Sign In

By signing in or creating an account, you agree with Associated Broadcasting Company's Terms & Conditions and Privacy Policy.

Patanjali: ಜಾಗತಿಕ ಮಾರುಕಟ್ಟೆಯಲ್ಲಿ ಭಾರತೀಯ ಸಾಂಸ್ಕೃತಿಕ ರಾಯಭಾರಿಯಂತಿರುವ ಪತಂಜಲಿ

Patanjali's cultural and spiritual contribution in business worldwide: ಯೋಗ ಗುರು ಬಾಬಾ ರಾಮದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರ ನೇತೃತ್ವದಲ್ಲಿ ಪತಂಜಲಿ ಆಯುರ್ವೇದ ಸಂಸ್ಥೆಯು ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಪುನರುಜ್ಜೀವನಗೊಳಿಸಿದೆ, ಜಾಗತಿಕ ಮನ್ನಣೆಯನ್ನೂ ನೀಡಿದೆ. ಭಾರತದ ಪ್ರಾಚೀನ ಆರೋಗ್ಯ ವಿಧಾನಗಳಾದ ಆಯುರ್ವೇದ ಮತ್ತು ನೈಸರ್ಗಿಕ ಚಿಕಿತ್ಸಾ ಕ್ರಮಗಳನ್ನು ವೈಜ್ಞಾನಿಕವಾಗಿ ಪ್ರಸ್ತುತಗೊಳಿಸಿದ ಶ್ರೇಯಸ್ಸು ಪತಂಜಲಿ ಸಂಸ್ಥೆಗೆ ಸಲ್ಲಬೇಕು.

Patanjali: ಜಾಗತಿಕ ಮಾರುಕಟ್ಟೆಯಲ್ಲಿ ಭಾರತೀಯ ಸಾಂಸ್ಕೃತಿಕ ರಾಯಭಾರಿಯಂತಿರುವ ಪತಂಜಲಿ
ಪತಂಜಲಿ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Mar 30, 2025 | 2:19 PM

ಪತಂಜಲಿ ಕೇವಲ ಒಂದು ಬ್ರಾಂಡ್ ಅಲ್ಲ, ಅದು ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಆಂದೋಲನವೇ ಆಗಿದೆ. ಲಕ್ಷಾಂತರ ಜನರ ಜೀವನವನ್ನು ಆರೋಗ್ಯಕರ ಮತ್ತು ಸಮತೋಲಿತವಾಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಯೋಗ ಗುರು ಬಾಬಾ ರಾಮದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರ ನೇತೃತ್ವದಲ್ಲಿ, ಪತಂಜಲಿ ಆಯುರ್ವೇದವು (Patanjali Ayurved) ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಪುನರುಜ್ಜೀವನಗೊಳಿಸಿರುವುದಲ್ಲದೇ ಜಾಗತಿಕ ಮಟ್ಟದಲ್ಲಿ ಅವುಗಳಿಗೆ ಮನ್ನಣೆಯನ್ನು ತಂದುಕೊಟ್ಟಿದೆ.

ಒಂದೆಡೆ ಅಂತರರಾಷ್ಟ್ರಿಯ ಬ್ರ್ಯಾಂಡ್​​ಗಳು ಲಾಭ ನಷ್ಟದ ಮೇಲೆ ಮಾತ್ರ ಗಮನಹರಿಸುತ್ತವೆ. ಇನ್ನೊಂದೆಡೆ, ಪತಂಜಲಿ ಬ್ರ್ಯಾಂಡ್‌ನಲ್ಲಿ ಭಾರತೀಯ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಮೌಲ್ಯಗಳು ಮಿಳಿತಗೊಂಡಿವೆ. ಪತಂಜಲಿ ಸ್ವಾವಲಂಬನೆಗೆ ಒತ್ತು ನೀಡುತ್ತದೆ. ಪಾಶ್ಚಿಮಾತ್ಯ ದೇಶಗಳಲ್ಲಿ ಅನುಭೋಗಕ್ಕೆ ಒತ್ತು ನೀಡಲAಗುತ್ತದೆ. ಇತ್ತ, ಪತಂಜಲಿಯು ಸಾಂಪ್ರದಾಯಿಕ ಜ್ಞಾನವನ್ನು ಉತ್ತೇಜಿಸುತ್ತದೆ.

ಪತಂಜಲಿಯ ಆಧ್ಯಾತ್ಮಿಕ ಧ್ಯೇಯ

ಬಾಬಾ ರಾಮದೇವ್ ಅವರ ನೇತೃತ್ವದಲ್ಲಿ, ಪತಂಜಲಿ ಯೋಗಪೀಠವು ಯೋಗ, ಆಯುರ್ವೇದ ಮತ್ತು ನೈಸರ್ಗಿಕ ಚಿಕಿತ್ಸೆಯನ್ನು ಜನಸಾಮಾನ್ಯರಿಗೆ ಹರಡಲು ಶ್ರಮಿಸಿದೆ. ಯೋಗದ ಮೂಲಕ ದೇಹ ಮತ್ತು ಮನಸ್ಸನ್ನು ಆರೋಗ್ಯವಾಗಿಡುವ ಸಂಪ್ರದಾಯವನ್ನು ಅವರು ಆಧುನಿಕ ವಿಜ್ಞಾನದೊಂದಿಗೆ ಸಂಯೋಜಿಸಿದ್ದಾರೆ. ಪತಂಜಲಿಯ ಯೋಗ ಶಿಬಿರಗಳು ಮತ್ತು ಬಾಬಾ ರಾಮದೇವ್ ಅವರ ಟಿವಿ ಕಾರ್ಯಕ್ರಮಗಳು ಲಕ್ಷಾಂತರ ಜನರನ್ನು ನೈಸರ್ಗಿಕ ಮತ್ತು ಸಮತೋಲಿತ ಜೀವನವನ್ನು ನಡೆಸಲು ಪ್ರೇರೇಪಿಸಿವೆ.

ಇದನ್ನೂ ಓದಿ
Image
ಯೋಗಕ್ಕೆ ಜಾಗತಿಕ ಗುರುತು ಸಿಗಲು ಬಾಬಾ ರಾಮದೇವ್, ಪತಂಜಲಿ ಪಾತ್ರ
Image
ಜಾಗತಿಕವಾಗಿ ಬೆಳಗುತ್ತಿರುವ ಪತಂಜಲಿ; ಏನು ಕಾರಣ?
Image
ಹೆಲ್ತ್ ಮತ್ತು ಬಿಸಿನೆಸ್, ಎರಡರಲ್ಲೂ ಆಯುರ್ವೇದ ಸ್ಟಾರ್
Image
ಪತಂಜಲಿಯಿಂದ ದೇಶದ ರೈತರಿಗೆ ಆಗುತ್ತಿರುವ ಸಹಾಯಗಳೇನು?

ಇದನ್ನೂ ಓದಿ: ವಿಶ್ವಾದ್ಯಂತ ಯೋಗಕ್ಕೆ ವಿಶೇಷ ಗುರುತು ನೀಡಿದ ಪತಂಜಲಿ ಮತ್ತು ಬಾಬಾ ರಾಮದೇವ್

ಸಾಂಸ್ಕೃತಿಕ ಪರಂಪರೆಯ ರಕ್ಷಣೆ

ಕಳೆದ ಕೆಲವು ದಶಕಗಳಲ್ಲಿ, ಪಾಶ್ಚಿಮಾತ್ಯ ಜೀವನಶೈಲಿಯ ಪ್ರಭಾವದಿಂದಾಗಿ ಭಾರತದ ಸಾಂಪ್ರದಾಯಿಕ ವೈದ್ಯಕೀಯ ವ್ಯವಸ್ಥೆಗಳು ಮತ್ತು ಆರೋಗ್ಯ ಪದ್ಧತಿಗಳು ಹಿಂದುಳಿದಿವೆ. ಆದರೆ ಪತಂಜಲಿ ಆಯುರ್ವೇದ ಸಂಸ್ಥೆಯು ಯೋಗ ಮತ್ತು ಪ್ರಕೃತಿ ಚಿಕಿತ್ಸೆಯನ್ನು ಮತ್ತೆ ಜನಪ್ರಿಯಗೊಳಿಸುವ ಮೂಲಕ ಭಾರತೀಯ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಲು ಕೆಲಸ ಮಾಡಿದೆ. ಪತಂಜಲಿ ಆಯುರ್ವೇದ ಔಷಧಿಗಳು, ಹರ್ಬಲ್ (ಗಿಡಮೂಲಿಕೆ) ಉತ್ಪನ್ನಗಳು ಮತ್ತು ನೈಸರ್ಗಿಕ ಜೀವನಶೈಲಿಯನ್ನು ಉತ್ತೇಜಿಸುವ ಮೂಲಕ ತನ್ನ ಭಾರತೀಯ ಬೇರುಗಳನ್ನು ಬಲಪಡಿಸಿದೆ.

ಆಧುನಿಕ ಆರೋಗ್ಯ ಮತ್ತು ಜೀವನಶೈಲಿಯ ಮೇಲೆ ಪರಿಣಾಮ

ಬಾಬಾ ರಾಮದೇವ್ ಅವರು ಯೋಗ ಮತ್ತು ಆಯುರ್ವೇದದ ಪ್ರವರ್ತಕರು ಮಾತ್ರವಲ್ಲದೆ, ಪ್ರಪಂಚದಾದ್ಯಂತ ಆರೋಗ್ಯ ಮತ್ತು ನೈಸರ್ಗಿಕ ಜೀವನಶೈಲಿಯ ಪರಿಕಲ್ಪನೆಯನ್ನು ಜನಪ್ರಿಯಗೊಳಿಸಿದ್ದಾರೆ. ಅವರ ಬೋಧನೆಗಳು ದೈಹಿಕ ಆರೋಗ್ಯವನ್ನು ಸುಧಾರಿಸುವುದಲ್ಲದೆ, ಮಾನಸಿಕ ಶಾಂತಿ ಮತ್ತು ಆಧ್ಯಾತ್ಮಿಕ ಪ್ರಗತಿಯ ಮಾರ್ಗವನ್ನು ಸಹ ತೋರಿಸುತ್ತವೆ. ಸಾವಿರಾರು ಜನರು ಅವರ ಯೋಗ ತರಗತಿಗಳಿಗೆ ಹಾಜರಾಗುತ್ತಾರೆ. ಮಧುಮೇಹ, ರಕ್ತದೊತ್ತಡ, ಬೊಜ್ಜು ಮತ್ತು ಇತರ ಕಾಯಿಲೆಗಳಲ್ಲಿ ಸುಧಾರಣೆ ಕಾಣುತ್ತಿದ್ದಾರೆ.

ಪತಂಜಲಿಯ ವಿಶಿಷ್ಟ ಪಾತ್ರ

ಪತಂಜಲಿ ಸಂಸ್ಥೆಯು ಭಾರತೀಯ ಮಾರುಕಟ್ಟೆಯಲ್ಲಿ ಮಾತ್ರವಲ್ಲದೆ ಅಂತರರಾಷ್ಟ್ರೀಯ ಮಟ್ಟದಲ್ಲಿಯೂ ತನ್ನ ಅಸ್ತಿತ್ವ ಗಳಿಸಿದೆ. ಅಮೆರಿಕ, ಕೆನಡಾ, ಬ್ರಿಟನ್, ಆಸ್ಟ್ರೇಲಿಯಾ ಮುಂತಾದ ದೇಶಗಳಲ್ಲಿ ಯೋಗ ಮತ್ತು ಆಯುರ್ವೇದದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಪತಂಜಲಿ ಪ್ರಮುಖ ಪಾತ್ರ ವಹಿಸಿದೆ. ಪತಂಜಲಿ ಉತ್ಪನ್ನಗಳು ಈಗ 20 ಕ್ಕೂ ಹೆಚ್ಚು ದೇಶಗಳಲ್ಲಿ ಲಭ್ಯವಿದೆ. ಇದು ಭಾರತೀಯ ಸಂಸ್ಕೃತಿ ಮತ್ತು ಜೀವನಶೈಲಿಯನ್ನು ಉತ್ತೇಜಿಸಲು ಪ್ರಬಲ ಮಾಧ್ಯಮವಾಗಿದೆ.

ಇದನ್ನೂ ಓದಿ: ಪತಂಜಲಿಯಿಂದ ದೇಶದ ರೈತರಿಗೆ ಆಗುತ್ತಿರುವ ಸಹಾಯಗಳೇನು? ದೇಶದ ಕೃಷಿ ಕ್ಷೇತ್ರದಲ್ಲಾದ ಬದಲಾವಣೆಗಳೇನು?

ವ್ಯವಹಾರವನ್ನು ಮೀರಿದ ಸಾಮಾಜಿಕ ಬದಲಾವಣೆ

ಪತಂಜಲಿ ಕೇವಲ ಒಂದು ವ್ಯಾಪಾರ ಸಂಸ್ಥೆ ಮಾತ್ರವಲ್ಲ, ಅದು ಸಾಮಾಜಿಕ ಮತ್ತು ಆಧ್ಯಾತ್ಮಿಕ ಚಳುವಳಿಯೂ ಆಗಿದೆ. ಬಾಬಾ ರಾಮದೇವ್ ಮತ್ತು ಆಚಾರ್ಯ ಬಾಲಕೃಷ್ಣ ತಮ್ಮ ಗಳಿಕೆಯ ಬಹುಭಾಗವನ್ನು ಸಮಾಜ ಕಲ್ಯಾಣದಲ್ಲಿ ಹೂಡಿಕೆ ಮಾಡಿದ್ದಾರೆ. ಪತಂಜಲಿ ಯೋಗಪೀಠ ಮತ್ತು ಇತರ ಸಂಸ್ಥೆಗಳ ಮೂಲಕ ಬಡವರಿಗೆ ಶಿಕ್ಷಣ, ಆರೋಗ್ಯ ಮತ್ತು ಸಹಾಯಕ್ಕಾಗಿ ಅನೇಕ ಯೋಜನೆಗಳನ್ನು ನಡೆಸಲಾಗುತ್ತಿದೆ.

ಪತಂಜಲಿ ಭಾರತೀಯ ಸಂಸ್ಕೃತಿ, ಯೋಗ ಮತ್ತು ಆಯುರ್ವೇದವನ್ನು ಪುನರುಜ್ಜೀವನಗೊಳಿಸಿದ್ದಲ್ಲದೆ, ಅದಕ್ಕೆ ಜಾಗತಿಕ ಮನ್ನಣೆಯನ್ನೂ ನೀಡಿದೆ. ಇದರ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಕೊಡುಗೆಗಳು ಲಕ್ಷಾಂತರ ಜನರ ಜೀವನವನ್ನು ಪರಿವರ್ತಿಸಿವೆ. ಮುಂಬರುವ ವರ್ಷಗಳಲ್ಲಿ ಭಾರತೀಯ ಮೌಲ್ಯಗಳನ್ನು ಬಲಪಡಿಸುವುದನ್ನು ಮುಂದುವರಿಸುತ್ತವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 2:14 pm, Sun, 30 March 25

ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ