ಟಾಟಾ ಕನ್ಸಲ್ಟೆನ್ಸಿಯ 30,000 ಉದ್ಯೋಗಿಗಳಿಗೆ ಐಟಿ ಇಲಾಖೆಯಿಂದ ನೋಟೀಸ್; ತಂತ್ರಾಂಶ ದೋಷ ಕಾರಣ?

TCS employees receive tax demand notice: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್​ನ 30,000ರಿಂದ 40,000 ಉದ್ಯೋಗಿಗಳಿಗೆ ಆದಾಯ ತೆರಿಗೆ ಇಲಾಖೆಯಿಂದ ಟ್ಯಾಕ್ಸ್ ಡಿಮ್ಯಾಂಡ್ ನೋಟೀಸ್ ಸಲ್ಲಿಕೆ ಆಗಿರುವುದು ತಿಳಿದುಬಂದಿದೆ. ಐಟಿ ಇಲಾಖೆಯ ತಂತ್ರಾಂಶ ದೋಷದಿಂದಾಗಿ ಟಿಡಿಎಸ್ ಕ್ಲೇಮ್ ಸರಿಯಾಗಿ ಅಪ್​ಡೇಟ್ ಆಗಿಲ್ಲದಿರುವುದು ಇದಕ್ಕೆ ಕಾರಣ ಎನ್ನಲಾಗಿದೆ. ಈ ಸಾಫ್ಟ್​ವೇರ್ ದೋಷವನ್ನು ಸರಿಪಡಿಸುವ ಪ್ರಯತ್ನ ನಡೆದಿದೆ.

ಟಾಟಾ ಕನ್ಸಲ್ಟೆನ್ಸಿಯ 30,000 ಉದ್ಯೋಗಿಗಳಿಗೆ ಐಟಿ ಇಲಾಖೆಯಿಂದ ನೋಟೀಸ್; ತಂತ್ರಾಂಶ ದೋಷ ಕಾರಣ?
ಟಿಸಿಎಸ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 13, 2024 | 12:07 PM

ನವದೆಹಲಿ, ಸೆಪ್ಟೆಂಬರ್ 13: ದೇಶದ ಅತಿದೊಡ್ಡ ಐಟಿ ಸರ್ವಿಸ್ ಸಂಸ್ಥೆ ಎನಿಸಿದ ಟಿಸಿಎಸ್​ನ ಸಾವಿರಾರು ಉದ್ಯೋಗಿಗಳಿಗೆ ಆದಾಯ ತೆರಿಗೆ ಇಲಾಖೆಯಿಂದ ಟ್ಯಾಕ್ಸ್ ಡಿಮ್ಯಾಂಡ್ ನೋಟೀಸ್ ಬಂದಿದೆ. ಇಲ್ಲಿ ಉದ್ಯೋಗಿಗಳಿಂದ ತಪ್ಪಾಗಿಲ್ಲ. ಇಲಾಖೆಯ ಸಾಫ್ಟ್​ವೇರ್ ದೋಷದ ಪರಿಣಾಮ ಇದು ಎನ್ನಲಾಗಿದೆ. ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಾರ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಸಂಸ್ಥೆಗೆ ಸೇರಿದ 30 ಸಾವಿರದಿಂದ 40 ಸಾವಿರ ಮಂದಿ ಉದ್ಯೋಗಿಗಳಿಗೆ ಐಟಿ ನೋಟೀಸ್ ಸಲ್ಲಿಕೆ ಆಗಿದೆ. 50,000 ರೂನಿಂದ 1,00,000 ರೂವರೆಗೆ ಹಣಕ್ಕೆ ಟ್ಯಾಕ್ಸ್ ಡಿಮ್ಯಾಂಡ್ ಮಾಡಲಾಗಿರುವುದು ತಿಳಿದುಬಂದಿದೆ.

ಆದಾಯ ತೆರಿಗೆ ಸೆಕ್ಷನ್ 143(1) ಅಡಿಯಲ್ಲಿ ಸೆಪ್ಟೆಂಬರ್ 9ರಂದು ಈ ಉದ್ಯೋಗಿಗಳಿಗೆ ಟ್ಯಾಕ್ಸ್ ಡಿಮ್ಯಾಂಡ್ ನೋಟೀಸ್ ಬಂದಿದೆ. 2023-24ರ ಹಣಕಾಸು ವರ್ಷದಲ್ಲಿ ಈ ಉದ್ಯೋಗಿಗಳ ಟಿಡಿಎಸ್ ಪಾವತಿ ಆಗಿರುವುದು ದಾಖಲಾಗಿಯೇ ಇಲ್ಲ. ಹೀಗಾಗಿ, ನೋಟೀಸ್ ಸಲ್ಲಿಸಲಾಗಿದೆ. ಆದರೆ, ವಾಸ್ತವದಲ್ಲಿ ತೆರಿಗೆ ಇಲಾಖೆಯ ಸಾಫ್ಟ್​ವೇರ್​ನಲ್ಲಿ ಇರುವ ದೋಷವು ಇದಕ್ಕೆ ಕಾರಣವಾಗಿದೆ. ಈ ಸಾಫ್ಟ್​ವೇರ್ ಎರರ್​ನಿಂದಾಗಿ ಆದಾಯ ತೆರಿಗೆ ಪೋರ್ಟಲ್​ನಲ್ಲಿ ಟಿಡಿಎಸ್ ಕ್ಲೇಮ್ ಸರಿಯಾಗಿ ಅಪ್​ಡೇಟ್ ಆಗಿಲ್ಲ ಎನ್ನಲಾಗಿದೆ.‘

ಇದನ್ನೂ ಓದಿ: ಭಾರತದಲ್ಲಿ ಫ್ಯಾಕ್ಟರಿ ಮಾಡಿ, ಆದ್ರೆ ಟೆಕ್ನಾಲಜಿ ಬಿಟ್ಟುಕೊಡಬೇಡಿ: ಚೀನೀ ಇವಿ ಕಂಪನಿಗಳಿಗೆ ಗೈಡ್​ಲೈನ್ಸ್

ಉದ್ಯೋಗಿಗಳಿಗೆ ಟ್ಯಾಕ್ಸ್ ಡಿಮ್ಯಾಂಡ್ ನೋಟೀಸ್ ಬಂದಿರುವ ವಿಚಾರ ಟಿಸಿಎಸ್ ಮ್ಯಾನೇಜ್ಮೆಂಟ್ ಗಮನಕ್ಕೆ ಬಂದಿದೆ. ಈ ವಿಚಾರದ ಬಗ್ಗೆ ಆದಾಯ ತೆರಿಗೆ ಇಲಾಖೆ ಜೊತೆ ಸಂಪರ್ಕದಲ್ಲಿದ್ದು, ಸಾಫ್ಟ್​ವೇರ್ ದೋಷದ ಸಮಸ್ಯೆ ನಿವಾರಣೆಗೆ ಪ್ರಯತ್ನ ನಡೆಸುತ್ತಿದೆ. ಟಿಸಿಎಸ್ ಉದ್ಯೋಗಿಗಳ ಟ್ಯಾಕ್ಸ್ ರಿಟರ್ನ್ಸ್ ಅನ್ನು ತೆರಿಗೆ ಇಲಾಖೆ ವತಿಯಿಂದ ರೀಪ್ರೋಸಸಿಂಗ್ ಆಗಲಿದೆ. ನಂತರ 26ಎಎಸ್ ಫಾರ್ಮ್ ಮತ್ತು 16ಎ ಫಾರ್ಮ್​ಗೆ ಟಿಡಿಎಸ್ ಮಾಹಿತಿ ತಾಳೆಯಾಗಲಿದೆ. ಇದೇ ವೇಳೆ, ಮುಂದಿನ ಸೂಚನೆ ಬರುವವರೆಗೂ ಯಾರೂ ಕೂಡ ಟ್ಯಾಕ್ಸ್ ಡಿಮ್ಯಾಂಡ್ ನೋಟೀಸ್​ಗೆ ಸ್ಪಂದಿಸಬಾರದು ಎಂದೂ ಟಿಸಿಎಸ್ ಸಂಸ್ಥೆ ತನ್ನ ಉದ್ಯೋಗಿಗಳಿಗೆ ಸೂಚನೆ ಕೊಟ್ಟಿದೆ.

ಉದ್ಯೋಗಿಗಳ ಸಂಖ್ಯೆ ಹೆಚ್ಚಿಸಿಕೊಂಡ ಟಿಸಿಎಸ್

ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಸಂಸ್ಥೆ ಅತಿಹೆಚ್ಚು ಉದ್ಯೋಗಿಗಳನ್ನು ಒಳಗೊಂಡಿರುವ ಭಾರತದ ಐಟಿ ಕಂಪನಿಯಾಗಿದೆ. 2024-25ರ ಹಣಕಾಸು ವರ್ಷದ ಮೊದಲ ಕ್ವಾರ್ಟರ್ ಆದ ಏಪ್ರಿಲ್​ನಿಂದ ಜೂನ್​ವರೆಗಿನ ಅವಧಿಯಲ್ಲಿ ಉದ್ಯೋಗಿಗಳ ಸಂಖ್ಯೆ 5,452 ದಷ್ಟು ಹೆಚ್ಚಳವಾಗಿದೆ. ಇದರೊಂದಿಗೆ ಸಂಸ್ಥೆಯ ಒಟ್ಟು ಉದ್ಯೋಗಿಗಳ ಸಂಖ್ಯೆ 6,06,998 ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್