Economic Survey: ಶೇ 6ರಿಂದ 6.8ರ ಜಿಡಿಪಿ ಬೆಳವಣಿಗೆ ಮುನ್ಸೂಚನೆ ನೀಡಿದ ಆರ್ಥಿಕ ಸಮೀಕ್ಷೆ; ಮೂರು ವರ್ಷಗಳಲ್ಲೇ ನಿಧಾನ

2023-24ನೇ ಸಾಲಿನಲ್ಲಿ ದೇಶದ ಜಿಡಿಪಿ ಬೆಳವಣಿಗೆ ದರ ಶೇ 6ರಿಂದ 6.8ರಷ್ಟಿರಲಿದೆ ಎಂದು ಆರ್ಥಿಕ ಸಮೀಕ್ಷೆ ಮುನ್ಸೂಚನೆ ನೀಡಿದೆ. ಇದು ಕಳೆದ ಮೂರು ವರ್ಷಗಳಲ್ಲೇ ನಿಧಾನಗತಿಯ ಜಿಡಿಪಿ ಬೆಳವಣಿಗೆ ಎಂದು ಅಂದಾಜಿಸಲಾಗಿದೆ.

Economic Survey: ಶೇ 6ರಿಂದ 6.8ರ ಜಿಡಿಪಿ ಬೆಳವಣಿಗೆ ಮುನ್ಸೂಚನೆ ನೀಡಿದ ಆರ್ಥಿಕ ಸಮೀಕ್ಷೆ; ಮೂರು ವರ್ಷಗಳಲ್ಲೇ ನಿಧಾನ
ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆಯನ್ನು ಸಂಸತ್​ನಲ್ಲಿ ಮಂಡನೆ ಮಾಡಿದರು (ಚಿತ್ರ ಕೃಪೆ: ಸಂಸದ್ ಟಿವಿ)
Follow us
Ganapathi Sharma
|

Updated on:Jan 31, 2023 | 3:01 PM

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಪ್ರಸಕ್ತ ಹಣಕಾಸು ವರ್ಷದ (2022-23) ಆರ್ಥಿಕ ಸಮೀಕ್ಷೆಯನ್ನು (Economic Survey) ಸಂಸತ್​ನಲ್ಲಿ ಮಂಡನೆ ಮಾಡಿದರು. 2023-24ನೇ ಸಾಲಿನಲ್ಲಿ ದೇಶದ ಜಿಡಿಪಿ ಬೆಳವಣಿಗೆ ದರ (GDP growth) ಶೇ 6ರಿಂದ 6.8ರಷ್ಟಿರಲಿದೆ ಎಂದು ಸಮೀಕ್ಷೆ ಮುನ್ಸೂಚನೆ ನೀಡಿದೆ. ಇದು ಕಳೆದ ಮೂರು ವರ್ಷಗಳಲ್ಲೇ ನಿಧಾನಗತಿಯ ಜಿಡಿಪಿ ಬೆಳವಣಿಗೆ ಎಂದು ಅಂದಾಜಿಸಲಾಗಿದೆ. ಈ ಹಿಂದೆ 2023-24ನೇ ಸಾಲಿನಲ್ಲಿ ದೇಶದ ಜಿಡಿಪಿ ಬೆಳವಣಿಗೆ ದರ ಶೇ 7 ಇರಬಹುದು ಎಂದು ಅಂದಾಜಿಸಲಾಗಿತ್ತು. ಪ್ರಸಕ್ತ ಹಣಕಾಸು ವರ್ಷಕ್ಕೆ ಹೋಲಿಸಿದರೆ ಮುಂದಿನ ಹಣಕಾಸು ವರ್ಷದ ಜಿಡಿಪಿ ಬೆಳವಣಿಗೆ ದರದ ಮುನ್ಸೂಚನೆ ತುಸು ಕಡಿಮೆ ಇದ್ದರೂ ವಿಶ್ವದ ಅತಿದೊಡ್ಡ ಆರ್ಥಿಕತೆಗಳ ಪೈಕಿ ಭಾರತವು ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ದೇಶವಾಗಿ ಹೊರಹೊಮ್ಮಿದೆ ಎಂದು ಆರ್ಥಿಕ ಸಮೀಕ್ಷೆ ತಿಳಿಸಿದೆ.

‘ಈ ಮುನ್ಸೂಚನೆಯನ್ನು ವಿಶ್ವಬ್ಯಾಂಕ್, ಐಎಂಎಫ್, ಎಡಿಬಿ ಹಾಗೂ ದೇಶೀಯವಾಗಿ ಆರ್​ಬಿಐನಂಥ ಸಂಸ್ಥೆಗಳು ನೀಡಿರುವ ಮುನ್ಸೂಚನೆ ಜತೆಗೆ ಸ್ಥೂಲವಾಗಿ ಹೋಲಿಕೆ ಮಾಡಬಹುದಾಗಿದೆ. ಒಟ್ಟಾರೆ ಜಿಡಿಪಿ ಬೆಳವಣಿಗೆ ಶೇ 6ರಿಂದ 6.8ರಷ್ಟಿರಲಿದೆ. ಇದು ಜಾಗತಿಕ ಆರ್ಥಿಕ ಮತ್ತು ರಾಜಕೀಯ ಪರಿಸ್ಥಿತಿಗಳನ್ನು ಅವಲಂಬಿಸಿರಲಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ದೇಶದ ಜಿಡಿಪಿ ಬೆಳವಣಿಗೆ ದರ ಶೇ 7ರಷ್ಟು ಅಂದಾಜಿಸಲಾಗಿದೆ. ಹಿಂದಿನ ಹಣಕಾಸು ವರ್ಷದಲ್ಲಿ ಶೇ 8ರಷ್ಟಿತ್ತು. ಇದಕ್ಕೆ ಹೋಲಿಸಿದರೆ ಮುಂದಿನ ವರ್ಷದ ಬೆಳವಣಿಗೆ ದರ ಕಡಿಮೆ ಇರಲಿರುವುದು ನಿಜ’ ಎಂದು ಸಮೀಕ್ಷೆ ಉಲ್ಲೇಖಿಸಿದೆ.

ಇದನ್ನೂ ಓದಿ: Economic Survey 2023 Highlights: ಆರ್ಥಿಕ ಸಮೀಕ್ಷೆಯಲ್ಲಿ ಸರ್ಕಾರ ಹೇಳಿದ್ದೇನು? ಇಲ್ಲಿವೆ ಮುಖ್ಯಾಂಶಗಳು

ಭಾರತಕ್ಕೆ ಹರಿದುಬರಲಿದೆ ವಿದೇಶಿ ಹೂಡಿಕೆ

ಕೋವಿಡ್ ಸಾಂಕ್ರಾಮಿಕ ಮತ್ತು ಇತರ ಜಾಗತಿಕ ಪರಿಸ್ಥಿತಿಗಳ ಕಾರಣದಿಂದಾಗಿ ಮುಂದಿನ ದಿನಗಳಲ್ಲಿ ವಿದೇಶಿ ಹೂಡಿಕೆ ದೇಶದತ್ತ ಹರಿದುಬರಲಿದೆ ಎಂದು ಆರ್ಥಿಕ ಸಮೀಕ್ಷೆ ಉಲ್ಲೇಖಿಸಿದೆ. ಅಭಿವೃದ್ಧಿಹೊಂದಿದ ದೇಶಗಳಲ್ಲಿ ಸೃಷ್ಟಿಯಾಗಿರುವ ಆರ್ಥಿಕ ಹಿಂಜರಿತದಂಥ ಪರಿಸ್ಥಿತಿ, ಹೆಚ್ಚುತ್ತಿರುವ ಹಣದುಬ್ಬರ ಮತ್ತು ಟೆಕ್ ಕಂಪನಿಗಳಲ್ಲಿನ ಉದ್ಯೋಗ ಕಡಿತವು ಭಾರತದ ಕಂಪನಿಗಳ ಮೇಲೆ ಹೂಡಿಕೆ ಹೆಚ್ಚಾಗಲು ಕಾರಣವಾಗಲಿದೆ ಎಂದು ಆರ್ಥಿಕ ಸಮೀಕ್ಷೆಯಲ್ಲಿ ಹೇಳಲಾಗಿದೆ.

ಕೋವಿಡ್​​​ ಸಾಂಕ್ರಾಮಿಕದಿಂದ ಕ್ಷಿಪ್ರ ಚೇತರಿಕೆ

ಕೋವಿಡ್ ಸಾಂಕ್ರಾಮಿಕದಿಂದ ಭಾರತವು ಕ್ಷಿಪ್ರವಾಗಿ ಚೇತರಿಸಿಕೊಂಡಿದೆ. ದೇಶೀಯ ಬೇಡಿಕೆ ಮತ್ತು ಬಂಡವಾಳ ಹೂಡಿಕೆಯ ಪುನಶ್ಚೇತನಗೊಂಡಿವೆ. ಪರಿಣಾಮವಾಗಿ ಆರ್ಥಿಕ ಬೆಳವಣಿಗೆಯಾಗುತ್ತಿದೆ. ಆದಾಗ್ಯೂ, ಅಪಾಯ ಹೆಚ್ಚಿನ ಮಟ್ಟದಲ್ಲಿದೆ. ದೀರ್ಘಾವಧಿಯ ಹಣದುಬ್ಬರವು ಅನೇಕ ದೇಶಗಳ ಕೇಂದ್ರೀಯ ಬ್ಯಾಂಕ್​ಗಳು ಬಡ್ಡಿ ದರ ಹೆಚ್ಚಿಸಲು ಕಾರಣವಾಗಿದೆ. ಪರಿಣಾಮವಾಗಿ ಆಧುನಿಕ ಆರ್ಥಿಕತೆಗಳಲ್ಲಿ ಆರ್ಥಿಕ ಚಟುವಟಿಕೆಗಳು ಕುಂಠಿತಗೊಂಡಿವೆ ಎಂದು ಸಮೀಕ್ಷಾ ವರದಿ ತಿಳಿಸಿದೆ.

ಇದನ್ನೂ ಓದಿ: IMF on India Growth: ಭಾರತದ ಆರ್ಥಿಕತೆ ಉಜ್ವಲವಾಗಿದೆ; ಭಾರತದ ಪ್ರಗತಿ ಬಗ್ಗೆ ಭರವಸೆ ಹೆಚ್ಚಿಸಿದ ಐಎಂಎಫ್ ವರದಿ

ಮುಂದಿನ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕತೆಯ ಪ್ರಗತಿ ದರ ತುಸು ಕುಂಠಿತವಾಗಬಹುದು ಎಂದು ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆ ಹೇಳಿದ ಬೆನ್ನಲ್ಲೇ ಆರ್ಥಿಕ ಸಮೀಕ್ಷಾ ವರದಿ ಭರವಸೆಯ ಮುನ್ಸೂಚನೆ ನೀಡಿದೆ. ಇದೇ ಮಾರ್ಚ್ 31ಕ್ಕೆ ಅಂತ್ಯಗೊಳ್ಳುವ ಪ್ರಸಕ್ತ ಸಾಲಿನ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕ ಪ್ರಗತಿ ದರ ಶೇ 6.8 ಇರಲಿದೆ ಎಂದಿದ್ದ ಐಎಂಎಫ್ ವರದಿ, ಮುಂದಿನ ಹಣಕಾಸು ವರ್ಷದಲ್ಲಿ (2023-24) ಪ್ರಗತಿ ದರವು ಶೇ 6.1ಕ್ಕೆ ಇಳಿಯಬಹುದು ಎಂದು ಅಂದಾಜಿಸಿತ್ತು. ಆದರೆ, ದೇಶದ ಆರ್ಥಿಕ ಸಮೀಕ್ಷೆ ಹೆಚ್ಚಿನ ಭರವಸೆ ವ್ಯಕ್ತಪಡಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:27 pm, Tue, 31 January 23

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು