AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿತ್ರಾರ್ಜಿತ ಆಸ್ತಿ ತೆರಿಗೆ ಬರಬೇಕು: ವರ್ಷದ ಹಿಂದೆ ಹೇಳಿದ್ದ ನಿಖಿಲ್ ಕಾಮತ್ ವಿಡಿಯೋ ಈಗ ವೈರಲ್

Nikhil Kamath Speaks In favour of Inheritance Tax: ಪಿತ್ರಾರ್ಜಿತ ಆಸ್ತಿ ತೆರಿಗೆ ವಿಚಾರದ ಬಗ್ಗೆ ಚುನಾವಣಾ ಪ್ರಚಾರ ಸಭೆಗಳಲ್ಲಿ ದಾಳಿ ಪ್ರತಿದಾಳಿಗಳಾಗುತ್ತಿವೆ. ಹೆಂಗಸರ ಮಾಂಗಲ್ಯ ಸರವನ್ನೂ ಇವರು ಬಿಡುವುದಿಲ್ಲ ಎಂದು ಪ್ರಧಾನಿ ಗುಡುಗುತ್ತಿದ್ದಾರೆ. ಈ ವೇಳೆ ಝೀರೋಧದ ಸಹ-ಸಂಸ್ಥಾಪಕ ನಿಖಿಲ್ ಕಾಮತ್ ವರ್ಷದ ಹಿಂದೆ ಪಿತ್ರಾರ್ಜಿತ ಆಸ್ತಿ ತೆರಿಗೆಯ ಅವಶ್ಯಕತೆ ಇದೆ ಎಂದು ಹೇಳಿರುವ ವಿಡಿಯೋ ಈಗ ವೈರಲ್ ಆಗುತ್ತಿದೆ. ಪಿತ್ರಾರ್ಜಿತ ಆಸ್ತಿ ತೆರಿಗೆ ಜಾರಿಗೆ ಬಂದರೆ ಹೆಚ್ಚಿನ ಜನರು ತೆರಿಗೆ ವ್ಯಾಪ್ತಿಗೆ ಬರುತ್ತಾರೆ ಎಂಬುದು ನಿಖಿಲ್ ಕಾಮತ್ ಅವರ ವಾದ.

ಪಿತ್ರಾರ್ಜಿತ ಆಸ್ತಿ ತೆರಿಗೆ ಬರಬೇಕು: ವರ್ಷದ ಹಿಂದೆ ಹೇಳಿದ್ದ ನಿಖಿಲ್ ಕಾಮತ್ ವಿಡಿಯೋ ಈಗ ವೈರಲ್
ನಿಖಿಲ್ ಕಾಮತ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 25, 2024 | 12:33 PM

Share

ನವದೆಹಲಿ, ಏಪ್ರಿಲ್ 25: ಸ್ಯಾಮ್ ಪಿತ್ರೋಡಾ ಮೊನ್ನೆ ಹೇಳಿದ ಪಿತ್ರಾರ್ಜಿತ ಆಸ್ತಿ ತೆರಿಗೆ (inheritance tax) ವಿಚಾರ ಚರ್ಚೆಯಲ್ಲಿದೆ. ಈ ವೇಳೆ ಝೀರೋಧದ ಸಹ-ಸಂಸ್ಥಾಪಕರಾದ ನಿಖಿಲ್ ಕಾಮತ್ (Nikhil Kamath) ಅವರು ಈ ತೆರಿಗೆ ಬಗ್ಗೆ ಮಾತನಾಡಿರುವ ವಿಡಿಯೊವೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ವರ್ಷದ ಹಿಂದೆ ಮಿಂಟ್ ವೆಬ್​ಸೈಟ್​ಗೆ ನೀಡಿದ ಸಂದರ್ಶನದಲ್ಲಿ ನಿಖಿಲ್ ಕಾಮತ್ ಅವರು ಪಿತ್ರಾರ್ಜಿತ ಆಸ್ತಿ ತೆರಿಗೆ ಬಗ್ಗೆ ಮಾತನಾಡಿರುವ ವಿಡಿಯೋ ಅದಾಗಿದೆ. ಈ ತೆರಿಗೆಗೆ ಅವರು ಬೆಂಬಲ ವ್ಯಕ್ತಪಡಿಸಿರುವುದು ತಿಳಿದುಬರುತ್ತದೆ. ಅವರ ಪ್ರಕಾರ ಪಿತ್ರಾರ್ಜಿತ ಆಸ್ತಿ ತೆರಿಗೆ ಜಾರಿಗೆ ಬಂದರೆ ಹೆಚ್ಚು ಜನರು ತೆರಿಗೆ ವ್ಯಾಪ್ತಿಗೆ ಬರುತ್ತಾರೆ.

‘ಒಂದು ತಲೆಮಾರಿನಿಂದ ಮತ್ತೊಂದು ತಲೆಮಾರಿಗೆ ಆಸ್ತಿ ವರ್ಗಾವಣೆ ಆಗುವಾಗ ಅದರ ಒಂದು ಭಾಗವನ್ನು ಮರುಹಂಚಿಕೆ ಮಾಡುವ ಒಂದು ವ್ಯವಸ್ಥೆ ಆಗಬೇಕು,’ ಎಂದು ಆ ಸಂವಾದದಲ್ಲಿ ನಿಖಿಲ್ ಕಾಮತ್ ಹೇಳಿದ್ದಾರೆ.

‘ಸೌತ್ ಕೊರಿಯಾ, ಅಮೆರಿಕ ಮತ್ತು ಬ್ರಿಟನ್ ದೇಶಗಳಲ್ಲಿ ಎಸ್ಟೇಟ್ ಟ್ಯಾಕ್ಸ್ ಹೆಸರಿನಲ್ಲಿ ಇನ್​ಹೆರಿಟೆನ್ಸ್ ಟ್ಯಾಕ್ಸ್ ವ್ಯವಸ್ಥೆ ಇದೆ. ಭಾರತದಲ್ಲಿ ಕೇವಲ ಶೇ. 3ರಷ್ಟು ಜನರು ಮಾತ್ರ ಆದಾಯ ತೆರಿಗೆ ಪಾವತಿಸುತ್ತಾರೆ. ಪಿತ್ರಾರ್ಜಿತ ಆಸ್ತಿ ತೆರಿಗೆಯನ್ನು ಜಾರಿಗೆ ತಂದರೆ ಹೆಚ್ಚು ಜನರನ್ನು ಟ್ಯಾಕ್ಸ್ ವ್ಯಾಪ್ತಿಗೆ ಬರಬಹುದು,’ ಎಂದು ಝೀರೋಧದ ಸಹ-ಸಂಸ್ಥಾಪಕರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಸಂಪತ್ತು ಮರುಹಂಚಿಕೆ ಚರ್ಚೆಗೆ ಹೊಸ ‘ಅಲ್ಪಸಂಖ್ಯಾತ’ ವರ್ಗ ಸೇರಿಸಿದ ಉದ್ಯಮಿ ಆಶ್ನೀರ್ ಗ್ರೋವರ್

ಬಹಳ ಸಿರಿವಂತ ಜನರಿಗೆ ಈ ರೀತಿ ಪಿತ್ರಾರ್ಜಿತ ಆಸ್ತಿ ತೆರಿಗೆ ವಿಧಿಸಿದರೆ ಸರ್ಕಾರಕ್ಕೆ ಅಗತ್ಯ ಸುಧಾರಣೆ ಕೈಗೊಳ್ಳಲು ಬೇಕಾದ ಹಣಕಾಸು ಸಂಪನ್ಮೂಲ ಕೈಗೂಡಿ ಬರಬಹುದು ಎಂಬುದು ನಿಖಿಲ್ ಕಾಮತ್ ಅವರ ಅನಿಸಿಕೆ.

ಭಾರತದಲ್ಲಿ ಈ ಹಿಂದೆ ಜಾರಿಯಲ್ಲಿತ್ತು ಪಿತ್ರಾರ್ಜಿತ ಆಸ್ತಿ ತೆರಿಗೆ

ಪಿತ್ರಾರ್ಜಿತ ಆಸ್ತಿ ತೆರಿಗೆ ಭಾರತಕ್ಕೆ ಹೊಸತೇನಲ್ಲ. 1953ರಲ್ಲಿ ಎಸ್ಟೇಟ್ ಡ್ಯೂಟಿ ಕಾಯ್ದೆಯನ್ನು ಜಾರಿಗೆ ತರಲಾಗಿತ್ತು. ಇದು ಪಿತ್ರಾರ್ಜಿತ ಆಸ್ತಿಯ ಒಂದು ರೂಪ. ಆರ್ಥಿಕ ಅಸಮಾನತೆಯನ್ನು ಕಡಿಮೆ ಮಾಡಲು ಇದನ್ನು ಜಾರಿ ಮಾಡಲಾಗಿತ್ತು. ಸುಮಾರು ಮೂರು ದಶಕಗಳ ಕಾಲ ಇದು ಅಸ್ತಿತ್ವದಲ್ಲಿತ್ತು. 1985ರಲ್ಲಿ ಇದನ್ನು ನಿಲ್ಲಿಸಲಾಯಿತು.

ಇದನ್ನೂ ಓದಿ: ವೈಯಕ್ತಿಕ ಆಸ್ತಿಯಲ್ಲಿ ಸರ್ಕಾರಕ್ಕೆ ಶೇ. 55 ಪಾಲು: ಅಮೆರಿಕದ ಟ್ಯಾಕ್ಸ್ ವ್ಯವಸ್ಥೆ ಪ್ರಸ್ತಾಪಿಸಿದ ಸ್ಯಾಮ್ ಪಿತ್ರೋಡಾ

ಭಾರತದಲ್ಲಿ ಈಗ ಪಿತ್ರಾರ್ಜಿತ ಆಸ್ತಿಗೆ ತೆರಿಗೆ ಇಲ್ಲವಾ?

ಸದ್ಯದ ಆದಾಯ ತೆರಿಗೆ ಕಾಯ್ದೆ ಪ್ರಕಾರ ಪಿತ್ರಾರ್ಜಿತವಾಗಿ ವರ್ಗಾವಣೆ ಆಗುವ ಆಸ್ತಿಗೆ ಯಾವ ತೆರಿಗೆ ಇರುವುದಿಲ್ಲ. ಆದರೆ, ನೀವು ಈ ಆಸ್ತಿ ಮಾರಿದಾಗ ಮಾತ್ರವೇ ತೆರಿಗೆ ಕಟ್ಟಬೇಕಾಗುತ್ತದೆ. ಐಟಿ ರಿಟರ್ನ್ ಸಲ್ಲಿಕೆಯಲ್ಲೂ ಕೂಡ ನಿಮ್ಮ ಪಿತ್ರಾರ್ಜಿತ ಆಸ್ತಿ ತೆರಿಗೆ ಘೋಷಿಸಬೇಕೆನ್ನುವ ನಿಯಮ ಮತ್ತು ಅವಕಾಶ ಇಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ