AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nokia C02: ಅತಿ ಕಡಿಮೆ ಬೆಲೆಯ ನೋಕಿಯಾ C02 ಸ್ಮಾರ್ಟ್​ಫೋನ್ ಬಿಡುಗಡೆ: ಏನೆಲ್ಲ ಫೀಚರ್ಸ್ ಇದೆ ನೋಡಿ

ಈ ಸ್ಮಾರ್ಟ್‌ಫೋನ್​ನ ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ, ಹಿಂಬದಿಯಲ್ಲಿ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾ ಅಳವಡಿಸಲಾಗಿದೆ. ಜೊತೆಗೆ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಪೋರ್ಟ್ರೇಟ್ ಮೋಡ್, ಟೈಮ್ ಲ್ಯಾಪ್ಸ್, ಬ್ಯೂಟಿಫಿಕೇಶನ್ ಸಪೋರ್ಟ್ ಮತ್ತು ಎಲ್‌ಇಡಿ ಫ್ಲ್ಯಾಷ್ ಸೇರಿದಂತೆ ಕೆಲ ವಿಶೇಷ ಫೀಚರ್​ಗಳಿವೆ.

Nokia C02: ಅತಿ ಕಡಿಮೆ ಬೆಲೆಯ ನೋಕಿಯಾ C02 ಸ್ಮಾರ್ಟ್​ಫೋನ್ ಬಿಡುಗಡೆ: ಏನೆಲ್ಲ ಫೀಚರ್ಸ್ ಇದೆ ನೋಡಿ
Nokia C02
Vinay Bhat
| Edited By: |

Updated on:Oct 08, 2026 | 12:51 PM

Share

ಪ್ರಸಿದ್ಧ ನೋಕಿಯಾ (Nokia) ಕಂಪನಿಯ ಸ್ಮಾರ್ಟ್​ಫೋನ್​ಗಳು ಇಂದು ಮಾರುಕಟ್ಟೆಯಲ್ಲಿ ದೊಡ್ಟ ಮಟ್ಟದ ಯಶಸ್ಸು ಸಾಧಿಸುತ್ತಿಲ್ಲ. ಒಂದು ಕಾಲದಲ್ಲಿ ಮೊಬೈಲ್ ಮಾರುಕಟ್ಟೆಯನ್ನು ಆಳುತ್ತಿದ್ದ ನೋಕಿಯಾ ಈಗ ಹೇಳಹೆಸರಿಲ್ಲದಂತಾಗಿದೆ. ಇತರೆ ಬ್ರ್ಯಾಂಡ್​ಗಳ ಹೊಡೆತಕ್ಕೆ ಸಿಲುಕಿ ನೋಕಿಯಾ ಮೊಬೈಲ್​ಗಳ ಬೇಡಿಕೆ ಕುಸಿಯುತ್ತಾ ಬಂತು. ಹೀಗಿದ್ದರೂ ಕಂಪನಿ ಆಗಾಗ ಹೊಸ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುತ್ತಿರುತ್ತವೆ. ಇದೀಗ ಕಂಪನಿ ತನ್ನ C ಕ್ಯಾಟಗರಿಯಲ್ಲಿ ಹೊಸ ಮೊಬೈಲ್ ಅನ್ನು ಅನಾವರಣ ಮಾಡಿದೆ. ಸದ್ದಿಲ್ಲದೆ ನೋಕಿಯಾ ಸಿ02 (Nokia C02) ಎಂಬ ಹೊಸ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇದೊಂದು ಎಂಟ್ರಿ ಲೆವೆಲ್ ಫೋನಾಗಿದ್ದು ಫೀಚರ್​ಗೆ ತಕ್ಕಂತೆ ಬೆಲೆ ನಿಗದಿ ಪಡಿಸಲಾಗಿದೆ.

ಏನಿದೆ ಫೀಚರ್ಸ್:

ನೋಕಿಯಾ C02 ಸ್ಮಾರ್ಟ್‌ಫೋನ್‌ FWVGA+ ರೆಸಲ್ಯೂಶನ್‌ ಸಾಮರ್ಥ್ಯದ 5.45 ಇಂಚಿನ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು 18:9 ರಚನೆಯ ಅನುಪಾತವನ್ನು ಪಡೆದುಕೊಂಡಿದ್ದು ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP52 ರೇಟಿಂಗ್ ನೀಡಲಾಗಿದೆ. ಕ್ವಾಡ್‌ ಕೋರ್‌ SoC ಪ್ರೊಸೆಸರ್‌ ವೇಗವನ್ನು ಪಡೆದಿದೆ. ಆದರೆ, ಇದು ಯಾವುದು ಎಂಬುದು ಬಹಿರಂಗವಾಗಿಲ್ಲ. ಆಂಡ್ರಾಯ್ಡ್‌ 12 (Go ಆವೃತ್ತಿ) ನಲ್ಲಿ ಕಾರ್ಯನಿರ್ವಹಿಸುತ್ತಿದ್ದು 2GB RAM +32GB ಇಂಟರ್‌ ಸ್ಟೋರೇಜ್‌ ಆಯ್ಕಯನ್ನು ಒಳಗೊಂಡಿದೆ. ಮೈಕ್ರೊ SD ಕಾರ್ಡ್‌ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು ಎಂದದು ಕಂಪನಿ ಹೇಳಿದೆ.

ಈ ಸ್ಮಾರ್ಟ್‌ಫೋನ್​ನ ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ, ಹಿಂಬದಿಯಲ್ಲಿ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾ ಅಳವಡಿಸಲಾಗಿದೆ. ಜೊತೆಗೆ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಪೋರ್ಟ್ರೇಟ್ ಮೋಡ್, ಟೈಮ್ ಲ್ಯಾಪ್ಸ್, ಬ್ಯೂಟಿಫಿಕೇಶನ್ ಸಪೋರ್ಟ್ ಮತ್ತು ಎಲ್‌ಇಡಿ ಫ್ಲ್ಯಾಷ್ ಸೇರಿದಂತೆ ಕೆಲ ವಿಶೇಷ ಫೀಚರ್​ಗಳಿವೆ.

 3,000mAh ಸಾಮರ್ಥ್ಯದ ರಿಮೂವಬಲ್‌ ಬ್ಯಾಟರಿ ನೀಡಲಾಗಿದ್ದು, ಇದಕ್ಕೆ ತಕ್ಕಂತೆ 5W ಚಾರ್ಜಿಂಗ್ ಬೆಂಬಲವನ್ನು ಒಳಗೊಂಡಿದೆ. ಇದು 5Q ಚಾರ್ಜಿಂಗ್‌ ಅನ್ನು ಬೆಂಬಲಿಸುತ್ತದೆ ಎಂದು ಕಂಪನಿ ಹೇಳಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಬ್ಲೂಟೂತ್ 4.2, ಮೈಕ್ರೋ-ಯುಎಸ್‌ಬಿ ಪೋರ್ಟ್ ಮತ್ತು 3.5 ಎಂಎಂ ಆಡಿಯೋ ಜ್ಯಾಕ್ ಸೇರಿದಂತೆ ಇತ್ತೀಚಿನ ಆಯ್ಕೆ ನೀಡಲಾಗಿದೆ. ಇದು ನೀವು ಮಾಸ್ಕ್‌ ಹಾಕಿದ್ದರೂ ಫೇಸ್ ಅನ್‌ಲಾಕಿಂಗ್ ಅನ್ನು ಬೆಂಬಲಿಸುತ್ತದಂತೆ. ನೋಕಿಯಾ C02 ಸ್ಮಾರ್ಟ್‌ಫೋನಿನ ಬೆಲೆ ಮತ್ತು ಲಭ್ಯತೆ ಕಂಪನಿ ಬಹಿರಂಗ ಪಡಿಸಿಲ್ಲ.

ನೋಕಿಯಾ ಕಂಪನಿ ಕಳೆದ ವಾರವಷ್ಟೆ ಭಾರತದಲ್ಲಿ ಎಕ್ಸ್ ಸರಣಿಯಲ್ಲಿ ಹೊಸದಾಗಿ ನೋಕಿಯಾ X30 5G ಸ್ಮಾರ್ಟ್​ಫೋನ್ ಅನ್ನು ರಿಲೀಸ್ ಮಾಡಿತ್ತು. ಇದು 6.43 ಇಂಚಿನ ಫುಲ್​ ಎಚ್​ಡಿ+ ಡಿಸ್​ಪ್ಲೇ ಹೊಂದಿದ್ದು, ಕ್ವಾಲ್ಕಂ ಸ್ನ್ಯಾಪ್​​ಡ್ರ್ಯಾಗನ್ 695 5G ಪ್ರೊಸೆಸರ್​ನಿಂದ ಆವೃತ್ತವಾಗಿದೆ. ಹಿಂಭಾಗದಲ್ಲಿ 50 ಮೆಗಾಪಿಕ್ಸೆಲ್ ಕ್ಯಾಮರಾ ಜತೆಗೆ 13 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಸೆನ್ಸರ್, 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಇದರ ವಿಶೇಷತೆ. 8 GB RAM ಆಯ್ಕೆ ಇದೆ. 4,200mAh ಬ್ಯಾಟರಿ ಜತೆಗೆ 33W ಫಾಸ್ಟ್ ಚಾರ್ಜಿಂಗ್ ಬೆಂಬಲವಿದೆ ಎಂದು ಕಂಪನಿ ಹೇಳಿದೆ. ನೋಕಿಯಾ X30 5G ಸ್ಮಾರ್ಟ್​ಫೋನ್​ಗೆ ಮೂರು ವರ್ಷಗಳವರೆಗೆ ಆ್ಯಂಡ್ರಾಯ್ಡ್ ಮತ್ತು ಭದ್ರತಾ ಅಪ್​ಡೇಟ್ ಲಭ್ಯವಾಗಲಿದೆ.

 

Published On - 10:23 am, Sat, 25 February 23

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!