AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಶ್ಚಿತ ಠೇವಣಿಗೆ ಶೇ. 9.1ರವರೆಗೂ ಬಡ್ಡಿ; ಇತ್ತೀಚೆಗೆ ದರ ಪರಿಷ್ಕರಿಸಿದ ಬ್ಯಾಂಕುಗಳು

Bank FD rates: ಕೆಲ ಪ್ರಮುಖ ಬ್ಯಾಂಕುಗಳು ಇತ್ತೀಚೆಗೆ ತಮ್ಮ ಫಿಕ್ಸೆಡ್ ಡೆಪಾಸಿಟ್ ದರಗಳನ್ನು ಪರಿಷ್ಕರಣೆ ಮಾಡಿವೆ. ಕೆಲ ಅವಧಿಯ ಠೇವಣಿಗಳಿಗೆ ಹೆಚ್ಚಿನ ಬಡ್ಡಿ ಆಫರ್ ಮಾಡಿವೆ. ಶೇ. 9.1ರವರೆಗೂ ವಾರ್ಷಿಕ ಬಡ್ಡಿ ನೀಡಲಾಗುತ್ತಿದೆ. ಹಿರಿಯ ನಾಗರಿಕರಿಗೆ ಹೆಚ್ಚಿನ ಬಡ್ಡಿ ಕೊಡಲಾಗುತ್ತದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಡಿಸಿಬಿ ಬ್ಯಾಂಕ್, ಐಡಿಎಫ್​ಸಿ ಫಸ್ಟ್ ಬ್ಯಾಂಕ್ ಮೊದಲಾದ ಬ್ಯಾಂಕುಗಳಲ್ಲಿ ಗರಿಷ್ಠ ಎಫ್​ಡಿ ದರ ಎಷ್ಟಿದೆ ಎನ್ನುವ ವಿವರ ಇಲ್ಲಿದೆ.

ನಿಶ್ಚಿತ ಠೇವಣಿಗೆ ಶೇ. 9.1ರವರೆಗೂ ಬಡ್ಡಿ; ಇತ್ತೀಚೆಗೆ ದರ ಪರಿಷ್ಕರಿಸಿದ ಬ್ಯಾಂಕುಗಳು
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 27, 2024 | 2:20 PM

Share

ನವದೆಹಲಿ, ಮೇ 27: ಬ್ಯಾಂಕುಗಳು ಸಾಮಾನ್ಯವಾಗಿ ಆಗಾಗ್ಗೆ ಸಾಲ ಮತ್ತು ಠೇವಣಿ ದರಗಳನ್ನು (loan and deposit rates) ಪರಿಷ್ಕರಿಸುತ್ತಿರುತ್ತವೆ. ಹೆಚ್ಚು ಠೇವಣಿಗಳನ್ನು ಆಕರ್ಷಿಸಬೇಕಿದ್ದಲ್ಲಿ ಆಕರ್ಷಕ ಎಫ್​ಡಿ ದರಗಳನ್ನು ನಿಗದಿ ಮಾಡಲಾಗುತ್ತದೆ. ಅಂತೆಯೇ ಸಹಕಾರಿ ಬ್ಯಾಂಕುಗಳು ಸಹಜವಾಗಿ ಹೆಚ್ಚಿನ ಎಫ್​ಡಿ ದರಗಳನ್ನು ಆಫರ್ ಮಾಡುತ್ತವೆ. ಮುಖ್ಯವಾಹಿನಿ ಬ್ಯಾಂಕುಗಳು ತಕ್ಕಮಟ್ಟಿಗಿನವರೆಗೆ ಬಡ್ಡಿದರ ನಿಗದಿ ಮಾಡುತ್ತವೆ. ಇತ್ತೀಚೆಗೆ ಕೆಲ ಬ್ಯಾಂಕುಗಳು ಎಫ್​ಡಿ ದರಗಳನ್ನು ಪರಿಷ್ಕರಿಸಿವೆ. ಶೇ. 9.1ರವರೆಗೆ ಬಡ್ಡಿ ಆಫರ್ ಮಾಡಿವೆ. ಉತ್ಕರ್ಷ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಗರಿಷ್ಠ ಬಡ್ಡಿ ನೀಡುತ್ತದೆ. ಸಾಮಾನ್ಯ ಗ್ರಾಹಕರಿಗಿಂತ ಹಿರಿಯ ನಾಗರಿಕರ ಠೇವಣಿಗಳಿಗೆ 50 ಅಥವಾ 60 ಮೂಲಾಂಕಗಳಷ್ಟು ಹೆಚ್ಚು ಬಡ್ಡಿ ಸಿಗುತ್ತದೆ. ಯಾವ್ಯಾವ ಬ್ಯಾಂಕುಗಳಲ್ಲಿ ಇತ್ತೀಚೆಗೆ ಎಫ್​ಡಿ ದರ ಪರಿಷ್ಕರಣೆ ಆಗಿದೆ ಎನ್ನುವ ವಿವರ ಇಲ್ಲಿದೆ:

ಡಿಸಿಬಿ ಬ್ಯಾಂಕ್: ಶೇ. 8.55ರವರೆಗೆ ಬಡ್ಡಿ

ಡಿಸಿಬಿ ಬ್ಯಾಂಕ್ 19ರಿಂದ 20 ತಿಂಗಳ ಫಿಕ್ಸೆಡ್ ಡೆಪಾಸಿಟ್ ಪ್ಲಾನ್​ಗೆ ಬಡ್ಡಿದರವನ್ನು ಶೇ. 8ಕ್ಕೆ ಏರಿಸಿದೆ. ಇದು ಸಾಮಾನ್ಯ ಗ್ರಾಹಕರಿಗೆ ನೀಡಲಾಗುವ ಬಡ್ಡಿ. ಹಿರಿಯ ನಾಗರಿಕರಿಗೆ 55 ಮೂಲಾಂಕಗಳಷ್ಟು ಹೆಚ್ಚು ಬಡ್ಡಿ, ಅಂದರೆ ಶೇ. 8.55ರಷ್ಟು ಬಡ್ಡಿ ಕೊಡಲಾಗುತ್ತದೆ.

ಐಡಿಎಫ್​ಸಿ ಫಸ್ಟ್ ಬ್ಯಾಂಕ್: ಶೇ. 8.40 ಬಡ್ಡಿ

ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನ ಸಾಮಾನ್ಯ ಗ್ರಾಹಕರ ನಿಶ್ಚಿತ ಠೇವಣಿಗಳಿಗೆ ಶೇ. 7.90ರವರೆಗೆ ಬಡ್ಡಿ ಸಿಗುತ್ತದೆ. ಹಿರಿಯ ನಾಗರಿಕರಿಗೆ 50 ಮೂಲಾಂಕಗಳಷ್ಟು ಹೆಚ್ಚು ಬಡ್ಡಿ ಸಿಗುತ್ತದೆ.

ಇದನ್ನೂ ಓದಿ: 40ರ ಬಳಿಕ ಮನೆ ಮಾಡಲು ಹೊರಟಿದ್ದೀರಾ? ಈ ಅಂಶಗಳು ಗಮನದಲ್ಲಿರಲಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ: ಶೇ. 7.6

ದೇಶದ ಅತಿದೊಡ್ಡ ಬ್ಯಾಂಕ್ ಎನಿಸಿರುವ ಎಸ್​ಬಿಐ ತನ್ನ ಫಿಕ್ಸೆಡ್ ಡೆಪಾಸಿಟ್​ಗಳಿಗೆ ಶೇ. ಶೇ. 7.1ರವರೆಗೆ ಬಡ್ಡಿ ಕೊಡುತ್ತದೆ. ಹಿರಿಯ ನಾಗರಿಕರಿಗೆ ಶೇ. 7.60ರವರೆಗೆ ಎಫ್​ಡಿ ದರಗಳಿವೆ.

ಉತ್ಕರ್ಷ್ ಸ್ಮಾಲ್ ಫೈನಾನ್ಸ್ ಬ್ಯಾಂಕ್: ಶೇ. 9.1

ಉತ್ಕರ್ಷ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ತನ್ನ ಸಾಮಾನ್ಯ ಗ್ರಾಹಕರಿಗೆ ಶೇ. 8.50ರವರೆಗೆ ಬಡ್ಡಿ ಕೊಡುತ್ತದೆ. ಹಿರಿಯ ನಾಗರಿಕರಿಗೆ ಶೇ. 9.10ರವರೆಗೆ ಬಡ್ಡಿ ಸಿಗುತ್ತದೆ. ಎರಡರಿಂದ ಮೂರು ವರ್ಷ ಅವಧಿಯ ಠೇವಣಿಗಳಿಗೆ ಗರಿಷ್ಠ ಬಡ್ಡಿ ದರ ಇದೆ.

ಇದನ್ನೂ ಓದಿ: ಮೋದಿಯ ಶೇ. 95ರಷ್ಟು ವೈಯಕ್ತಿಕ ಸಂಪತ್ತು ಎಫ್​ಡಿಗಳಲ್ಲಿ; ಫಿಕ್ಸೆಡ್ ಡೆಪಾಸಿಟ್​ನ ಲಾಭಗಳೇನು, ತಿಳಿದಿರಿ

ಆರ್​ಬಿಎಲ್ ಬ್ಯಾಂಕ್: ಶೇ. 8.75

ಆರ್​ಬಿಎಲ್ ಬ್ಯಾಂಕ್​ನ ಫಿಕ್ಸೆಡ್ ಡೆಪಾಸಿಟ್ ದರಗಳನ್ನು ಪರಿಷ್ಕರಿಸಲಾಗಿದ್ದು, ಸಾಮಾನ್ಯ ಗ್ರಾಹಕರ ಠೇವಣಿಗಳಿಗೆ ಶೇ. 8ರವರೆಗೆ ಬಡ್ಡಿ ಕೊಡಲಾಗುತ್ತದೆ. 60 ವರ್ಷ ಮೇಲ್ಪಟ್ಟ ಮತ್ತು 80 ವರ್ಷ ಒಳಪಟ್ಟ ಹಿರಿಯ ನಾಗರಿಕರಿಗೆ 50 ಮೂಲಾಂಕಗಳಷ್ಟು ಹೆಚ್ಚು ಬಡ್ಡಿ ಸಿಗುತ್ತದೆ. 80 ವರ್ಷ ಮೇಲ್ಪಟ್ಟ ಸೂಪರ್ ಸೀನಿಯರ್ಸ್​ಗೆ ಶೇ. 8.75ರವರೆಗೆ ಬಡ್ಡಿ ಆಫರ್ ಮಾಡಲಾಗಿದೆ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!