AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ಸಾವಿರ ರೂವರೆಗಿನ ಯುಪಿಐ ಪಾವತಿಗೆ ಇರೋದಿಲ್ಲ ಯಾವುದೇ ಶುಲ್ಕ; ಕೇಂದ್ರದಿಂದ ಪೇಮೆಂಟ್ಸ್ ಕಾಯ್ದೆಗೆ ತಿದ್ದುಪಡಿ

ಯುಪಿಐ ವಹಿವಾಟುಗಳ ಮೇಲೆ ಎಂಡಿಆರ್ ಶುಲ್ಕ ವಿಧಿಸಲಾಗುತ್ತದೆ ಎನ್ನುವ ವದಂತಿಗೆ ಸರ್ಕಾರ ತೆರೆ ಎಳೆದಿದೆ. ಪೇಮೆಂಟ್ಸ್ ಕಾಯ್ದೆಗೆ ತಂದಿರುವ ತಿದ್ದುಪಡಿ ಪ್ರಕಾರ, 2,000 ರೂವರೆಗಿನ ಯುಪಿಐ ವಹಿವಾಟು ಮೇಲೆ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ. 2,000 ರೂ ಮೇಲ್ಪಟ್ಟ ಪೇಮೆಂಟ್​ಗೆ ಎಂಡಿಆರ್ ವಿಧಿಸುವ ಅವಕಾಶ ನೀಡಲಾಗಿದೆ. ಆದರೆ, ಇನ್ನೂ ಶುಲ್ಕ ನಿಗದಿಯಾಗಿಲ್ಲ.

ಎರಡು ಸಾವಿರ ರೂವರೆಗಿನ ಯುಪಿಐ ಪಾವತಿಗೆ ಇರೋದಿಲ್ಲ ಯಾವುದೇ ಶುಲ್ಕ; ಕೇಂದ್ರದಿಂದ ಪೇಮೆಂಟ್ಸ್ ಕಾಯ್ದೆಗೆ ತಿದ್ದುಪಡಿ
ಯುಪಿಐ ಪೇಮೆಂಟ್Image Credit source: Getty Images
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Sep 15, 2026 | 3:39 PM

Share

ನವದೆಹಲಿ, ಸೆಪ್ಟೆಂಬರ್ 15: ಯುಪಿಐ (UPI) ವಹಿವಾಟುಗಳ ಮೇಲೆ ಶುಲ್ಕ ವಿಧಿಸಲಾಗುತ್ತದೆ ಎಂಬ ವದಂತಿಗಳಿಗೆ ಕೇಂದ್ರ ಹಣಕಾಸು ಸಚಿವಾಲಯ ತೆರೆ ಎಳೆದಿದೆ. ಪೇಮೆಂಟ್ ಅಂಡ್ ಸೆಟಲ್‌ಮೆಂಟ್ ಸಿಸ್ಟಮ್ಸ್ ಕಾಯ್ದೆಯ ಸೆಕ್ಷನ್ 10A ಅಡಿಯಲ್ಲಿ ಹೊಸ ಅಧಿಸೂಚನೆ ಹೊರಡಿಸಲಾಗಿದೆ. ₹2,000 ವರೆಗಿನ ಯುಪಿಐ ಹಾಗೂ ರೂಪೇ (RuPay) ಡೆಬಿಟ್ ಕಾರ್ಡ್ ವಹಿವಾಟುಗಳಿಗೆ ಯಾವುದೇ ಬ್ಯಾಂಕ್ ಅಥವಾ ಪಾವತಿ ಸಂಸ್ಥೆಗಳು ಯಾವುದೇ ಶುಲ್ಕ ವಿಧಿಸುವಂತಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಸುಸ್ಥಿರಗೊಳಿಸಲು ಮತ್ತು ಮೂಲಸೌಕರ್ಯ ನಿರ್ವಹಣೆಗೆ ಸಹಾಯ ಮಾಡಲು ಈ ತಿದ್ದುಪಡಿ ತರಲಾಗಿದ್ದು, ಸಾರ್ವಜನಿಕರು ಯಾವುದೇ ಗೊಂದಲಕ್ಕೊಳಗಾಗುವ ಅಗತ್ಯವಿಲ್ಲ ಎಂದು ಸರ್ಕಾರ ತಿಳಿಸಿದೆ.

ಈ ಕಾಯ್ದೆ ಪ್ರಕಾರ, ಗೂಗಲ್ ಪೇ, ಫೋನ್ ಪೇ, ಭೀಮ್ ಅಥವಾ ಇತರ ಯುಪಿಐ ಆಪ್‌ಗಳ ಮೂಲಕ ಮಾಡುವ ₹2,000 ವರೆಗಿನ ವಹಿವಾಟುಗಳಿಗೆ ಯಾವುದೇ ನೇರ ಅಥವಾ ಪರೋಕ್ಷ ಶುಲ್ಕಗಳು ಅನ್ವಯಿಸುವುದಿಲ್ಲ. ರೂಪೇ ಡೆಬಿಟ್ ಕಾರ್ಡ್ ಮೂಲಕ ನಡೆಸುವ ಪಾವತಿಗಳಿಗೂ ಈ ವಿನಾಯಿತಿ ಅನ್ವಯಿಸುತ್ತದೆ.

ಇದನ್ನೂ ಓದಿ: ಸೆಮಿಕಾನ್ ಇಂಡಿಯಾ 2026, ಮೂರು ದಿನಗಳ ಮಹಾಮೇಳಕ್ಕೆ ಸೆ. 17ರಂದು ಪ್ರಧಾನಿ ಮೋದಿ ಚಾಲನೆ; ಭಾರತದ ‘ಚಿಪ್’ ಕ್ರಾಂತಿ ಅನಾವರಣ

ಸಾರ್ವಜನಿಕರಿಗೆ/ಗ್ರಾಹಕರಿಗೆ ಉಚಿತ ಸೇವೆ: ಬೀದಿ ಬದಿ ವ್ಯಾಪಾರಿಗಳು, ಸಣ್ಣ ಅಂಗಡಿಕಾರರು, ಟ್ಯಾಕ್ಸಿ ಚಾಲಕರು ಮತ್ತು ಸಾಮಾನ್ಯ ಗ್ರಾಹಕರಿಗೆ ಯುಪಿಐ ಸೇವೆ ಸಂಪೂರ್ಣ ಉಚಿತವಾಗಿ ಮುಂದುವರಿಯಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ.

₹2,000 ಕ್ಕಿಂತ ಹೆಚ್ಚಿನ ವಹಿವಾಟಿಗೆ ಏನು ನಿಯಮ?

₹2,000 ಕ್ಕಿಂತ ಹೆಚ್ಚಿನ ಬೃಹತ್ ವಹಿವಾಟುಗಳ ಮೇಲೆ ಎಂಡಿಆರ್ ದರ ಅಥವಾ ಮರ್ಚೆಂಟ್ ಡಿಸ್ಕೌಂಟ್ ರೇಟ್ (MDR) ಅನ್ವಯಿಸುವ ನಿಬಂಧನೆಯನ್ನು ಕಾಯ್ದೆಯಲ್ಲಿ ತರಲಾಗಿದೆಯಾದರೂ, ಈ ಬಗ್ಗೆ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ.

ಒಂದು ವೇಳೆ ಭವಿಷ್ಯದಲ್ಲಿ ಶುಲ್ಕ ಜಾರಿಗೆ ಬಂದರೂ, ಅದನ್ನು ದೊಡ್ಡ ವ್ಯಾಪಾರಿಗಳು (Merchants) ಪಾವತಿಸಬೇಕಿರುತ್ತದೆಯೇ ಹೊರತು ಸಾಮಾನ್ಯ ಗ್ರಾಹಕರು ಅಥವಾ ಸಣ್ಣ ವ್ಯಾಪಾರಿಗಳ ಮೇಲಲ್ಲ.

ಇದನ್ನೂ ಓದಿ: ರೀಟೇಲ್ ಹಣದುಬ್ಬರ 37 ಮೂಲಾಂಕಗಳಷ್ಟು ಏರಿಕೆ; ಆಗಸ್ಟ್​ನಲ್ಲಿ ಚಿಲ್ಲರೆ ಹಣದುಬ್ಬರ ದರ ಶೇ. 4.82 ದಾಖಲು

ಅಂಗಡಿ ಮುಂಗಟ್ಟುಗಳಲ್ಲಿ ಕ್ರೆಡಿಟ್ ಕಾರ್ಡ್ ಬಳಸಿ ಹಣ ಪಾವತಿಸಿದಾಗ ಅದಕ್ಕೆ ಅಂಗಡಿಯವರು ಎಂಡಿಆರ್ ಶುಲ್ಕವನ್ನು ಪೇಮೆಂಟ್ ಸಂಸ್ಥೆಗಳಿಗೆ ತೆರುತ್ತಾರೆ. ಅಂತಹುದೇ ವ್ಯವಸ್ಥೆಯು ಯುಪಿಐ ಪಾವತಿಗೂ ಬರಬಹುದು. ಆದರೆ, ಸಣ್ಣ ಅಂಗಡಿಗಳನ್ನು ಈ ಶುಲ್ಕದಿಂದ ಹೊರತುಪಡಿಸಬಹುದು. ವರ್ಷಕ್ಕೆ ಇಂತಿಷ್ಟು ವ್ಯಾಪಾರ ಮಾಡುವ ವರ್ತಕರಿಗೆ ಮಾತ್ರ ಈ ಶುಲ್ಕ ವಿಧಿಸಲು ಬ್ಯಾಂಕ್ ಮತ್ತು ಪೇಮೆಂಟ್ ಸಂಸ್ಥೆಗಳಿಗೆ ಅವಕಾಶ ಕೊಡಲಾಗಬಹುದು.

ನಿರ್ಧಾರ ಯಾರದ್ದು?: ಎನ್‌ಪಿಸಿಐ (NPCI) ನೇತೃತ್ವದ ‘ಯುಪಿಐ ಆಂಡ್ ಸರ್ವಿಸಸ್ ಸ್ಟೀರಿಂಗ್ ಕಮಿಟಿ’ ಈ ಶುಲ್ಕಗಳ ಸ್ವರೂಪ ಮತ್ತು ಪ್ರಮಾಣದ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 2:07 pm, Tue, 15 September 26

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್