AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖುಷಿಯ ಸುದ್ದಿ…! ಸರ್ಕಾರದ ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿದರ ಹೆಚ್ಚಳ ಸಾಧ್ಯತೆ; ಇಲ್ಲಿದೆ ಸೇವಿಂಗ್ಸ್ ಸ್ಕೀಮ್​ಗಳ ಹಾಲಿ ದರದ ಪಟ್ಟಿ

Small Savings Scheme Interest Rates: 2024ರ ಜನವರಿಯಿಂದ ಮಾರ್ಚ್​ವರೆಗಿನ ಕ್ವಾರ್ಟರ್ ಅವಧಿಗೆ ಸರ್ಕಾರದ ವಿವಿಧ ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿದರ ಹೆಚ್ಚುವ ಸಾಧ್ಯತೆ ಇದೆ. ಪಿಪಿಎಫ್, ಸುಕನ್ಯಾ ಸಮೃದ್ದಿ ಯೋಜನೆ, ಕಿಸಾನ್ ವಿಕಾಸ್ ಪತ್ರ, ಅಂಚೆ ಕಚೇರಿಯ ಅವಧಿ ಠೇವಣಿಗಳು, ಆರ್​ಡಿ ಇತ್ಯಾದಿಗಳು ಸ್ಮಾಲ್ ಸೇವಿಂಗ್ಸ್ ಸ್ಕೀಮ್​ಗಳಾಗಿವೆ. ಸರ್ಕಾರಿ ಸಾಲಪತ್ರಗಳ ಯೀಲ್ಡ್​ಗೆ ಅನುಗುಣವಾಗಿ ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ದರ ಅನ್ವಯ ಮಾಡುವುದು ಇತ್ತೀಚೆಗೆ ಆರಂಭಿಸಲಾಗಿರುವ ಕ್ರಮ.

ಖುಷಿಯ ಸುದ್ದಿ...! ಸರ್ಕಾರದ ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿದರ ಹೆಚ್ಚಳ ಸಾಧ್ಯತೆ; ಇಲ್ಲಿದೆ ಸೇವಿಂಗ್ಸ್ ಸ್ಕೀಮ್​ಗಳ ಹಾಲಿ ದರದ ಪಟ್ಟಿ
ಅವಧಿ ಠೇವಣಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 26, 2023 | 6:17 PM

Share

ಸರ್ಕಾರದಿಂದ ನಡೆಸಲಾಗುವ ವಿವಿಧ ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿದರಗಳನ್ನು ಪರಿಷ್ಕರಿಸುವ ಸಾಧ್ಯತೆ ಇದೆ. ಈ ಹಣಕಾಸು ವರ್ಷದ ಕೊನೆಯ ಕ್ವಾರ್ಟರ್ ಆಗಿರುವ ಮತ್ತು 2024ರ ಕ್ಯಾಲಂಡರ್ ವರ್ಷದ ಮೊದಲ ಕ್ವಾರ್ಟರ್ ಆಗಿರುವ ಜನವರಿಯಿಂದ ಮಾರ್ಚ್​ವರೆಗಿನ ಅವಧಿಗೆ ಪಬ್ಲಿಕ್ ಪ್ರಾವಿಡೆಂಟ್ ಫಂಡ್, ನ್ಯಾಷನಲ್ ಸೇವಿಂಗ್ಸ್ ಸರ್ಟಿಫಿಕೇಟ್ ಇತ್ಯಾದಿ ಸ್ಮಾಲ್ ಸೇವಿಂಗ್ಸ್ ಸ್ಕೀಮ್​ಗಳಿಗೆ (Small Savings Scheme Interest Rates) ಸರ್ಕಾರ ಹೆಚ್ಚು ಬಡ್ಡಿ ದರ ನೀಡಲಿದೆ ಎಂದು ವರದಿಗಳು ಹೇಳುತ್ತಿವೆ. ಡಿಸೆಂಬರ್ 29ಕ್ಕೆ ಸರ್ಕಾರದಿಂದ ಪರಿಷ್ಕೃತ ದರಗಳು ಪ್ರಕಟವಾಗಬಹುದು ಎಂದು ಮೂಲಗಳು ಹೇಳುತ್ತಿವೆ.

ಸ್ಮಾಲ್ ಸೇವಿಂಗ್ಸ್ ಸ್ಕೀಮ್​ಗಳಿಗೆ ಬಡ್ಡಿ ನಿಗದಿ ಮಾಡುವುದಕ್ಕೆ ಕ್ರಮಗಳಿವೆ…

ವಿವಿಧ ಸಣ್ಣ ಉಳಿತಾಯ ಯೋಜನೆಗಳಿಗೆ ಸರ್ಕಾರ ಪ್ರತೀ ಕ್ವಾರ್ಟರ್​ಗೆ ಬಡ್ಡಿ ದರ ಪರಿಷ್ಕರಿಸಬಹುದು. ಹಣದ ಹರಿವು, ಹಣದುಬ್ಬರ ಇತ್ಯಾದಿ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಬಡ್ಡಿದರ ಪರಿಷ್ಕರಣೆ ಆಗುತ್ತದೆ. ಅಲ್ಲದೇ, ಈ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳು ಪೆಟ್ರೋಲ್, ಚಿನ್ನದಂತೆ ಮಾರುಕಟ್ಟೆ ಜೋಡಿತವಾಗಿದೆ. ಅಂದರೆ, 10 ವರ್ಷದ ಸರ್ಕಾರಿ ಬಾಂಡ್​ಗಳ ರಿಟರ್ನ್ಸ್​ಗೆ ಅನುಗುಣವಾಗಿ ಸ್ಮಾಲ್ ಸೇವಿಂಗ್ಸ್ ಸ್ಕೀಮ್​ಗೆ ಬಡ್ಡಿದರ ಅನ್ವಯ ಮಾಡಲಾಗುತ್ತದೆ.

ಇದನ್ನೂ ಓದಿ: Tips: ನಿವೃತ್ತಿಗೆ ಹಣ ಹೊಂದಿಸಬೇಕೆ? ಎಲ್ಲೆಲ್ಲಿ ಹೂಡಿಕೆ ಮಾಡಬೇಕು, ಈ ಸಲಹೆ ನಿಮಗೆ ಉಪಯುಕ್ತ ಎನಿಸಬಹುದು

ಪ್ರಸಕ್ತ, ಗವರ್ನ್ಮೆಂಟ್ ಸೆಕ್ಯೂರಿಟಿಗಳ ಯೀಲ್ಡ್ ಅನ್ನು ಗಮನದಲ್ಲಿಟ್ಟುಕೊಂಡು ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ದರ ಹೆಚ್ಚಿಸಬಹುದು ಎನ್ನಲಾಗಿದೆ.

ಸದ್ಯಕ್ಕೆ ಇರುವ ಸ್ಮಾಲ್ ಸೇವಿಂಗ್ಸ್ ಸ್ಕೀಮ್​ಗಳ ಬಡ್ಡಿದರ (2023ರ ಅಕ್ಟೋಬರ್​ನಿಂದ ಡಿಸೆಂಬರ್)

  • ಸೇವಿಂಗ್ಸ್ ಡೆಪಾಸಿಟ್: ಶೇ. 4ರಷ್ಟು ಬಡ್ಡಿ
  • ಅಂಚೆ ಕಚೇರಿ ಅವಧಿ ಠೇವಣಿ (1 ವರ್ಷ): ಶೇ. 6.9ರಷ್ಟು ಬಡ್ಡಿ
  • ಅಂಚೆ ಕಚೇರಿ ಅವಧಿ ಠೇವಣಿ (2 ವರ್ಷ): ಶೇ. 7ರಷ್ಟು ಬಡ್ಡಿ
  • ಅಂಚೆ ಕಚೇರಿ ಅವಧಿ ಠೇವಣಿ (3 ವರ್ಷ): ಶೇ. 7ರಷ್ಟು ಬಡ್ಡಿ
  • ಅಂಚೆ ಕಚೇರಿ ಅವಧಿ ಠೇವಣಿ (5 ವರ್ಷ): ಶೇ. 7.5ರಷ್ಟು ಬಡ್ಡಿ
  • ಅಂಚೆ ಕಚೇರಿ 5 ವರ್ಷದ ಆರ್​ಡಿ: ಶೇ. 6.7ರಷ್ಟು ಬಡ್ಡಿ
  • ನ್ಯಾಷನಲ್ ಸೇವಿಂಗ್ ಸರ್ಟಿಫಿಕೇಟ್ಸ್ (ಎನ್​ಎಸ್​ಸಿ): ಶೇ. 7.7ರಷ್ಟು ಬಡ್ಡಿ
  • ಕಿಸಾನ್ ವಿಕಾಸ್ ಪತ್ರ (115 ತಿಂಗಳದ್ದು): ಶೇ. 7.5ರಷ್ಟು ಬಡ್ಡಿ
  • ಪಿಪಿಎಫ್: ಶೇ. 7.1ರಷ್ಟು ಬಡ್ಡಿ
  • ಸುಕನ್ಯಾ ಸಮೃದ್ಧಿ ಯೋಜನೆ: ಶೇ. 8ರಷ್ಟು ಬಡ್ಡಿ
  • ಹಿರಿಯ ನಾಗರಿಕರ ಉಳಿತಾಯ ಯೋಜನೆ: ಶೇ. 8.2ರಷ್ಟು ಬಡ್ಡಿ
  • ಮಾಸಿಕ ಆದಾಯ ಖಾತೆ: ಶೇ. 7.4ರಷ್ಟು ಬಡ್ಡಿ

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು