AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾನ್ ಕಾರ್ಡ್​ಗೆ ಆಧಾರ್ ಲಿಂಕ್; ಮೇ 31ಕ್ಕೆ ಡೆಡ್​ಲೈನ್; ಮೀರಿದರೆ ಕಷ್ಟಕಷ್ಟ; ಆದಾಯ ತೆರಿಗೆ ಇಲಾಖೆ ಎಚ್ಚರಿಕೆ ಸಂದೇಶ

Effects of non-linking of PAN-Aadhaar by May 31st: ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡಲು ಮೇ 31ಕ್ಕೆ ಡೆಡ್​ಲೈನ್ ಇದೆ. ಆಧಾರ್ ಜೊತೆ ಜೋಡಣೆ ಆಗದ ಪ್ಯಾನ್ ನಂಬರ್ ನಿಷ್ಕ್ರಿಯವಾಗಿರುತ್ತದೆ. ಇಂಥ ಇನಾಪರೇಟಿವ್ ಪ್ಯಾನ್​ನ ನಂಬರ್ ಅನ್ನು ಬಳಸಿದರೂ ಒಂದೇ ಬಳಸದಿದ್ದರೂ ಒಂದೇ. ಪ್ಯಾನ್ ನಂಬರ್ ಇಲ್ಲದೇ ನೀವು ಆದಾಯ ಪಡೆಯುತ್ತಿದ್ದಲ್ಲಿ ಅದಕ್ಕೆ ಶೇ. 20ರಷ್ಟು ಟಿಡಿಎಸ್ ತೆರಿಗೆ ಕಡಿತವಾಗುತ್ತದೆ.

ಪ್ಯಾನ್ ಕಾರ್ಡ್​ಗೆ ಆಧಾರ್ ಲಿಂಕ್; ಮೇ 31ಕ್ಕೆ ಡೆಡ್​ಲೈನ್; ಮೀರಿದರೆ ಕಷ್ಟಕಷ್ಟ; ಆದಾಯ ತೆರಿಗೆ ಇಲಾಖೆ ಎಚ್ಚರಿಕೆ ಸಂದೇಶ
ಪ್ಯಾನ್ ಆಧಾರ್
ಸುಗ್ಗನಹಳ್ಳಿ ವಿಜಯಸಾರಥಿ
| Edited By: ವಿವೇಕ ಬಿರಾದಾರ|

Updated on:Jun 08, 2024 | 9:20 AM

Share

ನವದೆಹಲಿ, ಮೇ 28: ಪ್ಯಾನ್ ಕಾರ್ಡ್​ಗೆ ಆಧಾರ್ ಅನ್ನು ಲಿಂಕ್ (PAN Aadhaar link) ಮಾಡಬೇಕೆಂದು ಆದಾಯ ತೆರಿಗೆ ಇಲಾಖೆ ಹೇಳುತ್ತಲೇ ಬಂದಿದೆ. ಮೇ 31ಕ್ಕೆ ಡೆಡ್​ಲೈನ್ ಇದೆ. ಅಷ್ಟರೊಳಗೆ ಲಿಂಕ್ ಮಾಡದೇ ಹೋದರೆ ಹೆಚ್ಚಿನ ಟಿಡಿಎಸ್ ಕಟ್ಟಬೇಕಾದೀತು. ಐಟಿ ಇಲಾಖೆ (Income tax department) ಇಂದು ಎಕ್ಸ್​ನಲ್ಲಿ ಪೋಸ್ಟ್ ಹಾಕಿದ್ದು, ಈ ಸಂಬಂಧ ಎಚ್ಚರಿಕೆಯ ಸಂದೇಶ ರವಾನಿಸಿದೆ. ಮೇ 31ರೊಳಗೆ ನಿಮ್ಮ ಪ್ಯಾನ್ ಅನ್ನು ಆಧಾರ್ ಜೊತೆ ಜೋಡಿಸಿದರೆ ಐಟಿ ಸೆಕ್ಷನ್ 206ಎಎ ಮತ್ತು 206ಸಿಸಿ ಅಡಿಯಲ್ಲಿ ಹೆಚ್ಚಿನ ಟ್ಯಾಕ್ಸ್ ಪಾವತಿಯನ್ನು ತಪ್ಪಿಸಬಹುದು.

ಎಷ್ಟು ಟಿಡಿಎಸ್ ಕಡಿತವಾಗುತ್ತದೆ?

ಆಧಾರ್​ಗೆ ಲಿಂಕ್ ಆಗದ ಪ್ಯಾನ್ ನಂಬರ್ ನಿಷ್ಕ್ರಿಯವಾಗಿರುತ್ತದೆ. ಅಂದರೆ ಇದನ್ನು ಬಳಸಲು ಆಗುವುದಿಲ್ಲ. ಆಧಾರ್​ಗೆ ಲಿಂಕ್ ಮಾಡಿದಲ್ಲಿ ಮಾತ್ರವೇ ಪ್ಯಾನ್ ಬಳಕೆಯೋಗ್ಯ ಎನಿಸುತ್ತದೆ. ಈಗ ಆಧಾರ್​ಗೆ ಪ್ಯಾನ್ ಅನ್ನು ಲಿಂಕ್ ಮಾಡಲು ಶುಲ್ಕ ಪಾವತಿಸಬೇಕಾಗುತ್ತದೆ. ಉಚಿತವಾಗಿ ಮಾಡಲು ಇದ್ದ ಡೆಡ್​ಲೈನ್ ಬಹಳ ದಿನಗಳ ಹಿಂದೆಯೇ ಮುಗಿದುಹೋಗಿದೆ. ಈಗ ಶುಲ್ಕ ಪಾವತಿಸಿ ಆಧಾರ್​ಗೆ ಲಿಂಕ್ ಮಾಡುವ ಮೂಲಕ ಪ್ಯಾನ್ ಕಾರ್ಡ್ ಅನ್ನು ಸಕ್ರಿಯಗೊಳಿಸಬಹುದು.

ಇದನ್ನೂ ಓದಿ: Bank Holidays June 2024: ಜೂನ್ ತಿಂಗಳಲ್ಲಿ 13 ದಿನ ಬ್ಯಾಂಕ್ ರಜೆ; ಕರ್ನಾಟಕದಲ್ಲಿ ಯಾವತ್ತಿದೆ ರಜೆ?

ಎಲ್ಲಾ ಪ್ಯಾನ್ ಕಾರ್ಡ್​ದಾರರೂ ಆಧಾರ್​ಗೆ ಲಿಂಕ್ ಮಾಡಬೇಕಾ?

2017ರ ಜುಲೈ 1ರ ಬಳಿಕ ವಿತರಿಸಲಾದ ಎಲ್ಲಾ ಪ್ಯಾನ್ ನಂಬರ್​ಗೆ ಆಟೊಮ್ಯಾಟಿಕ್ ಆಗಿ ಆಧಾರ್ ಜೋಡಣೆ ಆಗಿರುತ್ತದೆ. ಆಧಾರ್ ದಾಖಲೆ ಹೊಂದಿದ್ದರೆ ಮಾತ್ರವೇ ಪ್ಯಾನ್ ನಂಬರ್ ಅಲಾಟ್ ಮಾಡಲಾಗುತ್ತದೆ. ಆದರೆ, 2017ರ ಜುಲೈ ಒಂದಕ್ಕಿಂತ ಮುಂಚೆ ಪ್ಯಾನ್ ಕಾರ್ಡ್ ಮಾಡಿಸುವಾಗ ಆಧಾರ್ ದಾಖಲೆ ಕಡ್ಡಾಯ ಇರಲಿಲ್ಲ. ಬೇರೆ ಬೇರೆ ದಾಖಲೆಗಳನ್ನು ನೀಡಿ ಪ್ಯಾನ್ ಕಾರ್ಡ್ ಮಾಡಿಸಿದವರು ಹಲವರಿದ್ದರು.

ಆ ದಿನಕ್ಕೆ ಮುಂಚೆ ಪ್ಯಾನ್ ಕಾರ್ಡ್ ಮಾಡಿಸಿದವರು ಆಧಾರ್​ಗೆ ಲಿಂಕ್ ಮಾಡುವುದು ಅವಶ್ಯಕವಾಗಿದೆ.

ಆಧಾರ್​ಗೆ ಪ್ಯಾನ್ ಲಿಂಕ್ ಆಗದಿದ್ದರೆ ಎಷ್ಟು ಟಿಡಿಎಸ್ ಕಡಿತವಾಗುತ್ತದೆ?

ಆಧಾರ್​ಗೆ ಲಿಂಕ್ ಆಗದ ಪ್ಯಾನ್ ನಿಷ್ಕ್ರಿಯಗೊಂಡಿರುತ್ತದೆ. ಕಾರ್ಡ್ ಇದ್ದೂ ಇಲ್ಲದಂತಾಗುತ್ತದೆ. ಆದಾಯ ತೆರಿಗೆ ಸೆಕ್ಷನ್ 206 ಪ್ರಕಾರ ಪ್ಯಾನ್ ಕಾರ್ಡ್ ಇಲ್ಲದ ವಹಿವಾಟಿಗೆ ಶೇ. 20ರಷ್ಟು ಟಿಡಿಎಸ್ ತೆರಿಗೆ ಕಡಿತ ಆಗುತ್ತದೆ.

ಇದನ್ನೂ ಓದಿ: ಎನ್​ಪಿಎಸ್, ಹೆಲ್ತ್ ಇನ್ಷೂರೆನ್ಸ್ ಹಾಗು 80ಸಿ ಸೆಕ್ಷನ್ ಅಡಿಯಲ್ಲಿನ ಹೂಡಿಕೆಗಳು; ಗರಿಷ್ಠ ತೆರಿಗೆ ಉಳಿಸುವ ಆಯ್ಕೆಗಳು

ನೀವು ಒಂದು ಲಕ್ಷ ರೂ ಆದಾಯ ಪಡೆದರೆ ಅದಕ್ಕೆ 20,000 ರೂ ತೆರಿಗೆಯನ್ನೇ ಪಾವಿತಸಬೇಕಾಗುತ್ತದೆ. ಹೀಗಾಗಿ, ನಿಮ್ಮ ಪ್ಯಾನ್ ಅನ್ನು ಆಧಾರ್ ಜೊತೆ ಲಿಂಕ್ ಮಾಡದೇ ಇದ್ದರೆ ಕೂಡಲೇ ಆ ಕೆಲಸ ಮಾಡಿ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 2:28 pm, Tue, 28 May 24

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್