AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಕ್ಕೆ 72 ಗಂಟೆ ಕೆಲಸ: ಚೀನಾದ ನಿದರ್ಶನ ನೀಡಿದ ನಾರಾಯಣಮೂರ್ತಿ

NR Narayana Murthy defends his 70 hour work week idea: ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್ ಆರ್ ನಾರಾಯಣಮೂರ್ತಿ ಅವರು ವಾರಕ್ಕೆ 70 ಗಂಟೆ ಕೆಲಸ ಮಾಡಬೇಕೆನ್ನುವ ವಾದ ಸಮರ್ಥಿಸಿಕೊಂಡಿದ್ದಾರೆ. ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮೂರ್ತಿಗಳು ಚೀನಾದ ನಿದರ್ಶನ ನೀಡಿದ್ದಾರೆ. ಚೀನಾದಲ್ಲಿ ವಾರಕ್ಕೆ 6 ದಿನ, ಬೆಳಗ್ಗೆ 9ರಿಂದ ರಾತ್ರಿ 9ರವರೆಗೆ ಕೆಲಸ ಮಾಡಲಾಗುವುದನ್ನು ಉದಾಹರಣೆಯಾಗಿ ನೀಡಿದ್ದಾರೆ.

ವಾರಕ್ಕೆ 72 ಗಂಟೆ ಕೆಲಸ: ಚೀನಾದ ನಿದರ್ಶನ ನೀಡಿದ ನಾರಾಯಣಮೂರ್ತಿ
ನಾರಾಯಣಮೂರ್ತಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 18, 2025 | 12:03 PM

Share

ಬೆಂಗಳೂರು, ನವೆಂಬರ್ 18: ಇವತ್ತಿನ ಯುವಕರು ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು ಎಂದು ಹೇಳಿ ಸಾಕಷ್ಟು ಚರ್ಚೆ ಹುಟ್ಟುಹಾಕಿದ್ದ ಇನ್ಫೋಸಿಸ್​ನ ಎನ್ ಆರ್ ನಾರಾಯಣಮೂರ್ತಿ (NR Narayana Murthy) ಅವರು ತಮ್ಮ ಅನಿಸಿಕೆಯನ್ನು ಪುನರುಚ್ಚರಿಸಿದ್ದಾರೆ. ರಿಪಬ್ಲಿಕ್ ಟಿವಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡುತ್ತಿದ್ದ ವೇಳೆ ಅವರು ತಮ್ಮ 70 ಗಂಟೆ ಕೆಲಸದ ಸಲಹೆಯನ್ನು ಸಮರ್ಥಿಸಿಕೊಂಡಿದ್ದಾರೆ. ಸಮರ್ಥ ಕೆಲಸದ ವ್ಯವಸ್ಥೆಯು ದೇಶದ ಅಭಿವೃದ್ದಿಗೆ ಎಷ್ಟು ಮುಖ್ಯ ಎಂಬುದನ್ನು ವಿವರಿಸಿದ್ದಾರೆ.

ಪ್ರಯತ್ನದಿಂದ ಮಾತ್ರವೇ ಅಭಿವೃದ್ಧಿ ಬರುವುದು. ಯಾವುದೇ ವ್ಯಕ್ತಿ ಸಮುದಾಯ ಮತ್ತು ದೇಶವಾಗಲೀ ಪರಿಶ್ರಮ ಇಲ್ಲದೇ ಅಭಿವೃದ್ಧಿ ಹೊಂದಿಲ್ಲ ಎಂದು ಇನ್ಫೋಸಿಸ್ ಸಂಸ್ಥಾಪಕರು ಹೇಳಿದ್ದಾರೆ. ಹಾಗೆಯೇ, ಮೊದಲು ಜೀವನ ಪಡೆಯಿರಿ, ಬಳಿಕ ಕೆಲಸ ಮತ್ತು ಜೀವನ ಸಮತೋಲನ ಸಾಧಿಸಿರಿ ಎಂದೂ ಯುವಜನರಿಗೆ ಮೂರ್ತಿಗಳು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಅರಬ್ ಶ್ರೀಮಂತರು ಹಾಯಾಗಿದ್ದಂತೆ ಅನಿಸೋದು ಯಾಕೆ? ಭಾರತ, ಅಮೆರಿಕ, ಚೀನೀಯರ ದೃಷ್ಟಿಕೋನ ಹೇಗೆ?

ಚೀನಾದ ಹೋಟೆಲ್ ನಿದರ್ಶನ ಕೊಟ್ಟ ಮೂರ್ತಿ

‘ಕಳೆದ ವರ್ಷ ಕಾಟಮರನ್​ನ (ನಾರಾಯಣಮೂರ್ತಿ ಅವರ ಹೂಡಿಕೆ ಸಂಸ್ಥೆ) ಕೆಲ ಹಿರಿಯ ಉದ್ಯೋಗಿಗಳು ಚೀನಾಗೆ ಭೇಟಿ ನೀಡಿದ್ದರು. ಅಲ್ಲಿಯ 1, 2, ಮತ್ತು 3ನೇ ಸ್ತರ ನಗರಗಳಿಗೆ ಭೇಟಿ ನೀಡಿದ್ದರು. ಚೀನಾದ ವಾಸ್ತವ ಪರಿಸ್ಥಿತಿ ಹೇಗಿದೆ ಎಂದು ತಿಳಿಯಲು ಅವರು ಈ ಮೂರೂ ರೀತಿಯ ನಗರಗಳಲ್ಲಿನ ಹೋಟೆಲ್​ಗಳಲ್ಲಿ ಉಳಿದಿದ್ದರು. ಅಲ್ಲಿ 9, 9, 6 ಎನ್ನುವ ಮಾತಿದೆ. ಹಾಗಂದರೆ ಏನು ಗೊತ್ತಾ? ಬೆಳಗ್ಗೆ 9ರಿಂದ ರಾತ್ರಿ 9, ವಾರಕ್ಕೆ 6. ಅಂದರೆ ವಾರಕ್ಕೆ 72 ಗಂಟೆ ಆಯಿತು’ ಎಂದು ಎನ್ ಆರ್ ನಾರಾಯಣಮೂರ್ತಿ ತಿಳಿಸಿದ್ದಾರೆ.

ಇದೇ ವೇಳೆ ನಾರಾಯಣಮೂರ್ತಿಗಳು ಕೆಲಸ ಮಾಡುವ ವಿಚಾರದಲ್ಲಿ ಯುವಜನರಿಗೆ ಪ್ರಧಾನಿ ಮೋದಿ ಆದರ್ಶರಾಗಿದ್ದಾರೆ. ನರೇಂದ್ರ ಮೋದಿ ಅವರು ವಾರಕ್ಕೆ ಬಹುತೇಕ 100 ಗಂಟೆ ಕೆಲಸ ಮಾಡುತ್ತಾರೆ ಎಂದು ಮೂರ್ತಿಗಳು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಭಾರತ-ಅಮೆರಿಕ ನಡುವೆ ಮೊತ್ತಮೊದಲ ಎಲ್​ಪಿಜಿ ಒಪ್ಪಂದ; ಭಾರತಕ್ಕೆ ಪ್ರಯೋಜನಗಳೇನು?

ನಾರಾಯಣಮೂರ್ತಿಗಳ 72 ಗಂಟೆ ಕೆಲಸದ ವಾದಕ್ಕೆ ನೆಟ್ಟಿಗರ ಪ್ರತಿಕ್ರಿಯೆ

ವಾರಕ್ಕೆ 70 ಗಂಟೆ ಕೆಲಸ ಮಾಡಬೇಕೆನ್ನುವ ಎನ್ ಆರ್ ನಾರಾಯಣಮೂರ್ತಿ ಅವರ ಹೇಳಿಕೆಗೆ ಸೋಷಿಯಲ್ ಮೀಡಿಯಾದಲ್ಲಿ ಮಿಶ್ರ ಪ್ರತಿಕ್ರಿಯೆ ಬರುತ್ತಿದೆ. ‘ಯೂರೋಪ್​ನಲ್ಲಿ 10, 5, 5 ಎನ್ನುತ್ತಾರೆ. ಅಂದರೆ ಬೆಳಗ್ಗೆ 10ರಿಂದ 5, ವಾರಕ್ಕೆ 5 ದಿನ. ಜನರು ವಾಕ್ ಹೋಗುತ್ತಾರೆ, ಟ್ರೆಕ್ಕಿಂಗ್ ಮಾಡುತ್ತಾರೆ, ಸ್ನೇಹಿತರನ್ನು ಭೇಟಿ ಮಾಡುತ್ತಾರೆ. ಜೀವನ ಅನುಭವಿಸುತ್ತಾರೆ. ನೀವು ಭಾರತವನ್ನು ಸರಿಯಾದ ದಿಕ್ಕಿಗೆ ಮಾರ್ಗದರ್ಶನ ಮಾಡಿ. ನಾವು ಬದುಕಬೇಕು’ ಎಂದು ಒಬ್ಬರು ಕಾಮೆಂಟಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್