ಭಾರತದಲ್ಲಿ ಕಳೆದ 6 ವರ್ಷದಲ್ಲಿ ಮಹಿಳಾ ಉದ್ಯೋಗಿಗಳ ಸಂಖ್ಯೆ ಗಣನೀಯ ಏರಿಕೆ: ಸಚಿವೆ ಶೋಭಾ ಕರಂದ್ಲಾಜೆ

Women workforce in India: ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ ಮಹಿಳಾ ಕಾರ್ಮಿಕರ ಪ್ರಮಾಣ ಬಹಳ ಹೆಚ್ಚಾಗಿದೆ ಎನ್ನುವ ಮಾಹಿತಿಯನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೀಡಿದ್ದಾರೆ. 2017-18ರಲ್ಲಿ ಮಹಿಳಾ ಕಾರ್ಮಿಕ ಸಂಖ್ಯಾ ಅನುಪಾತ (ಡಬ್ಲ್ಯುಪಿಆರ್) ಶೇ. 22ರಷ್ಟಿತ್ತು. 2023-24ರಲ್ಲಿ ಇದು ಶೇ. 40.3ಕ್ಕೆ ಏರಿದೆ. ಕಾರ್ಮಿಕ ಬಳಗದಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಿಸಲು ಸರ್ಕಾರ ಕ್ರಮ ತೆಗೆದುಕೊಳ್ಳುತ್ತಿರುವ ಮಾಹಿತಿಯನ್ನು ಶೋಭಾ ತಿಳಿಸಿದ್ದಾರೆ.

ಭಾರತದಲ್ಲಿ ಕಳೆದ 6 ವರ್ಷದಲ್ಲಿ ಮಹಿಳಾ ಉದ್ಯೋಗಿಗಳ ಸಂಖ್ಯೆ ಗಣನೀಯ ಏರಿಕೆ: ಸಚಿವೆ ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 29, 2024 | 12:24 PM

ನವದೆಹಲಿ, ನವೆಂಬರ್ 29: ಕಳೆದ ಆರು ವರ್ಷದಲ್ಲಿ ದೇಶದಲ್ಲಿ ಮಹಿಳಾ ಕಾರ್ಮಿಕರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳ ಆಗಿದೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ದೇಶದಲ್ಲಿ ಮಹಿಳಾ ಉದ್ಯೋಗಿಗಳು ಎಷ್ಟಿದ್ದಾರೆ ಎನ್ನುವ ಮಾಹಿತಿಯನ್ನು ಕೋರಿ ರಾಜ್ಯಸಭಾ ಸದಸ್ಯೆ ಸಾಗರಿಕಾ ಘೋಸ್ ಕೇಳಿದ ಪ್ರಶ್ನೆಗೆ ಸಚಿವೆ ಕರಂದ್ಲಾಜೆ ಆ ಸಂಬಂಧಿತ ಮಾಹಿತಿ ಬಹಿರಂಗಪಡಿಸಿದ್ದಾರೆ. ಆ ಮಾಹಿತಿ ಪ್ರಕಾರ, 2017-18ರಲ್ಲಿ ಮಹಿಳೆಯರ ಕಾರ್ಮಿಕ ಸಂಖ್ಯಾ ಪ್ರಮಾಣ (ಡಬ್ಲ್ಯುಪಿಆರ್) ಶೇ. 22ರಷ್ಟಿತ್ತು. 2023-24ರಲ್ಲಿ ಇದು ಶೇ. 40.3ಕ್ಕೆ ಏರಿದೆ. ಇಲ್ಲಿ ಡಬ್ಲ್ಯುಪಿಆರ್ ಎಂದರೆ ಒಟ್ಟಾರೆ ಜನಸಂಖ್ಯೆಯಲ್ಲಿ ಕಾರ್ಮಿಕರ ಸಂಖ್ಯೆ ಎಷ್ಟು ಎಂಬುದು.

ಭಾರತದಲ್ಲಿ ಪುರುಷರೂ ಒಳಗೊಂಡಂತೆ ಒಟ್ಟಾರೆ ಕಾರ್ಮಿಕ ಜನಸಂಖ್ಯಾ ಅನುಪಾತ ಶೇ. 58.2ರಷ್ಟಿದೆ. ಇದರಲ್ಲಿ ಪುರುಷರ ಡಬ್ಲ್ಯುಪಿಆರ್ ಶೇ. 76.3ರಷ್ಟಿದೆ. ಇದಕ್ಕೆ ಹೋಲಿಸಿದರೆ ಮಹಿಳಾ ಡಬ್ಲ್ಯುಪಿಆರ್ ಬಹಳ ಕಡಿಮೆ ಇದೆ. ಆದರೆ, ಇತ್ತೀಚಿನ ವರ್ಷಗಳಿಂದ ಮಹಿಳಾ ಕಾರ್ಮಿಕರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಆಗಿರುವುದು ಗಮನಾರ್ಹವಾದ ಸಂಗತಿ. ಇನ್ನು, ಕೆಲಸ ಮಾಡಲು ಸಿದ್ಧ ಇರುವ ಮಹಿಳೆಯರ ಸಂಖ್ಯೆಯನ್ನೂ ಸೇರಿಸಿದರೆ ಅದು ಶೇ. 41.7ರಷ್ಟಾಗುತ್ತದೆ.

ಇದನ್ನೂ ಓದಿ: ಸ್ಟಾರ್ಟಪ್​ಗೆ ಸರ್ಕಾರದಿಂದ 50 ಲಕ್ಷ ರೂವರೆಗೆ ಸೀಡ್ ಫಂಡಿಂಗ್; ಹಣ ಪಡೆಯುವ ಕ್ರಮ

ಇಲ್ಲಿ ಕಾರ್ಮಿಕರೆಂದರೆ ಫ್ಯಾಕ್ಟರಿಗಳಲ್ಲಿ ಕೆಲಸ ಮಾಡುವವರು ಮಾತ್ರವಲ್ಲ, ಎಲ್ಲಾ ರೀತಿಯ ಉದ್ಯೋಗಿಗಳನ್ನು ಕಾರ್ಮಿಕರೆಂದು ಪರಿಗಣಿಸಲಾಗುತ್ತದೆ. ಸಾಫ್ಟ್​ವೇರ್ ಎಂಜಿನಿಯರ್ ಕೂಡ ಕಾರ್ಮಿಕ ಅಥವಾ ಲೇಬರ್ ಫೋರ್ಸ್​ನ ಭಾಗವಾಗಿ ಪರಿಗಣಿತವಾಗುತ್ತಾರೆ.

ಸರ್ಕಾರದಿಂದ ಮಹಿಳಾ ಉದ್ಯೋಗಿಗಳಿಗೆ ಉತ್ತೇಜನ

ನಿನ್ನೆ ರಾಜ್ಯಸಭೆಗೆ ಲಿಖಿತ ಉತ್ತರದ ಮೂಲಕ ಮಹಿಳಾ ಕಾರ್ಮಿಕ ಶಕ್ತಿ ಬಗ್ಗೆ ಮಾಹಿತಿ ನೀಡಿದ ಶೋಭಾ ಕರಂದ್ಲಾಜೆ ಅವರು, ಸರ್ಕಾರದಿಂದ ಮಹಿಳೆಯರಿಗೆ ಸಿಗುತ್ತಿರುವ ಉತ್ತೇಜನದ ಬಗ್ಗೆಯೂ ವಿವರ ನೀಡಿದ್ದಾರೆ.

ಇದನ್ನೂ ಓದಿ: ಅದಾನಿ ಗ್ರೂಪ್​ಗೆ ಬೆಂಬಲ ವ್ಯಕ್ತಪಡಿಸಿದ ಅಬುಧಾಬಿ ಐಎಚ್​ಸಿ, ಶ್ರೀಲಂಕಾ ಪೋರ್ಟ್ ಟ್ರಸ್ಟ್ ಮತ್ತು ತಾಂಜಾನಿಯಾ

‘ಉದ್ಯೋಗಸೃಷ್ಟಿಸುವುದರ ಜೊತೆಗೆ ವ್ಯಕ್ತಿಯ ಉದ್ಯೋಗಾರ್ಹತೆಯನ್ನು ಹೆಚ್ಚಿಸುವುದೂ ಸರ್ಕಾರಕ್ಕೆ ಆದ್ಯತೆ ಎನಿಸಿದೆ. ಕಾರ್ಮಿಕ ಬಳಗದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಿಸಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ’ ಎಂದು ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪ್ರಧಾನಿ ಮೋದಿಯೊಂದಿಗೆ ಶಿವಕುಮಾರ್ ನೀರಾವರಿ ಸೇರಿದಂತೆ ಹಲವು ವಿಷಯಗಳ ಚರ್ಚೆ
ಪ್ರಧಾನಿ ಮೋದಿಯೊಂದಿಗೆ ಶಿವಕುಮಾರ್ ನೀರಾವರಿ ಸೇರಿದಂತೆ ಹಲವು ವಿಷಯಗಳ ಚರ್ಚೆ
ಕಲಬುರಗಿ: ವಿದ್ಯುತ್​ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
ಕಲಬುರಗಿ: ವಿದ್ಯುತ್​ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
ಬಿಗ್ ಬಾಸ್ ಮನೆಯಲ್ಲಿ ರಾಜ-ಯುವರಾಣಿ ಬಂಧನ; ಮಾಡಿದ ತಪ್ಪೇನು?
ಬಿಗ್ ಬಾಸ್ ಮನೆಯಲ್ಲಿ ರಾಜ-ಯುವರಾಣಿ ಬಂಧನ; ಮಾಡಿದ ತಪ್ಪೇನು?
Daily Devotional: ಅಯ್ಯಪ್ಪ ಮಾಲೆ ಧಾರಣೆಯ ಹಿಂದಿನ ಮಹತ್ವ ತಿಳಿಯಿರಿ
Daily Devotional: ಅಯ್ಯಪ್ಪ ಮಾಲೆ ಧಾರಣೆಯ ಹಿಂದಿನ ಮಹತ್ವ ತಿಳಿಯಿರಿ
ಈ ರಾಶಿಯವರಿಗೆ ಆರು ಗ್ರಹಗಳ ಶುಭ ಫಲವಿದೆ
ಈ ರಾಶಿಯವರಿಗೆ ಆರು ಗ್ರಹಗಳ ಶುಭ ಫಲವಿದೆ
ಸೆಟ್ಟೇರಿತು ‘ಎಕ್ಕ’ ಸಿನಿಮಾ; ಖುಷಿ ಖುಷಿಯಲ್ಲಿ ಮಾತನಾಡಿದ ಯುವ ರಾಜ್​ಕುಮಾರ್
ಸೆಟ್ಟೇರಿತು ‘ಎಕ್ಕ’ ಸಿನಿಮಾ; ಖುಷಿ ಖುಷಿಯಲ್ಲಿ ಮಾತನಾಡಿದ ಯುವ ರಾಜ್​ಕುಮಾರ್
ಘಟಸರ್ಪಗಳಿರುವ ಹುತ್ತಕ್ಕೆ ಸಿಪಿ ಯೋಗೇಶ್ವರ್ ಕೈ ಹಾಕಿದ್ದಾರೆ: ಪುಟ್ಟರಾಜು
ಘಟಸರ್ಪಗಳಿರುವ ಹುತ್ತಕ್ಕೆ ಸಿಪಿ ಯೋಗೇಶ್ವರ್ ಕೈ ಹಾಕಿದ್ದಾರೆ: ಪುಟ್ಟರಾಜು
ಗೃಹ ಲಕ್ಷ್ಮಿ ಹಣದ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ಸಚಿವೆ ಹೆಬ್ಬಾಳ್ಕರ್​
ಗೃಹ ಲಕ್ಷ್ಮಿ ಹಣದ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ಸಚಿವೆ ಹೆಬ್ಬಾಳ್ಕರ್​
ಜೆಡಿಎಸ್ ಶಾಸಕರನ್ನು ಕಾಂಗ್ರೆಸ್​ಗೆ ತರುವಷ್ಟು ತಾಕತ್ತು ನಂಗಿಲ್ಲ: ಬಾಲಕೃಷ್ಣ
ಜೆಡಿಎಸ್ ಶಾಸಕರನ್ನು ಕಾಂಗ್ರೆಸ್​ಗೆ ತರುವಷ್ಟು ತಾಕತ್ತು ನಂಗಿಲ್ಲ: ಬಾಲಕೃಷ್ಣ
ಹೆಬ್ಬಾಳ್ಕರ್ ರಾಜೀನಾಮೆ ನೀಡಿ ಪಂಚಮಸಾಲಿ ಹೋರಾಟದಲ್ಲಿ ಭಾಗಿಯಾಗಲಿ: ಯತ್ನಾಳ್
ಹೆಬ್ಬಾಳ್ಕರ್ ರಾಜೀನಾಮೆ ನೀಡಿ ಪಂಚಮಸಾಲಿ ಹೋರಾಟದಲ್ಲಿ ಭಾಗಿಯಾಗಲಿ: ಯತ್ನಾಳ್