Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಗಾನದಿಯ ನೀರು ಮತ್ತು ಪೂಜಾ ಸಾಮಗ್ರಿ ಮೇಲೆ ಶೇ. 18ರಷ್ಟು ಜಿಎಸ್​ಟಿ ಇದೆಯಾ? ಇಲ್ಲಿದೆ ಕೇಂದ್ರ ಸರ್ಕಾರ ಸ್ಪಷ್ಟನೆ

GST On Gangajal, Clarification: ಹಿಂದೂ ಮನೆಗಳಲ್ಲಿ ಬಳಸಲಾಗುವ ಪೂಜಾ ಸಾಮಗ್ರಿಗಳು, ಗಂಗಾಜಲ ಇತ್ಯಾದಿ ವಸ್ತುಗಳಿಗೆ ಶೇ. 18ರಷ್ಟು ಜಿಎಸ್​ಟಿ ಹೇರಲಾಗಿದೆ ಎಂಬಂತಹ ಸುದ್ದಿ ಕೆಲವೆಡೆ ಹಬ್ಬಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೇಂದ್ರ ಹಣಕಾಸು ಸಚಿವಾಲಯ ಕಂದಾಯ ವಿಭಾಗ, ಗಂಗಾಜಲ, ಪೂಜಾ ಸಾಮಗ್ರಿಗಳು ಜಿಎಸ್​ಟಿ ವಿನಾಯಿತಿ ಪಟ್ಟಿಯಲ್ಲಿವೆ ಎಂದು ಹೇಳಿದೆ. ಗಂಗಾನದಿಯ ನೀರು, ಕುಂಕುಮ, ಸಿಂದೂರ, ಕೈಬಳೆ ಇತ್ಯಾದಿಗಳಿಗೆ ಜಿಎಸ್​ಟಿ ತೆರಿಗೆ ಇರುವುದಿಲ್ಲ ಎಂದು ಸಿಬಿಐಸಿ ಹೇಳಿದೆ.

ಗಂಗಾನದಿಯ ನೀರು ಮತ್ತು ಪೂಜಾ ಸಾಮಗ್ರಿ ಮೇಲೆ ಶೇ. 18ರಷ್ಟು ಜಿಎಸ್​ಟಿ ಇದೆಯಾ? ಇಲ್ಲಿದೆ ಕೇಂದ್ರ ಸರ್ಕಾರ ಸ್ಪಷ್ಟನೆ
ಗಂಗಾಜಲ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 12, 2023 | 4:41 PM

ನವದೆಹಲಿ, ಅಕ್ಟೋಬರ್ 12: ಗಂಗಾಜಲ ಮತ್ತು ಪೂಜಾ ವಸ್ತುಗಳಿಗೆ ಯಾವುದೇ ಜಿಎಸ್​ಟಿ ತೆರಿಗೆ ಇಲ್ಲ ಎಂದು ಕೇಂದ್ರ ಸರ್ಕಾರದ ಕಂದಾಯ ಇಲಾಖೆ ಇಂದು (ಅ. 12) ಸ್ಪಷ್ಟಪಡಿಸಿದೆ. ಗಂಗಾ ನದಿಯ ನೀರನ್ನು ಬಾಟಲಿಗಳಲ್ಲಿ ತುಂಬಿಸಿ (Gangajal) ಮಾರಾಟ ಮಾಡಿದರೆ ಶೇ. 18ರಷ್ಟು ಜಿಎಸ್ಟಿ ವಿಧಿಸಲಾಗುತ್ತದೆ ಎಂಬಂತಹ ಸುದ್ದಿ ಹಬ್ಬಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರೀಯ ಪರೋಕ್ಷ ತೆರಿಗೆ ಮತ್ತು ಸುಂಕ ಮಂಡಳಿ (CBIC- central board of indirect taxes and customs) ಟ್ವೀಟ್ ಮೂಲಕ ಅನುಮಾನಗಳಿಗೆ ತೆರೆ ಎಳೆದಿದೆ.

‘ದೇಶಾದ್ಯಂತ ಪ್ರತೀ ಮನೆಗಳಲ್ಲೂ ಪೂಜೆಗೆ ಬಳಸುವ ಗಂಗಾಜಲ ಹಾಗೂ ಪೂಜಾ ಸಾಮಗ್ರಿಗಳನ್ನು ಜಿಎಸ್​ಟಿ ವ್ಯಾಪ್ತಿಯನ್ನು ಹೊರಗಿಡಲಾಗಿದೆ. 2017ರಲ್ಲಿ ನಡೆದ 14 ಮತ್ತು 15ನೇ ಜಿಎಸ್​ಟಿ ಮಂಡಳಿ ಸಭೆಯಲ್ಲಿ ಪೂಜಾ ಸಾಮಗ್ರಿಗಳಿಗೆ ಜಿಎಸ್​ಟಿ ವಿಧಿಸುವುದರ ಸಂಬಂಧ ವಿಸ್ತೃತವಾಗಿ ಚರ್ಚಿಸಲಾಗಿದೆ. ಇವುಗಳನ್ನು ಜಿಎಸ್​ಟಿ ವಿನಾಯಿತಿ ಪಟ್ಟಿಗೆ ಸೇರಿಸಲು ನಿರ್ಧರಿಸಲಾಗಿತ್ತು. ಜಿಎಸ್​ಟಿ ಜಾರಿಗೆ ಬಂದಾಗಿನಿಂದಲೂ ಈ ಐಟಂಗಳಿಗೆ ಜಿಎಸ್​ಟಿ ಇಲ್ಲ,’ ಎಂದು ಸಿಬಿಐಸಿ ಹೇಳಿದೆ.

ಇದನ್ನೂ ಓದಿ: Pranjali Awasthi: 16 ವರ್ಷದ ಬಾಲಕಿ ಪ್ರಾಂಜಲಿ ಅವಸ್ಥಿ ಬಳಿ 100 ಕೋಟಿ ರೂ ಮೌಲ್ಯದ ಕಂಪನಿ

ಪೂಜಾ ಸಾಮಗ್ರಿಗಳು ಯಾವುವು?

ಕುಂಕುಮ, ಸಿಂದೂರ, ಗಾಜಿನ ಕೈಬಳೆ, ಪ್ಲಾಸ್ಟಿಕ್ ಕೈಬಳೆ, ಕಾಡಿಗೆ, ಅಗರಬತ್ತಿ, ಹಣೆಬೊಟ್ಟು, ಗೋರಂಟಿ, ವಿಭೂತಿ, ಕರ್ಪೂರ ಇತ್ಯಾದಿ ಎಲ್ಲಾ ರೀತಿಯ ಪೂಜಾ ಸಾಮಗ್ರಿಗಳಿಗೆ ಜಿಎಸ್​ಟಿ ಇರುವುದಿಲ್ಲ.

ಸಾಕು ಪ್ರಾಣಿಗಳು, ಮಾಂಸ, ಹಣ್ಣು, ತರಕಾರಿ, ಇತರ ಹಲವು ಅವಶ್ಯಕ ವಸ್ತುಗಳಿಗೂ ಜಿಎಸ್​ಟಿ ಇಲ್ಲ.

ಭಾರತದಲ್ಲಿ ಹೆಚ್ಚುತ್ತಿರುವ ಜಿಎಸ್​ಟಿ ಸಂಗ್ರಹ

ಭಾರತದಲ್ಲಿ ಕಳೆದ ಮೂರ್ನಾಲ್ಕು ತಿಂಗಳಿಂದ ಜಿಎಸ್​ಟಿ ಸಂಗ್ರಹ 1.60 ಲಕ್ಷ ಕೋಟಿ ರೂಗಿಂತ ಹೆಚ್ಚಿದೆ. ಕಳೆದ ಏಳು ತಿಂಗಳಿಂದ ಜಿಎಸ್​ಟಿ ಸಂಗ್ರಹ 1.5 ಲಕ್ಷ ಕೋಟಿ ರೂ ಗಡಿಗಿಂತ ಮೇಲಿದೆ. ಈ ಹಣಕಾಸು ವರ್ಷದಲ್ಲಿ ಈವರೆಗೆ ಆಗಿರುವ ಸರಾಸರಿ ಮಾಸಿಕ ಜಿಎಸ್​ಟಿ ಸಂಗ್ರಹ 1.65 ಲಕ್ಷಕೋಟಿ ರೂ ಇದೆ. ಹಿಂದಿನ ಹಣಕಾಸು ವರ್ಷದಲ್ಲಿ (2022-23) ಸರಾಸರಿ ಮಾಸಿಕ ಜಿಎಸ್​ಟಿ ಸಂಗ್ರಹ 1.51 ಲಕ್ಷ ಕೋಟಿ ರೂ ಇತ್ತು.

ಇದನ್ನೂ ಓದಿ: ಜಿಎಸ್​ಟಿ ಸಂಗ್ರಹದಲ್ಲಿ ಶೇ. 10ರಷ್ಟು ಹೆಚ್ಚಳ; ಸೆಪ್ಟೆಂಬರ್​ನಲ್ಲಿ ಸರ್ಕಾರಕ್ಕೆ ಸಿಕ್ಕ ತೆರಿಗೆ 1,62,712 ಕೋಟಿ ರೂ; ಕರ್ನಾಟಕದ ಪಾಲೆಷ್ಟು?

ಜಿಎಸ್​ಟಿ ಸಂಗ್ರಹದಲ್ಲಿ ಮಹಾರಾಷ್ಟ್ರ ರಾಜ್ಯ ನಂಬರ್ ಒನ್ ಆಗಿದೆ. ವಾಣಿಜ್ಯ ನಗರಿ ಮುಂಬೈನಿಂದ ಅತಿಹೆಚ್ಚು ಜಿಎಸ್​ಟಿ ಸಂಗ್ರಹ ಆಗುತ್ತದೆ. ಮಹಾರಾಷ್ಟ್ರದ ಬಳಿಕ ಕರ್ನಾಟಕದಲ್ಲಿ ಅತಿಹೆಚ್ಚು ಜಿಎಸ್​ಟಿ ಸಂಗ್ರಹ ಆಗುವುದು. ಬಹಳಷ್ಟು ಸ್ಟಾರ್ಟಪ್​ಗಳು ಮತ್ತು ಉದ್ದಿಮೆಗಳು ಬೆಂಗಳೂರಿನಲ್ಲಿವೆ. ಹೀಗಾಗಿ, ಕರ್ನಾಟಕದಲ್ಲಿ ಜಿಎಸ್​ಟಿ ಕಲೆಕ್ಷನ್ಸ್ ಬಹಳ ಅಧಿಕ ಇವೆ. ತಮಿಳುನಾಡು, ಗುಜರಾತ್ ರಾಜ್ಯಗಳಲ್ಲೂ ಹೆಚ್ಚಿನ ಜಿಎಸ್​ಟಿ ಸಂಗ್ರಹ ಆಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!