Cheaper Home Loan: ಕಡಿಮೆ ಬಡ್ಡಿ ದರದಲ್ಲಿ ಗೃಹ ಸಾಲ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ಹೊಸದಾಗಿ ವೈಯಕ್ತಿಕ, ಗೃಹ ಹಾಗೂ ಕಾರು ಸಾಲ ಪಡೆಯುವವರಿಗೆ ಬಡ್ಡಿದರ ಹೆಚ್ಚಳದ ಬಿಸಿ ತಟ್ಟುತ್ತಿದೆ. ಇದರ ಹೊರತಾಗಿಯೂ ನೀವು ಕಡಿಮೆ ಬಡ್ಡಿ ದರದಲ್ಲಿ ಗೃಹ ಸಾಲಗಳನ್ನು ಪಡೆಯಲು ಅವಕಾಶವಿದೆ. ಹೇಗೆಂಬ ಮಾಹಿತಿ ಇಲ್ಲಿದೆ.

Cheaper Home Loan: ಕಡಿಮೆ ಬಡ್ಡಿ ದರದಲ್ಲಿ ಗೃಹ ಸಾಲ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Follow us
| Updated By: ಗಣಪತಿ ಶರ್ಮ

Updated on:Oct 21, 2022 | 2:42 PM

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (Reserve Bank of India) ರೆಪೊ ದರ ಹೆಚ್ಚಿಸಿದಂತೆಲ್ಲಾ ಬ್ಯಾಂಕ್​ಗಳೂ ಸಹ ಸಾಲದ ಮೇಲಿನ ಬಡ್ಡಿ ದರವನ್ನು (loan interest) ಹೆಚ್ಚಿಸುತ್ತವೆ. ಸೆಪ್ಟೆಂಬರ್ 30ರಂದು ಪ್ರಕಟಿಸಿದ್ದ ಹಣಕಾಸು ನೀತಿಯಲ್ಲಿ ಆರ್​ಬಿಐ ರೆಪೊ ದರವನ್ನು 50 ಮೂಲಾಂಶದಷ್ಟು ಹೆಚ್ಚಿಸಿ ಶೇಕಡಾ 5.9ಕ್ಕೆ ಏರಿಕೆ ಮಾಡಿತ್ತು. ಇದರ ಬೆನ್ನಲ್ಲೇ ಎಸ್​ಬಿಐ (State Bank of India), ಪಂಜಾಬ್ ನ್ಯಾಷನಲ್ ಬ್ಯಾಂಕ್ (Punjab National Bank), ಬ್ಯಾಂಕ್ ಆಫ್ ಬರೋಡ (Bank of Baroda) ಹಾಗೂ ಐಸಿಐಸಿಐ ಬ್ಯಾಂಕ್​ಗಳು (ICICI Bank) ಸಾಲದ ಮೇಲಿನ ಬಡ್ಡಿ ದರವನ್ನು ಪರಿಷ್ಕರಿಸಿದ್ದವು.

ಪರಿಣಾಮವಾಗಿ ಸಾಲದ ಮೇಲಿನ ಬಡ್ಡಿ ದರಗಳು ಹೆಚ್ಚಾಗಿವೆ. ಅದೇ ರೀತಿ ಇಎಂಐ (EMIs) ಕೂಡ ದುಬಾರಿಯಾಗಿ ಪರಿಣಮಿಸಿದೆ. ಹೊಸದಾಗಿ ವೈಯಕ್ತಿಕ, ಗೃಹ ಹಾಗೂ ಕಾರು ಸಾಲ ಪಡೆಯುವವರಿಗೆ ಬಡ್ಡಿದರ ಹೆಚ್ಚಳದ ಬಿಸಿ ತಟ್ಟುತ್ತಿದೆ. ಇದರ ಹೊರತಾಗಿಯೂ ನೀವು ಕಡಿಮೆ ಬಡ್ಡಿ ದರದಲ್ಲಿ ಗೃಹ ಸಾಲಗಳನ್ನು ಪಡೆಯಲು ಅವಕಾಶವಿದೆ. ಹೇಗೆಂಬ ಮಾಹಿತಿ ಇಲ್ಲಿದೆ;

ಹಬ್ಬದ ಆಫರ್​ಗಳು:

ಇದನ್ನೂ ಓದಿ
Image
Petrol Price Today: ಇಳಿಕೆಯಾಯಿತಾ ಪೆಟ್ರೋಲ್ ಬೆಲೆ?; ನಿಮ್ಮ ನಗರಗಳಲ್ಲಿ ಇಂದಿನ ಡೀಸೆಲ್ ದರ ಹೀಗಿದೆ
Image
Gold Price Today: ಚಿನ್ನ-ಬೆಳ್ಳಿ ದರದಲ್ಲಿ ಇಳಿಕೆ, ಪ್ರಮುಖ ನಗರಗಳ ಬೆಲೆ ಇಲ್ಲಿದೆ
Image
Health Insurance: ಆರೋಗ್ಯ ವಿಮೆ ಮಾಡಿಸುತ್ತಿದ್ದೀರಾ? ಅಸ್ತಿತ್ವದಲ್ಲಿರುವ ಕಾಯಿಲೆಗಳ ವಿವರ ನೀಡಲು ಮರೆಯಬೇಡಿ
Image
Amazon Great Indian Festival: ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್​ ಸೇಲ್​, ಕೋಟ್ಯಧಿಪತಿಗಳಾದ 650 ಮಾರಾಟಗಾರರು

ಪ್ರತಿ ಹಬ್ಬದ ಅವಧಿಯಲ್ಲಿ ಹೆಚ್ಚಿನ ಬ್ಯಾಂಕ್​ಗಳು ಹಬ್ಬದ ವಿಶೇಷ ಆಫರ್​ಗಳನ್ನು ನೀಡುತ್ತವೆ. ಕಡಿಮೆ ಬಡ್ಡಿ ದರದಲ್ಲಿ ಗೃಹ ಸಾಲ ನೀಡುತ್ತವೆ.

ಕೆಲವು ಬ್ಯಾಂಕ್​ಗಳು ಹಬ್ಬದ ಋತುವಿನಲ್ಲಿ ಗೃಹ ಸಾಲದ ಮೇಲಿನ ಪ್ರೊಸೆಸಿಂಗ್ ಶುಲ್ಕದಿಂದ ಗ್ರಾಹಕರಿಗೆ ವಿನಾಯಿತಿ ನೀಡುತ್ತವೆ. ಅಲ್ಲದೆ ಇತರ ಶುಲ್ಕಗಳಿಂದಲೂ ವಿನಾಯಿತಿ ನೀಡುತ್ತವೆ. ಈ ಸೌಲಭ್ಯಗಳು ಗೃಹ ಸಾಲವನ್ನು ಕಡಿಮೆ ವೆಚ್ಚದಾಯಕವಾಗಿಸಬಲ್ಲವು.

ಕ್ರೆಡಿಟ್ ಸ್ಕೋರ್:

ಸಾಲ ಪಡೆಯಲು ಗ್ರಾಹಕರು ಎಷ್ಟು ಅರ್ಹರು ಎಂಬುದನ್ನು ನಿರ್ಧರಿಸುವ ಹಾಗೂ ಗ್ರಾಹಕರ ಸಾಲದ ದಾಖಲೆಗಳಿಗೆ ಸಂಬಂಧಿಸಿದ 3 ಅಂಕಿಗಳ ಒಂದು ಸಂಖ್ಯೆಯೇ ಕ್ರೆಡಿಟ್ ಸ್ಕೋರ್. ನಾವು ಎಷ್ಟು ಸಾಲ ಪಡೆದಿದ್ದೇವೆ, ಎಷ್ಟರ ಕಂತುಗಳನ್ನು ಸಮಯಕ್ಕೆ ಸರಿಯಾಗಿ ಮರು ಪಾವತಿ ಮಾಡುತ್ತಿದ್ದೇವೆ ಎಂಬುದರ ಆಧಾರದಲ್ಲಿ ಈ ಸಂಖ್ಯೆಯನ್ನು ನಿರ್ಧರಿಸಲಾಗುತ್ತದೆ. ಗೃಹ ಸಾಲ ಪಡೆಯಲು ಮುಂದಾದಾಗ ಗ್ರಾಹಕರ ಕ್ರೆಡಿಟ್ ಸ್ಕೋರ್ ಅನ್ನು ಮೌಲ್ಯಮಾಪನ ಮಾಡಿ ಬ್ಯಾಂಕ್​ಗಳು ಸಾಲ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತವೆ.

ಇದನ್ನೂ ಓದಿ: Credit Score: ಕ್ರೆಡಿಟ್ ಸ್ಕೋರ್ ಉತ್ತಮಗೊಳಿಸುವುದು ಹೇಗೆ? ಇಲ್ಲಿದೆ ಸಲಹೆ

ಉತ್ತಮವಾದ ಕ್ರೆಡಿಟ್ ಸ್ಕೋರ್ ಹೊಂದಿದ್ದರೆ ಅಂಥ ಗ್ರಾಹಕರಿಗೆ ಕಡಿಮೆ ಬಡ್ಡಿ ದರದಲ್ಲಿ ಗೃಹ ಸಾಲ ನೀಡಲು ಬ್ಯಾಂಕ್​ಗಳು ಮುಂದಾಗುತ್ತವೆ. ಕಡಿಮೆ ಕ್ರೆಡಿಟ್ ಸ್ಕೋರ್ ಹೊಂದಿರುವವರಿಗೆ ಹೋಲಿಸಿದರೆ, ಬ್ಯಾಂಕ್​ಗಳು ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವ ಸಾಧ್ಯತೆ ಉತ್ತಮ ಕ್ರೆಡಿಟ್ ಸ್ಕೋರ್ ಹೊಂದಿದ್ದವರಿಗೇ ಹೆಚ್ಚಾಗಿದೆ.

ಆಯ್ಕೆಗಳನ್ನು ಪರಿಶೀಲಿಸಬೇಕು:

ಅನೇಕ ಬ್ಯಾಂಕ್​ಗಳು, ಬ್ಯಾಂಕೇತರ ಹಣಕಾಸು ಸಂಸ್ಥೆಗಳು ವಿವಿಧ ಬಡ್ಡಿ ದರಗಳಲ್ಲಿ ಗೃಹ ಸಾಲ ನೀಡುತ್ತವೆ. ಹೀಗಾಗಿ ಆಯ್ಕೆಗಳನ್ನು ಪರಿಶೀಲಿಸಿ ಕಡಿಮೆ ಬಡ್ಡಿ ದರದಲ್ಲಿ ದೊರೆಯುವ ಸಾಲಗಳನ್ನೇ ಪರಿಗಣಿಸುವುದು ಉತ್ತಮ ಆಯ್ಕೆಯಾಗಿದೆ ಎಂದು ‘ಎನ್​ಡಿಟಿವಿ ಪ್ರಾಫಿಟ್’ ಸಲಹೆ ನೀಡಿದೆ.

ಗ್ರಾಹಕರ ವೃತ್ತಿ, ಕ್ರೆಡಿಟ್ ಇತಿಹಾಸದ ಆಧಾರದಲ್ಲಿ ಬಡ್ಡಿ ದರಗಳು ಬದಲಾಗಬಹದು. ಗ್ರಾಹಕರು ಬಯಸುವ ಸಾಲದ ಮೊತ್ತ ಮತ್ತು ಮರುಪಾವತಿಗಾಗಿ ಅವರು ಆಯ್ಕೆ ಮಾಡಿರುವ ಅವಧಿ ಕೂಡ ಬಡ್ಡಿದರದ ಮೇಲೆ ಪರಿಣಾಮ ಬೀರಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:24 pm, Fri, 21 October 22

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ