AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಯೋಮೆಟ್ರಿಕ್ ಆಧಾರ್ ದೃಢೀಕರಣ ಇಲ್ಲದೆ ಜಿಎಸ್​ಟಿ ನೊಂದಣಿಗೆ ಅವಕಾಶ ಇಲ್ಲ: ದೆಹಲಿ ಹೈಕೋರ್ಟ್ ಆದೇಶ

ಬಯೋಮೆಟ್ರಿಕ್ ಆಧಾರಿತವಾದ ಆಧಾರ್ ದೃಢೀಕರಣ ಇಲ್ಲದೇ ಜಿಎಸ್​ಟಿ ನೊಂದಣಿಗೆ ಅವಕಾಶ ಕೊಡಬಾರದು ಎಂದು ದೆಹಲಿ ಉಚ್ಚ ನ್ಯಾಯಾಲಯ ಆದೇಶ ಹೊರಡಿಸಿದೆ. ನ್ಯಾಯಾಧೀಶರಾದ ಅನಿಲ್ ಕ್ಷೇತ್ರಪಾಲ್ ಮತ್ತು ಶೈಲ್ ಜೈನ್ ಅವರಿದ್ದ ದೆಹಲಿ ಹೈಕೋರ್ಟ್ ನ್ಯಾಯಪೀಠ ಈ ತೀರ್ಪು ನೀಡಿದೆ. ಕೋರ್ಟ್​ನ ಈ ಆದೇಶವು ದೇಶಾದ್ಯಂತ ಎಲ್ಲಾ ಜಿಎಸ್​ಟಿ ಪ್ರಾಧಿಕಾರಗಳಿಗೆ ಅನ್ವಯ ಆಗುತ್ತದೆ.

ಬಯೋಮೆಟ್ರಿಕ್ ಆಧಾರ್ ದೃಢೀಕರಣ ಇಲ್ಲದೆ ಜಿಎಸ್​ಟಿ ನೊಂದಣಿಗೆ ಅವಕಾಶ ಇಲ್ಲ: ದೆಹಲಿ ಹೈಕೋರ್ಟ್ ಆದೇಶ
ಜಿಎಸ್​ಟಿImage Credit source: Getty Images
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 10, 2026 | 5:52 PM

Share

ನವದೆಹಲಿ, ಸೆಪ್ಟೆಂಬರ್ 10: ಇನ್ನೊಬ್ಬರ ಗುರುತಿನ ದಾಖಲೆಗಳನ್ನು ದುರ್ಬಳಕೆ ಮಾಡಿಕೊಂಡು ನಕಲಿ ಜಿಎಸ್‌ಟಿ ನೋಂದಣಿ ಪಡೆಯುವುದನ್ನು ತಡೆಯಲು ದೆಹಲಿ ಹೈಕೋರ್ಟ್ ದೇಶವ್ಯಾಪಿ ಮಹತ್ವದ ಮಧ್ಯಂತರ ಆದೇಶ ಹೊರಡಿಸಿದೆ. ಇನ್ಮುಂದೆ ಬಯೋಮೆಟ್ರಿಕ್ ಆಧಾರಿತ ಗುರುತಿನ ದೃಢೀಕರಣ (Biometric-based Authentication) ಇಲ್ಲದೆ ದೇಶಾದ್ಯಂತ ಯಾವುದೇ ಹೊಸ ಜಿಎಸ್‌ಟಿ ನೋಂದಣಿ ನೀಡಬಾರದು ಎಂದು ನ್ಯಾ| ಅನಿಲ್ ಕ್ಷೇತ್ರಪಾಲ್ ಮತ್ತು ನ್ಯಾ| ಶೈಲ್ ಜೈನ್ ಅವರಿದ್ದ ಉಚ್ಚ ನ್ಯಾಯಪೀಠವು ಸೆ. 8ರಂದು ಜಿಎಸ್‌ಟಿ ಪ್ರಾಧಿಕಾರಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.

ಸಾರ್ವಜನಿಕರ ಗುರುತಿನ ಚೀಟಿಗಳನ್ನು ಕದ್ದು ಕೋಟ್ಯಂತರ ರೂಪಾಯಿ ತೆರಿಗೆ ವಂಚಿಸುತ್ತಿರುವ ಪ್ರಕರಣಗಳ ಅರ್ಜಿಯ ವಿಚಾರಣೆ ನಡೆಸಿದ ಪೀಠವು ಈ ಆದೇಶ ನೀಡಿದೆ. ಇದುವರೆಗೆ ವ್ಯವಸ್ಥೆಯು ಕೇವಲ “ಅಪಾಯಕಾರಿ” (Risky) ಎಂದು ಗುರುತಿಸಿದ ಅರ್ಜಿಗಳಿಗೆ ಮಾತ್ರ ಬಯೋಮೆಟ್ರಿಕ್ ಪರಿಶೀಲನೆ ನಡೆಸುತ್ತಿತ್ತು. ಆದರೆ ಇನ್ಮುಂದೆ ಪ್ರತಿಯೊಂದು ಹೊಸ ಜಿಎಸ್‌ಟಿ ನೋಂದಣಿಗೂ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯವಾಗಿರುತ್ತದೆ.

ಇದನ್ನೂ ಓದಿ: ಈಕ್ವಿಟಿ ಫಂಡ್​ಗಳಿಗೆ ಹರಿದುಬಂದ ಬಂಡವಾಳ 29,329 ಕೋಟಿ ರೂ; ಆಗಸ್ಟ್​ನಲ್ಲಿ ನಿವ್ವಳ ಹೂಡಿಕೆಯಲ್ಲಿ ಶೇ. 19 ಏರಿಕೆ

ಸಾವಿರಾರು ಕೋಟಿ ತೆರಿಗೆ ವಂಚನೆ: 2023-24ರಲ್ಲಿ 2,800 ನಕಲಿ ಜಿಎಸ್‌ಟಿ ನೋಂದಣಿಗಳಿಂದ ₹15,085 ಕೋಟಿ ತೆರಿಗೆ ವಂಚನೆ ಹಾಗೂ 2024-25ರಲ್ಲಿ 1,654 ನಕಲಿ ನೋಂದಣಿಗಳಿಂದ ₹13,109 ಕೋಟಿ ವಂಚನೆ ಪತ್ತೆಯಾಗಿದೆ ಎಂದು ಸಂಸತ್ತಿನಲ್ಲಿ ನೀಡಿದ್ದ ವರದಿಯನ್ನು ಕೋರ್ಟ್ ಉಲ್ಲೇಖಿಸಿದೆ.

ಬಯೋಮೆಟ್ರಿಕ್ ಪರಿಶೀಲನೆಯನ್ನು ಕಡ್ಡಾಯಗೊಳಿಸುವುದಾಗಿ ಸಚಿವರು ಭರವಸೆ ನೀಡಿ ವರ್ಷ ಕಳೆದರೂ ಅದನ್ನು ಪೂರ್ಣವಾಗಿ ಜಾರಿಗೆ ತರದಿರುವುದಕ್ಕೆ ನ್ಯಾಯಪೀಠ ತೀವ್ರ ಕಳವಳ ವ್ಯಕ್ತಪಡಿಸಿದೆ.

ನಕಲಿ ನೋಂದಣಿಗಳಿಂದ ಸರ್ಕಾರದ ಬೊಕ್ಕಸಕ್ಕೆ ಭಾರಿ ನಷ್ಟ ಉಂಟಾಗುತ್ತಿರುವುದಲ್ಲದೆ, ಯಾವುದೇ ಸಂಬಂಧವಿಲ್ಲದ ನಿರಪರಾಧಿ ಸಾರ್ವಜನಿಕರು ಆರ್ಥಿಕ ಮತ್ತು ಕಾನೂನು ಸಂಕಷ್ಟಗಳನ್ನು ಎದುರಿಸಬೇಕಾಗುತ್ತಿದೆ ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: ಎಐ ಏಜೆಂಟ್‌ಗಳ ಮೂಲಕ ಯುಪಿಐ ಪಾವತಿ: ಕ್ರಾಂತಿಕಾರಿ ತಂತ್ರಜ್ಞಾನಕ್ಕೆ ಎನ್‌ಪಿಸಿಐ ಆಲೋಚನೆ

ಮುಂದಿನ ಪ್ರಸ್ತಾವಿತ ಪರಿಶೀಲನಾ ಕ್ರಮಗಳು

ದುರ್ಬಳಕೆಯನ್ನು ತಡೆಯಲು ಅರ್ಜಿ ಸಲ್ಲಿಸುವಾಗ 20-30 ಸೆಕೆಂಡುಗಳ ವಿಡಿಯೋ ಪರಿಶೀಲನೆ (Video Verification), ರಿಯಲ್-ಟೈಮ್ ಫೇಸ್ ರೆಕಗ್ನಿಷನ್ (Face Recognition) ಹಾಗೂ ಪ್ಯಾನ್/ಆಧಾರ್ ದುರ್ಬಳಕೆಯಾದಾಗ ನೇರ ಎಸ್‌ಎಂಎಸ್/ಇಮೇಲ್ ಅಲರ್ಟ್ ಕಳುಹಿಸುವ ಪ್ರಸ್ತಾಪಗಳನ್ನು ಕೋರ್ಟ್ ಪರಿಶೀಲಿಸುತ್ತಿದ್ದು, ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 22ಕ್ಕೆ ನಿಗದಿಪಡಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ