Union Budget 2024: ಬಜೆಟ್ ಮಂಡನೆ ಬಳಿಕ ನಿರ್ಮಲಾ ಸೀತಾರಾಮನ್ ಪಾಲಾಗಲಿವೆ ಹಲವು ದಾಖಲೆಗಳು, ಇಲ್ಲಿದೆ ವಿವರ

ಕೇಂದ್ರ ಬಜೆಟ್ 2024: ಫೆಬ್ರವರಿ 1 ರಂದು ಮಧ್ಯಂತರ ಬಜೆಟ್ ಮಂಡಿಸುವುದರೊಂದಿಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾಜಿ ಹಣಕಾಸು ಸಚಿವರಾದ ಮನಮೋಹನ್ ಸಿಂಗ್, ಅರುಣ್ ಜೇಟ್ಲಿ, ಪಿ ಚಿದಂಬರಂ ಮತ್ತು ಯಶವಂತ್ ಸಿನ್ಹಾ ಅವರ ದಾಖಲೆಗಳನ್ನು ಹಿಂದಿಕ್ಕಲಿದ್ದಾರೆ. ಅಲ್ಲದೆ, ಇನ್ನೂ ಕೆಲವು ದಾಖಲೆಗಳನ್ನು ನಿರ್ಮಿಸಲಿದ್ದಾರೆ. ಅವುಗಳ ವಿವರ ಇಲ್ಲಿದೆ.

Union Budget 2024: ಬಜೆಟ್ ಮಂಡನೆ ಬಳಿಕ ನಿರ್ಮಲಾ ಸೀತಾರಾಮನ್ ಪಾಲಾಗಲಿವೆ ಹಲವು ದಾಖಲೆಗಳು, ಇಲ್ಲಿದೆ ವಿವರ
ನಿರ್ಮಲಾ ಸೀತಾರಾಮನ್
Follow us
|

Updated on: Jan 27, 2024 | 6:01 PM

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಫೆಬ್ರವರಿ 1 ರಂದು ಸತತ ಆರನೇ ಬಜೆಟ್ (Union Budget 2024) ಮಂಡಿಸಲಿದ್ದಾರೆ. ಇದರೊಂದಿಗೆ ಹಲವು ದಾಖಲೆಗಳು ಅವರ ಪಾಲಾಗಲಿವೆ. ಅವರು ಸತತ ಐದು ಪೂರ್ಣ ಬಜೆಟ್ ಮತ್ತು ಒಂದು ಮಧ್ಯಂತರ ಬಜೆಟ್ ಮಂಡಿಸಿದ ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅವರ ದಾಖಲೆಯನ್ನು ಸರಿಗಟ್ಟಲಿದ್ದಾರೆ. ಅಲ್ಲದೆ, ಸೀತಾರಾಮನ್ ಅವರು ಜುಲೈ 2019 ರಿಂದ ಐದು ಪೂರ್ಣ ಬಜೆಟ್‌ಗಳನ್ನು ಮಂಡಿಸಿದ್ದಾರೆ. ಸತತ ಐದು ಬಾರಿ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಿದ ಮಹಿಳಾ ಹಣಕಾಸು ಸಚಿವರಾಗಿದ್ದಾರೆ.

ಫೆಬ್ರವರಿ 1 ರಂದು ಮಧ್ಯಂತರ ಬಜೆಟ್ ಮಂಡಿಸುವುದರೊಂದಿಗೆ ನಿರ್ಮಲಾ ಸೀತಾರಾಮನ್ ಮಾಜಿ ಹಣಕಾಸು ಸಚಿವರಾದ ಮನಮೋಹನ್ ಸಿಂಗ್, ಅರುಣ್ ಜೇಟ್ಲಿ, ಪಿ ಚಿದಂಬರಂ ಮತ್ತು ಯಶವಂತ್ ಸಿನ್ಹಾ ಅವರ ದಾಖಲೆಗಳನ್ನು ಹಿಂದಿಕ್ಕಲಿದ್ದಾರೆ. ಈ ನಾಯಕರು ಸತತ ಐದು ಬಜೆಟ್ ಮಂಡಿಸಿದ್ದರು. ಹಣಕಾಸು ಮಂತ್ರಿಯಾಗಿ, ದೇಸಾಯಿ 1959-1964 ರ ನಡುವೆ ಐದು ವಾರ್ಷಿಕ ಬಜೆಟ್ ಮತ್ತು ಒಂದು ಮಧ್ಯಂತರ ಬಜೆಟ್ ಮಂಡಿಸಿದ್ದರು. ಫೆಬ್ರವರಿ 1 ರಂದು ಮಂಡಿಸಲಿರುವ 2024-25 ರ ಹಣಕಾಸು ವರ್ಷದ ಮಧ್ಯಂತರ ಬಜೆಟ್ ಏಪ್ರಿಲ್-ಮೇನಲ್ಲಿ ಲೋಕಸಭೆ ಚುನಾವಣೆಯ ನಂತರ ಹೊಸ ಸರ್ಕಾರ ರಚನೆಯಾಗುವವರೆಗೆ ಕೆಲವು ವಸ್ತುಗಳ ಮೇಲೆ ಖರ್ಚು ಮಾಡುವ ಹಕ್ಕನ್ನು ಸರ್ಕಾರಕ್ಕೆ ನೀಡುತ್ತದೆ.

ಪ್ರಮುಖ ಘೋಷಣೆ ಅನುಮಾನ

ಲೋಕಸಭೆ ಚುನಾವಣೆಗಳು ನಡೆಯಲಿರುವ ಕಾರಣ, ಸೀತಾರಾಮನ್ ಅವರ ಮಧ್ಯಂತರ ಬಜೆಟ್‌ನಲ್ಲಿ ಯಾವುದೇ ಪ್ರಮುಖ ನೀತಿ ಬದಲಾವಣೆ, ಪ್ರಮುಖ ಯೋಜನೆಗಳ ಘೋಷಣೆ ಸಾಧ್ಯತೆ ಕಡಿಮೆಯಾಗಿದೆ. ಮಧ್ಯಂತರ ಬಜೆಟ್‌ನಲ್ಲಿ ಯಾವುದೇ ಪ್ರಮುಖ ಘೋಷಣೆ ಮಾಡುವುದನ್ನು ಕಳೆದ ತಿಂಗಳು ನಡೆದ ಕಾರ್ಯಕ್ರಮವೊಂದರಲ್ಲಿ ಹಣಕಾಸು ಸಚಿವರು ನಿರಾಕರಿಸಿದ್ದರು.

ಲೋಕಸಭೆ ಚುನಾವಣೆಯ ನಂತರ, ಜೂನ್‌ನಲ್ಲಿ ಹೊಸ ಸರ್ಕಾರ ರಚನೆಯಾಗುವ ಸಾಧ್ಯತೆಯಿದೆ. ಹೊಸ ಸರ್ಕಾರವು ಜುಲೈನಲ್ಲಿ 2024-25 ರ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದೆ. ಸಾಮಾನ್ಯವಾಗಿ, ಮಧ್ಯಂತರ ಬಜೆಟ್ ಪ್ರಮುಖ ನೀತಿ ಘೋಷಣೆಗಳನ್ನು ಒಳಗೊಂಡಿರುವುದಿಲ್ಲ, ಆದರೆ ಆರ್ಥಿಕತೆ ಎದುರಿಸುತ್ತಿರುವ ಸಮಸ್ಯೆಗಳನ್ನು ಎದುರಿಸಲು ಅಗತ್ಯವಾದ ಕ್ರಮಗಳನ್ನು ತೆಗೆದುಕೊಳ್ಳುವುದರಿಂದ ಸರ್ಕಾರಕ್ಕೆ ಯಾವುದೇ ನಿರ್ಬಂಧವಿಲ್ಲ.

ಐದು ಬಜೆಟ್ ಮಂಡಿಸಿದ್ದ ಅರುಣ್ ಜೇಟ್ಲಿ

2014 ರಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಅರುಣ್ ಜೇಟ್ಲಿ ಅವರು ಹಣಕಾಸು ಸಚಿವಾಲಯದ ಜವಾಬ್ದಾರಿಯನ್ನು ವಹಿಸಿಕೊಂಡರು ಮತ್ತು 2014-15 ರಿಂದ 2018-19 ರವರೆಗೆ ಸತತ ಐದು ಬಜೆಟ್​​ಗಳನ್ನು ಮಂಡಿಸಿದ್ದರು. 2017 ರಲ್ಲಿ, ಫೆಬ್ರವರಿ ಒಂದರಂದೇ ಬಜೆಟ್ ಮಂಡಿಸಲು ಸರ್ಕಾರ ನಿರ್ಧರಿಸಿತು.

ಜೇಟ್ಲಿ ಅವರ ಅನಾರೋಗ್ಯದ ಕಾರಣ, ಹೆಚ್ಚುವರಿಯಾಗಿ ಸಚಿವಾಲಯದ ಜವಾಬ್ದಾರಿಯನ್ನು ಹೊತ್ತಿದ್ದ ಪಿಯೂಷ್ ಗೋಯಲ್ ಅವರು 2019 ರ ಫೆಬ್ರವರಿ 1ರಂದು ಮಧ್ಯಂತರ ಬಜೆಟ್ ಅನ್ನು ಮಂಡಿಸಿದರು. ಗೋಯಲ್ ಅವರು ವೇತನ ಸಹಿತ ತೆರಿಗೆದಾರರಿಗೆ ಸ್ಟ್ಯಾಂಡರ್ಡ್ ಡಿಡಕ್ಷನ್ ಮಿತಿಯನ್ನು 10,000 ರೂ.ನಿಂದ 50,000 ರೂ.ಗೆ ಹೆಚ್ಚಿಸಿದ್ದರು. ಅಲ್ಲದೆ, ವಾರ್ಷಿಕ ತೆರಿಗೆಗೆ ಒಳಪಡುವ ಆದಾಯ 5 ಲಕ್ಷ ರೂಪಾಯಿ ಮೀರದ ತೆರಿಗೆದಾರರಿಗೆ ತೆರಿಗೆ ವಿನಾಯಿತಿ ಮಿತಿಯನ್ನು 2,500 ರಿಂದ 12,500 ಕ್ಕೆ ಹೆಚ್ಚಿಸಿದ್ದರು.

ಇಂದಿರಾ ಗಾಂಧಿ ನಂತರದ ಮಹಿಳಾ ಹಣಕಾಸು ಸಚಿವೆ

2019 ರ ಸಾರ್ವತ್ರಿಕ ಚುನಾವಣೆಯ ನಂತರ ಎರಡನೇ ಅವಧಿಯಲ್ಲಿ ಸೀತಾರಾಮನ್ ಅವರಿಗೆ ಹಣಕಾಸು ಇಲಾಖೆಯ ಜವಾಬ್ದಾರಿಯನ್ನು ಮೋದಿ ಸರ್ಕಾರ ವಹಿಸಿತು. ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ನಂತರ ಬಜೆಟ್ ಮಂಡಿಸಿದ ಎರಡನೇ ಮಹಿಳೆ ಎಂಬ ಹೆಗ್ಗಳಿಕೆಗೆ ನಿರ್ಮಲಾ ಸೀತಾರಾಮನ್ ಪಾತ್ರರಾದರು. ಇಂದಿರಾ ಗಾಂಧಿಯವರು 1970-71ರ ಆರ್ಥಿಕ ವರ್ಷದ ಬಜೆಟ್ ಮಂಡಿಸಿದ್ದರು.

ಒಟ್ಟು 10 ಬಾರಿ ಬಜೆಟ್ ಮಂಡಿಸಿದ್ದ ಮೊರಾರ್ಜಿ ದೇಸಾಯಿ

ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅವರು ಗರಿಷ್ಠ 10 ಬಾರಿ ಬಜೆಟ್ ಮಂಡಿಸಿದ್ದಾರೆ. ದೇಶದ ಈವರೆಗಿನ ಹಣಕಾಸು ಸಚಿವರ ಪೈಕಿ ಅತಿಹೆಚ್ಚು ಬಾರಿ ಬಜೆಟ್ ಮಂಡಿಸಿದ ದಾಖಲೆ ಇವರದ್ದಾಗಿದೆ. ಇದರಲ್ಲಿ, ಸತತ ಐದು ಪೂರ್ಣ ಬಜೆಟ್ ಮತ್ತು ಒಂದು ಮಧ್ಯಂತರ ಬಜೆಟ್ ಮಂಡಿಸಿದ್ದಾರೆ. ಸ್ವತಂತ್ರ ಭಾರತದ ಮೊದಲ ಬಜೆಟ್ ಅನ್ನು ಮೊದಲ ಹಣಕಾಸು ಸಚಿವ ಆರ್ ಕೆ ಷಣ್ಮುಖಂ ಚೆಟ್ಟಿ ಮಂಡಿಸಿದ್ದರು.

ಇದನ್ನೂ ಓದಿ: ಬಜೆಟ್ ಪದ ಬಳಕೆ ಆರಂಭವಾಗಿದ್ದು ಹೇಗೆ? ಆಯವ್ಯಯದ ಬಗ್ಗೆ ಇಲ್ಲಿದೆ ಆಸಕ್ತಿದಾಯಕ ಮಾಹಿತಿ

ಈ ಬಾರಿ ನಿರ್ಮಲಾ ಸೀತಾರಾಮನ್ ಅವರು ತಮ್ಮ ಆರನೇ ಬಜೆಟ್ ಅನ್ನು ಮಂಡಿಸುತ್ತಿದ್ದು, ಗ್ರಾಮೀಣ ಪ್ರದೇಶಗಳನ್ನು ಉತ್ತೇಜಿಸಲು ಕೆಲವು ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂದು ನಿರೀಕ್ಷಿಸಲಾಗಿದೆ.

ಭಾರತವು 2027-28ರ ವೇಳೆಗೆ 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಮತ್ತು 2047 ರ ವೇಳೆಗೆ 30 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗುವ ಗುರಿಯೊಂದಿಗೆ ಮುನ್ನಡೆಯುತ್ತಿದೆ.

ಇನ್ನಷ್ಟು ಬಜೆಟ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ