AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nokia C22: ಕೇವಲ 7,999 ರೂ. ಗೆ ಹೊಸ ನೋಕಿಯಾ C22 ಸ್ಮಾರ್ಟ್​ಫೋನ್ ಬಿಡುಗಡೆ: ಫೀಚರ್ಸ್ ಏನಿದೆ ನೋಡಿ

ದೇಶದಲ್ಲಿ ಬಜೆಟ್ ಬೆಲೆಗೆ ನೋಕಿಯಾ ಕಂಪನಿ ಹೊಸ ನೋಕಿಯಾ ಸಿ 22 (Nokia C22) ಫೋನನ್ನು ಅನಾವರಣ ಮಾಡಿದೆ. ದರಕ್ಕೆ ತಕ್ಕಂತೆ ವಿಶೇಷತೆಗಳಿಂದ ಕೂಡಿರುವ ಈ ಸ್ಮಾರ್ಟ್​​ಫೋನಿನ ಬೆಲೆ, ಫೀಚರ್ಸ್ ಕುರಿತ ಮಾಹಿತಿ ಇಲ್ಲಿದೆ ನೋಡಿ. ದೇಶದಲ್ಲಿ ಬಜೆಟ್ ಬೆಲೆಗೆ ನೋಕಿಯಾ ಕಂಪನಿ ಹೊಸ ನೋಕಿಯಾ ಸಿ 22 (Nokia C22) ಫೋನನ್ನು ಅನಾವರಣ ಮಾಡಿದೆ. ದರಕ್ಕೆ ತಕ್ಕಂತೆ ವಿಶೇಷತೆಗಳಿಂದ ಕೂಡಿರುವ ಈ ಸ್ಮಾರ್ಟ್​​ಫೋನಿನ ಬೆಲೆ, ಫೀಚರ್ಸ್ ಕುರಿತ ಮಾಹಿತಿ ಇಲ್ಲಿದೆ ನೋಡಿ.

Nokia C22: ಕೇವಲ 7,999 ರೂ. ಗೆ ಹೊಸ ನೋಕಿಯಾ C22 ಸ್ಮಾರ್ಟ್​ಫೋನ್ ಬಿಡುಗಡೆ: ಫೀಚರ್ಸ್ ಏನಿದೆ ನೋಡಿ
Nokia C22
Vinay Bhat
| Edited By: |

Updated on:Oct 08, 2026 | 12:50 PM

Share

ಮುಖ್ಯಾಂಶಗಳು

  • ನೋಕಿಯಾ C22 ಸ್ಮಾರ್ಟ್​ಫೋನ್ ಬಿಡುಗಡೆ
  • ಈ ಸ್ಮಾರ್ಟ್​​ಫೋನಿನ ಬೆಲೆ ಕೇವಲ 7,999 ರೂ.
  • 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ

ನೋಕಿಯಾ (Nokia) ಕಂಪನಿಯ ಸ್ಮಾರ್ಟ್​ಫೋನ್​ಗಳಿಗೆ ಭಾರತದಲ್ಲಿ ಹಿಂದಿನ ರೀತಿ ದೊಡ್ಟ ಮಟ್ಟದ ಮಾರ್ಕೆಟ್ ಇಲ್ಲ. ಒಂದು ಕಾಲದಲ್ಲಿ ಭಾರತದ ಮೊಬೈಲ್ ಮಾರುಕಟ್ಟೆಯನ್ನು ಆಳುತ್ತಿದ್ದ ನೋಕಿಯಾ ಈಗ ಹೇಳಹೆಸರಿಲ್ಲದಂತಾಗಿದೆ. ಶವೋಮಿ (Xiaomi), ಸ್ಯಾಮ್​ಸಂಗ್, ರಿಯಲ್ ಮಿ, ವಿವೋ ಬ್ರ್ಯಾಂಡ್​ಗಳು ಬಂದ ಮೇಲೆ ನೋಕಿಯಾ ಮೊಬೈಲ್​ಗಳ ಬೇಡಿಕೆ ಕುಸಿಯುತ್ತಾ ಬಂತು. ಹೀಗಿದ್ದರೂ ನೋಕಿಯಾ ಆಗಾಗ ಕಡಿಮೆ ಬೆಲೆಗೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುತ್ತಿರುತ್ತದೆ. ಇದೀಗ ದೇಶದಲ್ಲಿ ಬಜೆಟ್ ಬೆಲೆಗೆ ನೋಕಿಯಾ ಕಂಪನಿ ಹೊಸ ನೋಕಿಯಾ ಸಿ 22 (Nokia C22) ಫೋನನ್ನು ಅನಾವರಣ ಮಾಡಿದೆ. ದರಕ್ಕೆ ತಕ್ಕಂತೆ ವಿಶೇಷತೆಗಳಿಂದ ಕೂಡಿರುವ ಈ ಸ್ಮಾರ್ಟ್​​ಫೋನಿನ ಬೆಲೆ, ಫೀಚರ್ಸ್ ಕುರಿತ ಮಾಹಿತಿ ಇಲ್ಲಿದೆ ನೋಡಿ.

ಬೆಲೆ ಎಷ್ಟು?:

ಭಾರತದಲ್ಲಿ ಎರಡು ಸ್ಟೋರೆಜ್ ಆಯ್ಕೆಯಲ್ಲಿ ನೋಕಿಯಾ C22 ಸ್ಮಾರ್ಟ್​ಫೋನ್ ರಿಲೀಸ್ ಆಗಿದೆ. ಇದರ 2GB RAM ಮತ್ತು 64GB ಸ್ಟೋರೇಜ್ ರೂಪಾಂತರಕ್ಕೆ ಕೇವಲ 7,999 ರೂ. ನಿಗದಿ ಮಾಡಲಾಗಿದೆ. ಹಾಗೆಯೆ 4GB RAM ಮತ್ತು 64GB ಸ್ಟೋರೇಜ್ ಆಯ್ಕೆಗೆ 8,499 ರೂ. ಇದೆ. ಈ ಫೋನ್ ನೋಕಿಯಾ ಕಂಪನಿಯ ಅಧಿಕೃತ ವೆಬ್​ಸೈಟ್ ಸೇರದಂತೆ ಕೆಲ ರಿಟೈಲ್ ಸ್ಟೋರ್​ಗಳಲ್ಲಿ ಇಂದಿನಿಂದಲೇ ಖರೀದಿಗೆ ಸಿಗುತ್ತಿದೆ.

‘

ಫೀಚರ್ಸ್ ಏನಿದೆ?:

ನೋಕಿಯಾ C22 ಸ್ಮಾರ್ಟ್‌ಫೋನ್‌ 720*1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಹೆಚ್‌ಡಿ+ ಎಲಲ್​ಸಿಡಿ ಡಿಸ್‌ಪ್ಲೇ ಹೊಂದಿದೆ. 60Hz ರಿಫ್ರೆಶ್​ರೇಟ್ ಆಯ್ಕೆಯನ್ನು ಹೊಂದಿದೆ. ಇದು ಸ್ಪ್ಲಾಶ್ ಮತ್ತು ಧೂಳಿನ ರಕ್ಷಣೆಗಾಗಿ IP52 ಪ್ರಮಾಣೀಕೃತವಾಗಿದೆ. ಯುನಿಸಾಕ್ SC9863A ಆಕ್ಟೋ ಕೋರ್ ಪ್ರೊಸೆಸರ್‌ನಿಂದ ಕಾರ್ಯನಿರ್ವಹಿಸಲಿದ್ದು, IMG8322 GPU ಅನ್ನು ಒಳಗೊಂಡಿದೆ. ಈ ಮೂಲಕ ಉತ್ತಮ ಕಾರ್ಯಕ್ಷಮತೆಯನ್ನು ಪಡೆದುಕೊಳ್ಳಬಹುದಾಗಿದೆ. ಆಂಡ್ರಾಯ್ಡ್ 13 ಆಪರೇಟಿಂಗ್ ಸಿಸ್ಟಮ್‌ನೊಂದಿಗೆ ಕಾಣಿಸಿಕೊಂಡಿದೆ.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಈ ಸ್ಮಾರ್ಟ್​ಫೋನ್, ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಪಡೆದುಕೊಂಡಿದ್ದು ಇದರಲ್ಲಿ 13 ಮೆಗಾ ಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಹಾಗೂ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್‌ ಆಯ್ಕೆ ಪಡೆದುಕೊಂಡಿದೆ. ಇದರ ಜೊತೆಗೆ ಮುಂಭಾಗ ಸೆಲ್ಫೀ ಮತ್ತು ವಿಡಿಯೋ ಕರೆಗಳಿಗಾಗಿ 8 ಮೆಗಾ ಪಿಕ್ಸೆಲ್ ಕ್ಯಾಮೆರಾ ಆಯ್ಕೆ ನೀಡಲಾಗಿದೆ. ಈ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್​ನೊಂದಿಗೆ ಹಲವಾರು ಫೀಚರ್​ಗಳನ್ನು ಹೊಂದಿದೆ.

ನೋಕಿಯಾ C22 ಸ್ಮಾರ್ಟ್‌ಫೋನ್ ದೀರ್ಘ ಸಮಯ ಬಾಳಿಕೆ ಬರುವ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಹೀಗಾಗಿ ಪದೇ ಪದೇ ಚಾರ್ಜ್ ಮಾಡುವ ತೊಂದರೆ ಇರುವುದಿಲ್ಲ. ಇದರೊಂದಿಗೆ 10W ಚಾರ್ಜಿಂಗ್ ಸೌಲಭ್ಯ ಇದೆ. ಫಿಂಗರ್ ಪ್ರಿಂಟ್ ಸೆನ್ಸಾರ್ ಆಯ್ಕೆ ಇದೆ. 5ಜಿ ಬೆಂಬಲ ಪಡೆದುಕೊಂಡಿಲ್ಲ. 4G LTE, ವೈಫೈ, ಬ್ಲೂಟೂತ್, 3.5mm ಹೆಡ್​ಫೋನ್ ಜ್ಯಾಕ್, FM ರೇಡಿಯೋ ಸೇರಿದಂತೆ ಬೇಸಿಕ್ ಆಯ್ಕೆಗಳನ್ನು ನೀಡಲಾಗಿದೆ.

 

Published On - 12:50 pm, Fri, 12 May 23

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ