AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

OnePlus Nord 3: ಭಾರತಕ್ಕೆ ಬರುತ್ತಿದೆ ಬಹುನಿರೀಕ್ಷಿತ ಒನ್​ಪ್ಲಸ್ ನಾರ್ಡ್ 3 ಸ್ಮಾರ್ಟ್​ಫೋನ್: ಫೀಚರ್ಸ್ ಏನಿದೆ ನೋಡಿ

ವಾರಗಳ ಹಿಂದೆಯಷ್ಟೆ ದೇಶದಲ್ಲಿ ಒನ್​ಪ್ಲಸ್ ನಾರ್ಡ್ ಸಿಇ 3 ಲೈಟ್ (OnePlus Nord CE 3 Lite) ಹೆಸರಿನ ಫೋನನ್ನು ರಿಲೀಸ್ ಮಾಡಿದ್ದ ಒನ್​ಪ್ಲಸ್ ಇದೀಗ ಒನ್​ಪ್ಲಸ್ ನಾರ್ಡ್ 3 (OnePlus Nord 3) ಸ್ಮಾರ್ಟ್​ಫೋನನ್ನು ಬಿಡುಗಡೆ ಮಾಡಲು ಮುಂದಾಗಿದೆ. ವಾರಗಳ ಹಿಂದೆಯಷ್ಟೆ ದೇಶದಲ್ಲಿ ಒನ್​ಪ್ಲಸ್ ನಾರ್ಡ್ ಸಿಇ 3 ಲೈಟ್ (OnePlus Nord CE 3 Lite) ಹೆಸರಿನ ಫೋನನ್ನು ರಿಲೀಸ್ ಮಾಡಿದ್ದ ಒನ್​ಪ್ಲಸ್ ಇದೀಗ ಒನ್​ಪ್ಲಸ್ ನಾರ್ಡ್ 3 (OnePlus Nord 3) ಸ್ಮಾರ್ಟ್​ಫೋನನ್ನು ಬಿಡುಗಡೆ ಮಾಡಲು ಮುಂದಾಗಿದೆ.

OnePlus Nord 3: ಭಾರತಕ್ಕೆ ಬರುತ್ತಿದೆ ಬಹುನಿರೀಕ್ಷಿತ ಒನ್​ಪ್ಲಸ್ ನಾರ್ಡ್ 3 ಸ್ಮಾರ್ಟ್​ಫೋನ್: ಫೀಚರ್ಸ್ ಏನಿದೆ ನೋಡಿ
OnePlus Nord 3
Vinay Bhat
| Edited By: |

Updated on:Oct 07, 2026 | 5:28 PM

Share

ಮುಖ್ಯಾಂಶಗಳು

  • ಬಿಡುಗಡೆಗೆ ಸಿದ್ಧವಾಗಿದೆ ಒನ್​ಪ್ಲಸ್ ನಾರ್ಡ್ 3 ಸ್ಮಾರ್ಟ್​ಫೋನ್
  • ಇದು ಒನ್​ಪ್ಲಸ್ ನಾರ್ಡ್ 2 ವಿನ ಮುಂದಿನ ವರ್ಷನ್ ಆಗಿದೆ.
  • ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸಾಮರ್ಥ್ಯದಲ್ಲಿ ಇರಲಿದೆ.

ಭಾರತದಲ್ಲಿ ತನ್ನ ನಾರ್ಡ್ ಸರಣಿಯ ಸ್ಮಾರ್ಟ್​ಫೋನ್​ಗಳನ್ನು (Smartphone) ಬಿಡುಗಡೆ ಮಾಡಿ ಮಾರುಕಟ್ಟೆಯಲ್ಲಿ ಧೂಳೆಬ್ಬಿಸುತ್ತಿರುವ ಒನ್​ಪ್ಲಸ್​ ಕಂಪನಿ ಇದೀಗ ಪುನಃ ಬಂದಿದೆ. ಸತತವಾಗಿ ಹಲವಾರು ಹೊಸ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುತ್ತಿರುವ ಒನ್​ಪ್ಲಸ್, ಇದೀಗ ಭಾರತೀಯ ಮಾರುಕಟ್ಟೆಯಲ್ಲಿ ಮತ್ತೊಂದು ಹೊಸ ಫೋನ್ ಅನ್ನು ಅನಾವರಣ ಮಾಡಲು ಸಿದ್ಧವಾಗಿದೆ. ವಾರಗಳ ಹಿಂದೆಯಷ್ಟೆ ದೇಶದಲ್ಲಿ ಒನ್​ಪ್ಲಸ್ ನಾರ್ಡ್ ಸಿಇ 3 ಲೈಟ್ (OnePlus Nord CE 3 Lite) ಹೆಸರಿನ ಫೋನನ್ನು ರಿಲೀಸ್ ಮಾಡಿದ್ದ ಒನ್​ಪ್ಲಸ್ ಇದೀಗ ಒನ್​ಪ್ಲಸ್ ನಾರ್ಡ್ 3 (OnePlus Nord 3) ಸ್ಮಾರ್ಟ್​ಫೋನನ್ನು ಬಿಡುಗಡೆ ಮಾಡಲು ಮುಂದಾಗಿದೆ. ಇದು ಒನ್​ಪ್ಲಸ್ ನಾರ್ಡ್ 2 ವಿನ ಮುಂದಿನ ವರ್ಷನ್. ಕೆಲವೇ ವಾರಗಳಲ್ಲಿ ಈ ಫೋನ್ ಭಾರತೀಯ ಮಾರುಕಟ್ಟೆಗೆ ಬರಲಿದೆ ಎಂದು ವರದಿ ಆಗಿದೆ.

ಒನ್​ಪ್ಲಸ್ ನಾರ್ಡ್ 3 ಸ್ಮಾರ್ಟ್​ಫೋನ್​ನ ಅಧಿಕೃತ ಬೆಲೆ ಬಹಿರಂಗವಾಗಿಲ್ಲ. ಆದರೆ, ಮೂಲಗಳ ಪ್ರಕಾರ 30,000-40,000 ರೂ. ಒಳಗೆ ಇರಬಹುದು ಎಂದು ಅಂದಾಜಿಸಲಾಗಿದೆ. ಈ ಹಿಂದೆ ಬಿಡುಗಡೆ ಆದ ಒನ್​ಪ್ಲಸ್ ನಾರ್ಡ್ 2 ಆರಂಭಿಕ ಬೆಲೆ 27,999 ರೂ. ಆಗಿದೆ. ಈಗ ಹೊಸ ಫೋನ್ ಸಾಕಷ್ಟು ಅಭಿವೃದ್ದಿ ಹೊಂದಿ ನೂತನ ಆಯ್ಕೆಗಳೊಂದಿಗೆ ಬರಲಿದೆ. ಈ ಫೋನಿನ ಫೀಚರ್ಸ್ ಕುರಿತ ಕೆಲ ಮಾಹಿತಿ ಆನ್​ಲೈನಲ್​ನಲ್ಲಿ ಸೋರಿಕೆ ಆಗಿದೆ.

ಒನ್​ಪ್ಲಸ್ ನಾರ್ಡ್ 3 ಫೋನ್​ನಲ್ಲಿ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ6.7 ಇಂಚಿನ ಅಮೋಲೆಡ್‌ ಪೂರ್ಣ ಹೆಚ್‌ಡಿ+ ಡಿಸ್‌ಪ್ಲೇ ಇರುವ ಸಾಧ್ಯತೆ ಇದೆ. ಇದು 120Hz ರಿಫ್ರೆಶ್ ರೇಟ್‌ ಆಯ್ಕೆ ನೀಡಲಾಗಿದೆ. ಜೊತೆಗೆ ಬಯೋಮೆಟ್ರಿಕ್ ಭದ್ರತೆಗಾಗಿ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಇನ್‌ಡಿಸ್‌ಪ್ಲೇ ನಲ್ಲಿ ನೀಡಲಾಗಿದೆಯಂತೆ.

WhatsApp New Feature: ವಾಟ್ಸ್​ಆ್ಯಪ್​ನಲ್ಲಿ ವಿಡಿಯೋ ಮೆಸೇಜ್ ಆಯ್ಕೆ: ಹೊಸ ಫೀಚರ್ ಕೇಳಿ ದಂಗಾದ ಬಳಕೆದಾರರು

ಈ ಫೋನಿನಲ್ಲಿ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಇದ್ದರೂ ಅಚ್ಚರಿ ಪಡಬೇಕಿಲ್ಲ. ಬಲಿಷ್ಠವಾದ ಮೀಡಿಯಾಟೆಕ್ ಡೈಮನ್ಸಿಟಿ 900 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, 12GB RAM ಹಾಗೂ 256GB ಇಂಟರ್ನಲ್‌ ಸ್ಟೋರೇಜ್‌ ಸಾಮರ್ಥ್ಯದೊಂದಿಗೆ ಬರಬಹುದು ಎನ್ನಲಾಗಿದೆ. ಆಂಡ್ರಾಯ್ಡ್ 13 ಬಂಬಲ ಪಡೆದಿರಲಿದೆ. ಮೈಕ್ರೊ ಎಸ್​ಡಿ ಕಾರ್ಡ್ ಮೂಲಕ ಸ್ಟೋರೇಜ್ ಅನ್ನು ಹೆಚ್ಚಿಸಬಹುದು.

ಒನ್​ಪ್ಲಸ್ ನಾರ್ಡ್ 3 ಕ್ಯಾಮೆರಾ ವಿ‍ಚಾರಕ್ಕೆ ಬಂದರೆ, ಇದರಲ್ಲಿರುವ ಹಿಂಭಾಗದ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸಾಮರ್ಥ್ಯದಲ್ಲಿ ಇರಲಿದೆ. ಇದು ಸೋನಿ ಸೆನ್ಸಾರ್ ಸಾಮರ್ಥ್ಯ ಇರುವ ಸಾಧ್ಯತೆ ಇದೆ. ಹಾಗೆಯೆ 8 ಮೆಗಾಪಿಕ್ಸೆಲ್​ನ ಸೆಕೆಂಡರಿ ಕ್ಯಾಮೆರಾ ಇರಲಿದ್ದು 2 ಮೆಗಾಪಿಕ್ಸೆಲ್​ನ ಕ್ಯಾಮೆರಾ ಕೂಡ ಇರಲಿದೆ. ಮುಂಭಾಗ ವಿಡಿಯೋ ಕರೆ ಮತ್ತು ಸೆಲ್ಫಿಗಾಗಿ 16 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ಈ ಸ್ಮಾರ್ಟ್‌ಫೋನ್ ದೀರ್ಘ ಸಮಯ ಬಾಳಿಕೆ ಬರುವ 5,000mAh ಬ್ಯಾಟರಿಯನ್ನು ಒಳಗೊಂಡಿರುವುದು ಬಹುತೇಕ ಖಚಿತ. ಇದು ಬರೋಬ್ಬರಿ 80W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ ಬೆಂಬಲ ಪಡೆದುಕೊಂಡಿರುವ ಜೊತೆಗೆ ಹಾಟ್‌ಸ್ಪಾಟ್‌, ಬ್ಲೂಟೂತ್‌ 5.1, ವೈಫೈ, ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಎಂದಿನಂತೆ ಇರಲಿದೆ. ಈ ತಿಂಗಳ ಅಂತ್ಯದಲ್ಲಿ ಅಥವಾ ಮೇ ಮೊದಲ ವಾರದಲ್ಲಿ ಒನ್​ಪ್ಲಸ್ ನಾರ್ಡ್ 3 ಭಾರತದಲ್ಲಿ ಬಿಡುಗಡೆ ಆಗಲಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:35 pm, Sat, 15 April 23

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!