Padmashri Award 2023: ರಾಕೇಶ್ ಜುಂಜುನ್ವಾಲಾಗೆ ಮರಣೋತ್ತರ ಪದ್ಮಶ್ರೀ, ಯುವಕರಲ್ಲಿ ಸಾಧಿಸುವ ಕಲೆ ಕಲಿಸಿದ ಬಿಲಿಯನೇರ್

ರಾಕೇಶ್ ಜುಂಜುನ್ವಾಲಾ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ನೀಡಲು ಸರ್ಕಾರ ನಿರ್ಧಾರಿಸಿದೆ. ಆಗಸ್ಟ್ 14, 2022 ​ ನಿಧನರಾದ ಅವರಿಗೆ ಭಾರತದ ಮೂರನೇ ಅತ್ಯುನ್ನತ ನಾಗರಿಕ ಗೌರವವನ್ನು ಮರಣೋತ್ತರವಾಗಿ ನೀಡಲಾಗುತ್ತದೆ.

Padmashri Award 2023: ರಾಕೇಶ್ ಜುಂಜುನ್ವಾಲಾಗೆ ಮರಣೋತ್ತರ ಪದ್ಮಶ್ರೀ, ಯುವಕರಲ್ಲಿ ಸಾಧಿಸುವ ಕಲೆ ಕಲಿಸಿದ ಬಿಲಿಯನೇರ್
Rakesh Jhunjhunwala
Follow us
ಅಕ್ಷಯ್​ ಪಲ್ಲಮಜಲು​​
|

Updated on: Mar 22, 2023 | 1:45 PM

ಭಾರತದ ಗ್ರೇಟ್ ಬಿಸಿನೆಸ್ ಮ್ಯಾನ್ ಬಿಲಿಯನೇರ್ ರಾಕೇಶ್ ಜುಂಜುನ್ವಾಲಾ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ನೀಡಲು ಸರ್ಕಾರ ನಿರ್ಧಾರಿಸಿದೆ. ಆಗಸ್ಟ್ 14, 2022 ​ ನಿಧನರಾದ ಅವರಿಗೆ ಭಾರತದ ಮೂರನೇ ಅತ್ಯುನ್ನತ ನಾಗರಿಕ ಗೌರವವನ್ನು ಮರಣೋತ್ತರವಾಗಿ ನೀಡಲಾಗುತ್ತದೆ. ‘ಭಾರತದ ಸ್ವಂತ ವಾರೆನ್ ಬಫೆಟ್’ ಎಂದು ಕರೆಯಲ್ಪಡುವ ರಾಕೇಶ್ ಜುಂಜುನ್ವಾಲಾ ಜುಲೈ 5, 1960 ರಂದು ಜನಿಸಿದರು ಮತ್ತು ಮುಂಬೈನಲ್ಲಿ ಬೆಳೆದರು. ಅಂದು ರಾಕೇಶ್ ಜುಂಜುನ್‌ವಾಲಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ ಮೋದಿ, ಷೇರು ಮಾರುಕಟ್ಟೆ ಗುರುವಿನ ನಿಧನಕ್ಕೆ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದರು. ರಾಕೇಶ್ ಜುಂಜುನ್ವಾಲಾ ಅದಮ್ಯ. ಪೂರ್ಣ ಜೀವನ, ಹಾಸ್ಯ ಮತ್ತು ಅವರು ಆರ್ಥಿಕ ಜಗತ್ತಿಗೆ ಅಳಿಸಲಾಗದ ಕೊಡುಗೆಯನ್ನು ಬಿಟ್ಟು ಹೋಗಿದ್ದಾರೆ. ಅವರು ಭಾರತದ ಪ್ರಗತಿಯ ಬಗ್ಗೆ ತುಂಬಾ ಉತ್ಸುಕರಾಗಿದ್ದರು. ಅವರ ಅಗಲಿಕೆ ದುಃಖ ತಂದಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ದುಃಖ ಸಹಿಸಿಕೊಳ್ಳವ ಶಕ್ತಿ ನೀಡಲಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದರು.

1985 ರಲ್ಲಿ ಸಿಡೆನ್‌ಹ್ಯಾಮ್ ಕಾಲೇಜಿನಿಂದ ಪದವಿ ಪಡೆದ ರಾಕೇಶ್ ಜುಂಜುನ್‌ವಾಲಾ ಅವರು ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾದಲ್ಲಿ ಸೇರಿಕೊಂಡರು. ನಂತರ ಅವರು ಷೇರು ಮಾರುಕಟ್ಟೆ ಹೂಡಿಕೆದಾರರಾದ ರೇಖಾ ಜುಂಜುನ್ವಾಲಾ ಅವರನ್ನು ವಿವಾಹವಾದರು.

ಇದನ್ನೂ ಓದಿ:Padmashri Award: ಇತಿಹಾಸದ ಒಲವು ಬೆಳೆಸುವ ಅಪರೂಪದ ಸಾಧಕನಿಗೆ ಪದ್ಮಶ್ರೀ: ಡಾ ಸುಬ್ಬರಾಮನ್​ ಹಿರಿಮೆಗೆ ಮತ್ತೊಂದು ಗರಿ

ಇದೀಗ ಅವರ ಆರ್ಥಿಕ ಸೇವೆಗೆ ಮತ್ತು ಸಮಾಜಮುಖಿ ಕಾರ್ಯಕ್ಕಾಗಿ ಅವರಿಗೆ ಇಂದು ಪದ್ಮಶ್ರೀ ನೀಡಲಾಗುತ್ತಿದೆ. ಇಂದು ಈ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ಅವರು ಕುಟುಂಬದವರು ಪಡೆದುಕೊಳ್ಳುವ ಸಾಧ್ಯತೆಯಿದೆ. ಭಾರತದ ಷೇರು ಮಾರುಕಟ್ಟೆಗಳ ಬಗ್ಗೆ ಯಾವಾಗಲೂ ಆಸಕ್ತರಾಗಿದ್ದ ರಾಕೇಶ್ ಜುಂಜುನ್ವಾಲಾ ಅವರು RARE ಎಂಟರ್‌ಪ್ರೈಸಸ್ ಎಂಬ ಖಾಸಗಿ ಒಡೆತನದ ಷೇರು ವ್ಯಾಪಾರ ಸಂಸ್ಥೆಯನ್ನು ನಡೆಸುತ್ತಿದ್ದರು. ಭಾರತದ ಹೊಸ ವಿಮಾನಯಾನ ಸಂಸ್ಥೆ ಆಕಾಶ ಏರ್‌ನ ಮಾಲೀಕರೂ ಆಗಿದ್ದರು. ವ್ಯಾಪಾರ ಮತ್ತು ಉದ್ಯಮ ವಿಭಾಗದಲ್ಲಿ, ಜನಪ್ರಿಯ ತಂಪು ಪಾನೀಯ ಬ್ರಾಂಡ್ ರಸ್ನಾ ಸಂಸ್ಥಾಪಕ ಅರೀಜ್ ಖಂಬಟ್ಟಾ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಗುತ್ತದೆ. ಆದಿತ್ಯ ಬಿರ್ಲಾ ಸಮೂಹದ ಅಧ್ಯಕ್ಷ ಕುಮಾರ ಮಂಗಳಂ ಬಿರ್ಲಾ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
ವಕ್ಫ್ ಹೋರಾಟ ಪ್ರಧಾನಿ ಮೋದಿ ಆರಂಭಿಸಿದ ಕೇಂದ್ರದ ಯೋಜನೆ: ವಿಜಯೇಂದ್ರ
ವಕ್ಫ್ ಹೋರಾಟ ಪ್ರಧಾನಿ ಮೋದಿ ಆರಂಭಿಸಿದ ಕೇಂದ್ರದ ಯೋಜನೆ: ವಿಜಯೇಂದ್ರ