AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Post Office Time Deposit: ಅಂಚೆ ಕಚೇರಿ ಟೈಮ್ ಡಿಪಾಸಿಟ್​​ನಲ್ಲಿ ಹೂಡಿಕೆ ಮಾಡಿ ಲಕ್ಷಾಧಿಪತಿಯಾಗಿ!

ಅಂಚೆ ಕಚೇರಿ ಟೈಮ್ ಡಿಪಾಸಿಟ್​​ನಲ್ಲಿ ಹೂಡಿಕೆ ಮಾಡುವ ಮೂಲಕ ನೀವು ಕೇವಲ 5 ವರ್ಷಗಳಲ್ಲಿ ದೊಡ್ಡ ಮೊತ್ತದ ಹಣವನ್ನು ಸಂಗ್ರಹಿಸಬಹುದು. ಹೌದು, ಪೋಸ್ಟ್ ಆಫೀಸ್ ಟೈಮ್ ಡಿಪಾಸಿಟ್ ಯೋಜನೆಯಲ್ಲಿ ಹೂಡಿಕೆ ಮಾಡುವ ಮೂಲಕ ಹೆಚ್ಚಿನ ರಿಟರ್ನ್ಸ್ ಪಡೆಯಬಹುದು.

Post Office Time Deposit: ಅಂಚೆ ಕಚೇರಿ ಟೈಮ್ ಡಿಪಾಸಿಟ್​​ನಲ್ಲಿ ಹೂಡಿಕೆ ಮಾಡಿ ಲಕ್ಷಾಧಿಪತಿಯಾಗಿ!
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: May 30, 2023 | 8:55 AM

Share

ಲಕ್ಷಾಧಿಪತಿ ಆಗುವ ಬಯಕೆ ಯಾರಿಗೆ ಇರುವುದಿಲ್ಲ ಹೇಳಿ. ಆದರೆ ಹೆಚ್ಚುತ್ತಿರುವ ಹಣದುಬ್ಬರದ (Inflation) ಈ ಸಮಯಲ್ಲಿ ಲಕ್ಷಾಧಿಪತಿಯಾಗುವುದು ಸುಲಭವಲ್ಲ. ಹಣದುಬ್ಬರಕ್ಕೆ ಹೋಲಿಸಿದರೆ, ಹೆಚ್ಚಿನ ಜನರ ಸಂಬಳವು ಅವರ ವೆಚ್ಚಗಳಿಗೆ ಮಾತ್ರ ಬಳಕೆಯಾಗುತ್ತವೆ. ಹಾಗಾದರೆ ಹಣ ಉಳಿಸುವುದು ಹೇಗೆ ಎಂಬುದು ಯೋಚಿಸಬೇಕಾದ ವಿಷಯ. ಅಂಚೆ ಕಚೇರಿ ಟೈಮ್ ಡಿಪಾಸಿಟ್​​ನಲ್ಲಿ (Post Office Time Deposit) ಹೂಡಿಕೆ ಮಾಡುವ ಮೂಲಕ ನೀವು ಕೇವಲ 5 ವರ್ಷಗಳಲ್ಲಿ ದೊಡ್ಡ ಮೊತ್ತದ ಹಣವನ್ನು ಸಂಗ್ರಹಿಸಬಹುದು. ಹೌದು, ಪೋಸ್ಟ್ ಆಫೀಸ್ ಟೈಮ್ ಡಿಪಾಸಿಟ್ ಯೋಜನೆಯಲ್ಲಿ ಹೂಡಿಕೆ ಮಾಡುವ ಮೂಲಕ ಹೆಚ್ಚಿನ ರಿಟರ್ನ್ಸ್ ಪಡೆಯಬಹುದು.

ಅಂದಹಾಗೆ, ಕಡಿಮೆ ಸಮಯದಲ್ಲಿ ಉತ್ತಮ ಲಾಭವನ್ನು ನೀಡುವ ಪೋಸ್ಟ್ ಆಫೀಸ್ ಯೋಜನೆಗಳಿವೆ. ಆದರೆ ಟೈಮ್ ಡಿಪಾಸಿಟ್​​ನಲ್ಲಿ ನೀವು ಖಂಡಿತವಾಗಿ ಉತ್ತಮ ರಿಟರ್ನ್ ಪಡೆಯುತ್ತೀರಿ. ಅದೇ ಸಮಯದಲ್ಲಿ, ಅದರಲ್ಲಿ ಹೂಡಿಕೆ ಮಾಡುವ ಮೂಲಕ, ನೀವು 1.5 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ಸಹ ಪಡೆಯಬಹುದು. ಇದರಲ್ಲಿ, ನೀವು ಕನಿಷ್ಠ 1000 ರೂ.ಗಳಿಂದ ಹೂಡಿಕೆಯನ್ನು ಪ್ರಾರಂಭಿಸಬಹುದು.

ಹೂಡಿಕೆ ಮಾಡುವುದು ಹೇಗೆ?

ನೀವು ಪೋಸ್ಟ್ ಆಫೀಸ್ ಟೈಮ್ ಡಿಪಾಸಿಟ್​​ನಲ್ಲಿ 1 ವರ್ಷದಿಂದ 5 ವರ್ಷಗಳವರೆಗೆ ಹೂಡಿಕೆ ಮಾಡಬಹುದು. ಇದು ವಿವಿಧ ವರ್ಷಗಳಿಗೆ ವಿಭಿನ್ನ ಆದಾಯವನ್ನು ನೀಡುತ್ತದೆ. ಉದಾಹರಣೆಗೆ, ನೀವು ಒಂದು ವರ್ಷಕ್ಕೆ ಹೂಡಿಕೆ ಮಾಡಿದರೆ, ನೀವು 6.8% ನಷ್ಟು ಬಡ್ಡಿ ಪಡೆಯುತ್ತೀರಿ. ಅದೇ ಸಮಯದಲ್ಲಿ, 2 ವರ್ಷದ ಹೂಡಿಕೆಯಲ್ಲಿ 6.9% ಮತ್ತು 5-ವರ್ಷದ ಹೂಡಿಕೆಯಲ್ಲಿ 7.5% ಬಡ್ಡಿ ದರ ಸಿಗಲಿದೆ. ಈ ಯೋಜನೆಯಲ್ಲಿ, ನಿಮ್ಮ ಬಡ್ಡಿಯನ್ನು ಪ್ರತಿ ತಿಂಗಳು ಲೆಕ್ಕ ಹಾಕಲಾಗುತ್ತದೆ, ಅದನ್ನು ನೀವು ವಾರ್ಷಿಕವಾಗಿ ಪಡೆಯುತ್ತೀರಿ.

ಹೀಗಿದೆ ಲೆಕ್ಕಾಚಾರ

ನೀವು 5 ವರ್ಷಗಳ ಅವಧಿಯ ಠೇವಣಿಯಲ್ಲಿ 5 ಲಕ್ಷ ರೂಪಾಯಿಗಳನ್ನು ಹೂಡಿಕೆ ಮಾಡಿದ್ದೀರಿ ಎಂದು ಭಾವಿಸೋಣ. ಈಗ ನೀವು ಇದರ ಮೇಲೆ ಶೇಕಡಾ 7.5 ರ ದರದಲ್ಲಿ ಬಡ್ಡಿಯನ್ನು ಪಡೆಯುತ್ತೀರಿ. ಮೆಚ್ಯೂರಿಟಿಯ ನಂತರ, ಎಂದರೆ 5 ವರ್ಷಗಳ ನಂತರ ನಿಮಗೆ 7,24,149 ರೂ. ದೊರೆಯಲಿದೆ. ಇದರಲ್ಲಿ 5 ಲಕ್ಷ ರೂ. ನಿಮ್ಮ ಹೂಡಿಕೆ ಮತ್ತು ಉಳಿದವು ಬಡ್ಡಿಯಿಂದ ನಿಮ್ಮ ಗಳಿಕೆಯಾಗಿದೆ. ಈ ಠೇವಣಿಯನ್ನು ಮತ್ತೆ 5 ವರ್ಷಗಳ ವರೆಗೆ ವಿಸ್ತರಿಸುವ ಸೌಲಭ್ಯವೂ ಸಿಗುತ್ತದೆ. ಇದರರ್ಥ ನೀವು ಅದನ್ನು ಇನ್ನೂ 5 ವರ್ಷಗಳವರೆಗೆ ವಿಸ್ತರಿಸಿದರೆ, ನೀವು ಮುಕ್ತಾಯದ ಮೇಲೆ 10,00,799 ರೂ ಗಳಿಸಬಹುದು.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್