ಸರ್ಕಾರದಿಂದ ನಡೆಸಲಾಗುವ ವಿವಿಧ ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿದರಗಳನ್ನು ಪರಿಷ್ಕರಿಸುವ ಸಾಧ್ಯತೆ ಇದೆ. ಈ ಹಣಕಾಸು ವರ್ಷದ ಕೊನೆಯ ಕ್ವಾರ್ಟರ್ ಆಗಿರುವ ಮತ್ತು 2024ರ ಕ್ಯಾಲಂಡರ್ ವರ್ಷದ ಮೊದಲ ಕ್ವಾರ್ಟರ್ ಆಗಿರುವ ಜನವರಿಯಿಂದ ಮಾರ್ಚ್ವರೆಗಿನ ಅವಧಿಗೆ ಪಬ್ಲಿಕ್ ಪ್ರಾವಿಡೆಂಟ್ ಫಂಡ್, ನ್ಯಾಷನಲ್ ಸೇವಿಂಗ್ಸ್ ಸರ್ಟಿಫಿಕೇಟ್ ಇತ್ಯಾದಿ ಸ್ಮಾಲ್ ಸೇವಿಂಗ್ಸ್ ಸ್ಕೀಮ್ಗಳಿಗೆ (Small Savings Scheme Interest Rates) ಸರ್ಕಾರ ಹೆಚ್ಚು ಬಡ್ಡಿ ದರ ನೀಡಲಿದೆ ಎಂದು ವರದಿಗಳು ಹೇಳುತ್ತಿವೆ. ಡಿಸೆಂಬರ್ 29ಕ್ಕೆ ಸರ್ಕಾರದಿಂದ ಪರಿಷ್ಕೃತ ದರಗಳು ಪ್ರಕಟವಾಗಬಹುದು ಎಂದು ಮೂಲಗಳು ಹೇಳುತ್ತಿವೆ.
ವಿವಿಧ ಸಣ್ಣ ಉಳಿತಾಯ ಯೋಜನೆಗಳಿಗೆ ಸರ್ಕಾರ ಪ್ರತೀ ಕ್ವಾರ್ಟರ್ಗೆ ಬಡ್ಡಿ ದರ ಪರಿಷ್ಕರಿಸಬಹುದು. ಹಣದ ಹರಿವು, ಹಣದುಬ್ಬರ ಇತ್ಯಾದಿ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಬಡ್ಡಿದರ ಪರಿಷ್ಕರಣೆ ಆಗುತ್ತದೆ. ಅಲ್ಲದೇ, ಈ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳು ಪೆಟ್ರೋಲ್, ಚಿನ್ನದಂತೆ ಮಾರುಕಟ್ಟೆ ಜೋಡಿತವಾಗಿದೆ. ಅಂದರೆ, 10 ವರ್ಷದ ಸರ್ಕಾರಿ ಬಾಂಡ್ಗಳ ರಿಟರ್ನ್ಸ್ಗೆ ಅನುಗುಣವಾಗಿ ಸ್ಮಾಲ್ ಸೇವಿಂಗ್ಸ್ ಸ್ಕೀಮ್ಗೆ ಬಡ್ಡಿದರ ಅನ್ವಯ ಮಾಡಲಾಗುತ್ತದೆ.
ಇದನ್ನೂ ಓದಿ: Tips: ನಿವೃತ್ತಿಗೆ ಹಣ ಹೊಂದಿಸಬೇಕೆ? ಎಲ್ಲೆಲ್ಲಿ ಹೂಡಿಕೆ ಮಾಡಬೇಕು, ಈ ಸಲಹೆ ನಿಮಗೆ ಉಪಯುಕ್ತ ಎನಿಸಬಹುದು
ಪ್ರಸಕ್ತ, ಗವರ್ನ್ಮೆಂಟ್ ಸೆಕ್ಯೂರಿಟಿಗಳ ಯೀಲ್ಡ್ ಅನ್ನು ಗಮನದಲ್ಲಿಟ್ಟುಕೊಂಡು ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ದರ ಹೆಚ್ಚಿಸಬಹುದು ಎನ್ನಲಾಗಿದೆ.
ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ