ದೀಪಾವಳಿಗೆ ಕಣ್ಣೀರು ತರಿಸಲಿದೆ ಈರುಳ್ಳಿ: ಪೂರೈಕೆ ಕೊರತೆಯಿಂದ ಬೆಲೆ ಹೆಚ್ಚಳ, ಕೆಜಿಗೆ 100 ರೂ. ಗಡಿ ದಾಟುವ ಸಾಧ್ಯತೆ

Onion price hike: ಹುಬ್ಬಳ್ಳಿ ಎಪಿಎಂಸಿ ಮಾರುಕಟ್ಟೆಯಲ್ಲಿ 15 ದಿನಗಳ ಹಿಂದೆ ಕ್ವಿಂಟಾಲ್ ಈರುಳ್ಳಿ ಬೆಲೆ 3 ಸಾವಿರ ರೂ. ಇದ್ದುದು ಈಗ 6 ಸಾವಿರ ರೂ.ವರೆಗೆ ಏರಿಕೆಯಾಗಿದೆ. ಬೆಳಗಾವಿ ಎಎಂಪಿಸಿ ಮಾರುಕಟ್ಟೆಯಲ್ಲಿ ಕ್ವಿಂಟಾಲ್ ಈರುಳ್ಳಿ ಬೆಲೆ 2,500 ರೂ.ನಿಂದ 5,500 ರೂ.ಗೆ ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಕ್ವಿಂಟಾಲ್‌ಗೆ ಈರುಳ್ಳಿ ಬೆಲೆ 8,000 ರಿಂದ 9,000 ರೂ.ಗೆ ಏರುವ ಸಾಧ್ಯತೆಯಿದೆ.

ದೀಪಾವಳಿಗೆ ಕಣ್ಣೀರು ತರಿಸಲಿದೆ ಈರುಳ್ಳಿ: ಪೂರೈಕೆ ಕೊರತೆಯಿಂದ ಬೆಲೆ ಹೆಚ್ಚಳ, ಕೆಜಿಗೆ 100 ರೂ. ಗಡಿ ದಾಟುವ ಸಾಧ್ಯತೆ
ಸಾಂದರ್ಭಿಕ ಚಿತ್ರ
Follow us
|

Updated on: Oct 28, 2023 | 4:01 PM

ಬೆಂಗಳೂರು, ಅಕ್ಟೋಬರ್ 28: ಬೇಡಿಕೆ ಮತ್ತು ಪೂರೈಕೆ ಕೊರತೆಯಿಂದಾಗಿ ಈರುಳ್ಳಿಯ (Onion Price) ಚಿಲ್ಲರೆ ಮತ್ತು ಸಗಟು ಬೆಲೆಯಲ್ಲಿ ಏರಿಕೆಯಾಗಿದೆ. ಮಳೆ ಕೊರತೆಯು ರಾಜ್ಯದಲ್ಲಿ ಈರುಳ್ಳಿ ಉತ್ಪಾದನೆ ಮೇಲೆ ಪರಿಣಾಮ ಬೀರಿದೆ. ಬೇಡಿಕೆಯ ಹಠಾತ್ ಹೆಚ್ಚಳದಿಂದಾಗಿ ಇತರ ರಾಜ್ಯಗಳಿಂದ ಈರುಳ್ಳಿ ಪೂರೈಕೆ ಕಡಿಮೆಯಾಗಿದೆ ಎಂದು ವರದಿಗಳು ತಿಳಿಸಿವೆ. ಸದ್ಯ ಬೆಂಗಳೂರು ನಗರದಲ್ಲಿ (Bengaluru City) ಈರುಳ್ಳಿ ಕೆಜಿಗೆ 70 ರೂ.ಗೆ ಮಾರಾಟವಾಗುತ್ತಿದ್ದು, ಸದ್ಯದ ಪರಿಸ್ಥಿತಿ ಮುಂದುವರಿದರೆ ಕೆಜಿಗೆ 100 ರೂ. ದಾಟುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ಕಳೆದ ಹತ್ತು ದಿನಗಳಿಂದ ಈರುಳ್ಳಿ ಪೂರೈಕೆಯಲ್ಲಿ ದಿಢೀರ್ ಇಳಿಕೆಯಾಗಿದೆ ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಎಂಪಿಸಿ) ಅಧಿಕಾರಿಗಳು ಮತ್ತು ಚಿಲ್ಲರೆ ಮಾರಾಟಗಾರರು ತಿಳಿಸಿದ್ದಾರೆ. ಯಶವನಪುರ ಎಪಿಎಂಸಿ ಮಾರುಕಟ್ಟೆಯಲ್ಲಿ ದಿನವೊಂದಕ್ಕೆ 70ರಿಂದ 75 ಮೂಟೆ ಈರುಳ್ಳಿ ಪೂರೈಕೆಯಾಗುತ್ತಿತ್ತು. ಆದರೆ ಸದ್ಯ ಮಾರುಕಟ್ಟೆಗೆ 40ರಿಂದ 50 ಮೂಟೆ ಮಾತ್ರ ಈರುಳ್ಳಿ ಪೂರೈಕೆಯಾಗುತ್ತಿದೆ. ಕಳೆದ ಕೆಲವು ದಿನಗಳಿಂದ ಈರುಳ್ಳಿ ಬೆಲೆ ಶೇ 50ರಷ್ಟು ಏರಿಕೆಯಾಗಿದೆ.

ವರದಿಯ ಪ್ರಕಾರ ಚಿಕ್ಕಮಗಳೂರು ಜಿಲ್ಲೆಯ ಕಡೂರು ಮತ್ತು ತರೀಕೆರೆ ಪ್ರದೇಶದಲ್ಲಿ 10,950 ಹೆಕ್ಟೇರ್ ಪ್ರದೇಶದಲ್ಲಿ ಈರುಳ್ಳಿ ಬೆಳೆಯಲಾಗಿದೆ. ಮಳೆಯ ಕೊರತೆಯಿಂದಾಗಿ ರೈತರು ಕೇವಲ 6,214 ಹೆಕ್ಟೇರ್‌ನಲ್ಲಿ ಈರುಳ್ಳಿ ಕೊಯ್ಲು ಮಾಡಲು ಸಾಧ್ಯವಾಯಿತು. ಮುಂಗಾರು ಮಳೆಯ ಕೊರತೆಯಿಂದಾಗಿ ಧಾರವಾಡ ಜಿಲ್ಲೆಯಲ್ಲಿ 6,126 ಹೆಕ್ಟೇರ್ ಈರುಳ್ಳಿ ಬೆಳೆ ನಾಶವಾಗಿದೆ ಎಂದು ತೋಟಗಾರಿಕಾ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ ಎಂದು ‘ನ್ಯೂಸ್ 9’ ವರದಿ ಮಾಡಿದೆ.

ಹುಬ್ಬಳ್ಳಿ ಎಪಿಎಂಸಿ ಮಾರುಕಟ್ಟೆಯಲ್ಲಿ 15 ದಿನಗಳ ಹಿಂದೆ ಕ್ವಿಂಟಾಲ್ ಈರುಳ್ಳಿ ಬೆಲೆ 3 ಸಾವಿರ ರೂ. ಇದ್ದುದು ಈಗ 6 ಸಾವಿರ ರೂ.ವರೆಗೆ ಏರಿಕೆಯಾಗಿದೆ. ಬೆಳಗಾವಿ ಎಎಂಪಿಸಿ ಮಾರುಕಟ್ಟೆಯಲ್ಲಿ ಕ್ವಿಂಟಾಲ್ ಈರುಳ್ಳಿ ಬೆಲೆ 2,500 ರೂ.ನಿಂದ 5,500 ರೂ.ಗೆ ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಕ್ವಿಂಟಾಲ್‌ಗೆ ಈರುಳ್ಳಿ ಬೆಲೆ 8,000 ರಿಂದ 9,000 ರೂ.ಗೆ ಏರುವ ಸಾಧ್ಯತೆಯಿದೆ. ಇದರಿಂದಾಗಿ ಚಿಲ್ಲರೆ ವ್ಯಾಪಾರಿಗಳು ಕೆಜಿಗೆ 100 ರಿಂದ 120 ರೂ. ವರಗೆಎ ಮಾರಾಟ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ: ಉದ್ಯಮಿ ಮುಕೇಶ್ ಅಂಬಾನಿಗೆ ಕೊಲೆ ಬೆದರಿಕೆ: 20 ಕೋಟಿ ರೂ.ಗೆ ಬೇಡಿಕೆ ಇಟ್ಟ ಆರೋಪಿ

ಮಹಾರಾಷ್ಟ್ರದಿಂದ ಈರುಳ್ಳಿ ಪೂರೈಕೆ ಕುಂಠಿತ

ಕಲ್ಯಾಣ ಕರ್ನಾಟಕ ಪ್ರದೇಶದ ಹಲವು ಜಿಲ್ಲೆಗಳಿಗೆ ಮಹಾರಾಷ್ಟ್ರದ ನಾಸಿಕ್ ಮತ್ತು ಸೊಲ್ಲಾಪುರ ಪ್ರದೇಶಗಳಿಂದ ಈರುಳ್ಳಿ ಪೂರೈಕೆಯಾಗುತ್ತದೆ. ಬೇಡಿಕೆಯ ಹಠಾತ್ ಹೆಚ್ಚಳದಿಂದಾಗಿ ಮಹಾರಾಷ್ಟ್ರದಿಂದ ಈರುಳ್ಳಿ ಪೂರೈಕೆಗೆ ತೊಂದರೆಯಾಗಿದೆ. ಕಳೆದ ಎರಡು ವರ್ಷಗಳಿಂದ ಈರುಳ್ಳಿ ಬೆಲೆಯಲ್ಲಿ ಯಾವುದೇ ಏರಿಕೆಯಾಗದ ಕಾರಣ ಈ ವರ್ಷ ಅನೇಕ ಸಾಮಾನ್ಯ ಈರುಳ್ಳಿ ಬೆಳೆಗಾರರು ಇತರ ಬೆಳೆಗಳನ್ನು ಬೆಳೆಯಲು ಪ್ರಾರಂಭಿಸಿದ್ದರು ಎಂದು ವರದಿ ತಿಳಿಸಿದೆ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು