Indian Railways: ರೈಲುಗಳಲ್ಲಿ ಹಿರಿಯ ನಾಗರಿಕರಿಗೆ ಸದ್ಯಕ್ಕಿಲ್ಲ ರಿಯಾಯಿತಿ ದರದ ಟಿಕೆಟ್; ಕೇಂದ್ರ

ಹಿರಿಯ ನಾಗರಿಕರಿಗೆ ರಿಯಾಯಿತಿ ದರದ ಪ್ರಯಾಣ ಮರು ಜಾರಿ ಮಾಡುವ ಯೋಜನೆ ಸದ್ಯಕ್ಕಿಲ್ಲ. ಕಳೆದ ವರ್ಷ ಪ್ರಯಾಣಿಕ ಸೇವೆಗಳಿಗಾಗಿ ರೈಲ್ವೆಗೆ 59,000 ಕೋಟಿ ರೂ. ಸಬ್ಸಿಡಿ ನೀಡಲಾಗುತ್ತಿದೆ. ಪಿಂಚಣಿ ಮತ್ತು ವೇತನದ ಮೊತ್ತ ಬಹಳ ಹೆಚ್ಚಾಗಿದೆ ಎಂದು ಸರ್ಕಾರ ತಿಳಿಸಿದೆ.

Indian Railways: ರೈಲುಗಳಲ್ಲಿ ಹಿರಿಯ ನಾಗರಿಕರಿಗೆ ಸದ್ಯಕ್ಕಿಲ್ಲ ರಿಯಾಯಿತಿ ದರದ ಟಿಕೆಟ್; ಕೇಂದ್ರ
ಭಾರತೀಯ ರೈಲ್ವೆ
Follow us
| Updated By: ಗಣಪತಿ ಶರ್ಮ

Updated on: Dec 15, 2022 | 1:04 PM

ನವದೆಹಲಿ: ರೈಲುಗಳಲ್ಲಿ (Trains) ಹಿರಿಯ ನಾಗರಿಕರಿಗೆ (Senior Citizens) ರಿಯಾಯಿತಿ ದರದ ಟಿಕೆಟ್ ನೀಡುವುದನ್ನು ಸದ್ಯಕ್ಕೆ ಮರು ಜಾರಿಗೊಳಿಸುವುದಿಲ್ಲ ಎಂದು ರೈಲ್ವೆ (Indian Railway) ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ತಿಳಿಸಿದ್ದಾರೆ. ಹಿರಿಯ ನಾಗರಿಕರಿಗೆ ನೀಡಲಾಗುತ್ತಿದ್ದ ರಿಯಾಯಿತಿ ದರದ ಕೊಡುಗೆಯನ್ನು ಕೋವಿಡ್ (Covid-19) ಸಾಂಕ್ರಾಮಿಕದ ಬಳಿಕ ರೈಲ್ವೆ ಇಲಾಖೆ ಸ್ಥಗಿತಗೊಳಿಸಿತ್ತು. ಇದಕ್ಕೆ ಸಾರ್ವಜನಿಕ ವಲಯದಿಂದ ಮತ್ತು ಪ್ರತಿಪಕ್ಷಗಳಿಂದ ವಿರೋಧ ವ್ಯಕ್ತವಾಗಿತ್ತು. ಇದೀಗ ಮತ್ತೆ ಹಿರಿಯ ನಾಗರಿಕರಿಗೆ ರಿಯಾಯಿತಿ ದರದ ಪ್ರಯಾಣ ನೀಡಲಿದೆ ಎಂದು ಕೆಲವು ಮಾಧ್ಯಮಗಳು ಇತ್ತೀಚೆಗೆ ವರದಿ ಮಾಡಿದ್ದವು. ಈ ವಿಚಾರವಾಗಿ ಲೋಕಸಭೆಯಲ್ಲಿ ಮಹಾರಾಷ್ಟ್ರದ ಸಂಸದ ನವನೀತ್ ರಾಣಾಂವ್​ ಲೋಕಸಭೆಯಲ್ಲಿ ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು.

ಹಿರಿಯ ನಾಗರಿಕರಿಗೆ ರಿಯಾಯಿತಿ ದರದ ಪ್ರಯಾಣ ಮರು ಜಾರಿ ಮಾಡುವ ಯೋಜನೆ ಸದ್ಯಕ್ಕಿಲ್ಲ. ಕಳೆದ ವರ್ಷ ಪ್ರಯಾಣಿಕ ಸೇವೆಗಳಿಗಾಗಿ ರೈಲ್ವೆಗೆ 59,000 ಕೋಟಿ ರೂ. ಸಬ್ಸಿಡಿ ನೀಡಲಾಗುತ್ತಿದೆ. ಪಿಂಚಣಿ ಮತ್ತು ವೇತನದ ಮೊತ್ತ ಬಹಳ ಹೆಚ್ಚಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: IRCTC Stake Sell: ಐಆರ್​ಸಿಟಿಸಿ ಬಂಡವಾಳ ಮಾರಾಟ ಘೋಷಿಸಿದ ಸರ್ಕಾರ; ಷೇರು ಮೌಲ್ಯ ಕುಸಿತ

ರೈಲ್ವೆ ಇಲಾಖೆಯ ವಾರ್ಷಿಕ ಪಿಂಚಣಿ ಮೊತ್ತ 60,000 ಕೋಟಿ ರೂ. ಇದೆ. ಕಳೆದ ವರ್ಷ 59,000 ಕೋಟಿ ರೂ. ಸಬ್ಸಿಡಿ ನೀಡಲಾಗಿದೆ. ಇದು ಬಹಳ ದೊಡ್ಡ ಮೊತ್ತವಾಗಿದ್ದು, ಕೆಲವು ರಾಜ್ಯಗಳ ಬಜೆಟ್​ ಮೊತ್ತಕ್ಕಿಂತಲೂ ಹೆಚ್ಚಿನದ್ದಾಗಿದೆ. ಇಂಧನಕ್ಕೆ 40,000 ಕೋಟಿ ರೂ. ವ್ಯಯಿಸಲಾಗಿದೆ. ವೇತನಕ್ಕಾಗಿ 97,000 ಕೋಟಿ ರೂ. ವೆಚ್ಚವಾಗಿದೆ ಎಂದು ಅಶ್ವಿನಿ ವೈಷ್ಣವ್ ಲೋಕಸಭೆಯಲ್ಲಿ ಮಾಹಿತಿ ನೀಡಿದ್ದಾರೆ.

ದೇಶದ ಎಲ್ಲೆಡೆಯಿಂದಲೂ ಅಯೋಧ್ಯೆಗೆ ರೈಲು ಸಂಪರ್ಕ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾದ ಬಳಿಕ ದೇಶದ ಎಲ್ಲ ಕಡೆಗಳಿಂದಲೂ ಅಯೋಧ್ಯೆಯನ್ನು ಸಂಪರ್ಕಿಸಲು ರೈಲು ವ್ಯವಸ್ಥೆ ಮಾಡಲಾಗುವುದು. 41 ಪ್ರಮುಖ ರೈಲು ನಿಲ್ದಾಣಗಳ ಮರು ಅಭಿವೃದ್ಧಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಇದನ್ನು ಹಂತಹಂತವಾಗಿ ಪೂರ್ಣಗೊಳಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ರೈಲು ಟಿಕೆಟ್ ಕನ್​ಫರ್ಮ್ ಆಗಿಲ್ಲವೇ? ಈ ಆ್ಯಪ್​ನಲ್ಲಿ ಉಚಿತವಾಗಿ ಸಿಗುತ್ತೆ ಫ್ಲೈಟ್ ಟಿಕೆಟ್!

ಸದ್ಯ ವಂದೇ ಭಾರತ್ ರೈಲುಗಳು ಗರಿಷ್ಠ 500 ಕಿ.ಮೀ. ದೂರ ಕ್ರಮಿಸುತ್ತಿವೆ. ಸ್ಲೀಪಿಂಗ್ ಸೌಲಭ್ಯದ ರೈಲುಗಳು ಆರಂಭಗೊಂಡ ಬಳಿಕ ವಂದೇ ಭಾರತ್ ರೈಲುಗಳು ಹೆಚ್ಚು ದೂರ ಕ್ರಮಿಸಲು ಆರಂಭಿಸಲಿವೆ ಎಂದು ಅವರು ಹೇಳಿದ್ದಾರೆ.

2030ಕ್ಕೆ ಸಂಪೂರ್ಣ ಮಾಲಿನ್ಯಮುಕ್ತ

2030ರ ವೇಳೆಗೆ ಭಾರತೀಯ ರೈಲ್ವೆ ಸಂಪೂರ್ಣವಾಗಿ ಮಾಲಿನ್ಯ ಮುಕ್ತವಾಗಲಿದೆ. ಈ ನಿಟ್ಟಿನಲ್ಲಿ ಕೆಲಸಕಾರ್ಯಗಳು ಸಾಗುತ್ತಿವೆ. ಹೈಡ್ರೋಜನ್ ರೈಲುಗಳನ್ನು ಅಭಿವೃದ್ಧಿಪಡಿಸಲಾವಗುವುದು. ಇವುಗಳನ್ನು ಭಾರತದ ಎಂಜಿನಿಯರ್​​ಗಳೇ ವಿನ್ಯಾಸಗೊಳಿಸಲಿದ್ದಾರೆ ಎಂದು ವೈಷ್ಣವ್ ತಿಳಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್