AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾನ್ವಾ ಸಂಸ್ಥೆಯಿಂದ ಭಾರೀ ಉದ್ಯೋಗ ಕಡಿತ; ಶೇ. 22ರಷ್ಟು ಉದ್ಯೋಗಿಗಳ ಮೇಲೆ ಪರಿಣಾಮ

ಗ್ರಾಫಿಕ್ಸ್ ಡಿಸೈನಿಂಗ್ ಪ್ಲಾಟ್​ಫಾರ್ಮ್ ಆದ ಕ್ಯಾನ್‌ವಾ ತನ್ನ 13 ವರ್ಷಗಳ ಇತಿಹಾಸದಲ್ಲಿಯೇ ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ಉದ್ಯೋಗ ಕಡಿತವನ್ನು ಘೋಷಿಸಿದೆ. ಜಾಗತಿಕವಾಗಿ ಸುಮಾರು 1,271 ನೌಕರರಿಗೆ (ಶೇ. 22) ಇದರ ಪರಿಣಾಮ ಎದುರಾಗಲಿದೆ. ಹಲವರನ್ನು ಲೇ ಆಫ್ ಮಾಡಲಾಗುತ್ತಿದೆ. ಇನ್ನೂ ಕೆಲವರನ್ನು ಸ್ಥಳಾಂತರ ಮಾಡಲಾಗುತ್ತಿದೆ. ಕಂಪನಿಯ ಕಾರ್ಯಸ್ವರೂಪದಲ್ಲಿ ಪುನಾರಚನೆ ಮಾಡಲಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಕ್ಯಾನ್ವಾ ಸಂಸ್ಥೆಯಿಂದ ಭಾರೀ ಉದ್ಯೋಗ ಕಡಿತ; ಶೇ. 22ರಷ್ಟು ಉದ್ಯೋಗಿಗಳ ಮೇಲೆ ಪರಿಣಾಮ
ಲೇ ಆಫ್Image Credit source: Getty Images
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 04, 2026 | 2:44 PM

Share

ಸಿಡ್ನಿ, ನವೆಂಬರ್ 4: ವಿಶ್ವದಾದ್ಯಂತ ಜನಪ್ರಿಯವಾಗಿರುವ ಗ್ರಾಫಿಕ್ ಡಿಸೈನ್ ಪ್ಲಾಟ್‌ಫಾರ್ಮ್ ಕ್ಯಾನ್ವಾ (Canva), ತನ್ನ ವ್ಯವಹಾರದಲ್ಲಿ ಮರುರಚನೆ (Restructuring) ಮಾಡುವ ಸಲುವಾಗಿ ಭಾರಿ ಪ್ರಮಾಣದ ಉದ್ಯೋಗ ಕಡಿತವನ್ನು ಘೋಷಿಸಿದೆ. ಆಸ್ಟ್ರೇಲಿಯಾ ಮೂಲದ ಈ ಕಂಪನಿಯು ತನ್ನ 13 ವರ್ಷಗಳ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಈ ಕಠಿಣ ನಿರ್ಧಾರ ಕೈಗೊಂಡಿದೆ.

ಕಂಪನಿಯ ಗ್ಲೋಬಲ್ ವರ್ಕ್​ಫೋರ್ಸ್​ನ ಶೇ. 22ರಷ್ಟಿರುವ ಒಟ್ಟು 1,271 ಉದ್ಯೋಗಿಗಳು ಈ ಪುನರ್ರಚನೆಯಿಂದ ಬಾಧಿತರಾಗಲಿದ್ದಾರೆ. ಇವರಲ್ಲಿ ಕೆಲವು ಉದ್ಯೋಗಿಗಳು ಕೆಲಸ ಕಳೆದುಕೊಳ್ಳಲಿದ್ದರೆ, ಇನ್ನು ಕೆಲವರದ್ದು ಸ್ಥಾನಪಲ್ಲಟವಾಗಲಿದೆ. ಕೆಲವರನ್ನು ಕೇಂದ್ರ ಕಚೇರಿಗಳಿಗೆ ಸ್ಥಳಾಂತರಗೊಳ್ಳುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: ಬಸ್, ರೈಲಿನಂತೆ ವಿಮಾನದಲ್ಲೂ ‘ಹಾರ್ನ್’ ಇದೆಯಾ? ಯಾರಿಗೂ ಗೊತ್ತಿರದ ಏರ್‌ಲೈನ್ಸ್‌ಗಳ ಆಸಕ್ತಿಕರ ವಿಷಯ

ಕ್ಯಾನ್ವಾದ ಈ ನಿರ್ಧಾರಕ್ಕೆ ಕಾರಣವೇನು?

ಕಳೆದ ಒಂದು ದಶಕದಿಂದ ನಿರಂತರವಾಗಿ ಬೆಳೆಯುತ್ತಿದ್ದ ಕ್ಯಾನ್‌ವಾ ಸಂಸ್ಥೆಯ ಬೆಳವಣಿಗೆಯ ವೇಗದಲ್ಲಿ ಇಳಿಕೆಯಾಗಿರುವುದು ಮತ್ತು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದಿಂದ ಮಾರುಕಟ್ಟೆಯಲ್ಲಿ ಉಂಟಾಗಿರುವ ಬದಲಾವಣೆಗಳಿಗೆ ಅನುಗುಣವಾಗಿ ತನ್ನ ಕಾರ್ಯಾಚರಣೆಯನ್ನು ಸರಳಗೊಳಿಸಲು ಕಂಪನಿಯು ಈ ಕ್ರಮ ಕೈಗೊಂಡಿದೆ.

ಉದ್ಯೋಗ ಬಿಟ್ಟುಹೋಗುವವರಿಗೆ ಪರಿಹಾರ ಪ್ಯಾಕೇಜ್

ಕೆಲಸ ಕಳೆದುಕೊಳ್ಳುವ ಉದ್ಯೋಗಿಗಳಿಗೆ ನೆರವಾಗಲು ಕ್ಯಾನ್‌ವಾ ಸಂಸ್ಥೆಯು ಅತ್ಯುತ್ತಮ ಪರಿಹಾರ ಪ್ಯಾಕೇಜ್ ಘೋಷಿಸಿದೆ. ಇದರಡಿ ಕನಿಷ್ಠ 6 ತಿಂಗಳ ವೇತನ, ಮುಂದಿನ 12 ತಿಂಗಳ ಆರೋಗ್ಯ ವಿಮೆ ಸೌಲಭ್ಯ, ವೃತ್ತಿ ಬೆಂಬಲ (Career support) ಹಾಗೂ ತಾವು ಬಳಸುತ್ತಿದ್ದ ಮ್ಯಾಕ್‌ಬುಕ್ (MacBooks) ಲ್ಯಾಪ್‌ಟಾಪ್‌ಗಳನ್ನು ಅವರೇ ಇಟ್ಟುಕೊಳ್ಳಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ಟಾಟಾ ಗ್ರೂಪ್ ವಿವಾದ ಸೌಹಾರ್ದಯುತವಾಗಿ ಬಗೆಹರಿಯಬೇಕು, ಸರ್ಕಾರದ ಮಧ್ಯಪ್ರವೇಶದ ಅಗತ್ಯವಿಲ್ಲ: ನಿರ್ಮಲಾ ಸೀತಾರಾಮನ್

ಸಿಇಒ ಸ್ಪಷ್ಟನೆ: ಇದು ಕಂಪನಿಯ ಇತಿಹಾಸದಲ್ಲಿಯೇ ಅತ್ಯಂತ ಕಠಿಣ ಕ್ಷಣ ಎಂದು ಕ್ಯಾನ್‌ವಾ ಮುಖ್ಯಸ್ಥೆ ಮತ್ತು ಸಹ-ಸಂಸ್ಥಾಪಕಿ ಮೆಲಾನಿ ಪರ್ಕಿನ್ಸ್ (Melanie Perkins) ಉದ್ಯೋಗಿಗಳಿಗೆ ಕಳುಹಿಸಿರುವ ಆಂತರಿಕ ಇಮೇಲ್‌ನಲ್ಲಿ ತಿಳಿಸಿದ್ದಾರೆ. ಮಾರುಕಟ್ಟೆಯಲ್ಲಿ ಹೆಚ್ಚು ಸ್ಪರ್ಧಾತ್ಮಕವಾಗಿರಲು ಮತ್ತು ಸಣ್ಣ ಹಾಗೂ ಪರಿಣಾಮಕಾರಿ ತಂಡಗಳನ್ನು ರೂಪಿಸಲು ಈ ಪುನರ್ರಚನೆ ಅನಿವಾರ್ಯವಾಗಿತ್ತು ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ನಮಗೆ ಅರಮನೆಯಲ್ಲಿ ಉಳಿದುಕೊಳ್ಳಲು ಸರ್ಕಾರ ಜಾಗ ಕೊಟ್ಟಿದ್ದಲ್ಲ: ಪ್ರಮೋದಾದೇವಿ
ನಮಗೆ ಅರಮನೆಯಲ್ಲಿ ಉಳಿದುಕೊಳ್ಳಲು ಸರ್ಕಾರ ಜಾಗ ಕೊಟ್ಟಿದ್ದಲ್ಲ: ಪ್ರಮೋದಾದೇವಿ
ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಇದುವೇ ಕಾರಣ! ಸಚಿವ ಬೈರತಿ ಹೇಳಿದ್ದೇನು ನೋಡಿ
ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಇದುವೇ ಕಾರಣ! ಸಚಿವ ಬೈರತಿ ಹೇಳಿದ್ದೇನು ನೋಡಿ
ಬೆಂಗಳೂರಿನ ಜನರಿಗೆ ಬಿಗ್​​ ಶಾಕ್
ಬೆಂಗಳೂರಿನ ಜನರಿಗೆ ಬಿಗ್​​ ಶಾಕ್
ಲೆಟರ್ ಪಡೆಯಲು ಜಗದೀಶ್​ಗೆ ಮತ್ತೊಂದು ಅವಕಾಶ: ಶುರುವಾಯ್ತು ರೋಚಕ ಸವಾಲು
ಲೆಟರ್ ಪಡೆಯಲು ಜಗದೀಶ್​ಗೆ ಮತ್ತೊಂದು ಅವಕಾಶ: ಶುರುವಾಯ್ತು ರೋಚಕ ಸವಾಲು
ಹಾಸನಾಂಬೆ ಸನ್ನಿಧಿಯಲ್ಲಿ ಧರ್ಮದರ್ಶನ ಸಾಲು ಖಾಲಿ ಖಾಲಿ! ಯಾಕೆ ಗೊತ್ತಾ?
ಹಾಸನಾಂಬೆ ಸನ್ನಿಧಿಯಲ್ಲಿ ಧರ್ಮದರ್ಶನ ಸಾಲು ಖಾಲಿ ಖಾಲಿ! ಯಾಕೆ ಗೊತ್ತಾ?
ಅಕ್ಕಿ ಬೆಲೆ ಮತ್ತೆ ದಿಢೀರ್ ಏರಿಕೆ: 2-3 ತಿಂಗಳಲ್ಲಿ ಶೇ 25-30ರಷ್ಟು ಹೆಚ್ಚಳ
ಅಕ್ಕಿ ಬೆಲೆ ಮತ್ತೆ ದಿಢೀರ್ ಏರಿಕೆ: 2-3 ತಿಂಗಳಲ್ಲಿ ಶೇ 25-30ರಷ್ಟು ಹೆಚ್ಚಳ
ಸೌಜನ್ಯ ಪ್ರಕರಣ: ಅದೊಂದು ರಿಪೋರ್ಟ್ ನಲ್ಲಿದೆ ಸೌಜನ್ಯ ಸಾವಿನ ರಹಸ್ಯ!
ಸೌಜನ್ಯ ಪ್ರಕರಣ: ಅದೊಂದು ರಿಪೋರ್ಟ್ ನಲ್ಲಿದೆ ಸೌಜನ್ಯ ಸಾವಿನ ರಹಸ್ಯ!
ರಾಮನಗರ ವಿವಿಧೆಡೆ ಸುರಿದ ಧಾರಾಕಾರ ಮಳೆ; ರಾಗಿ ಬೆಳೆಗಾರರ ಮುಖದಲ್ಲಿ ಮಂದಹಾಸ!
ರಾಮನಗರ ವಿವಿಧೆಡೆ ಸುರಿದ ಧಾರಾಕಾರ ಮಳೆ; ರಾಗಿ ಬೆಳೆಗಾರರ ಮುಖದಲ್ಲಿ ಮಂದಹಾಸ!
ಗಗನ್ vs ಯಶಸ್: ಪತ್ರ ಪಡೆಯಲು ಟಫ್ ಟಾಸ್ಕ್ ಕೊಟ್ಟ ಬಿಗ್ ಬಾಸ್
ಗಗನ್ vs ಯಶಸ್: ಪತ್ರ ಪಡೆಯಲು ಟಫ್ ಟಾಸ್ಕ್ ಕೊಟ್ಟ ಬಿಗ್ ಬಾಸ್
ಇಂದು ಈ ರಾಶಿಯವರು ನಿರ್ಲಕ್ಷ್ಯತನವನ್ನು ತ್ಯಜಿಸಿದರೆ ಉತ್ತಮ
ಇಂದು ಈ ರಾಶಿಯವರು ನಿರ್ಲಕ್ಷ್ಯತನವನ್ನು ತ್ಯಜಿಸಿದರೆ ಉತ್ತಮ