AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್​ಟಿಸಿಜಿ, ಎಸ್​ಟಿಟಿ ತೆರಿಗೆ ಕುರಿತು ಸಾರ್ವಜನಿಕರ ಅಭಿಪ್ರಾಯ ಆಲಿಸಲು ಸರ್ಕಾರ ಸಿದ್ಧ: ನಿರ್ಮಲಾ ಸೀತಾರಾಮನ್

ದೇಶದ ಮುಂಬರುವ ಬಜೆಟ್‌ಗೆ ಮುನ್ನ ದೀರ್ಘಾವಧಿಯ ಬಂಡವಾಳ ಲಾಭ (LTCG) ಮತ್ತು ಸೆಕ್ಯುರಿಟೀಸ್ ಟ್ರಾನ್ಸಾಕ್ಷನ್ ಟ್ಯಾಕ್ಸ್ (STT) ಕುರಿತ ಚರ್ಚೆಗಳನ್ನು ತಾವು ಗಮನಿಸುತ್ತಿರುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಜೊತೆಗೆ ರೂಪಾಯಿ ಮೌಲ್ಯದ ತೀವ್ರ ಏರಿಳಿತವನ್ನು ನಿಯಂತ್ರಿಸಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಅಗತ್ಯ ಕ್ರಮಗಳನ್ನು ಮುಂದುವರಿಸಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಎಲ್​ಟಿಸಿಜಿ, ಎಸ್​ಟಿಟಿ ತೆರಿಗೆ ಕುರಿತು ಸಾರ್ವಜನಿಕರ ಅಭಿಪ್ರಾಯ ಆಲಿಸಲು ಸರ್ಕಾರ ಸಿದ್ಧ: ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್Image Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 13, 2026 | 5:30 PM

Share

ನವದೆಹಲಿ, ಅಕ್ಟೋಬರ್ 13: ದೀರ್ಘಾವಧಿ ಬಂಡವಾಳ ಲಾಭ ತೆರಿಗೆ (LTCG) ಮತ್ತು ಸೆಕ್ಯೂರಿಟೀಸ್ ಟ್ರಾನ್ಸಾಕ್ಷನ್ ತೆರಿಗೆ (STT) ಕುರಿತು ಅಭಿಪ್ರಾಯಗಳು ಮತ್ತು ಸಲಹೆಗಳನ್ನು ಕೇಳಲು ಸರ್ಕಾರ ಸದಾ ಮುಕ್ತವಾಗಿರುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಹೇಳಿದ್ದಾರೆ. ದೆಹಲಿಯಲ್ಲಿ ಇಂದು ಆರಂಭಗೊಂಡ ‘ಬ್ಲೂಮ್‌ಬರ್ಗ್ ನ್ಯೂ ಎಕಾನಮಿ ಫೋರಮ್ 2026’ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ನಿರ್ಮಲಾ ಸೀತಾರಾಮನ್, ಷೇರು ಮಾರುಕಟ್ಟೆಯಲ್ಲಿ ಇರುವ ತೆರಿಗೆ ವ್ಯವಸ್ಥೆ ಬಗ್ಗೆ ಹೂಡಿಕೆದಾರರ ಆತಂಕಕ್ಕೆ ಸಮಾಧಾನ ಹೇಳಲು ಯತ್ನಿಸಿದ್ದಾರೆ.

ಮುಂಬರುವ ಕೇಂದ್ರ ಬಜೆಟ್‌ ಸಿದ್ಧತೆಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ, ಎಲ್‌ಟಿಸಿಜಿ ತೆರಿಗೆಯನ್ನು ತೆಗೆದುಹಾಕುವ ಅಥವಾ ಪರಿಷ್ಕರಿಸುವ ಕುರಿತು ದೇಶ ಹಾಗೂ ವಿದೇಶಿ ಹೂಡಿಕೆದಾರರಿಂದ ಬರುತ್ತಿರುವ ಸಲಹೆಗಳನ್ನು ಮತ್ತು ಚರ್ಚೆಗಳನ್ನು ತಾವು ಗಮನಿಸುತ್ತಿರುವುದಾಗಿ ಸಚಿವರು ತಿಳಿಸಿದ್ದಾರೆ. ವಿಭಿನ್ನ ಆಸ್ತಿ ವರ್ಗಗಳ ಮೇಲಿನ ತೆರಿಗೆಯನ್ನು ಏಕರೂಪವಾಗಿ ಪರಿಗಣಿಸಬೇಕೆ ಎಂಬ ಚರ್ಚೆಗಳು ಆರೋಗ್ಯಕರವಾಗಿದ್ದು, ಈ ಕುರಿತು ಬಜೆಟ್‌ಗೂ ಮುನ್ನ ಎಲ್ಲರ ಅಭಿಪ್ರಾಯಗಳನ್ನು ಆಲಿಸುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಆದಾಗ್ಯೂ, ಬಜೆಟ್ ಸಮೀಪವಿರುವ ಕಾರಣ ಈ ಹಂತದಲ್ಲಿ ಯಾವುದೇ ಅಂತಿಮ ನಿರ್ಧಾರ ಅಥವಾ ಭರವಸೆ ನೀಡುವುದು ಅಕಾಲಿಕವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ತಂತ್ರಜ್ಞಾನ ಹೆಚ್ಚು ಮಂದಿಗೆ ನೆರವಾಗಬೇಕು; ಶಕ್ತಿಯಿಂದ ಸಬಲೀಕರಣವಾಗಬೇಕು: ಬ್ಲೋಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ

ರೂಪಾಯಿ ಮೌಲ್ಯದ ಏರಿಳಿತ ಮತ್ತು ಆರ್‌ಬಿಐ (RBI) ಪಾತ್ರ

ಕಳೆದ ಕೆಲವು ತಿಂಗಳುಗಳಿಂದ ಜಾಗತಿಕ ಸವಾಲುಗಳಿಂದಾಗಿ ರೂಪಾಯಿ ಮೌಲ್ಯದಲ್ಲಿ ಉಂಟಾಗಿರುವ ಕುಸಿತ ಹಾಗೂ ಏರಿಳಿತದ ಬಗ್ಗೆ ಮಾತನಾಡಿರುವ ಸಚಿವರು, ಆರ್‌ಬಿಐ ಯಾವುದೇ ನಿರ್ದಿಷ್ಟ ವಿನಿಮಯ ದರವನ್ನು ಕಾಯ್ದುಕೊಳ್ಳಲು ಪ್ರಯತ್ನಿಸುತ್ತಿಲ್ಲ, ಬದಲಿಗೆ ರೂಪಾಯಿಯ ಅತಿಯಾದ ಮತ್ತು ಅನಗತ್ಯ ಏರಿಳಿತವನ್ನು (Excessive Volatility) ತಡೆಯಲು ನಿರಂತರವಾಗಿ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ತಿಳಿಸಿದ್ದಾರೆ. ಭಾರತದ ಸ್ಥೂಲ ಆರ್ಥಿಕ ಮೂಲಾಂಶಗಳು (Macro-economic fundamentals) ಹಾಗೂ ವಿದೇಶಿ ವಿನಿಮಯ ಮೀಸಲು (Forex Reserves) ಬಲವಾಗಿವೆ ಎಂದು ಅವರು ಭರವಸೆ ನೀಡಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ