಗುರಿ: ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 10, 2024 | 2:18 PM

ಗಾಂಧಿನಗರ್, ಜನವರಿ 10: ಸ್ವಾತಂತ್ರ್ಯ ಶತಮಾನೋತ್ಸವದ ವೇಳೆಗೆ ಭಾರತ ಮುಂದುವರಿದ ದೇಶವನ್ನಾಗಿ ಮಾಡುವುದು ಸರ್ಕಾರದ ಸಂಕಲ್ಪವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಗುಜರಾತ್​ನ ಗಾಂಧಿನಗರ್​ನಲ್ಲಿ ಇಂದು ಅವರು 10ನೇ ಆವೃತ್ತಿಯ ವೈಬ್ರೆಂಟ್ ಗುಜರಾತ್ ಗ್ಲೋಬಲ್ ಸಮಿಟ್ ಕಾರ್ಯಕ್ರಮ (Vibrant Gujarat global summit 2024) ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ 25 ವರ್ಷ ಭಾರತದ ಅಮೃತ ಕಾಲವಾಗಿದೆ ಎಂದು ಹೇಳಿದ್ದಾರೆ.

‘ಈಗಷ್ಟೇ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ (75 ವರ್ಷ) ಆಚರಿಸಿದೆ. ಈಗ ಮುಂದಿನ 25 ವರ್ಷಕ್ಕೆ ಇಡಲಾಗಿರುವ ಗುರಿ ಈಡೇರಿಕೆ ನಿಟ್ಟಿನಲ್ಲಿ ದೇಶ ಕಾರ್ಯನಿರತವಾಗಿದೆ. ಸ್ವಾತಂತ್ರ್ಯದ ಶತಮಾನೋತ್ಸವ ಆಚರಿಸುವ ವೇಳೆ ಭಾರತವನ್ನು ಮುಂದುವರಿದ ದೇಶವಾಗಿ ಮಾಡುವ ಗುರಿ ಹೊಂದಿದ್ದೇವೆ. ಆದ್ದರಿಂದ ಈ 25 ವರ್ಷ ಅವಧಿ ಭಾರತಕ್ಕೆ ಅಮೃತ ಕಾಲ ಆಗಿರುತ್ತದೆ,’ ಎಂದು ನರೇಂದ್ರ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: Mukesh Ambani: ಭಾರತದ ಇತಿಹಾಸದಲ್ಲೇ ನರೇಂದ್ರ ಮೋದಿ ಅತ್ಯಂತ ಯಶಸ್ವಿ ಪ್ರಧಾನಿ: ಮುಕೇಶ್ ಅಂಬಾನಿ ಬಣ್ಣನೆ

ಮುಂಬರುವ ಕೆಲ ವರ್ಷಗಳಲ್ಲಿ ಭಾರತದ್ದು ಮೂರನೇ ಅತಿದೊಡ್ಡ ಆರ್ಥಿಕತೆ ಆಗಲಿದೆ ಎಂದು ಎಲ್ಲಾ ಪ್ರಮುಖ ಏಜೆನ್ಸಿಗಳು ಹೇಳಿವೆ. ಕಳೆದ ಒಂದು ದಶಕದಲ್ಲಿ ಭಾರತದ ಆರ್ಥಿಕತೆ ಬೆಳೆದಿರುವ ರೀತಿ ನೋಡಿದರೆ ವಿಶ್ವಾಸ ಮೂಡುತ್ತದೆ ಎಂದಿದ್ದಾರೆ.

ಭಾರತದಲ್ಲಿ ಸ್ಟಾರ್ಟಪ್ ಪ್ರವೃತ್ತಿ ಹೆಚ್ಚುತ್ತಿರುವುದನ್ನು ಸ್ವಾಗತಿಸಿದ ಪ್ರಧಾನಿಗಳು, ದೇಶದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಸ್ಟಾರ್ಟಪ್​ಗಳಿವೆ ಎಂದಿದ್ದಾರೆ.

ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರೂ ಪಾಲ್ಗೊಂಡಿದ್ದರು. ಉದ್ಘಾಟನಾ ಸಮಾರಂಭದ ಬಳಿಕ ಯುಎಇ ಅಧ್ಯಕ್ಷರು ನಿರ್ಗಮಿಸಿದರು.

ಇದನ್ನೂ ಓದಿ: Gautam adani: ವೈಬ್ರಂಟ್ ಗುಜರಾತ್ ಗ್ಲೋಬಲ್ ಸಮಿಟ್: ಮುಂದಿನ 3 ವರ್ಷದಲ್ಲಿ ಗುಜರಾತ್​ನಲ್ಲಿ 2 ಲಕ್ಷ ಕೋಟಿ ರೂ ಹೂಡಿಕೆ: ಗೌತಮ್ ಅದಾನಿ

ಇದೇ ವೇಳೆ, ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಕಾರ್ಪೊರೇಟ್ ಕಂಪನಿಗಳ ಸಿಇಒಗಳ ಜೊತೆ ಸಭೆ ನಡೆಸುವ ಕಾರ್ಯಕ್ರಮ ಇದೆ. ಸಂಜೆ 5 ಗಂಟೆಯ ಬಳಿಕ ಗಿಫ್ಟ್ ಸಿಟಿಗೆ ಪ್ರಯಾಣಿಸಿ ಉದ್ಯಮಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಪ್ರಧಾನಿಗಳು ನಿನ್ನೆಯಿಂದಲೂ ಗುಜರಾತ್​ನ ಗಾಂಧಿನಗರ್​ನಲ್ಲಿದ್ದಾರೆ. ನಿನ್ನೆ (ಜ. 9) ಇಲ್ಲಿ ಗ್ಲೋಬಲ್ ಟ್ರೇಡ್ ಶೋಗೆ ಚಾಲನೆ ನೀಡಿದ್ದರು. ವಿವಿಧ ಜಾಗತಿಕ ನಾಯಕರ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ