ಎಫ್​ಡಿಗೆ ಶೇ. 9.10ರವರೆಗೂ ಬಡ್ಡಿ; ಈ ತಿಂಗಳು ಠೇವಣಿ ದರ ಹೆಚ್ಚಿಸಿದ 4 ಬ್ಯಾಂಕುಗಳು

FD Rates Updates: ಆಕ್ಸಿಸ್ ಬ್ಯಾಂಕ್, ಕೆನರಾ ಬ್ಯಾಂಕ್, ಫೆಡರಲ್ ಬ್ಯಾಂಕ್ ಮತ್ತು ಸೂರ್ಯೋದಯ್ ಸ್ಮಾಲ್ ಫೈನಾನ್ಸ್ ಬ್ಯಾಂಕುಗಳು ಈ ಆಗಸ್ಟ್ ತಿಂಗಳಲ್ಲಿ ತಮ್ಮಲ್ಲಿನ ಎಫ್​ಡಿಗಳಿಗೆ ಬಡ್ಡಿದರ ಪರಿಷ್ಕರಿಸಿವೆ. ಅದರ ವಿವರ ಇಲ್ಲಿದೆ....

ಎಫ್​ಡಿಗೆ ಶೇ. 9.10ರವರೆಗೂ ಬಡ್ಡಿ; ಈ ತಿಂಗಳು ಠೇವಣಿ ದರ ಹೆಚ್ಚಿಸಿದ 4 ಬ್ಯಾಂಕುಗಳು
ಬ್ಯಾಂಕ್
Follow us
|

Updated on: Aug 17, 2023 | 2:48 PM

ಬ್ಯಾಂಕುಗಳು ಮತ್ತು ಎನ್​ಬಿಎಫ್​ಸಿಗಳು ಆಗಾಗ್ಗೆ ಬಡ್ಡಿದರಗಳನ್ನು (Interest Rates) ಪರಿಷ್ಕರಿಸುತ್ತಿರುತ್ತವೆ. ಬಹಳಷ್ಟು ಬ್ಯಾಂಕುಗಳು ಸಾಲದ ಮೇಲಿನ ಬಡ್ಡಿದರ ಇಳಿಕೆಗೆ ಪೈಪೋಟಿ ನಡೆಸುತ್ತವೆ. ಹಾಗೆಯೇ, ಫಿಕ್ಸೆಡ್ ಡೆಪಾಸಿಟ್ ಮೇಲಿನ ಬಡ್ಡಿದರ ಏರಿಕೆಗೂ ಪೈಪೋಟಿ ನಡೆಸುತ್ತವೆ. ಇತ್ತೀಚಿನ ದಿನಗಳಲ್ಲಿ ಬಹುತೇಕ ಎಲ್ಲಾ ಬ್ಯಾಂಕುಗಳು ಎಫ್​ಡಿ ದರಗಳನ್ನು ಹೆಚ್ಚಿಸಿವೆ. ಈ ತಿಂಗಳು ಕೆಲ ಪ್ರಮುಖ ಬ್ಯಾಂಕುಗಳು ಎಫ್​ಡಿ ಬಡ್ಡಿದರ ಇಳಿಸಿದ್ದು ಅದರ ವಿವರ ಇಲ್ಲಿದೆ.

ಆ್ಯಕ್ಸಿಸ್ ಬ್ಯಾಂಕ್ ನಿಶ್ಚಿತ ಠೇವಣಿ ಬಡ್ಡಿದರ

ಎಕ್ಸಿಸ್ ಬ್ಯಾಂಕ್ ತನ್ನ 10 ವರ್ಷದವರೆಗಿನ ನಿಶ್ಚಿತ ಠೇವಣಿಗೆ ಶೇ. 8.05ರವರೆಗೂ ಬಡ್ಡಿ ವಿಧಿಸುತ್ತದೆ. ಹಿರಿಯ ನಾಗರಿಕರಿಗೆ ಬಡ್ಡಿದರ ಗರಿಷ್ಠ ಸಿಗುತ್ತದೆ. 2 ಕೋಟಿ ರೂ ಒಳಗಿನ 16-17 ತಿಂಗಳ ಅವಧಿಗೆ ಇರಿಸುವ ಎಫ್​ಡಿಗೆ ಗರಿಷ್ಠ ಬಡ್ಡಿ ಸಿಗುತ್ತದೆ. ಇನ್ನು, ಇತರ ಸಾಮಾನ್ಯ ಗ್ರಾಹಕರಿಗೆ ಶೇ. 7.3ರವರೆಗೂ ಬಡ್ಡಿದರ ಸಿಗುತ್ತದೆ. ಆಗಸ್ಟ್ 14ರಂದು ಆ್ಯಕ್ಸಿಸ್ ಬ್ಯಾಂಕ್ ಈ ದರ ಪರಿಷ್ಕರಣೆ ಮಾಡಿದೆ.

ಕೆನರಾ ಬ್ಯಾಂಕ್ ಎಫ್​ಡಿ ದರ

ಕೆನರಾ ಬ್ಯಾಂಕ್ ತನ್ನ ಸಾಮಾನ್ಯ ಗ್ರಾಹಕರ ನಿಶ್ಚಿತ ಠೇವಣಿಗಳಿಗೆ ಶೇ. 4ರಿಂದ ಶೇ. 7.25ರಷ್ಟು ಬಡ್ಡಿ ನೀಡುತ್ತದೆ. ಹಿರಿಯ ನಾಗರಿಕರಿಗೆ ಶೇ. 0.5ರಷ್ಟು ಹೆಚ್ಚು ಬಡ್ಡಿ ಸಿಗುತ್ತದೆ. ಆಗಸ್ಟ್ 12ರಂದು ಕೆನರಾ ಬ್ಯಾಂಕ್​ನ ನೂತನ ಬಡ್ಡಿದರ ಚಾಲನೆಗೆ ಬಂದಿತ್ತು.

ಇದನ್ನೂ ಓದಿ: ಸಾಲವೆಂಬ ಶೂಲಕ್ಕೆ ಏರಿಬಿಟ್ಟೀರಿ ಜೋಕೆ..! ಇಲ್ಲಿದೆ ಸಾಲಮುಕ್ತರನ್ನಾಗಿಸುವ ಟಿಪ್ಸ್

ಫೆಡರಲ್ ಬ್ಯಾಂಕ್ ಎಫ್​ಡಿ ದರ

ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಫೆಡರಲ್ ಬ್ಯಾಂಕ್ ತನ್ನಲ್ಲಿನ ಫಿಕ್ಸೆಡ್ ಡೆಪಾಸಿಟ್​ಗಳ ಮೇಲೆ ಬಡ್ಡಿದರ ಹೆಚ್ಚಿಸಿದೆ. ಸಾಮಾನ್ಯ ಗ್ರಾಹಕರ 13 ತಿಂಗಳ ನಿಶ್ಚಿತ ಠೇವಣಿಗೆ ಬ್ಯಾಂಕು ಶೇ. 7.30ಯಷ್ಟು ಗರಿಷ್ಠ ಬಡ್ಡಿ ಕೊಡುತ್ತದೆ. ಇದೇ ಠೇವಣಿಗೆ ಹಿರಿಯ ನಾಗರಿಕರಿಗಾದರೆ ಶೇ. 8.07ರಷ್ಟು ಬಡ್ಡಿ ಸಿಗುತ್ತದೆ.

ಸೂರ್ಯೋದಯ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಎಫ್​ಡಿ ದರ

ದೇಶದ ಪ್ರಮುಖ ಸಣ್ಣ ಬ್ಯಾಂಕುಗಳಲ್ಲಿ ಒಂದಾದ ಸೂರ್ಯೋದಯ ಸ್ಮಾಲ್ ಫೈನಾನ್ಸ್ ಬ್ಯಾಂಕ್ ತನ್ನ ಎಫ್​ಡಿ ದರಗಳನ್ನು 85 ಬೇಸಿಸ್ ಪಾಯಿಂಟ್​ಗಳಷ್ಟು ಹೆಚ್ಚಿಸಿದೆ. ಆಗಸ್ಟ್ 7ರಿಂದಲೇ ಹೊಸ ದರ ಜಾರಿಗೆ ಬಂದಿದೆ. ಅದರ ಸಾಮಾನ್ಯ ಗ್ರಾಹಕರ ಎಫ್​ಡಿಗೆ ಶೇ. 8.60ರವರೆಗೂ ಬಡ್ಡಿ ಕೊಡುತ್ತದೆ. ಹಿರಿಯ ನಾಗರಿಕರ ಎಫ್​ಡಿಗಳಿಗೆ ಶೇ. 9.10ರವರೆಗೂ ಬಡ್ಡಿ ಸಿಗುತ್ತದೆ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ