AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2026: 1 ಗಂಟೆ 26 ನಿಮಿಷಗಳ ಕಾಲ ಬಜೆಟ್​​ ಮಂಡಿಸಿದ ವಿತ್ತ ಸಚಿವೆ; ಆಯವ್ಯಯ ಮಂಡನೆಯಲ್ಲೂ ದಾಖಲೆ

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿ ದಾಖಲೆ ನಿರ್ಮಿಸಿದ್ದಾರೆ. ಇದು ಅವರ 9ನೇ ಆಯವ್ಯಯ ಮಂಡನೆಯಾಗಿದ್ದು, ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಸತತ ಬಜೆಟ್ ಮಂಡಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ. 53.47 ಲಕ್ಷ ಕೋಟಿ ಮೌಲ್ಯದ ಈ ಬಜೆಟ್‌ನಲ್ಲಿ ಹಲವು ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ.

Budget 2026: 1 ಗಂಟೆ 26 ನಿಮಿಷಗಳ ಕಾಲ ಬಜೆಟ್​​ ಮಂಡಿಸಿದ ವಿತ್ತ ಸಚಿವೆ; ಆಯವ್ಯಯ ಮಂಡನೆಯಲ್ಲೂ ದಾಖಲೆ
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​​Image Credit source: Google
ಪ್ರಸನ್ನ ಹೆಗಡೆ
| Edited By: |

Updated on:Feb 01, 2026 | 2:33 PM

Share

ನವದೆಹಲಿ, ಫೆ.01: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​​ 2026-27ನೇ ಸಾಲಿನ ಕೇಂದ್ರ ಬಜೆಟ್​​ ಮಂಡಿಸಿ ಹೊಸ ದಾಖಲೆ ಬರೆದಿದ್ದಾರೆ. ಫೆಬ್ರವರಿ 2024ರ ಮಧ್ಯಂತರ ಬಜೆಟ್ ಸೇರಿದಂತೆ ಒಟ್ಟು 9 ಆಯವ್ಯಯವನ್ನು ಅವರು ಮಂಡಿಸಿದ್ದು, ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಸತತವಾಗಿ ಕೇಂದ್ರ ಬಜೆಟ್ ಮಂಡಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಅವರು ಮಂಡಿಸಿರುವ ಬಜೆಟ್​​ 53.47 ಲಕ್ಷ ಕೋಟಿ ಮೌಲ್ಯದ್ದಾಗಿದೆ.

ಇಂದು 1 ಗಂಟೆ 26 ನಿಮಿಷಗಳ ಕಾಲ ಬಜೆಟ್​​ ಮಂಡಿಸಿರುವ ವಿತ್ತ ಸಚಿವರು, ಹಲವು ಪ್ರಮುಖ ವಿಚಾರಗಳನ್ನು ಘೋಷಿಸಿದ್ದಾರೆ. ಹಿಂದಿನ ಬಜೆಟ್​​ ಮಂಡನೆಗಳಲ್ಲಿ ವಿತ್ತ ಸಚಿವರು ತೆಗೆದುಕೊಂಡಿದ್ದ ಸಮಯದ ಮಾಹಿತಿ ಇಲ್ಲಿದೆ.

  • 2025-26 – 1 ಗಂಟೆ 14 ನಿಮಿಷ
  • 2024-25 – 1 ಗಂಟೆ 25 ನಿಮಿಷ
  • 2024 (ಮಧ್ಯಂತರ ಬಜೆಟ್​​) – 56 ನಿಮಿಷ
  • 2023-24- 1 ಗಂಟೆ 27 ನಿಮಿಷ
  • 2022-23 – 1 ಗಂಟೆ 32 ನಿಮಿಷ
  • 2021-22 – 1 ಗಂಟೆ and 40 ನಿಮಿಷ
  • 2020-21- 2 ಗಂಟೆ and 42 ನಿಮಿಷ

ಇದನ್ನೂ ಓದಿ: ಚುನಾವಣಾ ರಾಜ್ಯಗಳಿಗೆ ಬಜೆಟ್​​ನಲ್ಲಿ ಭರ್ಜರಿ ಕೊಡುಗೆ, ಏನೇನು ಸಿಕ್ತು ನೋಡಿ

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಎರಡನೇ ಅವಧಿಯಲ್ಲಿ ಅಂದರೆ 2019ರಲ್ಲಿ ನಿರ್ಮಲಾ ಸೀತಾರಾಮನ್ ಅವರು ದೇಶದ ಮೊದಲ ಪೂರ್ಣಾವಧಿಯ ಮಹಿಳಾ ಹಣಕಾಸು ಸಚಿವೆಯಾಗಿದ್ದರು. 2024ರಲ್ಲಿ ಮೂರನೇ ಅವಧಿಗೆ ಅಧಿಕಾರಕ್ಕೆ ಮೋದಿ ಸರ್ಕಾರದಲ್ಲಿಯೂ ಅವರಿಗೆ ಇದೇ ಇಲಾಖೆಯ ಜವಾಬ್ದಾರಿ ಸಿಕ್ಕಿತ್ತು. ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ವಿವಿಧ ಅವಧಿಗಳಲ್ಲಿ ಒಟ್ಟು 10 ಬಜೆಟ್​​ ಮಂಡಿಸಿದ್ದರೆ, ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ 9 ಬಾರಿ ಬಜೆಟ್ ಮಂಡಿಸಿದ್ದರು. ಭಾರತದ ಹಣಕಾಸು ಸಚಿವರಾಗಿದ್ದಾಗ ಪ್ರಣಬ್ ಮುಖರ್ಜಿ ಕೂಡ 8 ಬಾರಿ ಬಜೆಟ್ ಮಂಡಿಸಿದ್ದು, ನಿರ್ಮಲಾ ಸೀತಾರಾಮನ್​​ ಅವರು ಮೊರಾರ್ಜಿ ದೇಸಾಯಿ ಅವರ ದಾಖಲೆ ಬ್ರೇಕ್​​ ಮಾಡುವ ಸನಿಹದಲ್ಲಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 2:22 pm, Sun, 1 February 26

ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?