NSE Scam: ಎನ್​ಎಸ್​ಇ ಹಗರಣದಲ್ಲಿ ಮಾಜಿ ಸಿಒಒ ಆನಂದ್​ ಸುಬ್ರಮಣಿಯನ್​ರನ್ನು ಬಂಧಿಸಿದ ಸಿಬಿಐ

ರಾಷ್ಟ್ರೀಯ ವಿನಿಮಯ ಕೇಂದ್ರದ ಮಾಜಿ ಸಿಒಒ ಆನಂದ್ ಸುಬ್ರಮಣಿಯನ್ ಅವರನ್ನು ಸಿಬಿಐನಿಂದ ಚೆನ್ನೈನಲ್ಲಿ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

NSE Scam: ಎನ್​ಎಸ್​ಇ ಹಗರಣದಲ್ಲಿ ಮಾಜಿ ಸಿಒಒ ಆನಂದ್​ ಸುಬ್ರಮಣಿಯನ್​ರನ್ನು ಬಂಧಿಸಿದ ಸಿಬಿಐ
ಚಿತ್ರಾ ರಾಮಕೃಷ್ಣ (ಎಡಚಿತ್ರ), ಆನಂದ್ ಸುಬ್ರಮಣಿಯನ್ (ಬಲಚಿತ್ರ)
Follow us
TV9 Web
| Updated By: Srinivas Mata

Updated on: Feb 25, 2022 | 11:42 AM

2018ರ ಷೇರು ಮಾರುಕಟ್ಟೆ ತಿರುಚಿದ ಪ್ರಕರಣದಲ್ಲಿ ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್​ (NSE) ಮಾಜಿ ಸಿಒಒ ಆನಂದ್​ ಸುಬ್ರಮಣಿಯನ್ ಅವರನ್ನು ಗುರುವಾರ ಕೇಂದ್ರೀಯ ತನಿಖಾ ದಳ (CBI) ಬಂಧಿಸಿದೆ ಎಂದು ಈ ವಿಚಾರವಾಗಿ ನೇರ ಮಾಹಿತಿ ಇರುವವರು ತಿಳಿಸಿದ್ದಾರೆ. “ಸತತವಾಗಿ ಮೂರು ದಿನಗಳ ಕಾಲ ಚೆನ್ನೈನಲ್ಲಿ ವಿಚಾರಣೆ ಮಾಡಿದ ಮೇಲೆ ಬಂಧಿಸಲಾಗಿದ್ದು, ವಶಕ್ಕೆ ಪಡೆಯುವ ಕಾರಣಕ್ಕೆ ವಿಶೇಷ ಕೋರ್ಟ್​ ಮುಂದೆ ಹಾಜರು ಪಡಿಸಬಹುದು,” ಎಂದು ಮಾಹಿತಿ ನೀಡಿದ್ದಾರೆ. ಎನ್‌ಎಸ್‌ಇಯ ಹೈ-ಸ್ಪೀಡ್ ಟ್ರೇಡಿಂಗ್ ಪ್ಲಾಟ್‌ಫಾರ್ಮ್ ಅಥವಾ ಆಲ್ಗೋ ಟ್ರೇಡಿಂಗ್ ಮತ್ತು ಕೋ-ಲೊಕೇಶನ್ ಪ್ಲಾಟ್‌ಫಾರ್ಮ್ ಅನ್ನು ಸಂಪರ್ಕಿಸಿ, ಕೆಲವು ದಲ್ಲಾಳಿಗಳು ಬೇರೆಯವರಿಗಿಂತ ಅನ್ಯಾಯದ ಮಾರ್ಗದಲ್ಲಿ ಲಾಭವನ್ನು ಗಳಿಸಿದ ಕೋ-ಲೊಕೇಷನ್ ಹಗರಣ ಎಂದು ಕರೆಯುವ ಸಿಬಿಐ ಪ್ರಕರಣಕ್ಕೆ ಸಂಬಂಧಿಸಿದೆ. ದೆಹಲಿ ಮೂಲದ ಬ್ರೋಕರೇಜ್ ಸಂಸ್ಥೆ ಒಪಿಜಿ ಸೆಕ್ಯೂರಿಟೀಸ್ ಪ್ರೈವೇಟ್ ಲಿಮಿಟೆಡ್ ಮತ್ತು ಸೆಕ್ಯೂರಿಟೀಸ್ ಅಂಡ್ ಎಕ್ಸ್​ಚೇಂಜ್ ಬೋರ್ಡ್ ಆಫ್ ಇಂಡಿಯಾ (Sebi) ಹಾಗೂ ಎನ್​ಎಸ್​ಇನೊಂದಿಗೆ ಹೆಸರಿಸದ ಅಧಿಕಾರಿಗಳ ವಿರುದ್ಧ 2018ರಲ್ಲಿ ಪ್ರಕರಣ ದಾಖಲಿಸಿದೆ.

ಎನ್‌ಎಸ್‌ಇ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ, ಮಂಡಳಿಯ ಮಾಜಿ ಉಪಾಧ್ಯಕ್ಷ ರವಿ ನಾರಿನ್ ಅವರನ್ನು ಸಿಬಿಐ ಕಳೆದ ಶುಕ್ರವಾರದಿಂದ ವಿಚಾರಣೆ ನಡೆಸುತ್ತಿದೆ. “ಈ ಪ್ರಕರಣದಲ್ಲಿ ಹೆಚ್ಚಿನ ಬಂಧನಗಳನ್ನು ಮಾಡಲಾಗುವುದು,” ಎಂದು ಮೂಲಗಳು ಹೇಳಿವೆ. ಸೆಬಿ ಆದೇಶದ ಅನುಸಾರವಾಗಿ ಹೊರಹೊಮ್ಮಿರುವ ಇತ್ತೀಚಿನ ಸತ್ಯದ ಬೆಳಕಿನಲ್ಲಿ ಮೂಲ ಎಫ್ಐಆರ್ ಅನ್ನು ವಿಸ್ತರಿಸಲಾಗಿದೆ. ಸುಬ್ರಮಣಿಯನ್ ಅವರನ್ನು ನೇಮಿಸಿಕೊಳ್ಳುವಲ್ಲಿ ಆಡಳಿತ ಲೋಪವಾಗಿದೆ ಮತ್ತು ಚಿತ್ರಾ ರಾಮಕೃಷ್ಣ ಅವರು ಅಪರಿಚಿತ ಮೂರನೇ ವ್ಯಕ್ತಿಗೆ ವಿನಿಮಯ ಕೇಂದ್ರದ ಹಣಕಾಸು ಡೇಟಾವನ್ನು ಸೋರಿಕೆ ಮಾಡಿದ್ದಾರೆ ಎಂದು ಸೆಬಿ ಆದೇಶ ಆರೋಪಿಸಿದೆ.

2017ರ ಆಗಸ್ಟ್‌ನಲ್ಲಿ ದೆಹಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಪತ್ರಕರ್ತ ಶಂತನು ಗುಹಾ ರೇ ಅವರು ಸಲ್ಲಿಸಿದ ನಂತರ ತನಿಖೆ ನಡೆದಿದ್ದು, ಅವರು ಆಲ್ಗೋ-ಟ್ರೇಡಿಂಗ್‌ನಲ್ಲಿ ವಂಚನೆ ಮತ್ತು ಅಕ್ರಮದ ಆರೋಪಗಳ ಬಗ್ಗೆ ತನಿಖೆಯ ವ್ಯಾಪ್ತಿಯನ್ನು ಏಜೆನ್ಸಿಯು ವಿಸ್ತರಿಸಬೇಕೆಂದು ಒತ್ತಾಯಿಸಿದ್ದರು. 2019ರ ಮೇ ತಿಂಗಳಲ್ಲಿ ಸಿಬಿಐ ತನ್ನ ತನಿಖೆಯು ಇನ್ನು ಮುಂದೆ ಮೂಲ ದೂರಿಗೆ ಸೀಮಿತವಾಗಿಲ್ಲ ಎಂದು ದೆಹಲಿ ಹೈಕೋರ್ಟ್‌ಗೆ ವರದಿಯನ್ನು ಸಲ್ಲಿಸಿತ್ತು. ಜುಲೈನಲ್ಲಿ ಸಂಸತ್ತಿಗೆ ನೀಡಿದ ಲಿಖಿತ ಪ್ರತಿಕ್ರಿಯೆಯಲ್ಲಿ, ಸಿಬಿಐ ತನಿಖೆ ಇನ್ನೂ ನಡೆಯುತ್ತಿದೆ ಎಂದು ಸರ್ಕಾರ ಹೇಳಿದೆ.

ಇದನ್ನೂ ಓದಿ: NSE Scam: ಎನ್​ಎಸ್​ಇ ಮಾಜಿ ಎಂಡಿ ಚಿತ್ರಾ ರಾಮಕೃಷ್ಣಗೆ ಸಹಾಯ ಮಾಡುತ್ತಿದ್ದ ನಿಗೂಢ ಬಾಬಾ ಯಾರು?; ರಹಸ್ಯದ ಬೆನ್ನತ್ತಿದ ಸಿಬಿಐ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ