Rebel Employees: ವರ್ಕ್ ಫ್ರಂ ಹೋಮ್ ಬೇಡ ಎಂದ ಸಾಫ್ಟ್​ವೇರ್ ಕಂಪನಿ ವಿರುದ್ಧ ತಿರುಗಿಬಿದ್ದ 5,000ಕ್ಕೂ ಹೆಚ್ಚು ಉದ್ಯೋಗಿಗಳು

SAP and Work From Home: ವರ್ಕ್ ಫ್ರಂ ಹೋಮ್ ನಿಲ್ಲಿಸಿ ಕಚೇರಿಗೆ ಬಂದು ಕೆಲಸ ಮಾಡುವಂತೆ ಹೇಳಿದ ಎಸ್​ಎಪಿ ವಿರುದ್ಧ ಉದ್ಯೋಗಿಗಳು ಅಸಮಾಧಾನಗೊಂಡಿದ್ದಾರೆ. ಕಚೇರಿಗೆ ಹೋಗಿ ಕೆಲಸ ಮಾಡುವ ಬದಲು ಬೇರೆ ಕೆಲಸ ನೋಡಿಕೊಳ್ಳುತ್ತೇವೆ ಎಂದು 5,000ಕ್ಕೂ ಹೆಚ್ಚು ಉದ್ಯೋಗಿಗಳು ನಿರ್ಧರಿಸಿದ್ದಾರೆ. ಇಷ್ಟು ದಿನ ವರ್ಕ್ ಫ್ರಂ ಮಾಡಿ ಉತ್ತೇಜಿಸಿದ್ದ ಕಂಪನಿ ಈಗ ವಿಶ್ವಾಸದ್ರೋಹ ಮಾಡಿದೆ ಎಂಬುದು ಉದ್ಯೋಗಿಗಳ ಅಸಮಾಧಾನ.

Rebel Employees: ವರ್ಕ್ ಫ್ರಂ ಹೋಮ್ ಬೇಡ ಎಂದ ಸಾಫ್ಟ್​ವೇರ್ ಕಂಪನಿ ವಿರುದ್ಧ ತಿರುಗಿಬಿದ್ದ 5,000ಕ್ಕೂ ಹೆಚ್ಚು ಉದ್ಯೋಗಿಗಳು
ಎಸ್​ಎಪಿ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 04, 2024 | 11:40 AM

ನವದೆಹಲಿ, ಫೆ. 4: ಯೂರೋಪ್​ನ ಜರ್ಮನಿ ಮೂಲದ ಟೆಕ್ ಕಂಪನಿ ಎಸ್​ಎಪಿ (SAP) ಈಗ ತನ್ನ ಹಲವು ಉದ್ಯೋಗಿಗಳ ವಿರೋಧ ಎದುರುಹಾಕಿಕೊಂಡಿದೆ. ಇಷ್ಟು ವರ್ಷ ವರ್ಕ್ ಫ್ರಂ ಹೋಮ್ (Work from Home) ಮಾಡಿ ಎಂದು ಪೀಡಿಸಿ ಈಗ ವಾಪಸ್ ಬನ್ನಿ ಎಂದು ಹೇಳುತ್ತಿರುವ ಕಂಪನಿ ವಿರುದ್ಧ 5,000ಕ್ಕೂ ಹೆಚ್ಚು ಉದ್ಯೋಗಿಗಳು ತಿರುಗಿಬಿದ್ದಿದ್ದಾರೆ. ಕಚೇರಿಗೆ ಹೋಗುವ ಬದಲು ಬೇರೆ ಕೆಲಸ ನೋಡಿಕೊಳ್ಳುತ್ತೇವೆ ಎನ್ನುತ್ತಿರುವ ಉದ್ಯೋಗಿಗಳು, ಇತರ ಕಂಪನಿಗಳಲ್ಲಿ ಕೆಲಸಕ್ಕೆ ಅರ್ಜಿ ಹಾಕುತ್ತಿದ್ದಾರೆ ಎಂದು ವರದಿಗಳು ಹೇಳುತ್ತಿವೆ.

‘ಇತ್ತೀಚಿನವರೆಗೂ ಮನೆಯಿಂದ ಕೆಲಸ ಮಾಡಲು ನಮಗೆ ಉತ್ತೇಜನ ಕೊಡುತ್ತಿದ್ದ ಕಂಪನಿಯ ವರಸೆ ಈಗ ತಿರುವು ಮುರುವಾಗಿದೆ. ಇದರಿಂದ ನಮಗೆ ವಂಚನೆ ಆದಂತಾಗಿದೆ’ ಎಂದು ಉದ್ಯೋಗಿಗಳು ಬರೆದಿರುವ ಪತ್ರವೊಂದು ಸಿಕ್ಕಿದೆ. ಕಚೇರಿಗೆ ಬಂದು ಕೆಲಸ ಮಾಡುವಂತೆ ಕಂಪನಿ ನೀಡಿರುವ ಕಾರಣ ಸಮಂಜಸವಾಗಿಲ್ಲ ಎಂದು ಉದ್ಯೋಗಿಗಳು ಕಂಪನಿಯ ಆಂತರಿಕ ಸಂವಹನದಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಫೆ. 29ರ ನಂತರ ಪೇಟಿಎಂನಲ್ಲಿ ನೀವು ಏನು ಬಳಸಬಹುದು, ಯಾವುದು ಸಾಧ್ಯವಿಲ್ಲ? ಇಲ್ಲಿದೆ ಡೀಟೇಲ್ಸ್

ವಾರಕ್ಕೆ ಮೂರು ದಿನ ಕಚೇರಿಗೆ ಬಂದು ಕೆಲಸ ಮಾಡಬೇಕು

ಕೋವಿಡ್ ಕಾಲಘಟ್ಟದಲ್ಲಿ ಬಹುತೇಕ ಎಲ್ಲಾ ಟೆಕ್ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಮನೆಯಿಂದ ಕೆಲಸ ಮಾಡುವಂತೆ ತಿಳಿಸಿದ್ದವು. ಈಗ್ಗೆ ಕಳೆದ ಒಂದು ವರ್ಷದಿಂದ ಒಂದೊಂದೇ ಕಂಪನಿಗಳು ತಮ್ಮ ಉದ್ಯೋಗಿಗಳನ್ನು ವಾಪಸ್ ಕಚೇರಿಗೆ ಕರೆಸಿಕೊಳ್ಳತೊಡಗಿವೆ. ಎಸ್​ಎಪಿ ಕೂಡ ತನ್ನ ಉದ್ಯೋಗಿಗಳಿಗೆ ಕಳೆದ ತಿಂಗಳು (ಜನವರಿ) ಫರ್ಮಾನು ಹೊರಡಿಸಿದೆ. ಜಾಗತಿಕವಾಗಿ ಎಲ್ಲಾ ಉದ್ಯೋಗಿಗಳು ಏಪ್ರಿಲ್ ತಿಂಗಳಿನಿಂದ ವಾರಕ್ಕೆ ಮೂರು ದಿನ ಸಮೀಪದ ಕಚೇರಿ ಅಥವಾ ಗ್ರಾಹಕ ಸ್ಥಳಕ್ಕೆ ಹೋಗಿ ಕೆಲಸ ಮಾಡುವುದು ಕಡ್ಡಾಯ ಎಂದು ಹೇಳಿದೆ.

ಇದನ್ನೂ ಓದಿ: ಇನ್ಕಮ್ ಟ್ಯಾಕ್ಸ್ ಜಾಸ್ತಿ ಕಟ್ಟುತ್ತಿದ್ದೀರಾ? ಇಲ್ಲಿವೆ ಹೊರೆ ಇಳಿಸುವ ಮಾರ್ಗಗಳು

ಉದ್ಯೋಗಿಗಳು ಮನೆಯಿಂದ ಕೆಲಸ ಮಾಡಿದರೆ ಎಸ್​ಎಪಿಯ ಸಂಸ್ಕೃತಿ ಮತ್ತು ಸಾಂಘಿಕ ಕೆಲಸಕ್ಕೆ ಧಕ್ಕೆ ಆಗುತ್ತದೆ. ವಿಡಿಯೋ ಕಾನ್ಫೆರೆನ್ಸ್​ನಲ್ಲಿ ನಮ್ಮ ಸಂಸ್ಕೃತಿ ಅರಿಯಲು ಆಗುವುದಿಲ್ಲ. ನಿಮ್ಮ ಕ್ಷಮತೆ ಹೆಚ್ಚಿಸಲು ಸಾಧ್ಯವಾಗುವುದಿಲ್ಲ ಎಂದು ಎಸ್​ಎಪಿ ಸಿಇಒ ಕ್ರಿಸ್ಟಿಯಾನ್ ಕ್ಲೇನ್ ಹೇಳುತ್ತಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!