AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್ ಬೆಲೆ ಏರಿಕೆ ಸಾಧ್ಯತೆಯನ್ನು ತಳ್ಳಿ ಹಾಕಿದ ಸರ್ಕಾರ

Govt Rejects Reports Of Petrol, Diesel Price Hike: ಪೆಟ್ರೋಲ್ ಬೆಲೆ ಏರಿಕೆ ಆಗಬಹುದು ಎಂದು ಇಂದು ಬೆಳಗ್ಗೆ ಮಾಧ್ಯಮಗಳಲ್ಲಿ ಬಂದ ಸುದ್ದಿಯನ್ನು ಸರ್ಕಾರ ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿದೆ. ಪೆಟ್ರೋಲ್, ಡೀಸಲ್ ಬೆಲೆ ಏರಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಸಚಿವಾಲಯವು ಹೇಳಿದೆ. ಕೋಟಕ್ ಇನ್ಸ್​ಟಿಟ್ಯೂಶನಲ್ ಈಕ್ವಿಟೀಸ್ ಸಂಸ್ಥೆಯು ಚುನಾವಣೆ ಬಳಿಕ ಪೆಟ್ರೋಲ್, ಡೀಸಲ್ ಬೆಲೆ ಏರಿಸಬಹುದು ಎಂದು ತನ್ನ ವರದಿಯಲ್ಲಿ ಹೇಳಿತ್ತು.

ಪೆಟ್ರೋಲ್ ಬೆಲೆ ಏರಿಕೆ ಸಾಧ್ಯತೆಯನ್ನು ತಳ್ಳಿ ಹಾಕಿದ ಸರ್ಕಾರ
ಪೆಟ್ರೋಲ್ ಪಂಪ್Image Credit source: AI/Mediaforge/TV9
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Apr 23, 2026 | 12:36 PM

Share

ನವದೆಹಲಿ, ಏಪ್ರಿಲ್ 23: ಕೆಲ ರಾಜ್ಯಗಳ ವಿಧಾನಸಭಾ ಚುನಾವಣೆ ನಂತರ ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳು (Petrol and Diesel Prices) ಏರಿಕೆ ಆಗಲಿವೆ ಎನ್ನುವಂತಹ ಸುದ್ದಿ ಕೆಲ ಮಾಧ್ಯಮಗಳಲ್ಲಿ ಪ್ರಕಟವಾಗಿದ್ದು, ಸರ್ಕಾರ ತತ್​ಕ್ಷಣವೇ ಈ ವಿಚಾರದಲ್ಲಿ ಪ್ರತಿಕ್ರಿಯಿಸಿದೆ. ಪೆಟ್ರೋಲ್ ಬೆಲೆ ಏರಿಕೆಯ ಯಾವ ಸಾಧ್ಯತೆಯೂ ಇಲ್ಲ ಎಂದು ಹೇಳಿರುವ ಪೆಟ್ರೋಲಿಯಂ ಸಚಿವಾಲಯ, ಮಾಧ್ಯಮಗಳಲ್ಲಿ ಬಂದ ವರದಿಯನ್ನು ತಳ್ಳಿ ಹಾಕಿದೆ.

‘ಪೆಟ್ರೋಲ್ ಮತ್ತು ಡೀಸಲ್ ಬೆಲೆ ಏರಿಕೆ ಮಾಡಬಹುದು ಎಂದು ಕೆಲ ವರದಿಗಳು ಹೇಳಿವೆ. ಇಂಥ ಯಾವುದೇ ಪ್ರಸ್ತಾವವು ಸರ್ಕಾರದ ಪರಿಗಣನೆಯಲ್ಲಿ ಇಲ್ಲ. ಜನರಿಗೆ ಭಯ ಮತ್ತು ಆತಂಕ ಹುಟ್ಟಿಸಲು ಈ ವರದಿಗಳನ್ನು ಸೃಷ್ಟಿಸಲಾಗಿದೆ’ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಟ್ವೀಟ್ ಮಾಡಿದೆ.

ಪೆಟ್ರೋಲಿಯಂ ಸಚಿವಾಲಯದ ಎಕ್ಸ್ ಪೋಸ್ಟ್

ಇದನ್ನೂ ಓದಿ: ಮೇ 1ರಿಂದ ಹೊಸ ಗೇಮಿಂಗ್ ರೂಲ್ಸ್; ಆಟಗಾರರಿಗೆ ಬದಲಾವಣೆಗಳೇನು? ಇಲ್ಲಿದೆ ಡೀಟೇಲ್ಸ್

ಮಾಧ್ಯಮಗಳಲ್ಲಿ ಬಂದ ವರದಿ ಏನು ಹೇಳಿದೆ?

ಚುನಾವಣೆಗಳ ಬಳಿಕ ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳಲ್ಲಿ ಲೀಟರ್​ಗೆ 25-28 ರೂನಷ್ಟು ಏರಿಕೆ ಮಾಡುವ ಸಾಧ್ಯತೆ ಇದೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು. ಕೋಟಕ್ ಇನ್ಸ್​ಟಿಟ್ಯೂಶನಲ್ ಈಕ್ವಿಟೀಸ್ ಸಂಸ್ಥೆಯ ಅಭಿಪ್ರಾಯ ಉಲ್ಲೇಖಿಸಿ ಈ ವರದಿ ಬರೆಯಲಾಗಿದೆ. ಜಾಗತಿಕವಾಗಿ ಕಚ್ಚಾ ತೈಲ ಬೆಲೆಗಳು ಹೆಚ್ಚಾಗಿವೆ. ಆದರೆ, ದೇಶದಲ್ಲಿ ರೀಟೇಲ್ ಇಂಧನ ಬೆಲೆಯಲ್ಲಿ ಏರಿಕೆ ಆಗಿಲ್ಲ. ಇದರಿಂದ ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳಿಗೆ ತಿಂಗಳಿಗೆ 27,000 ಕೋಟಿ ರೂ ಹೆಚ್ಚುವರಿ ಹೊರೆ ಆಗುತ್ತಿದೆ ಎಂದು ಕೋಟಕ್​ನ ಈ ವರದಿಯಲ್ಲಿ ವಿಶ್ಲೇಷಿಸಲಾಗಿತ್ತು.

ಸರ್ಕಾರ ಇತ್ತೀಚೆಗೆ ಪೆಟ್ರೋಲ್ ಮತ್ತು ಡೀಸಲ್ ಮೇಲೆ ಅಬಕಾರಿ ಸುಂಕವನ್ನು ಕಡಿತಗೊಳಿಸಿರುವ ಕ್ರಮ ಉಲ್ಲೇಖಿಸಿದ ಕೋಟಕ್ ಇನ್ಸ್​ಟಿಟ್ಯೂಶನಲ್ ಈಕ್ವಿಟೀಸ್​ನ ವರದಿಯು, ಈ ಸುಂಕ ಕಡಿತದಿಂದ ತೈಲ ಕಂಪನಿಗಳಿಗೆ ಒಂದಷ್ಟು ರಿಲೀಫ್ ಕೊಟ್ಟಿವೆಯಾದರೂ, ದೀರ್ಘಕಾಲದ ಪರಿಹಾರ ಸಿಕ್ಕಿಲ್ಲ. ಹೀಗಾಗಿ, ಪೆಟ್ರೋಲ್, ಡೀಸಲ್ ಬೆಲೆ ಏರಿಸಬೇಕಾಗಬಹುದು ಎಂದು ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಜಾಗತಿಕ ಆಘಾತಗಳಿಗೆ ಭಾರತದ 3 ಆರ್ಥಿಕ ರಕ್ಷಾ ಕವಚಗಳು: ಫಿಚ್ ಬಿಎಂಐ ವಿಶ್ಲೇಷಣೆ

ಆದರೆ, ಇಂಧನ ಬೆಲೆ ಏರಿಕೆ ಸಾಧ್ಯತೆಯನ್ನು ಸರ್ಕಾರ ಬಲವಾಗಿ ತಳ್ಳಿಹಾಕಿದೆ. ‘ಕಳೆದ 5 ವರ್ಷದಲ್ಲಿ ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳನ್ನು ಏರಿಸದೇ ಇರುವ ಏಕೈಕ ದೇಶ ಭಾರತ. ಅಂತಾರಾಷ್ಟ್ರೀಯ ದರಗಳು ಗಣನೀಯವಾಗಿ ಏರಿಕೆಯಾದರೂ ಭಾರತೀಯ ನಾಗರಿಕರಿಗೆ ಅದರ ಬಿಸಿ ತಾಗದಂತೆ ಭಾರತ ಸರ್ಕಾರ ಹಾಗೂ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ನಿರಂತರವಾಗಿ ಕ್ರಮಗಳನ್ನು ಕೈಗೊಳ್ಳುತ್ತಿವೆ’ ಎಂದು ಪೆಟ್ರೋಲಿಯಂ ಸಚಿವಾಲಯವು ತನ್ನ ಟ್ವೀಟ್​ನಲ್ಲಿ ಹೇಳಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:32 pm, Thu, 23 April 26

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ