AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯಿಂದ 4 ದಿನ ಬಂದ್ ಆಗಿರಲಿದೆ ಪಾಸ್​ಪೋರ್ಟ್ ಸೇವಾ ಪೋರ್ಟಲ್; ಮುಂಗಡ ಬುಕಿಂಗ್ ಸ್ಥಗಿತ; ತಾಂತ್ರಿಕ ನಿರ್ವಹಣೆ ಕಾರಣ

Passport Seva portal technical maintenance: ಪಾಸ್​ಪೋರ್ಟ್ ಸೇವಾ ಪೋರ್ಟಲ್ ಆಗಸ್ಟ್ 29, ಗುರುವಾರ ಸಂಜೆ 8 ಗಂಟೆಯಿಂದ ಸೆಪ್ಟಂಬರ್ 2, ಬೆಳಗ್ಗೆ 6 ಗಂಟೆಯವರೆಗೂ ಬಂದ್ ಆಗಿರುತ್ತದೆ. ಟೆಕ್ನಿಕಲ್ ಮೈಂಟೆನೆನ್ಸ್ ಕಾರಣಕ್ಕೆ ಪೋರ್ಟಲ್ ಸುಮಾರು ನಾಲ್ಕು ದಿನ ಸಾರ್ವಜನಿಕರಿಗೆ ಅಲಭ್ಯ ಇರುತ್ತದೆ. ಆಗಸ್ಟ್ 30ಕ್ಕೆ ಪಾಸ್​ಪೋರ್ಟ್ ಸೇವಾ ಕೇಂದ್ರಗಳೂ ಕಾರ್ಯ ನಿರ್ವಹಿಸುವುದಿಲ್ಲ. ಅಂದಿಗೆ ಇರುವ ಅಪಾಯಿಂಟ್ಮೆಂಟ್​ಗಳನ್ನು ಬೇರೆ ದಿನಕ್ಕೆ ಮುಂದೂಡುವ ನಿರೀಕ್ಷೆ ಇದೆ.

ನಾಳೆಯಿಂದ 4 ದಿನ ಬಂದ್ ಆಗಿರಲಿದೆ ಪಾಸ್​ಪೋರ್ಟ್ ಸೇವಾ ಪೋರ್ಟಲ್; ಮುಂಗಡ ಬುಕಿಂಗ್ ಸ್ಥಗಿತ; ತಾಂತ್ರಿಕ ನಿರ್ವಹಣೆ ಕಾರಣ
ಪಾಸ್​ಪೋರ್ಟ್ ಸೇವಾ ಪೋರ್ಟಲ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 28, 2024 | 1:02 PM

Share

ನವದೆಹಲಿ, ಆಗಸ್ಟ್ 28: ಪಾಸ್​ಪೋರ್ಟ್ ಸೇವಾ ಕೇಂದ್ರದ ಜಾಲತಾಣ ನಾಲ್ಕು ದಿನ ಬಂದ್ ಆಗಿರಲಿದೆ. ನಾಳೆ ಗುರುವಾರ ಸಂಜೆ 8ರಿಂದ (ಆಗಸ್ಟ್ 29) ಈ ಪೋರ್ಟಲ್​ನ ಟೆಕ್ನಿಕಲ್ ಮೈಂಟೆನೆನ್ಸ್ ಕಾರ್ಯ ನಡೆಯುತ್ತಿರುವುದರಿಂದ ಅದು ಸಾರ್ವಜನಿಕ ಬಳಕೆಗೆ ಲಭ್ಯ ಇರುವುದಿಲ್ಲ. ಸೆಪ್ಟಂಬರ್ 2ರ ಬೆಳಗ್ಗೆ 6ಗಂಟೆಯವರೆಗೂ ಈ ಪೋರ್ಟಲ್​ನಲ್ಲಿ ಯಾವ ಸರ್ವಿಸ್ ಇರುವುದಿಲ್ಲ. ಸದ್ಯ ಆಗಸ್ಟ್ 30ರಂದು ನೀಡಲಾಗಿರುವ ಎಲ್ಲಾ ಅಪಾಯಿಂಟ್ಮೆಂಟ್​ಗಳನ್ನು ರದ್ದು ಮಾಡಲಾಗಿದೆ. ಅಪಾಯಿಂಟ್ಮೆಂಟ್ ಪಡೆದಿರುವ ಅಭ್ಯರ್ಥಿಗಳಿಗೆ ಮುಂದಿನ ದಾರಿಗಳ ಬಗ್ಗೆ ಎಸ್ಸೆಮ್ಮೆಸ್ ಮೂಲಕ ಮಾಹಿತಿ ನೀಡಲಾಗುತ್ತದೆ ಎಂದು ಪಾಸ್​ಪೋರ್ಟ್ ಇಲಾಖೆ ಹೇಳಿದೆ.

ಪಾಸ್​ಪೋರ್ಟ್ ಸೇವಾ ಪೋರ್ಟಲ್ ಮಾತ್ರವಲ್ಲ, ವಿವಿಧೆಡೆ ಇರುವ ಪಾಸ್​ಪೋರ್ಟ್ ಸೇವಾ ಕೇಂದ್ರಗಳೂ ಆಗಸ್ಟ್ 30ರಂದು ಬಂದ್ ಆಗಿರುತ್ತವೆ. ಹೀಗಾಗಿ, ಶುಕ್ರವಾರಕ್ಕೆ ಅಪಾಯಿಂಟ್ಮೆಂಟ್ ಪಡೆದಿರುವ ಅರ್ಜಿದಾರರಿಗೆ ಬೇರೆ ದಿನ ಅಪಾಯಿಂಟ್ಮೆಂಟ್ ಕೊಡಲಾಗುತ್ತಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಬರುವ ಪಾಸ್​ಪೋರ್ಟ್ ಸೇವಾ ವಿಭಾಗ ಈ ಬಗ್ಗೆ ಇತ್ತೀಚೆಗೆ ಮಾಹಿತಿ ನೀಡಿತ್ತು.

ಇದನ್ನೂ ಓದಿ: ಎಂಟು ಸಿಬ್ಬಂದಿ ಇರುವ ಕಂಪನಿ ಐಪಿಒನಲ್ಲಿ ಕೇಳಿದ್ದು 12 ಕೋಟಿ ರೂ, ಜನರು ಕೊಡಲು ಮುಂದಾಗಿದ್ದು 4,800 ಕೋಟಿ ರೂ; ಇದೇನು ಕಥೆ..!

‘2024ರ ಆಗಸ್ಟ್ 29, ಗುರುವಾರ ಸಂಜೆ 8 ಗಂಟೆಯಿಂದ ಸೆಪ್ಟಂಬರ್ 2 ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಟೆಕ್ನಿಕಲ್ ಮೈಂಟೆನೆನ್ಸ್​ನಿಂದಾಗಿ ಪಾಸ್​ಪೋರ್ಟ್ ಸೇವಾ ಪೋರ್ಟಲ್ ಬಂದ್ ಆಗಿರುತ್ತದೆ. ಈ ಅವಧಿಯಲ್ಲಿ ನಾಗರಿಕರಿಗೆ ಹಾಗೂ ಎಲ್ಲಾ ಎಂಇಎ, ಆರ್​ಪಿಒ, ಬಿಒಐ, ಡಿಒಪಿ, ಪೊಲೀಸ್ ಪ್ರಾಧಿಕಾರಗಳಿಗೆ ಸಿಸ್ಟಂ ಲಭ್ಯ ಇರುವುದಿಲ್ಲ. ಆಗಸ್ಟ್ 30ಕ್ಕೆ ಬುಕ್ ಆಗಿರುವ ಅಪಾಯಿಂಟ್​ಗಳನ್ನು ಬೇರೆ ದಿನಕ್ಕೆ ನಿಗದಿ ಮಾಡಿ, ಅರ್ಜಿದಾರರಿಗೆ ಅದರ ಮಾಹಿತಿ ಅಪ್​ಡೇಟ್ ಮಾಡಲಾಗುತ್ತದೆ,’ ಎಂದು ಅಡ್ವೈಸರಿ ಬಿಡುಗಡೆ ಮಾಡಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ