AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Insurance Policy Tax: ವಿಮಾದಾರರಿಗೆ ಶಾಕ್ ನೀಡಿದ ಬಜೆಟ್; 5 ಲಕ್ಷ ರೂ.ಗಿಂತ ಹೆಚ್ಚಿನ ವಿಮೆಗೆ ಸಿಗಲ್ಲ ತೆರಿಗೆ ವಿನಾಯಿತಿ

Budget 2023; ಒಂದು ಅಥವಾ ಅದಕ್ಕಿಂತ ಹೆಚ್ಚಿನ ಎಷ್ಟೇ ವಿಮಾ ಪಾಲಿಸಿಗಳನ್ನು ಹೊಂದಿದ್ದರೂ ವರ್ಷದ ಅವಧಿಯಲ್ಲಿ ಅದರ ಪ್ರೀಮಿಯಂ ಮೊತ್ತ 5 ಲಕ್ಷ ರೂ. ದಾಟಿದ್ದರೆ ಅದಕ್ಕೆ ತೆರಿಗೆ ಪಾವತಿಸಬೇಕಾಗುತ್ತದೆ.

Insurance Policy Tax: ವಿಮಾದಾರರಿಗೆ ಶಾಕ್ ನೀಡಿದ ಬಜೆಟ್; 5 ಲಕ್ಷ ರೂ.ಗಿಂತ ಹೆಚ್ಚಿನ ವಿಮೆಗೆ ಸಿಗಲ್ಲ ತೆರಿಗೆ ವಿನಾಯಿತಿ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on:Feb 02, 2023 | 12:11 PM

Share

ನವದೆಹಲಿ: ವಿಮಾ ಕ್ಷೇತ್ರಕ್ಕೆ ಪೂರಕ ಘೋಷಣೆಗಳಾಗಬಹುದು, ತೆರಿಗೆ ವಿನಾಯಿತಿ ಮಿತಿ ಹೆಚ್ಚಳವಾಗಬಹುದು ಎಂದು ನಿರೀಕ್ಷಿಸುತ್ತಿದ್ದವರಿಗೆ ಬಜೆಟ್​ (Budget 2023) ನಿರಾಸೆ ಮೂಡಿಸಿದ್ದು, ಆಘಾತ ನೀಡಿದೆ. 5 ಲಕ್ಷ ರೂ.ಗಿಂತ ಹೆಚ್ಚಿನ ಮೊತ್ತದ ವಿಮೆಗೆ ತೆರಿಗೆ ವಿನಾಯಿತಿ (Tax exemption) ಇರುವುದಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್​ನಲ್ಲಿ ಘೋಷಿಸಿದ್ದಾರೆ. ಯೂನಿಟ್ ಲಿಂಕ್ಡ್ ಇನ್ಶೂರೆನ್ಸ್ ಪ್ಲಾನ್​ಗಳನ್ನು ಹೊರತುಪಡಿಸಿ 5 ಲಕ್ಷ ರೂ.ಗಿಂತ ಹೆಚ್ಚಿನ ಮೊತ್ತದ ಜೀವ ವಿಮಾ ಪಾಲಿಸಿಗಳಿಗೆ ತೆರಿಗೆ ವಿನಾಯಿತಿ ನೀಡುವುದು 2023ರ ಏಪ್ರಿಲ್ 1ರಿಂದ ಸ್ಥಗಿತಗೊಳ್ಳಲಿದೆ ಎಂದು ಬಜೆಟ್​ನಲ್ಲಿ ಉಲ್ಲೇಖಿಸಲಾಗಿದೆ. ವಿಮೆ ಹೊಂದಿರುವ ವ್ಯಕ್ತಿ ಮೃತಪಟ್ಟಾಗ ದೊರೆಯುವ ಮೊತ್ತಕ್ಕೆ ಪರಿಷ್ಕೃತ ನಿಯಮ ಅನ್ವಯವಾಗುವುದಿಲ್ಲ ಎಂದೂ ತಿಳಿಸಲಾಗಿದೆ. ಹೊಸ ತೆರಿಗೆ ನಿಯಮ 2023ರ ಮಾರ್ಚ್​ 31ರ ಒಳಗೆ ಅವಧಿಪೂರ್ಣಗೊಳ್ಳುವ ವಿಮಾ ಪಾಲಿಸಿಗಳಿಗೆ ಅನ್ವಯವಾಗುವುದಿಲ್ಲ.

ಒಂದು ಅಥವಾ ಅದಕ್ಕಿಂತ ಹೆಚ್ಚಿನ ಎಷ್ಟೇ ವಿಮಾ ಪಾಲಿಸಿಗಳನ್ನು ಹೊಂದಿದ್ದರೂ ವರ್ಷದ ಅವಧಿಯಲ್ಲಿ ಅದರ ಪ್ರೀಮಿಯಂ ಮೊತ್ತ 5 ಲಕ್ಷ ರೂ. ದಾಟಿದ್ದರೆ ಅದಕ್ಕೆ ತೆರಿಗೆ ಪಾವತಿಸಬೇಕಾಗುತ್ತದೆ ಎಂದು ‘ಕ್ಲಿಯರ್’ ಸಿಇಒ ಅರ್ಚಿತ್ ಗುಪ್ತಾ ತಿಳಿಸಿರುವುದಾಗಿ ‘ಮನಿ ಕಂಟ್ರೋಲ್’ ವರದಿ ಮಾಡಿದೆ. ಮುಂದಿನ ಹಣಕಾಸು ವರ್ಷಕ್ಕೆ ಮಾಡಿಸಿಕೊಳ್ಳುವ ವಿಮೆಗೆ ಹೊಸ ನಿಯಮ ಅನ್ವಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

2.5 ಲಕ್ಷ ರೂ.ಗಿಂತ ಹೆಚ್ಚು ಮೊತ್ತದ ಯೂನಿಟ್ ಲಿಂಕ್ಡ್ ಇನ್ಶೂರೆನ್ಸ್ ಪ್ಲಾನ್​​ಗಳ ತೆರಿಗೆ ವಿನಾಯಿತಿಯನ್ನು 2021ರ ಬಜೆಟ್​ನಲ್ಲೇ ರದ್ದುಗೊಳಿಸಲಾಗಿತ್ತು. ಇದೀಗ 5 ಲಕ್ಷ ರೂ.ಗಿಂತ ಹೆಚ್ಚಿನ ಪ್ರೀಮಿಯಂ ಮೊತ್ತದ ವಿಮೆಗೆ ತೆರಿಗೆ ವಿನಾಯಿತಿ ರದ್ದುಗೊಳಿಸಿರುವ ಸರ್ಕಾರದ ನಡೆ ವಿಮಾ ಕ್ಷೇತ್ರದ ಕಂಪನಿಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ ಎನ್ನಲಾಗಿದೆ.

ಇದನ್ನೂ ಓದಿ: ಕೇಂದ್ರ ಬಜೆಟ್​ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಬಂಪರ್: ಏನಿದು ಯೋಜನೆ? ಯಾರಿಗೆಲ್ಲ ಲಾಭ?

ಹೊಸ ನಿಯಮದಿಂದಾಗಿ ಜನರು ಸಾಂಪ್ರದಾಯಿಕ ಜೀವ ವಿಮೆ ಮಾಡಿಸಿಕೊಳ್ಳುವ ಬದಲು ಟರ್ಮ್ ಇನ್ಶೂರೆನ್ಸ್​ ಬಗ್ಗೆ ಹೆಚ್ಚು ಗಮನಹರಿಸುವ ಸಾಧ್ಯತೆ ಇದೆ. ಇದರಿಂದ ಜನರು ಸಂಪೂರ್ಣವಾಗಿ ಹೂಡಿಕೆ ಆಧಾರಿತ ಯೂನಿಟ್ ಲಿಂಕ್ಡ್ ಇನ್ಶೂರೆನ್ಸ್ ಪ್ಲಾನ್​​ಗಳ ಕಡೆಗೆ ಒಲವು ಹೆಚ್ಚಾಗುವ ಕಳವಳ ವ್ಯಕ್ತವಾಗಿದೆ ಎಂದು ಇನ್ಶೂರೆನ್ಸ್ ಮಧ್ಯವರ್ತಿ ಕಂಪನಿ ‘ಸೆಕ್ಯೂರ್ ನೌ’ ಸ್ಥಾಪಕ ಕಪಿಲ್ ಮೆಹ್ತಾ ಹೇಳಿದ್ದಾರೆ.

ಬಜೆಟ್​ಗೂ ಮುನ್ನ ವಿಮಾ ಕಂಪನಿಗಳು ಜೀವ ವಿಮೆಗೆ ಪ್ರತ್ಯೇಕ ತೆರಿಗೆ ಕಡಿತ ಹಾಗೂ ಆರೋಗ್ಯ ವಿಮೆಗೆ ಹೆಚ್ಚಿನ ತೆರಿಗೆ ವಿನಾಯಿತಿಯನ್ನು ನಿರೀಕ್ಷಿಸಿದ್ದವು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:05 pm, Thu, 2 February 23

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ