AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಟಿಆರ್ ಸಲ್ಲಿಸಲು ಇಂದೇ ಕೊನೆಯ ದಿನ; ತಪ್ಪಿಸಿದರೆ ಏನು ಕ್ರಮ?

Income Tax Return: ಆದಾಯ ತೆರಿಗೆ ರಿಟರ್ನ್ ಫೈಲ್ ಮಾಡಲು ಇಂದು ಜುಲೈ 31ಕ್ಕೆ ಕೊನೆಯ ದಿನವಾಗಿದೆ. ಇಂದು ನೀವು ರಿಟರ್ನ್ ಸಲ್ಲಿಸದಿದ್ದರೆ ಇಲಾಖೆಯಿಂದ ನೋಟೀಸ್ ಬರುತ್ತದೆ. ಇದರ ಜೊತೆಗೆ ಇನ್ನೂ ಕೆಲ ಕಾನೂನು ಕ್ರಮ ಎದುರಿಸಬೇಕಾಗುತ್ತದೆ.

ಐಟಿಆರ್ ಸಲ್ಲಿಸಲು ಇಂದೇ ಕೊನೆಯ ದಿನ; ತಪ್ಪಿಸಿದರೆ ಏನು ಕ್ರಮ?
ಐಟಿಆರ್
ಸುಗ್ಗನಹಳ್ಳಿ ವಿಜಯಸಾರಥಿ
| Edited By: |

Updated on:Jul 31, 2023 | 10:44 AM

Share

ಆದಾಯ ತೆರಿಗೆ ರಿಟರ್ನ್ ಫೈಲ್ ಮಾಡಲು ಇಂದು (ಜುಲೈ 31) ಕೊನೆಯ ದಿನವಾಗಿದೆ. ಸಂಬಳದಾರರಾಗಿರುವ ಮತ್ತು ಆಡಿಟಿಂಗ್ (Non-auditing case) ನಡೆಸುವ ಅಗತ್ಯ ಇಲ್ಲದಿರುವ ತೆರಿಗೆ ಪಾವತಿದಾರರಿಗೆ ಇವತ್ತು ಡೆಡ್​ಲೈನ್ ಇರುವುದು. ಆದಾಯ ತೆರಿಗೆ ಇಲಾಖೆಯ ಇಫೈಲಿಂಗ್ ಪೋರ್ಟಲ್​ನಲ್ಲಿರುವ ಮಾಹಿತಿ ಪ್ರಕಾರ ಈವರೆಗೆ (ಜುಲೈ 31ರ ಬೆಳಗ್ಗೆ) 6.13 ಕೋಟಿ ಮಂದಿ ಐಟಿಆರ್ ಸಲ್ಲಿಕೆ (ITR Filing) ಮಾಡಿದ್ದಾರೆ. ಇಲಾಖೆ ನಿಮ್ಮ ಮಧ್ಯಾಹ್ನ ನೀಡಿದ ಮಾಹಿತಿ ಪ್ರಕಾರ ಐಟಿಆರ್​ಗಳು ಸಲ್ಲಿಯಾದ ಪ್ರಮಾಣ 5.83 ಕೋಟಿ ಇತ್ತು. ಮಧ್ಯಾಹ್ನ 1 ಗಂಟೆ ಬಳಿಕ 30 ಲಕ್ಷಕ್ಕೂ ಹೆಚ್ಚು ಮಂದಿ ರಿಟರ್ನ್ ಫೈಲ್ ಮಾಡಿದ್ದಾರೆ.

ಗಡುವಿನೊಳಗೆ ಐಟಿ ರಿಟರ್ನ್ ಫೈಲ್ ಮಾಡದಿದ್ದರೆ ಏನಾಗುತ್ತೆ?

ಒಂದು ವೇಳೆ ಇಲಾಖೆ ನಿಗದಿಪಡಿಸಿದ ಗಡುವಿನೊಳಗೆ ನೀವು ಐಟಿ ರಿಟರ್ನ್ ಸಲ್ಲಿಸದಿದ್ದರೆ ಕೆಲ ಪ್ರಮುಖ ನಷ್ಟಗಳು ತಲೆದೋರಬಹುದು. ಉದಾಹರಣೆಗೆ ನೀವು ತಡವಾಗಿ ರಿಟರ್ನ್ ಫೈಲ್ ಮಾಡಿದಾಗ, ತೆರಿಗೆ ಬಾಕಿ ಹಣಕ್ಕೆ ಶೇ. 50ರಿಂದ ಶೇ. 200ರಷ್ಟು ಮೊತ್ತವನ್ನು ಸೇರಿಸಿ ದಂಡವಾಗಿ ಕಟ್ಟಬೇಕಾಗುತ್ತದೆ. ನೀವು 2,000 ರೂ ತೆರಿಗೆ ಬಾಕಿ ಉಳಿಸಿಕೊಂಡಿದ್ದರೆ 1,000 ರೂನಿಂದ 4,000 ರೂವರೆಗೆ ದಂಡ ಸೇರಿಸಿ ಕಟ್ಟಬೇಕು. ಅಂದರೆ 3,000 ರೂನಿಂದ 6,000 ರೂವರೆಗೂ ನೀವು ಕಟ್ಟಬೇಕಾಗಬಹುದು.

ಹಾಗೆಯೇ, ನೀವು ಡೆಡ್​ಲೈನ್ ತಪ್ಪಿಸಿದಾಗ ಕಾನೂನು ಕ್ರಮ ಜರುಗಿಸಲು ನೋಟೀಸ್ ಕೊಡಲಾಗುತ್ತದೆ.

ಇದನ್ನೂ ಓದಿ: IT Notice: ಐಟಿ ನೋಟೀಸ್ ಬಂದಾಗ ಗಾಬರಿಯಾಗದಿರಿ; ಏನು ಮಾಡಬೇಕು, ಮಾಡಬಾರದು, ಇಲ್ಲಿದೆ ವಿವರ

ನೀವು ಐಟಿಆರ್ ಅನ್ನೇ ಸಲ್ಲಿಸದಿದ್ದರೆ ಏನಾಗುತ್ತದೆ?

2022-23 ರ ಹಣಕಾಸು ವರ್ಷದಲ್ಲಿ ನೀವು ಕಟ್ಟಬೇಕಿರುವ ತೆರಿಗೆ ಹಣಕ್ಕೆ ಶೇ. 200ರಷ್ಟು ದಂಡ ವಿಧಿಸಲಾಗುತ್ತದೆ.

ನಿಮಗೆ ಯಾವುದಾದರೂ ವ್ಯವಹಾರದಲ್ಲಿ ನಷ್ಟವಾಗಿದ್ದರೆ ಅದನ್ನು ಬಳಸಿ ತೆರಿಗೆ ರಿಯಾಯಿತಿ ಪಡೆಯಲು ಅವಕಾಶ ಇರುತ್ತದೆ. ಆದರೆ, ನೀವು ಐಟಿ ರಿಟರ್ನ್ ಫೈಲ್ ಮಾಡದೇ ಹೋದಾಗ ಈ ನಷ್ಟವನ್ನು ಮುಂದಕ್ಕೆ ತೆಗೆದುಕೊಂಡು ಹೋಗಲು ಆಗುವುದಿಲ್ಲ.

ಜೊತೆಗೆ, ಐಟಿ ಇಲಾಖೆಯಿಂದ ಕಾನೂನು ಕ್ರಮ ಜಾರಿಗೊಳಿಸಲು ನೋಟೀಸ್ ಸ್ವೀಕರಿಸಬೇಕಾಗುತ್ತದೆ.

ಇದನ್ನೂ ಓದಿ: ITR: ಹೊಸ ಪೋರ್ಟಲ್​ನಲ್ಲಿ ಐಟಿ ರಿಟರ್ನ್ ಫೈಲ್ ಮಾಡುವುದು ಬಹಳ ಸುಲಭ; ಯಾರೂ ಬೇಕಾದರೂ ಐಟಿಆರ್ ಸಲ್ಲಿಕೆ ಮಾಡುವಷ್ಟು ಸರಳ ಕ್ರಮಗಳು

ಐಟಿ ರಿಟರ್ನ್ ಯಾಕೆ ಸಲ್ಲಿಸಬೇಕು?

ಕಳೆದ ಹಣಕಾಸು ವರ್ಷದಂದು (2022-23) ನಿಮ್ಮ ಒಟ್ಟಾರೆ ಎಲ್ಲಾ ಆದಾಯಗಳು, ಹೂಡಿಕೆಗಳು, ಸಾಲಗಳು ಇತ್ಯಾದಿಯನ್ನು ನೀವು ಘೋಷಿಸಲು ಐಟಿಆರ್ ಸಲ್ಲಿಸಲಾಗುತ್ತದೆ. ನಿಮ್ಮ ಆದಾಯಕ್ಕೆ ತಕ್ಕಷ್ಟು ತೆರಿಗೆ ಪಾವತಿಸಬೇಕಾಗುತ್ತದೆ. ಅಥವಾ ಹೆಚ್ಚಾಗಿ ತೆರಿಗೆ ಕಟ್ಟಿದ್ದರೆ ಅದನ್ನು ಕ್ಲೈಮ್ ಮಾಡಿಕೊಳ್ಳುವ ಅವಕಾಶವೂ ಇರುತ್ತದೆ.

ಐಟಿ ರಿಟರ್ನ್ ಸಲ್ಲಿಸುವುದು ಹಲವು ಕಾರಣಗಳಿಗೆ ಅಗತ್ಯ ಎನಿಸಿದೆ. ಬ್ಯಾಂಕ್ ಸಾಲದಿಂದ ಹಿಡಿದು ಹಲವು ಕಾರ್ಯಗಳಿಗೆ ಐಟಿಆರ್​ಗಳನ್ನು ಕೇಳಲಾಗುತ್ತದೆ. ನಿಮ್ಮ ಆದಾಯವು ತೆರಿಗೆ ವಿಂಗಡಣೆಯಿಂದ ಹೊರತಾಗಿದ್ದರೂ ಕೂಡ ಐಟಿಆರ್ ಸಲ್ಲಿಸಲು ಅಡ್ಡಿ ಇಲ್ಲ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:28 am, Mon, 31 July 23

ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ